Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: 40 ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಇಲ್ಲದೆ ಅಜಾತ ಶತ್ರು ಆಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಯೋಜನೆಗಳು ಸಂಸದ ರಮೇಶ್ ಜಿಗಜಿಣಿಗಿ ತಂದಿದ್ದಾರೆ. ಇಂತಹ ಒಳ್ಳೆಯ ಸಜ್ಜನ ವ್ಯಕ್ತಿಯ ಬಗ್ಗೆ ಮಾತನಾಡುವುದು ಶಾಸಕ ಯಶವಂತರಾಯಗೌಡ ಪಾಟೀಲರಿಗೆ ತರವಲ್ಲ. ಹಿರಿಯರನ್ನು ಗೌರವಿಸುವ ಗುಣ ನಿಮ್ಮಲ್ಲಿ ಇರದಿದ್ದರೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರು ಪದೆ ಪದೆ ರಾಜಕಾರಣದಲ್ಲಿ ಬೆರೆಸುವುದು ಸರಿಯಲ್ಲ. ಹಿರಿಯ ರಾಜಕಾರಣಿ ಬಗ್ಗೆ ಅಗೌರವವಾಗಿ ಮಾತನಾಡಿರುವುದು ಖಂಡಿಸುತ್ತೇವೆ ಎಂದು ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಆರೋಪಿಸಿದರು.ತಾಲೂಕಿನ ನಾದ 110 ಕೆ.ವ್ಹಿ ವಿದ್ಯತ್ ವಿತರಣಾ ಕೇಂದ್ರ ಉದ್ಘಾಟನಾ ಸಮಾರಂದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಂಸದ ರಮೇಶ ಜಿಗಜಿಣಗಿಯವರ ಬಗ್ಗೆ ಹಗುರುವಾಗಿ ಮಾತನಾಡಿರುವುದು ಶೋಭೆಯಲ್ಲ. ಸಂಸದರ ಅಭಿವೃಧ್ಧಿ ಕಾರ್ಯಗಳ ಬಗ್ಗೆ ಜನತೆಗೆ ಗೊತ್ತಾಗಬಾರದು ಎಂಬ ದುರುದ್ದೇಶ. ಮತಕ್ಷೇತ್ರದಲ್ಲಿ ಕೇವಲ ತಮ್ಮ ಹೆಸರೇ ಇರಬೇಕೆಂಬ ಆಸೆಯಿಂದ ಹಿರಿಯ ರಾಜಕಾರಣಿ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.ನಾ-ಎಂಬ ಧ್ಯೇಯ…
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ತಾಲೂಕುಮಟ್ಟದ ಮುಖ್ಯಶಿಕ್ಷಕರ ಸಭೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಕಡಿಮೆ ಬರುತ್ತದೆ ಎಂಬ ಹಣೆಪಟ್ಟಿಯಿಂದ ಹೊರಬರಲು ಶಿಕ್ಷಕ ಬಾಂಧವರು ಬೋಧನೆಗೆ ವಿಶೇಷ ಒತ್ತು ನೀಡಬೇಕೆಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಹೇಳಿದರು.ಪಟ್ಟಣದ ಬಸವೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿರುವ ಭಾರತ ಸೇವಾದಳದ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾಲಾ ಶಿಕ್ಷಣ ಇಲಾಖೆ, ಡಯಟ್ ಸಹಯೋಗದಲ್ಲಿ ೨೦೨೪-೨೫ ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಬಸವನಬಾಗೇವಾಡಿ ತಾಲೂಕುಮಟ್ಟದ ಮುಖ್ಯಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಆಗಾಗ ಪಾಲಕ-ಪೋಷಕರ ಸಭೆ ಮಾಡುವ ಮೂಲಕ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ವಿಶೇಷ ತರಬೇತಿ, ಗುಂಪು ಚರ್ಚೆ, ವಿದ್ಯಾರ್ಥಿಗಳ ವೈಯಕ್ತಿಕ ಕಡತ ನಿರ್ವಹಣೆ, ಪರಿಹಾರ ಬೋಧನೆ, ವಿದ್ಯಾರ್ಥಿಗಳ ಗುಂಪು ರಚಿಸಿ ಶಿಕ್ಷಕರಿಗೆ ದತ್ತು ನೀಡುವುದು, ಸ್ಪಷ್ಟ ಓದು, ಶುದ್ಧ ಬರಹ, ಸರಳ ಗಣಿತ ಅಂಶಕ್ಕೆ ಒತ್ತು ನೀಡಬೇಕು.…
ಉದಯರಶ್ಮಿ ದಿನಪತ್ರಿಕೆ ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಗುಬ್ಬೇವಾಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ ೨೦೨೩-೨೪ನೇ ಸಾಲಿನ ವಾಷಿ೯ಕ ಸವ೯ ಸಾಧಾರಣ ಸಭೆ ಆ.೧೩ ರಂದು ಬೆಳಗ್ಗೆ ೧೧ ಗಂಟೆಗೆ ಸಂಘದ ಕಛೇರಿಯಲ್ಲಿ ಆಯೋಜಿಸಲಾಗಿದೆ.ಸಂಘದ ಅಧ್ಶಕ್ಷ ಶಿವಶರಣ ಕೊಂಡಗೂಳಿ ಅಧ್ಶಕ್ಷತೆ ವಹಿಸುವರು ಎಂದು ಮುಖ್ಶಕಾಯ೯ನಿವ೯ಣಾಧಿಕಾರಿ ರಮೇಶ ಇಜೇರಿ ತಿಳಿಸಿದ್ದಾರೆ.
ಡಿಜೆಗೆ ಕುಣಿದು ಸಂಭ್ರಮಿಸಿದ ಯುವಕರು | ವಿವಿಧ ಸ್ತಬ್ದ ಚಿತ್ರಗಳು | ಜಾನಪದ ಕಲಾದರ್ಶನ | ಕೋಲಾಟ – ಜಾಂಜ್ ಉದಯರಶ್ಮಿ ದಿನಪತ್ರಿಕೆ ಗುರು ಹಿರೇಮಠ, ದೇವನಗಾಂವಆಲಮೇಲ: ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಕಿವಿಗಡಚಿಕ್ಕುವ ಡಿಜೆ ದ್ವನಿಯಲ್ಲಿ ಕೇಕೆ ಹಾಕಿ ಹಾಡಿಗೆ ಕುಣಿದು ಸಂಭ್ರಮಿಸಿದ ಯುವಕರು, ವಿವಿದ ಸ್ತಬ್ದ ಚಿತ್ರಗಳು, ಜಾನಪದ ಕಲಾದರ್ಶನ, ಮಕ್ಕಳ ಕೋಲಾಟ, ಜಾಂಜ್ ಗಮನ ಸೆಳೆದವು.ಮಹಾಭಾರತ ಮತ್ತು ರಾಮಯಣ ಹಾಗೂ ಹೆಸರಾಂತ ದೇವರ ಅವತಾರಗಳು, ದೇಶದ ರಾಜ ಮಹಾರಜರ, ಪಸ್ತುತ ಸನ್ನಿವೇಶಗಳಿಗೆ ತಕ್ಕಂತೆ ಸ್ತಬ್ದಚಿತ್ರ, ರೂಪಕಗಳನ್ನು ನಿರ್ಮಾಣ ಮಾಡಲಾಗಿತ್ತು. ಪಟ್ಟಣದಲ್ಲಿ ಸುಮಾರು ೧೫ ಕ್ಕೂ ಹೆಚ್ಚು ಕಡೆಗಳಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ಗಣೇಶ ೫ನೇ ದಿನಕ್ಕೆ ಏಕ ಕಾಲಕ್ಕೆ ಸಾಲಾಗಿ ವಿಸರ್ಜನೆಗೆ ಹೋಗುವದು. ಎಲ್ಲ ಗಜಾನನ ಮಂಡಳಿಯವರು ಲಕ್ಷಾನುಗಟ್ಟಲೆ ಖರ್ಚು ಮಾಡಿ ಸ್ತಬ್ದಚಿತ್ರಗಳು ತಯಾರಿಸಿ ಮೈಸೂರು ದಸರಾ, ಪುಣೆ ಮಾದರಿಯಂತೆ ಗೋಚರಿಸಿ ನೋಡುಗರನ್ನು ಮಗ್ನರನ್ನಾಗಿ ಮಾಡಿತು.ಇಲ್ಲಿನ ಗಣೇಶ ವಿಸರ್ಜನೆ ನೂಡಲು ವಿಜಯಪುರ, ಕಲಬುರ್ಗಿ, ಯಾದಗಿರಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತಾಂತ್ರಿಕ ವಿಭಾಗದಲ್ಲಿ ಒಂದು “ಜ್ಯೂನಿಯರ್ ಇಂಜಿನಿಯರ್ (ವಿದ್ಯುತ್)” ಹಾಗೂ ಆರೋಗ್ಯ ಕೇಂದ್ರದ ಅಂಬ್ಯುಲನ್ಸ್ ವಾಹನಕ್ಕೆ ಒಂದು “ವಾಹನ ಚಾಲಕ” ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. ೧೭ ರಂದು ಮಧಾಹ್ನ ೦೩:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿರುವ ನೇರ ಸಂದರ್ಶನಕ್ಕೆ ಮೂಲ ದಾಖಲಾತಿಗಳು ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬಹುದು.ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾನೂನು ಸಲಹೆಗಾರ:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಕಾನೂನು ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದೇ ಸೆ.೧೭ ರಂದು ವಿವಿಯ ಆಡಳಿತ ಭವನದ ಸಿಂಡಿಕೇಟ್ ಹಾಲ್‌ನಲ್ಲಿ ಬೆಳಿಗ್ಗೆ ೧೧.೦೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಸಂದರ್ಶನಕ್ಕೆ…
ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಕುರಿತು ಮಾಧ್ಯಮ ಕಾರ್ಯಗಾರದ ಸಮಾರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತ ಮಾಧ್ಯಮ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರುಅಭಿವೃದ್ಧಿ ಮತ್ತು ಸಕಾರಾತ್ಮಕ ವಿಷಯಗಳ ಬಗ್ಗೆ ಹೆಚ್ಚಿನ ಸುದ್ಧಿಗಳನ್ನು ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರುವ ಅಭಿಯಾನಗಳ ಮೂಲಕ ವರದಿ ಮಾಡಬೇಕು. ವಿಶೇಷವಾಗಿ, ಪತ್ರಕರ್ತರು ಮಕ್ಕಳ ಧ್ವನಿಯಾಗಿ, ಅವರ ಸಮಸ್ಯೆಗಳನ್ನು, ಅಭಿರುಚಿಗಳನ್ನು, ಮತ್ತು ಸಾಧನೆಗಳನ್ನು ಜನರ ಮುಂದೆ ತರುವುದರಲ್ಲಿ ಪ್ರಮುಖ ಪಾತ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಕೊಡ ಮಾಡುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರಶಸ್ತಿಗೆ ಭಾಜನರಾದ ಕೇಂದ್ರದ ಮಾಜಿ ಸಚಿವರು ಹಾಗೂ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳರ ಪರವಾಗಿ ಅವರ ಪುತ್ರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಅವರು, ಗುರುವಾರ ಹುಬ್ಬಳ್ಳಿಯ ಜೆ.ಸಿ.ನಗರದ ಅಕ್ಕನ ಬಳಗ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯ ಮಟ್ಟಕ್ಕೆ ಎಕ್ಸಲೆಂಟ್ ವಿಜ್ಞಾನ ಪಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಓದು ಮಕ್ಕಳಲ್ಲಿ ಜ್ಞಾನ ವೃದ್ಧಿಸಿದರೆ; ಕ್ರೀಡೆ ಮಕ್ಕಳನ್ನು ದೈಹಿಕವಾಗಿ ಬಲಗೊಳಿಸುವುದರ ಜೊತೆಗೆ ಮಾನಸಿಕವಾಗಿಯೂ ಗಟ್ಟಿಯಾಗುವುದಕ್ಕೆ ನೆರವಾಗುತ್ತದೆ. ಆ ಕಾರಣದಿಂದಾಗಿಯೇ ಸ್ವಾಮೀ ವಿವೇಕಾನಂದರು ಮನೋಬಲದಷ್ಟೆ ಶಾರೀರಿಕ ಬಲಕ್ಕೂ ಮಾನ್ಯತೆ ನೀಡುತ್ತ ಕ್ರೀಡೆಯ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುತ್ತಿದ್ದರು ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ವತಿಯಿಂದ ಆಯೋಸಲಾಗಿದ್ದ ಜಿಲ್ಲಾ ಮಟ್ಟದ ಗುಂಪು ಕ್ರೀಡಾ ಕೂಟದಲ್ಲಿ ವಿಜೇತರಾದ ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಾಷಯಕೋರಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳಲ್ಲಿ ಬಹಳಷ್ಟು ಜನ ಕಲಿಕೆಯಲ್ಲಿ ಮುಂದಿದ್ದರೂ ಕೂಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಂಥವರಿಗೆ ಕ್ರೀಡೆ ಎಂಬುದು ದಿವ್ಯ ಔಷಧವಾಗಿದೆ ಎಂದು ಹೇಳಿದರು.ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರೊಂದಿಗೆ ಕಲಿಕೆಯಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಇಂದು ಸವಾಲಿನ ವಿಷಯವಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರಕ್ಕೆ ಕಾಲಿಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಇಲಾಖಾಧಿಕಾರಿಗಳ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಿಪಂ ಸಿಇಓ ರಿಷಿ ಆನಂದ ಸಲಹೆ ವಿಜಯಪುರ: ಜಿಲ್ಲಾ ಪಂಚಾಯಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಆರೋಗ್ಯ ತಪಾಸಣಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ, ಸಿಬ್ಬಂದಿ ಗ್ರಾಮೀಣರಿಗೆ ಸೇವೆ ಸಲ್ಲಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದು, ಕರ್ತವ್ಯದೊಂದಿಗೆ ವೈಯಕ್ತಿಕ ಆರೋಗ್ಯದ ಕಡೆಗೂ ಸಹ ಗಮನ ಹರಿಸಬೇಕು. ಆರೋಗ್ಯ ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಂತರ, ಸಿಇಓ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ…
ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿ ಮುಖ್ಯಸ್ಥರ ಪದಗ್ರಹಣ ವಿಜಯಪುರ: ವಿದ್ಯಾರ್ಥಿ ಜೀವನದಲ್ಲಿ ಗುರಿ ಹೊಂದಿ ಅದರ ಸಾಧನೆಗಾಗಿ ಅಧ್ಯಯನಶೀಲತೆಯನ್ನು ರೂಢಿಸಿಕೊಳ್ಳಬೇಕು ಎಂದು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರೂ ಆದ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಅವರು ನಗರದ ಟಕ್ಕೆಯಲ್ಲಿರುವ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಗುರುವಾರ ನಡೆದ ವಿದ್ಯಾರ್ಥಿ ಮುಖ್ಯಸ್ಥರ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನಕ್ಕೆ ಒತ್ತು ನೀಡುವ ಮೂಲಕ ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಂಡು ಗುರಿಯೆಡೆಗೆ ಸಾಗಬೇಕು. ಅಭ್ಯಾಸದ ಮೂಲಕ ಸಾಣೆ ಹಿಡಿದು ಜೀವನದಲ್ಲಿ ಯಶಸ್ಸು ಹೊಂದಿ ತಾವು ಕಲಿತ ಶಾಲೆಯ ಹೆಸರು ಬೆಳೆಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲಾ ಪರಿಷತ್‌ನ ವಿದ್ಯಾರ್ಥಿ ಮುಖ್ಯಸ್ಥರಿಗೆ ಬ್ಯಾಡ್ಜ್ ವಿತರಿಸಲಾಯಿತು. ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಜುನ್ನಾ ರಾಮ್ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಸಿ.ಬಿ.ಚಿಕ್ಕಲಗಿ,ಮನಗೂಳಿ ಗ್ರೇಡ್-೧ ಶಿಕ್ಷಣ ಕಾಲೇಜು ಪ್ರಾಂಶುಪಾಲರಾದ ಪ್ರೊ ಐ.ಎಸ್.ಮಠಪತಿ, ಉಪನೋಂದಣಾಧಿಕಾರಿ (ಪರೀಕ್ಷಾ) ದೈಹಿಕ ಶಿಕ್ಷಣ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ…
