Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ‘ಸಮಾಜಕ್ಕೆ ಮಾರಕವಾಗಿರುವ ತಂಬಾಕು ಸೇವನೆ ಬಗೆಗಿನ ಅಪಾಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಂಡ ‘ತಂಬಾಕು ಸೇವನೆಯ ದುಷ್ಪರಿಣಾಮಗಳು’ ಕುರಿತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ನಿರಂತರ ತಂಬಾಕು ಸೇವನೆಯಿಂದ ಹೃದಯಾಘಾತ, ಪಾರ್ಶ್ವವಾಯು, ಕ್ಯಾನ್ಸರ್‌ನಂತಹ ರೋಗಗಳು ಬರುತ್ತವೆ.ನಮ್ಮ ಶರೀರದ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸಿಬಿಡುತ್ತದೆ. ಸಂಶೋಧನೆಗಳ ಪ್ರಕಾರ ಜಗಿದು ತಿನ್ನುವ ತಂಬಾಕು ಅತ್ಯಂತ ಅಪಾಯಕಾರಿ. ಹಾಗಾಗಿ ತಂಬಾಕು ಸೇವನೆ ತ್ಯಜಿಸಬೇಕು ಎಂದು ಹೇಳಿದರು.ಇಂಡಿ ಎಸ್ ಬಿ ಆಯ್ ಬ್ಯಾಂಕ್ ಕೃಷಿ ಕ್ಷೇತ್ರ ಅಧಿಕಾರಿ ಪ್ರಕಾಶ ಗುಜ್ಜಲಕರ ಮಾತನಾಡಿ, ಯುವಕರು ಗುಟಕಾ, ಸಿಗರೇಟು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ ಸುಂದರ ಬದುಕನ್ನು ಹಾಳುಮಾಡಿಕೊಳ್ಳುತ್ತಿರುವದು ದುರದೃಷ್ಟಕರ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ನಾಗರಿಕರ ಸಹಕಾರ ಬಹುಮುಖ್ಯ ಎಂದರು.ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಕನ್ನಡ ಭಾಷೆಗೆ ಪ್ರಥಮ ಆದ್ಯತೆ ಇದೆ. ಅದಕ್ಕಾಗಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಪ್ರಥಮವಾಗಿ ಬರೆದಿರಬೇಕು ಹಾಗೂ ನಾಮಫಲಕದಲ್ಲಿ‌ ಶೇ 60 ರಷ್ಟು ಕನ್ನಡ ಭಾಷೆಯ ದೊಡ್ಡ ಅಕ್ಷರದಲ್ಲಿ‌ ಕಣ್ಣಿಗೆ ಕಾಣುವಂತೆ ಕಡ್ಡಾಯವಾಗಿ ಅಳವಡಿಸಿಬೇಕು ಎಂದು ಸರಕಾರ ‌ಮಾರ್ಗಸೂಚಿ ಇದೆ.ಒಂದು ವೇಳೆ ಮಾರ್ಗಸೂಚಿ ಬಗ್ಗೆ ನಿರ್ಲಕ್ಷ್ಯ ತೋರಿದರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ ಎಚ್ಚರಿಕೆ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ನೀಡಿದರು.ಗುರುವಾರ ನಗರದ ಪ್ರಮುಖ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಆಡಳಿತ ಸೌಧದಿಂದ ಪರಿಶೀಲನೆ ಪ್ರಾರಂಭಿಸಿ ಬಸವೇಶ್ವರ ವೃತ್ , ಅಂಬೇಡ್ಕರ್ ವೃತ್ ಹಾಗೂ ಮಹಾವೀರ ವೃತ್ ದ ವರೆಗೆ ತೆರಳಿ ನಮ್ಮ ಭಾಷೆಯ ಅಳಿವು, ಉಳುವಿನಲ್ಲಿ ನಿಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವ್ಯಾಪಾರಸ್ಥರು ವರ್ತಕರು ತಮ್ಮ ಅಂಗಡಿಗಳ ಮೇಲೆ ಶೇಕಡಾ 60% ಕನ್ನಡ ಭಾಷೆಯನ್ನು ಕಡ್ಡಾಯವಾಗಿ ನಾಮಫಲಕದಲ್ಲಿ ಅಳವಡಿಸಲು ಸೂಚಿಸಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಗವಂತನೊಡನೆ ಸಂಪರ್ಕ ಸಾಧನೆಯ ವಿಧಾನವೇ ಯೋಗವಾಗಿದೆ ಎಂದ ಖ್ಯಾತ ಯೋಗ ಗುರು ನಿರಂಜನ ಸ್ವಾಮೀಜಿ ಹೇಳಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜು ಆವರಣದಲ್ಲಿ ಶುಕ್ರವಾರ ಆರಂಭಗೊಂಡ ಹಿಮಾಲಯನ್ ಧ್ಯಾನಯೋಗ ಹಾಗೂ ಸಾಮೂಹಿಕ ಭಜನೆ ಮತ್ತು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಯೋಗ ಮತ್ತು ಪ್ರವಚನಗಳು ನಮ್ಮ ದೈನಂದಿನ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದು ಹೇಳುತ್ತಾ ಸುಮಾರು ಒಂದು ಗಂಟೆ ಕಾಲ ಯೋಗದ ತರಬೇತಿ ನೀಡಿದರು.ನಿವಾಳಖೇಡ ಗ್ರಾಮದ ಶ್ರೀಸಿದ್ಧಕೃಪಾ ಮಲ್ಲಿಕಾರ್ಜುನ ಮಹಾಂತಮಠದ ಬಸವಾನಂದ ಸ್ವಾಮೀಜಿ ಹಾಗೂ ಸ್ಥಳೀಯ ಪರದೇಶಿಮಠದಶ್ರೀ ಮಾತನಾಡಿದರು.ರಾಮಪುರ ಆರೂಢಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರ ತಜ್ಞ ಪ್ರಭುಗೌಡ ಲಿಂಗದಳ್ಳಿ (ಚಬನೂರ), ಸಿಂದಗಿ ಪಟ್ಟಣದ ಧುರೀಣರಾದ ಅಶೋಕ ಅಲ್ಲಾಪೂರ, ಡಾ. ಮಹಾಂತೇಶ ಹಿರೇಮಠ ಹಾಗೂ ದೇವರಹಿಪ್ಪರಗಿ ತಾಲ್ಲೂಕು ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ , ಪಂಚಾಕ್ಷರಿ ಮಿಂಚನಾಳ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ೨೦೨೪-೨೫ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ೨೦೨೪-೨೫ ನೇ ಸಾಲಿನಲ್ಲಿ ರಾಜ್ಯ ಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ ಇವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಾಗರಿಕ ಸೌಲಭ್ಯ ವಸತಿ ನಿಲಯದ ಭೂಮಿ ಪೂಜೆ ಕಾರ್ಯಕ್ರಮವು ಅಕ್ಟೋಬರ್ ೨೭ ರಂದು ಬೆಳಿಗ್ಗೆ ೯.೩೦ ಕ್ಕೆ ಜರುಗಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭಾ ಸಂಸದೆ ಡಾ. ಸುಧಾಮೂರ್ತಿ ಘನ ಉಪಸ್ಥಿತಿ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇವರಹಿಪ್ಪರಗಿ ೧೧೦ ಕೆವ್ಹಿ ಹತ್ತಿರ ಲಿಲೋ ಗೋಪುರದ ಮೇಲೆ ಜಂಪ್ ಜೋಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ೧೧೦ ಕೆವ್ಹಿ ಅಥರ್ಗಾ, ದೇವರಹಿಪ್ಪರಗಿ ಹಿರೇಮಸಳಿ, ೩೩ ಕೆವ್ಹಿ ಕಡ್ಲೇವಾಡ, ಕೋರವಾರ ವಿದ್ಯುತ್ ವಿತರಣಾ ಕೇಂದ್ರಗಳಿಮದ ಸರಬರಾಜಾಗುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ಅ.೨೮ರಂದು ಬೆಳಿಗ್ಗೆ ೬-೩೦ ರಿಂದ ೯-೩೦ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಪಾರದರ್ಶಕವಾಗಿ ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆಗಳ ನೇಮಕಾತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಖಾಲಿ ಇರುವ ೩೧೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೮೫೭ ಅಂಗನವಾಡಿ ಸಹಾಯಕಿಯರನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಯಾವುದೇ ಮಧ್ಯವರ್ತಿಗಳು, ಅಧಿಕಾರಿ-ಸಿಬ್ಬಂದಿಗಳು ಅನ್ಯ ಮಾರ್ಗದಿಂದ ಆಯ್ಕೆಯಾಗಿ ಹಣದ ಬೇಡಿಕೆ ಇಟ್ಟಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಆಯ್ಕೆ ಪ್ರಕ್ರಿಯೆಯ ಮುನ್ನ ಪ್ರಥಮ ಹಂತದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿ ಪರಿಶೀಲಿಸಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಇಲಾಖಾ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಬಯಸುವ ಅಭ್ಯರ್ಥಿಗಳು ಯಾವುದೇ ಹಣಕಾಸಿನ ವ್ಯವಹಾರ ಮಾಡಿ ಮೋಸ ಹೋಗದಂತೆ ಅವರು ಎಚ್ಚರಿಕೆ ನೀಡಿದ್ದಾರೆ.

Read More

ಕನ್ನಡ ನಾಮಫಲಕ ಅಳವಡಿಕೆಯಲ್ಲಿ ಲೋಪವಾದಲ್ಲಿ ಮುಖ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ, ನೀರಿನ ಕರ, ವಾಣಿಜ್ಯ ಮಳಿಗೆಗಳ ಬಾಡಿಗೆ, ಜಾಹೀರಾತು, ಟ್ರೇಡ್ ಲೈಸನ್ಸ್ ವಸೂಲಾತಿಗಳಲ್ಲಿ ಪ್ರಗತಿ ಸಾಧಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತೆರಿಗೆ ವಸೂಲಾತಿಯಲ್ಲಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಎಸ್‌ಎಫ್‌ಸಿ, ೧೪ನೇ, ೧೫ನೇ ಹಣಕಾಸ, ಕುಡಿಯುವ ನೀರು, ವಸತಿ, ಎಸ್‌ಬಿಎಂ ೧.೦, ೨.೦ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಂಗಡಿ ಮುಂಗಟ್ಟುಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಕನ್ನಡ ನಾಮಫಲಕ ಅಳವಡಿಕೆಯಲ್ಲಿ ಲೋಪವಾದಲ್ಲಿ ಮುಖ್ಯಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ…

Read More

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲೆಯಲ್ಲಿ ಅಕ್ಟೋಬರ್ ೨೬ ರಂದು ಜಿಲ್ಲೆಯ ೯ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಕಡ್ಡಾಯ ಹಾಗೂ ೨೭ ರಂದು ೮೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ವ್ಯವಸ್ಥಿತವಾಗಿ ನಡೆಯಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ ೮-೩೦ರಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಾಜ್ಞೆ ಘೋಷಿಸಿದ್ದು, ಸದರಿ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯ ಟೇಬಲ್ ಟೆನ್ನಿಸ್ ಬಾಲಕ ಹಾಗೂ ಬಾಲಕಿಯರ ತಂಡ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದೆ. ಈಚೆಗೆ ಅತಿಥೇಯ ಶಾಲೆಯಲ್ಲಿ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಟೂರ್ನಿಯ ಬಾಲಕ, ಬಾಲಕಿಯರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಈ ಶಾಲೆಯ ಸ್ಪರ್ಧಾಳುಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟದ ಕೂಟಕ್ಕೆ ಆರ್ಹತೆಯ ಪ್ರವೇಶ ಪಡೆದಿದ್ದಾರೆ. ೨೦೨೪-೨೫ ನೇ ಸಾಲಿನ ವಿಜಯಪುರ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ವಿಜಯಪುರ ಸಂಯುಕ್ತಾಶ್ರಯದಲ್ಲಿ ವಂದಾಲ ಶಾಕಂಬರಿ ಪ್ರೌಢಶಾಲೆ ಆತಿಥ್ಯದಲ್ಲಿ ಜರುಗಿತು. ಈ ಶಾಲೆಯ ಬಾಲಕರ ಹಾಗೂ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ತಂಡ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ವಿಶೇಷ. ಬಾಲಕರ ವಿಭಾಗದಲ್ಲಿ ಸೋಮನಾಥ ಮಾದರ, ಗುರುರಾಜ ತಳಗಡಿ, ಹನಮನಗೌಡ ಢವಳಗಿ, ವಿನೋದ ಮಾದರ ರವಿ…

Read More