Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಸಾಹಿತ್ಯದ ಸುದೀರ್ಘ ಇತಿಹಾಸದಲ್ಲಿ ಸರಳ ಬದುಕಿನ ಸಾರ ಕವನ ಸಂಕಲನಗಳ ಮೂಲಕ ಹೇಳಿದ ಮಹಾನ ವ್ಯಕ್ತಿತ್ವ ಬೇಂದ್ರೆಯವರು ಹೊಂದಿದ್ದರು. ಅವರು ಬದುಕಿನ ಸಾಮರಸ್ಯ ಕವಿಯಾಗಿ ಹೊರಹೊಮ್ಮಿದವರು ಎಂದು ಡಾ.ಡಾ.ಭಾರತಿ ಖಾಸನಿಸ್ ಹೇಳಿದರು.ಶನಿವಾರ ಅ.೨೬ ರಂದು ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯ, ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಡಾ ದ ರಾ ಬೇಂದ್ರೆ ಪುಣ್ಯ ಸ್ಮರಣೋತ್ಸವ ನಿಮಿತ್ಯ ಚಿಂತನೆ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೇಂದ್ರೆ ಕವನಗಳನ್ನು ಅಧ್ಯಯನ ಮಾಡುವ ಅತ್ಯವಶ್ಯಕತೆ ಇದೆ, ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಎಂದರು,ಡಾ ದ ರಾ ಬೇಂದ್ರೆ ಕುರಿತು ಉಪನ್ಯಾಸ ನೀಡಿದ ಪಿಡಿಜೆ ಕಾಲೇಜ್ ಉಪನ್ಯಾಸಕ ಸಂತೋಷ ಕುಲಕರ್ಣಿ ಮಾತನಾಡುತ್ತ, ಕನ್ನಡ ಸಾಹಿತ್ಯಕ್ಕೆ ನಾಕುತಂತಿ ಕವನ ಸಂಕಲನ ನೀಡುವದರ ಮೂಲಕ ಜ್ಞಾನಪೀಠ ಪ್ರಶಸ್ತಿ ಪಡೆದು ನಾಡಿಗೆ ಗೌರವ ತಂದವರು. ಕಷ್ಟದಲ್ಲಿ ನೋವುಂಡು ಬೆಳದು ೩೭ ಕವನ ಸಂಕಲನ ಬರೆಯುವದರ ಮೂಲಕ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ ಸಂಸ್ಥಾಪಿತ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೆಟಿಂಗ್ ಅಕಾಡಮಿ ಸ್ಪರ್ದೆಯಲ್ಲಿ ೨ಬಂಗಾರ, ೩ಬೆಳ್ಳಿ ಮತ್ತು ೫ ಕಂಚಿನ ಪದಕಗಳನ್ನು ಪಡೆಯುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.ಅ.೨೬ ಮತ್ತು ೨೭ ರಂದು ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಸ್ಪರ್ದೆಯಲ್ಲಿ ಅಕಾಡಮಿಯ ವಿದ್ಯಾರ್ಥಿಗಳಾದ ವಿಕ್ರಾಂತ ಶಾರದಳ್ಳಿ, ಅನೂಪ ತುಪ್ಪದ, ಅದಿತಿ ನಾಗೂರ, ಸಾದ್ವಿ ನಾಗೂರ, ಕೃತಿಕಾ ತುಪ್ಪದ, ಶಕುಂತಲಾ ಶಾರದಳ್ಳಿ ಭಾಗವಹಿಸಿದ್ದರು.೫೦೦ಮೀ ಮತ್ತು ೧೦೦೦ಮೀ ಸ್ಪರ್ದೆಯಲ್ಲಿ ಕೃತಿಕಾ ತುಪ್ಪದ ಬಂಗಾರದ ಪದಕ, ವಿಕ್ರಾಂತ ೫೦೦ಮೀ ಕಂಚಿನ ಮತ್ತು ೧೦೦೦ಮೀ ನಲ್ಲಿ ಬೆಳ್ಳಿಯ ಪದಕ, ಅದಿತಿ ೫೦೦ಮೀ ಮತ್ತು ೧೦೦೦ಮೀ ನಲ್ಲಿ ಬೆಳ್ಳಿಯ ಪದಕ, ಶ್ರೇಯಾ ಮತ್ತು ಶಕುಂತಲಾ ಕಂಚಿನ ಪದಕ ಪಡೆದು ತಾಲೂಕಿನ ಹಿರಿಮೆಯನ್ನ ಹೆಚ್ಚಿಸಿದ್ದಾರೆ.ಇವರ ಸಾಧನೆಗೆ ಅಕಾಡಮಿಯ ವಿದ್ಯಾರ್ಥಿಗಳ ಪಾಲಕರಾದ ಬಸವರಾಜ ನಾಗೂರ, ಉಮಾ ಶಾರದಳ್ಳಿ, ನಾಗೇಂದ್ರ ಶಿವಶಿಂಪಿ, ಮಲ್ಲನಗೌಡ ಕಡಕಲ್ಲ,…
ಮರಾಠಾ ಸಮಾಜ ಸಾಂಸ್ಕೃತಿಕ ಸೇವಾ ಸಮಿತಿಯ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವೆಲ್ಲರೂ ಇಲ್ಲಿ ಒಗ್ಗಟ್ಟಿನಿಂದ ಇರುವ ಕಾರಣಕ್ಕೆ ವಿಜಯಪುರ ನಗರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ವಾರ್ಡ ನಂ.೧೫ ರಲ್ಲಿ ಬರುವ ಟ್ರೇಜರಿ ಕಾಲೊನಿಯ ಅಯ್ಯಪ್ಪ ದೇವಸ್ಥಾನ ಹತ್ತಿರ ಭಾನುವಾರ ೨೦೨೦-೨೧ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಿಸಲಾದ ರೂ.೧೦ ಲಕ್ಷ ಅನುದಾನದಲ್ಲಿ ಮರಾಠಾ ಸಮಾಜ ಸಾಂಸ್ಕೃತಿಕ ಸೇವಾ ಸಮಿತಿಯ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಅಪಪ್ರಚಾರ ನಡೆಸಿದರೂ ಯಾರ ಆಟವು ನಡೆಯಲಿಲ್ಲ. ಹಿಂದಿನ ಚುನಾವಣೆಗಿಂತಲೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದೆ. ಅದರ ಫಲವಾಗಿ ಎಂದೂ ಅಭಿವೃದ್ಧಿ ಕಾಣದ ಬಡಾವಣೆ, ಕಾಲನಿಗಳು ಸೇರಿ ನಗರದ ಒಳ ರಸ್ತೆಗಳು ಹಾಗೂ ಪ್ರಮುಖ ರಸ್ತೆಗಳು ಅಭಿವೃದ್ಧಿಗೊಂಡಿವೆ. ಇದರಿಂದ ನಮ್ಮ ನಗರ ದೂಳು…
ನಾಗರಿಕ ಸೌಲಭ್ಯ ವಸತಿ ನಿಲಯ ಕಟ್ಟಡಕ್ಕೆ ಸಚಿವ ಎಂ.ಬಿ.ಪಾಟೀಲರಿಂದ ಭೂಮಿ ಪೂಜೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನಾಗರಿಕ ಸೌಲಭ್ಯ ವಸತಿ ನಿಲಯದಿಂದ ಹಲವು ಬಡಜನರಿಗೆ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ೨೦೨೪-೨೫ನೇ ಸಾಲಿನಲ್ಲಿ ಶ್ರೀಮತಿ ಸುಧಾ ಮೂರ್ತಿ ರಾಜ್ಯಸಭಾ ಸಂಸದರು ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಾಗರಿಕ ಸೌಲಭ್ಯ ವಸತಿ ನಿಲಯದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆ, ರಾಜ್ಯ, ದೇಶ ಅಭಿವೃದ್ದಿ ಹೊಂದಲು ಸಮಾಜದ ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಂತರಾಗಿರುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸಹ ಅತಿ ಹೆಚ್ಚಿನ ಅನುದಾನ ಆರೋಗ್ಯ ಕ್ಷೇತ್ರಕ್ಕೆ ವ್ಯಯಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ.ಈ…
ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಮರುನಾಮಕರಣ | ಅಧ್ಯಕ್ಷ ಎಂ.ಬಿ.ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಸ್ಥೆಯ ಜನಸೇವೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶದಿಂದ ಬಿಜಾಪುರ ಲಿಂಗಾಯತ ಡಿಸ್ಟ್ರೀಕ್ಡ್ ಎಜುಕೇಶನ್ ಅಸೋಸಿಯೇಷನ್ ಹೆಸರನ್ನು ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಬದಲಾಯಿಸಲು ಇಂದು ರವಿವಾರ ನಡೆದ ಬಿ.ಎಲ್.ಡಿ.ಇ ಸಂಸ್ಥೆಯ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಒಕ್ಕೊರಲಿನಿಂದ ಅನುಮೋದನೆ ನೀಡಲಾಗಿದೆ.ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.ಸಭೆಯಲ್ಲಿ ಮಾತನಾಡಿದ ಎಂ. ಬಿ. ಪಾಟೀಲ ಅವರು, 1910ರಲ್ಕಿ ವಿಜಯಪುರದಲ್ಲಿ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೆಶನಲ್ ಅಸೋಸಿಯೇಷನ್ ಪ್ರಾರಂಭವಾಗಿತ್ತು. ಈಗ ವಿಜಯಪುರ ಜಿಲ್ಲೆ ವಿಭಜನೆಯಾಗಿದೆ. ಸಂಸ್ಥೆಯ ವತಿಯಿಂದ ಬೆಂಗಳೂರಿನ ಹೃದಯ ಭಾಗದಲ್ಲಿ ರೂ. 300 ಕೋ. ವೆಚ್ಚದಲ್ಲಿ ಜಮೀನು ಖರೀದಿಸಲಾಗಿದೆ. ಮುಂಬರುವ ದಿನಗಲ್ಲಿ ಅಲ್ಲಿ ನಾನಾ ಕಾಲೇಜುಗಳನ್ನು ಪ್ರಾರಂಭಿಸುವ ಉದ್ದೇಶವಿದೆ. ಈ ಮೂಲಕ ಸಂಸ್ಥೆಯ ಕಾರ್ಯ ವ್ಯಾಪ್ತಿಯನ್ನು ರಾಜ್ಯಕ್ಕೆ ವಿಸ್ತರಿಸಲಾಗುತ್ತಿದೆ. ಭವಿಷ್ಯದಲ್ಲಿ ಸಂಸ್ಥೆಯ…
ಹೊನವಾಡದಲ್ಲಿ ವಕ್ಫ್ ಆಸ್ತಿ ಬರೀ 11 ಎಕರೆ | ಅನವಶ್ಯಕ ಗೊಂದಲ ಸೃಷ್ಟಿ | ಆತಂಕ ಬೇಡವೆಂದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಕುರಿತಂತೆ ಕೆಲ ಜನಪ್ರತಿನಿಧಿಗಳು ಅನವಶ್ಯಕವಾಗಿ ಗೊಂದಲ ಸೃಷ್ಟಿ ಮಾಡಿ, ಚರ್ಚೆ ಹುಟ್ಟುಹಾಕಿದ್ದು ಇದಕ್ಕೆಲ್ಲ ಇತಿಶ್ರಿ ಹಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಉಪವಿಭಾಗಾಧಿಕಾರಿಗಳು ಮತ್ತು ತಹಸಿಲ್ದಾರರು ಇರಲಿದ್ದು, ಈ ಸಮಿತಿಯು ೧೯೬೪ ರಿಂದ ೧೯೭೪ ರವರೆಗಿನ ಜಿಲ್ಲೆಯ ಎಲ್ಲ ವಕ್ಫ್ ಆಸ್ತಿಗಳ ಭೂದಾಖಲೆಗಳನ್ನು ಪರಿಶೀಲನೆ ಮಾಡಲಿದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ವಕ್ಫ್ ೧೪೨೦೧ ಎಕರೆ ಆಸ್ತಿ ಹೊಂದಿತ್ತು. ಅದರಲ್ಲಿ ೧೧೮೩೫ ಎಕರೆ ಆಸ್ತಿಯನ್ನು ಸರಕಾರ ಈಗಾಗಲೆ ಹಂಚಿಕೆ ಮಾಡಿದೆ. ೧೪೫೯ ಎಕರೆ ಇಂದೀಕರಣ ಮಾಡಬೇಕಿದೆ. ಈಗ ವಕ್ಫ್ ಹೆಸರಿನಲ್ಲಿರುವುದು ೭೭೩…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ತಂಡದ ನಾಯಕ (Pಒಅ) ಹಾಗೂ ಜಲಧಾರೆ ಯೋಜನೆಯ ಗುತ್ತಿಗೆದಾರರು ಇವರೊಂದಿಗೆ ಅ.೨೫ರಂದು ಜಿಲ್ಲಾ ಪಂಚಾಯತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.ವಿಜಯಪುರ ಜಿಲ್ಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಜಲಧಾರೆ ಯೋಜನೆಯನ್ನು ರಾಜ್ಯ ಸರ್ಕಾರದಿಂದ ಮೊದಲ ಹಂತದಲ್ಲಿಯೇ ಅನುಮೋದನೆ ನೀಡಲಾಗಿದೆ. ಇದರ ಉದ್ದೇಶ ಎಲ್ಲ ಗ್ರಾಮೀಣ ಜನವಸತಿಗಳಿಗೆ ಪ್ರತಿ ವ್ಯಕ್ತಿಗೆ ತಲಾ ೫೫ ಲೀಟರನಂತೆ (ಐPಅಆ) ಯಂತೆ ಆಲಮಟ್ಟಿ ಮತ್ತು ನಾರಾಯಣಪೂರ ಜಲಾಶಯದ ಹಿನ್ನೀರನ್ನು ಶುದ್ಧಿಕರಿಸಿ ಪೂರೈಸುವುದಾಗಿರುತ್ತದೆ.ವಿಜಯಪುರ ಜಿಲ್ಲೆಯ ವಿಜಯಪುರ, ಇಂಡಿ ಮತ್ತು ಬಸವನ ಬಾಗೇವಾಡಿ ತಾಲೂಕಿನ ೭೦೨ ಜನವಸತಿಗಳ ಹಾಗೂ ೫ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿರುತ್ತದೆ ಹಾಗೂ ಮುದ್ದೇಬಿಹಾಳ ತಾಲೂಕು ಮತ್ತು ಸಿಂದಗಿ ತಾಲೂಕಿನ ೩೪೩ ಜನವಸತಿಗಳ ಹಾಗೂ ೬ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿದ್ದು,…
ಉದಯರಶ್ಮಿ ದಿನಪತ್ರಿಕೆ ಇಂಡಿ: ‘ಯುವಕರ ಸ್ವಾವಲಂಬಿ ಬದುಕಿಗೆ ವೃತ್ತಿಪರ ತರಬೇತಿ ಅವಶ್ಯವಾಗಿದ್ದು, ಇಂದಿನ ತ್ವರಿತ-ಬದಲಾಗುತ್ತಿರುವ ಆರ್ಥಿಕ ಸನ್ನಿವೇಶದಲ್ಲಿ ಮುಂದಿನ ಪೀಳಿಗೆಗೆ ನಿರ್ದಿಷ್ಟ ವಿಶೇಷ ಕೌಶಲ್ಯಗಳನ್ನು ಒದಗಿಸುವುದು ಅತ್ಯಗತ್ಯ’ ಎಂದು ಇಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೋ. ಆರ್ ಎಸ್ ರಮೇಶ ಹೇಳಿದರು.ಅವರು ಶನಿವಾರದಂದು ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ತರಬೇತಿ ಸಂಸ್ಕೃತಿಯು ನಿರಂತರ ಕಲಿಕೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ. ಇದು ನಿರಂತರ ಸುಧಾರಣೆಗೆ ಕಾರಣವಾಗುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಮಾತನಾಡಿ,ವೃತ್ತಿಪರ ತರಬೇತಿಯು ಯುವ ವಿದ್ಯಾರ್ಥಿಗಳಿಗೆ ಉದ್ಯೋಗಕ್ಕೆ ಸಿದ್ಧರಾಗಲು ಸಹಕರಿಸಿ, ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾಗುತ್ತದೆ. ದೇಶದ ಆರ್ಥಿಕ ಬೆಳವಣಿಗೆಗೆ ಧನಾತ್ಮಕವಾಗಿ ಕೊಡುಗೆ ನೀಡುವತ್ತ ಯುವಸಮೂಹ ಗಮನಹರಿಸಬೇಕು ಎಂದು ಹೇಳಿದರು.ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಪಿ ವೈ ರಜನೀಕರ ಅಧ್ಯಕ್ಷತೆ ವಹಿಸಿ ಮಾತನಾಡಿ,‘ಘಟಿಕೋತ್ಸವ ಎನ್ನುವುದು ಸಂಭ್ರಮಾಚರಣೆಯಲ್ಲ. ಬದುಕು ರೂಪಿಸುವ ಕಾಲ. ನಿಮ್ಮ ಮೇಲೆ…
ಬಸವನ ಅಗಲಿಕೆಗೆ ಕಂಬನಿಯ ಅಶ್ರುದರ್ಪಣ | ಶ್ರೀಗಳು, ರೈತರ ಸಮ್ಮುಖದಲ್ಲಿ ಗೌರವಯುತ ಅಂತಿಮ ಸಂಸ್ಕಾರ ಉದಯರಶ್ಮಿ ದಿನಪತ್ರಿಕೆ – ಇಲಾಹಿ ಇ. ಜಮಖಂಡಿ ಚಿಮ್ಮಡ: ಬಹುತೇಕ ರೈತರು ತಮ್ಮ ಕೃಷಿ ಕಾಯಕಗಳಿಗೆ ಬೆನ್ನೆಲುಬಾಗಿ ದುಡಿಯುವ ಆಕಳು, ಎಮ್ಮೆ, ಎತ್ತುಗಳು ದುಡಿಯಲು ಅಸಹಾಯಕ ಸ್ಥಿತಿ ತಲುಪಿದಾಗ ಅವುಗಳನ್ನು ಕಸಾಯಿಖಾನೆಗೋ ಅಥವಾ ಗೋಶಾಲೆಗೋ ಸಾಗಿಸಿ ಕೈತೊಳೆದುಕೊಂಡು ಬಿಡುತ್ತಾರೆ ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ರೈತ ಪರಪ್ಪಾ ರಾಮಪ್ಪಾ ಪಾಲಭಾವಿಯವರು ನಿಸ್ಸಹಾಯಕ ಆಕಳು, ಎತ್ತುಗಳನ್ನು ಮನೆಯ ಸದಸ್ಯರಂತೆ ಸಾಕಿ, ಸಲಹಿ ಅವು ಅಗಲಿದಾಗ ಗೌರವಯುತವಾಗಿ ಅಂತಿಮ ಸಂಸ್ಕಾರ ನೆರವೇರಿಸುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ.ಸುಮಾರು ಇಪ್ಪತ್ನಾಲ್ಕು ವರ್ಷಗಳ ಹಿಂದೆ ಖರೀದಿಸಿದ ಎತ್ತೊಂದು ಗುರುವಾರ ಸಂಜೆ ವಯೋಸಹಜ ಅಸುನೀಗಿದಾಗ ತಮ್ಮ ಬಾಗದ ರೈತರಿಗೆಲ್ಲ ಕರೆ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಆಹ್ವಾನ ನೀಡಿ ಶ್ರೀ ಪ್ರಭು ಮಹಾಸ್ವಾಮಿಜಿ, ಶ್ರೀ ಜನಾರ್ಧನ ಮಹಾರಾಜರು ಹಾಗೂ ನೂರಾರು ಜನ ರೈತರ ಸಮ್ಮುಖದಲ್ಲಿ ಗೌರವಯುತವಾಗಿ ಅಂತ್ಯ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಕೊಡಮಾಡುವ ” ಜಾನಪದ ಪ್ರಪಂಚ ” ಪ್ರಶಸ್ತಿಯನ್ನು ಬೆಂಗಳೂರಿನ ಸೇಂಟ್ ಕ್ಲಾರೆಟ್ ಕಾಲೇಜು ಸಭಾಂಗಣದಲ್ಲಿ ಕ ಜಾ ಪ ರಾಜ್ಯಾಧ್ಯಕ್ಷ ಡಾ ಎಸ್ ಬಾಲಾಜಿಯವರ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಣಮಾಪುರ ಹಲಗೆಮಜಲು ಕಲಾವಿದ ಗಂಗಾಧರ ಬಡಿಗೇರನಿಗೆ ನೀಡಿ ಗೌರವಿಸಲಾಯಿತು.ರೆವರೆಂಡ್ ಫಾದರ್ ಜೋಸೆಫ್ ಎಸ್ ಸಾನಿಧ್ಯದಲ್ಲಿ, ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಸಚಿವ ಶಹಜಹಾನ್ ಮುದಕವಿ ಉದ್ಘಾಟಿಸಿದರು. ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ ಅಪ್ಪಗೆರೆ ತಿಮ್ಮರಾಜು, ರಾಜ್ಯ ಸಹಕಾರಿ ಮಹಾಮಂಡಳದ ನಿಬಂಧಕ ಲಕ್ಷ್ಮೀಪತಯ್ಯ , ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಜಿಲ್ಲಾಧ್ಯಕ್ಷ ಪ್ರಕಾಶ ಮೂರ್ತಿ, ದತ್ತಿದಾನಿ ಸೌಭಾಗ್ಯ ಟಿ ಕೆ ಗೌಡ , ಕನ್ನಡ ಜಾನಪದ ಪರಿಷತ್ ಬೆಂಗಳೂರು ಜಿಲ್ಲಾಧ್ಯಕ್ಷರಾದ ಡಾ ರಾಜು ಗೂಂಡಾಪುರ , ಡಾ ರಿಯಾಜ್ ಪಾಷ ಮತ್ತು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಉಪಸ್ಥಿತರಿದ್ದರು.
