Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬೂದಿಹಾಳ-ಫೀರಾಪೂರ ನೀರಾವರಿ ಯೋಜನೆ ಪೂರ್ಣಗೊಳಿಸಲು ಹಾಗೂ ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ)ದ ನೇತೃತ್ವದಲ್ಲಿ ಇದೇ ದಿ. ೧೬ ರಂದು ತಾಳಿಕೋಟೆ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ) ಬಣದ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಹಗರಟಗಿ ಅವರು ಹೇಳಿದರು.ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ)ದ ನೇತೃತ್ವದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ರೈತರ ಜೀವನಾಡಿಯಾಗಲಿರುವ ಬೂದಿಹಾಳ-ಫೀರಾಪೂರ ಏತ ನೀರಾವರಿ ಯೋಜನೆಯು ಮುಕ್ತಾಯ ಹಂತಕ್ಕೆ ಬಂದಿದ್ದು ಸದ್ಯ ಎಫ್‌ಐಸಿ ಕಾಲುವೆ ನಿರ್ಮಾಣ ಕಾಮಗಾರಿ ಆಬೇಕಾಗಿದೆ ಈ ಯೋಜನೆ ಪೂರ್ಣಗೊಳ್ಳುವದರಿಂದ ತಾಳಿಕೊಟೆ-ದೇವರ ಹಿಪ್ಪರಗಿ ಅವಳಿ ತಾಲೂಕಿನ ೫೦ ಸಾವಿರ ಏಕರೆ ಭೂಮಿ ನೀರಾವರಿಗೆ ಒಳಪಡಲಿದೆ ಅಲ್ಲದೇ ಹುಣಸಗಿ-ಸುರಪೂರ ತಾಲೂಕಿನ ೪೩…
ಇಂಡಿಯಲ್ಲಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ರಾಜ್ಯ ಸರಕಾರ ರೈತರ ನೆರವಿಗೆ ಧಾವಿಸದೆ ರೈತ ಸಮುದಾಯವನ್ನು ಕಡೆಗಣನೆ ಮಾಡುತ್ತಿದೆ. ಸಂಬಂಧಪಟ್ಟ ಇಲಾಖೆಗಳಿಗೆ ಸಚಿವ ಸ್ಥಾನವನ್ನೂ ನೀಡಿಲ್ಲ ಮುಖ್ಯವಾಗಿ ರೈತರಿಗೆ ಅವಶ್ಯವಿರುವ ಕೃಷಿ ಹಾಗೂ ತೋಟಗಾರಿಕೆ ಸಚಿವ ಸ್ಥಾನವೂ ಖಾಲಿ ಇದೆ. ಈ ಸರಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಕಾಲುವೆಗೆ ಈಗಾಗಲೇ ಒಂದುವರೆ ಟಿಎಂಸಿ ನೀರು ಹರಿಸುವದಾಗಿ ಕಲಬುರಗಿ ಆಯುಕ್ತರು ತಿಳಿಸಿದ್ದರು ಬೇಗನೇ ನೀರು ಬಿಡಬೇಕು ಇಲ್ಲದಿದ್ದರೆ ಒತ್ತಡ ಹೇರುವದಾಗಿ ತಿಳಿಸಿದರು.ಸಂಪುಟ ರಚನೆ ಮಾಡದೆ ಇರುವುದರಿಂದ ಇಂಡಿ ತಾಲೂಕಿನ ಭೀಮಾ ನದಿ ದಂಡೆಯ ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಇದ್ದು ಅದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಅವರ ಜೊತೆ ಚರ್ಚೆ ಮಾಡಲಿದ್ದಾರೆ.ಕೆಎಸ್ ಎನ್‌ಡಿಎಂಸಿ ವರದಿ ಪ್ರಕಾರ ರಾಜ್ಯದ…
ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ರೈತರೊಂದಿಗೆ ಚರ್ಚಿಸಲು ಜುಲೈ 15 ರಂದು ಮಟ್ಟಿಹಾಳ ಕ್ರಾಸ್‌ನಲ್ಲಿ ಸಭೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರಸಕ್ತ ಸಾಲಿನ ಮುಂಗಾರು ಮಳೆ ಸಮರ್ಪಕವಾಗಿ ಆಗದ ಹಿನ್ನೆಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ಕೊರತೆಯಿಂದ ಬಿತ್ತನೆ ಕಾರ್ಯಗಳು ಸ್ಥಗಿತಗೊಂಡಿದ್ದು, ಅವಳಿ ಜಿಲ್ಲೆಗಳ ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ರೈತರೊಂದಿಗೆ ಚರ್ಚಿಸಲು ಬುಧವಾರ ಜುಲೈ 15 ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಮಟ್ಟಿಹಾಳ ಕ್ರಾಸ್‌ನಲ್ಲಿ ಸಭೆ ಕರೆಯಲಾಗಿದೆ. ಈ ಸಭೆಗೆ ಜಿಲ್ಲೆಯ ಎಲ್ಲಾ ರೈತ ಬಂಧುಗಳು ಆಗಮಿಸಬೇಕು ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಮಾಡಿದ್ದಾರೆ.ಮಂಗಳವಾರ ಪಟ್ಟಣದ ಸ್ವಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಅವಳಿ ಜಿಲ್ಲೆಯಲ್ಲಿರುವ ಏತ ನೀರಾವರಿ ಯೋಜನೆಗಳನ್ನು ಪ್ರಾರಂಭಿಸಿ, ಅವುಗಳನ್ನು ಶಾಶ್ವತವಾಗಿ ನೀರಾವರಿ ಸಲಹಾ ಸಮಿತಿಯಿಂದ ಹೊರತೆಗೆದು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಪ್ರಸಕ್ತ ಮುಂಗಾರು ಮಳೆ ಸರಿಯಾಗಿ ಆಗದಿರುವುದು ಮತ್ತು ಕೃಷ್ಣಾ ನದಿಗೆ ತಡವಾಗಿ…
ದೇಶದ ವಿವಿಧ ಭಾಗಗಳಿಂದ ಸೈಕಲ್ ಮೂಲಕ ಪಂಢರಪುರ ಕ್ಷೇತ್ರಕ್ಕೆ ಆಗಮಿಸಿದ ಸೈಕ್ಲಿಂಗ್ ಗ್ರುಪ್ ಸದಸ್ಯರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಷಾಡ ಏಕಾದಶಿ ನಿಮಿತ್ತ ದೇಶದ ವಿವಿಧ ಭಾಗಗಳಿಂದ ಸೈಕಲ್ ಮೂಲಕ ಪಂಢರಪುರ ಕ್ಷೇತ್ರಕ್ಕೆ ಆಗಮಿಸುವ ಸೈಕಲ್ ವಾರಿ ಕಾರ್ಯಕ್ರಮ ವಿಶಿಷ್ಟ ಪೂರ್ಣವಾಗಿ ಜರುಗಿತು.ಪಂಢರಪುರ ವಿಠೋಬಾ ದರ್ಶನಕ್ಕೆ ಪ್ರತಿವರ್ಷವೂ ಕಾಲುನಡಿಗೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವುದು ಸಂಪ್ರದಾಯ. ಆದರೆ ಕಳೆದ 2-3 ವರ್ಷಗಳಿಂದ ಕೆಲವು ಉತ್ಸಾಹಿ ಸೈಕ್ಲಿಂಗ್ ಸಂಘಟಕರು ಸೇರಿ ಆರಂಭಿಸಿದ ಸೈಕಲ್ ವಾರಿ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡ ಸೈಕ್ಲಿಂಗ್ ಗ್ರುಪ್ ಸದಸ್ಯರು ತಮ್ಮ ತಮ್ಮ ಸ್ಥಳಗಳಿಂದ ಸೈಕಲ್ ಸವಾರಿ ಮಾಡುತ್ತಾ ಪಂಢರಪುರಕ್ಕೆ ಆಗಮಿಸುವರು. ಅಲ್ಲಿ ಹಿಂದಿನ ರಾತ್ರಿಯೆ ಸೈಕ್ಲಿಂಗ್ ಸಮ್ಮೇಳನ ನಡೆಯುವದು. ಈ ಸಮ್ಮೇಳನದಲ್ಲಿ ವಿವಿಧ ಸೈಕ್ಲಿಸ್ಟ್ ಗಳು ವಿಚಾರ ಸಂಕಿರಣಗಳಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳುವರು. ಮಾರನೆಯ ದಿನ ಬೆಳಿಗ್ಗೆ ಎಲ್ಲ ಸೈಕ್ಲಿಸ್ಟ್‍ಗಳು ತಮ್ಮ ಸೈಕಲ್ ಸವಾರಿ ಮೂಲಕ ನಗರ ಪ್ರದಕ್ಷಿಣೆ ಮಾಡಿ, ಸ್ಥಳೀಯ ಕ್ರೀಡಾಂಗಣದಲ್ಲಿ ಸಮಾವೇಶಗೊಂಡು ಸೈಕಲ್ ರಿಂಗನ್ ನಲ್ಲಿ (ವರ್ತುಲಾಕಾರದಲ್ಲಿ ಸೈಕಲ್…
ವಿಜಯಪುರ ನಗರಕ್ಕೆ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಬಾಗವತ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರಕ್ಕೆ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಬಾಗವತ್ ಅವರನ್ನು ಸಮಾಜ ಸೇವಕ, ಯುವ ಸಬಲೀಕರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಉಮೇಶ ಕಾರಜೋಳ ಅವರು, ಕೇಸರಿ ಶಲ್ಯ ತೊಡಿಸಿ ಹಾಗೂ ಪದ್ಮಶ್ರೀ ಕಾಕಾ ಕಾರಖಾನೀಸ ಅವರ ಪುಸ್ತಕವನ್ನು ನೀಡುವ ಮೂಲಕ ಆತ್ಮೀಯವಾಗಿ ಬರ ಮಾಡಿಕೊಂಡರು.ವಿಜಯಪುರದ ಸಾಯಿ ಮಂಗಲ ಕಾರ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಮೋಹನ್ ಭಾಗವತ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಹಾಗೂ ಅಭಿನಂದಿಸಿದ ಕಾರಜೋಳರು, ತಾವು ವಿಜಯಪುರಕ್ಕೆ ಆಗಮಿಸಿರುವುದು ಅತ್ಯಂತ ಸಂತೋಷ ತಂದಿದೆ, ಸಂಘ ಪರಿವಾರ ಒಡನಾಡಿಗಳಿಗೆ ನಿಮ್ಮ ಆಗಮನ ಒಂದು ಹೊಸ ಚೈತನ್ಯ ನೀಡಲಿದೆ, ನಿಮ್ಮ ಅನುಭವ, ಮಾರ್ಗದರ್ಶನದಿಂದ ನಮಗೆ ಹಾಗೂ ಎಲ್ಲ ಸ್ವಯಂ ಸೇವಕರಿಗೆ ಹೊಸ ಶಕ್ತಿ ತುಂಬಿದಂತಾಗಿದೆ ಎಂದು ಆತ್ಮೀಯವಾಗಿ ಸನ್ಮಾನಿಸಿದರು.ಪದ್ಮಶ್ರೀ ಕಾಕಾ ಕಾರಖಾನೀಸ ಅವರ ಜೀವನಚರಿತ್ರೆಯ ಪುಸ್ತಕವನ್ನು ಅರ್ಪಿಸಿದ…
ವಿಜಯಪುರದಲ್ಲಿ ನಾಟಕ ಅಕಾಡೆಮಿ ವತಿಯಿಂದ ’ಪ್ರಥಮ ಪಲ್ಲವ’ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಾಟಕ ಅಕಾಡೆಮಿ ವಿಜಯಪುರ ವತಿಯಿಂದ ’ಪ್ರಥಮ ಪಲ್ಲವ’ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಬಿಎಲ್ಡಿಇ ಕಾಲೇಜ್ ಅಸಿಸ್ಟೆಂಟ್ ಪ್ರೊಫೆಸರ್ ಡಾ.ರಂಜಿತಾ ಕೆ.ಆರ್.ಮಲ್ಲಣ್ಣ ಮಾತನಾಡಿ, ಭರತನಾಟ್ಯ ಸಂಗೀತ ಸಾಹಿತ್ಯ ಕಲೆಗಳಿಂದ ಮಕ್ಕಳಿಗೆ ಉಜ್ವಲ ಭವಿಷ್ಯವಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಗೀಳನ್ನು ಹೆಚ್ಚಿಸುತ್ತಿದ್ದು ಅಂತವುಗಳಿಗೆ ಕಡಿವಾಣ ಹಾಕಿ ಪಾಲಕರು ತಮ್ಮ ಮಕ್ಕಳನ್ನು ಇಂತಹ ಭರತನಾಟ್ಯ ಕಲೆ ಸಾಹಿತ್ಯ, ಸಂಗಿತ, ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿಯ ಪಾತ್ರ ದೊಡ್ಡದು ಎಂದರು.ಜಿಲ್ಲಾ ಯುವ ಪರಿಷತ್ತಿನ ಅಧ್ಯಕ್ಷ ಶರಣು ಸಬರದ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕರು ಯುವತಿಯರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದು, ಜೊತೆಗೆ ಡ್ರಗ್ಸ್ ವ್ಯಸನಿಗಳಾಗುತ್ತಿದ್ದಾರೆ. ಪಾಲಕರು ತಮ್ಮ ಮಕ್ಕಳ ಚಲನವಲನ ಮೇಲೆ ನಿಗಾ ಇಡುವುದರ ಜೊತೆಗೆ ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಅಭ್ಯಾಸದ ಜೊತೆಗೆ…
ಅಥಣಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಅಥಣಿ: ಅಥಣಿ ಪಟ್ಟಣದ ಹೃದಯ ಭಾಗದಲ್ಲಿರುವ ಜೋಡಿ ಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಶಾಸಕ ಲಕ್ಷ್ಮಣ ಸವದಿ ಅವರು ಮಂಗಳವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.ಈ ವೇಳೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದ ಶಾಸಕ ಲಕ್ಷ್ಮಣ ಸವದಿ ಅವರು, ಸ್ಥಳದಲ್ಲಿನ ಕೆಲ ಅವ್ಯವಸ್ಥೆಗಳನ್ನು ಗಮನಿಸಿ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಮಗಾರಿಯನ್ನು ನಿಗದಿತ ವೇಳಾಪಟ್ಟಿಯಂತೆ, ಗುಣಮಟ್ಟ ಕಾಪಾಡಿಕೊಂಡು ವ್ಯವಸ್ಥಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಪರಿಶೀಲನೆ ಬಳಿಕ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಅಥಣಿ ಪಟ್ಟಣದ ಜನರ ಬಹುದಿನಗಳ ಕನಸಾಗಿದ್ದ ಜೋಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಈಗ ವೇಗ ಸಿಕ್ಕಿದೆ. ಅಥಣಿ ಪಟ್ಟಣ ನಗರಸಭೆಯಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಜೋಡಿ ಕೆರೆಯ ಅಭಿವೃದ್ಧಿಯಿಂದ ಪಟ್ಟಣದ ಸೌಂದರ್ಯ ಮತ್ತಷ್ಟು ಹೆಚ್ಚಲಿದೆ.…
ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ: ಗದಗ ಜಿಲ್ಲಾ ನಗರದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ದಲಿತ ಸಾಹಿತ್ಯ ಅಕಾಡೆಮಿ ದೆಹಲಿ ಗದಗ ಶಾಖೆಯ ಜಿಲ್ಲಾ ಕಾರ್ಯಾಧ್ಯಕ್ಷರು, ಆದರ್ಶ ಶಿಕ್ಷಕರು ಹಾಗೂ ಸಮಾಜ ಸೇವಕರಾದ ಡಾ.ಶಾಂತಕುಮಾರ ಬಿ. ಭಜಂತ್ರಿ ಅವರು ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ “ನಾಡೋಜ ಡಾ.ಕಯ್ಯಾರ ಸದ್ಭಾವನಾ ಪ್ರಶಸ್ತಿ” 2026 ಗೆ ಆಯ್ಕೆಯಾಗಿದ್ದಾರೆ.ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ. ಕೆ ಎನ್ ವೆಂಕಟರಮಣ ಹೊಳ್ಳ ಹಾಗೂ ಕಾಸರಗೋಡು ಕನ್ನಡ ಭವನದ ಸಂಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ | ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್.ಐ.ಆರ್. ವಿಫಲಗೊಳಿಸುವ ಹುನ್ನಾರದೊಂದಿಗೆ ರಾಜ್ಯ ಸರ್ಕಾರ ಶಾಶ್ವತ ರಹವಾಸಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆ ಆರಂಭಿಸಿ ದೇಶದ ಆಂತರಿಕ ಭದ್ರತೆಗೆ ದೊಡ್ಡ ಆತಂಕ ಮೂಡಿಸುತ್ತಿದ್ದು, ಕೂಡಲೇ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿ ಹಾಗೂ ಪಿ.ಆರ್.ಸಿ. ಪ್ರಕ್ರಿಯೆ ಕೈಗೊಳ್ಳುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷದ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಿ.ಆರ್.ಸಿ. ಜಾರಿ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರಹಾಕಿದರು. ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಾಪಲರು ಹಾಗೂ ಕೇಂದ್ರ ಗೃಹ ಮಂತ್ರಾಲಯಕ್ಕೆ ಲಿಖಿತ ಮನವಿ ಸಲ್ಲಿಸಲಾಯಿತು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಅಕ್ರಮ ವಲಸಿಗರನ್ನು ರಕ್ಷಣೆ ಮಾಡಿ ತನ್ನ ಮತ ಬ್ಯಾಂಕ್ ಆಗಿ ಮಾಡಿಕೊಳ್ಳಲು ಕಾಂಗ್ರೆಸ್…
ಲೇಖನ- ಮಲ್ಲಪ್ಪ ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಆಧುನಿಕ ಮಾನವ ಕಂಪ್ಯುಟರ್ ಎಂದೇ ಹೆಸರುವಾಸಿಯಾದ ಶಕುಂತಲಾ ದೇವಿ ಪ್ರಕಾರ“ ಶಿಕ್ಷಣವೆಂದರೆ ಕೇವಲ ಶಾಲೆ-ಕಾಲೇಜುಗಳಿಂದ ಪದವಿ ಪಡೆಯುವುದಲ್ಲ. ಅದು ವ್ಯಕ್ತಿಯ ವಿಷಯ ಜ್ಞಾನ, ಪ್ರಾಯೋಗಿಕತೆ, ವಿವೇಚನೆ-ತಾರ್ತಿಕ ಶಕ್ತಿಯನ್ನು ಹೆಚ್ಚಿಸುತ್ತಾ, ಹಂಚಿಕೆಯಾದ ಕಾರ್ಯವನ್ನು ಕಾರ್ಯಕ್ಷಮತೆಯೊಂದಿಗೆ ಪೂರ್ಣಗೊಳಿಸಲು ಬೇಕಾದ ಅಗತ್ಯ ಕೌಶಲ್ಯವನ್ನು ಒಡಮೂಡಿಸುವುದೇ ನಿಜವಾದ ಶಿಕ್ಷಣ” ಎಂದು ಅಭಿಪ್ರಾಯಪಟ್ಟಿದ್ದಾರೆ. ಜಾಗತಿಕ ಕಾರ್ಪೋರೇಟ್ ಸಂಸ್ಥೆಗಳ ಇತ್ತೀಚಿನ ಅಧ್ಯಯನ ವರದಿಯ ಪ್ರಕಾರ, ಇಂದು ಕಾಲೇಜುಗಳಿಂದ ಪದವಿ ಪಡೆದು ಹೊರಬರುವ ವಿದ್ಯಾರ್ಥಿಗಳು ಅಥವಾ ಪದವೀಧರರು ಉದ್ಯೋಗಕ್ಕೆ ತಕ್ಕಂತೆ ಅರ್ಹತೆ, ಸಂವಹನ ಕೌಶಲ್ಯ, ಸಂದರ್ಶನ ಕಲೆ ಮತ್ತು ಕ್ರಿಯಾಶೀಲತೆ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವುದಿಲ್ಲ. ಇಂದಿನ ಕಾಲದಲ್ಲಿ ಡಿಗ್ರಿಗಳಿಗೆ ಕಾಲವಿಲ್ಲ, ಅದರ ಜೊತೆಗೆ ಕೌಶಲ್ಯಗಳನ್ನು ಪಡೆದವನು ಉದ್ಯೋಗದಲ್ಲಿ ಉನ್ನತ ದರ್ಜೆಗೆ ಶೀಘ್ರವಾಗಿ ಏರಲು ಸಾಧ್ಯವಾಗುತ್ತದೆ ಎಂಬ ಅಂಶ ಕಂಡುಬಂದಿದೆ. ಯುವಕರನ್ನು ಕೌಶಲ್ಯದೊಂದಿಗೆ ಸಜ್ಜುಗೊಳಿಸಿ ಉದ್ಯೋಗವಂತರನ್ನಾಗಿಸುವ ಮಹತ್ವಾಕಾಂಕ್ಷೆಜಾಗತಿಕವಾಗಿ ಯುವಜನತೆ ಎದುರಿಸುವ ಅತಿ ಪ್ರಮುಖ ಸಮಸ್ಯೆಗಳೊಂದಾದ ನಿರುದ್ಯೋಗ ಮತ್ತು ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳ ಅವರಲ್ಲಿ…
