Author: editor.udayarashmi@gmail.com

ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಹಕ್ಕುಗಳು ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಿಗೆ ಜಾತಿ, ಪಂಥ, ಬೇಧವಿಲ್ಲ. ಕೇವಲ ಸರ್ಕಾರಿ ಸೌಲಭ್ಯಗಳ ಮೂಲಕ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯವಿಲ್ಲ. ಪ್ರೀತಿ, ಮಮತೆಯಿಂದ ಮಾತ್ರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲು ಹೈದ್ರಾಬಾದ್‌ನ ಸುಶೇನಾ ಹೆಲ್ಥ್ ಫೌಂಡೇಶನ್ ಹಾಗೂ ಜಿಲ್ಲಾ ಆಸ್ಪತ್ರೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ತಿಳಿಸಿದ್ದಾರೆ.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಸಮ್ಮುಖದಲ್ಲಿ ವಿಜಯಪುರದ ಜಿಲ್ಲಾ ಆಸ್ಪತ್ರೆಯ ಚಿಕ್ಕ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪನೆಗೆ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲಾಯಿತು.ತಾಯಿ ಹಾಲು ಸಂಗ್ರಹಣ ಕೇಂದ್ರವು Comprehensive Lactation Management Unit (Mother Milk Bank )ತಾಯಿಯಎದೆಹಾಲನ್ನು ಪಡೆದು ನಿಯಮಗಳು ಷರತ್ತಿಗಳನ್ವಯ ಹಾಗೂ ಒಂದು ನಿಗದಿತ ಪ್ರಕ್ರಿಯಲ್ಲಿ ನ್ಯಾಷನಲ್ ಹೇಲ್ತ್ ಮಿಷನನ ನಿಯಮಗಳನ್ವಯ ಹಾಲನ್ನು ಸಂಗ್ರಹಿಸಲಾಗುತ್ತದೆ.ನವಜಾತ ಶಿಶುವಿನಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಹಾಲಿನಿಂದ ಓಇಅಂಯನ್ನು ತಡೆಗಟ್ಟುವುದು, ಹಾಲು ಪಚನ ಪಚನ ಕ್ರೀಯೆಯಲ್ಲಿ ಯಾವುದೇ ತೊಂದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇವರ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:೨೦-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಸಹಾಯವಾಣಿ ೮೨೭೭೭೯೯೯೯೦ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಾಡ್ಲಿ ಫೌಂಡೇಶನ್ ವತಿಯಿಂದ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಸೆಪ್ಟಂಬರ್ ೧೫ ರಂದು ವಿಜಯಪುರ ನಗರದಲ್ಲಿ ಸ್ವಚ್ಛತೆಗಾಗಿ ಕೈಗೊಂಡ ವಾಶೆಥಾನ್ ಓಟ ಯಶಸ್ವಿಗೊಳಿಸಲು ಸಂಬಂಧಿಸಿ ಅಧಿಕಾರಿಗಳು ಅಗತ್ಯ ಸಹಯೋಗ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವಚ್ಛತೆಗಾಗಿ ಕೈ ಜೋಡಿಸಿ ಘೋಷವಾಕ್ಯದೊಂದಿಗೆ ೫ ಕಿ.ಮೀ., ೧೦ ಕಿ.ಮೀ. ಹಾಗೂ ೨೧ ಕಿ.ಮೀ.ಓಟದ ವಾಶೆಥಾನ್ ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಸ್ವಚ್ಛತೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ನಗರದ ಗೋಲಗುಂಬಜ್ ಆವರಣದಲ್ಲಿ ಆರಂಭಗೊಳ್ಳುವ ಈ ಕಾರ್ಯಕ್ರಮದ ಯಶಸ್ವಿಗೆ ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಅಗ್ನಿಶಾಮಕ, ಪೊಲೀಸ್ ಇಲಾಖೆ ಅಧಿಕಾರಿಗಳು ಎಲ್ಲ ಅಗತ್ಯ ಕ್ರಮ ಕೈಗೊಂಡು ಸಹಕಾರ ಒದಗಿಸುವಂತೆ ಅವರು ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಲಾಡಲಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ವಾಶೆಥಾನ್ ಪೋಸ್ಟರ್‌ನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ…

Read More

ಉದಯರಶ್ಮಿ ದಿನಪತ್ರಿಕೆ ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಅಂಜುಮಾನ ಏ – ಇಸ್ಲಾಂ ಕಮಿಟಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಮುತು೯ಜ್ ಮೊದೀನ್ ಡಂಬಳ ( ಬಾಗವಾನ) ಅಧ್ಶಕ್ಷ, ಅಲ್ಲಾಭಕ್ಷ ಬೈಚಬಾಳ ಉಪಾಧ್ಶಕ್ಷ, ಮಹಿಬೂಬ ಮಕಾಶಿ ಕಾಯ೯ದಶಿ೯, ಸುಲೇಮಾನ ಮನಿಯಾರ, ಬಾಷಾಸಾಬ ಬಾಗವಾನ, ಮಹಿಬೂಬಸಾಬ ನದಾಫ್, ಅಬ್ದುಲಸಲಾಂ ಬಾಗವಾನ, ರಫೀಕ ಮುಲ್ಲಾ, ಅಲ್ಲಿಸಾಬ ಕೋರಬು, ದಾವಲಮಲೀಕ ಚಪ್ಪರಬಂದ, ಸಿರಾಜ ಕೊಕಟನೂರ ಸದಸ್ಶರಾಗಿ ಆಯ್ಕೆಯಾಗಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೭೪೦೦ ರೂ. ಬೆಂಬಲ ಬೆಲೆಯಡಿ ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಸೆ.೯ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ ೩೮೭ ಹೆಕ್ಟೇರ್ ಕ್ಷೇತ್ರದಲ್ಲಿ ಉದ್ದಿನಕಾಳು ಬಿತ್ತನೆಯಾಗಿದ್ದು, ಅಂದಾಜು ೩೮೭೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಉದ್ದಿನಕಾಳು ಪ್ರತಿ ಕ್ವಿಂಟಲ್ ರೂ. ೭೦೦೦ ರಿಂದ ೧೦೯೨೦ ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಪ್ರತಿ ಕ್ವಿಂಟಲ್ ೭೪೦೦ ರೂ.ಗೆ ಖರೀದಿಸಲು ತೀರ್ಮಾನಿಸಿ, ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು,…

Read More

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇದೇ ಸೆಪ್ಟಂಬರ್ ೧೫ ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಶಾಲಾ-ಕಾಲೇಜ್ ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರು, ಸರ್ಕಾರೇತರ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.ಸೆ.೧೫ರಂದು ಬೆಳಿಗ್ಗೆ ೮-೩೦ಕ್ಕೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಆಲಮಟ್ಟಿಯವರೆಗೆ ಏಕಕಾಲಕ್ಕೆ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಈಗಾಗಲೇ ಮಾನವ ಸರಪಳಿ ನಿರ್ವಹಣೆಗೆ ೯ ಜನ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ೧೪ ಜನ ಸೆಕ್ಟರ್ ಅಧಿಕಾರಿಗಳು…

Read More

ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಬುಧವಾರ ಬರಟಗಿ ಎಲ್. ಟಿ- 1 ಮತ್ತು 3 ರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ತಲಾ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗಳಿಗೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಸಿ.ಎಸ್.ಆರ್ ಅನುದಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಶಾಲೆಗಳ ಅಭಿವೃದ್ಧಿಗೆ ಬಳಸಲು ಕ್ರಮ ಕೈಗೊಂಡಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಬಡಜನರ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಸೇರಿದಂತೆ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆಗತ್ಯವಾಗಿರುವ ಪರಿಕರಗಳನ್ನು ಒದಗಿಸಲಾಗುತ್ತಿದೆ. ಅಲ್ಲದೇ, ಮತಕ್ಷೇತ್ರದಲ್ಲಿ ರಸ್ತೆಗಳ ನಿರ್ಮಾಣ, ದುರಸ್ಥಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನುಳಿದಿರುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ. ಎಂ. ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಷೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್. ಎಸ್. ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಢಮಿ, ಫುಡ್ ಫೆಸ್ಟಿವಲ್, ಹೊಸ ಬೋದನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಇಲ್ಲಿನ ಮಕ್ಕಳು ತಯಾರಿಸಿರುವ ವಿಜ್ಞಾನ ಮಾದರಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಾಲೆಗಳ ಮಕ್ಕಳಿಗಿಂತಲೂ ಹೆಚ್ಚು ಕೌಶಲ್ಯದಿಂದ ಕೂಡಿವೆ. ವಿದ್ಯಾರ್ಥಿಗಳು ಪ್ರದರ್ಶಿಸಿದ ಶ್ರೀಕೃಷ್ಣ ಜನ್ಮಾಷ್ಠಮಿ ನೃತ್ಯ ಕಂಡು ಮೂಕವಿಸ್ಮಿತನಾಗಿದ್ದೇನೆ. ಅಲ್ಲದೇ, ಈ ಚಿಣ್ಣರು ಫುಡ್ ಫೆಸ್ಟಿವಲ್ ನಲ್ಲಿ ತಯಾರಿಸಿರುವ ತರಹೇವಾರಿ ತಿಂಡಿ ತಿನಿಸುಗಳು ಬಹಳ ರುಚಿಕರವಾಗಿದ್ದವು. ಇಂಥ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಮೂಲಕ ತರಬೇತಿ ನೀಡಲಾಗುವುದು. ಈ ಮೂಲಕ…

Read More