Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಸಾಪದಲ್ಲಿ ಲಂಚಗುಳಿತನ, ಜಾತೀಯತೆ, ಪಕ್ಷಪಾತ ಮತ್ತು ಉತ್ತರ ಕರ್ನಾಟಕದ ಕವಿಗಳ ಸಾಹಿತ್ಯ-ಸಂಸ್ಕೃತಿಯ ನಿರ್ಲಕ್ಷ್ಯದ ಆರೋಪ ಉದಯರಶ್ಮಿ ದಿನಪತ್ರಿಕೆ – ಡಾ ಶಶಿಕಾಂತ ಪಟ್ಟಣ, ರಾಮದುರ್ಗ ರಾಮದುರ್ಗ: ಸಾಹಿತ್ಯವೆನ್ನುವುದು ಒಂದು ಸೃಜನಶೀಲ ಮನಸ್ಸಿನ ಸುಂದರ ಅಭಿವ್ಯಕ್ತಿ. ಇದಕ್ಕೆಂದೇ ಕನ್ನಡ ಕವಿಗಳು ಸಾಹಿತಿಗಳು ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಸಹಾಯದಿಂದ ಕನ್ನಡ ಸಾಹಿತ್ಯ ಪರಿಷತ್ತ್ ಆರಂಭಿಸಿದರು . ಬ್ರಿಟಿಷರ ಕಾಲದಲ್ಲಿ ಕನ್ನಡ ಪರ ಜನಪರ ಸಮಾಜಮುಖಿ ಕಾರ್ಯದ ಪ್ರಬಲ ಮಾಧ್ಯಮವೇ ಸಾಹಿತ್ಯ .ಭಾರತದ ಸ್ವಾತಂತ್ರ್ಯ ಕರ್ನಾಟಕ ಏಕೀಕರಣದಲ್ಲಿ ಕನ್ನಡ ಸಾಹಿತ್ಯದ ಪಾತ್ರ ಬಹು ದೊಡ್ಡದು. ಕುವೆಂಪು ಬೇಂದ್ರೆ ಕಾರಂತ ಮಾಸ್ತಿ ಗೋಕಾಕ ಮುಂತಾದ ಬಹು ದೊಡ್ಡ ದೈತ್ಯ ಪ್ರತಿಭೆಗಳ ಕನ್ನಡ ಸಾಹಿತ್ಯ ಸಮ್ಮೇಳನಗಳು ಇತ್ತೀಚೆಗೆ ಅರ್ಥ ಕಳೆದು ಕೊಳ್ಳುತ್ತಿವೆ.ಅದಕ್ಕೆ ಮುಖ್ಯ ಕಾರಣಗಳು ಲಂಚಗುಳಿತನ ಜಾತೀಯತೆ ಪಕ್ಷಪಾತ ಮತ್ತು ಮುಖ್ಯವಾಗಿ ಉತ್ತರ ಕರ್ನಾಟಕದ ಕವಿಗಳ ಸಾಹಿತ್ಯ ಸಂಸ್ಕೃತಿಯ ಸಂಪೂರ್ಣ ನಿರ್ಲಕ್ಷ.ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಿತ್ತೂರು ಚೆನ್ನಮ್ಮ ವಿಜಯೋತ್ಯೋತ್ಸವದ ಅಂಗವಾಗಿ ಅ.೨೩ರಂದು ಶಾಂತಿನಿಕೇತನ ಪ್ರಾಥಮಿಕ ಪ್ರೌಢಶಾಲೆ ಆಶ್ರಮ ರಸ್ತೆ ವಿಜಯಪುರದ ಸಭಾಂಗಣದಲ್ಲಿ ಚೆನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಉತ್ನಾಳ, ಈ ಸಂಸ್ಥೆಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟನೆ ಆಯಿತು,ಎಲ್ಲ ಅತಿಥಿಗಳೊಂದಿಗೆ ಸಸಿಗೆ ನೀರೆರೆಯುವ ಮೂಲಕ ಮತ್ತು ಚೆನ್ನಮ್ಮಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತುಕಾರ್ಯಕ್ರಮದ ಸಾನಿಧ್ಯ ಡಾ.ಶ್ರದ್ದಾನಂದ ಸ್ವಾಮೀಜಿ, ಶಿವಾನಂದ ಮಠ ಸದಲಗಾ ವಹಿಸಿದ್ದರು.ಅಧ್ಯಕ್ಷರಾಗಿ ಪ ಗು ಸಿದ್ದಾಪುರ ಮಕ್ಕಳ ಸಾಹಿತಿ ಮುಳವಾಡ, ಮುಖ್ಯ ಅತಿಥಿಗಳಾಗಿ ಬಸವರಾಜ್ ಯಲಿಗಾರ, ಡಿಎಸ್ಪಿ ವಿಜಯಪುರ, ಅತಿಥಿಗಳಾಗಿ ಡಾ, ಸುರೇಶ್ ಬಿರಾದಾರ, ಚೇರ್ಮನ್ನರು ಶಾಂತಿನಿಕೇತನ ಶಿಕ್ಷಣ ಸಮೂಹ ಸಂಸ್ಥೆ ವಿಜಯಪುರ, ರಾಜಶೇಖರ್ ದೈವಾಡಿ, ಕಚೇರಿ ಅಧ್ಯಕ್ಷರು ಸಹಾಯಕ ನಿರ್ದೇಶಕರು (ಗ್ರೇಡ್ ಒನ್ ) ಸಮಾಜ ಕಲ್ಯಾಣ ಇಲಾಖೆ, ಇಂಡಿ, ಮತ್ತು ಸಹಾಯಕ ನಿರ್ದೇಶಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ, ಸಂಸ್ಥೆಯ ಅಧ್ಯಕ್ಷ ಬಸವರಾಜ ನಂ ಬಾಗೇವಾಡಿ, ಸಾ ಉತ್ನಾಳ, ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಜಿಲ್ಲಾ ಸಮಿತಿ, ವಿಜಯಪುರ ವತಿಯಿಂದ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸಂಜು ವೈ.ಕಂಬಾಗಿ ಮಾತನಾಡಿ, ಇತ್ತೀಚಿಗೆ ರಾಜ್ಯದಲ್ಲಿ ದಿನಂಪ್ರತಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಕೇವಲ ಶೋಷಣೆಯಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ೧೯೮೯ರ ಪ್ರಕಾರ ದಲಿತರ ಮೇಲೆ ಆದ ದೌರ್ಜನ್ಯದ ಕುರಿತು ದೌರ್ಜನ್ಯ ಪ್ರಕರಣವನ್ನು ದಾಖಲಿಸಿದರೆ ಅದರ ವಿರುದ್ದವಾಗಿ ಕೌಂಟರ್ ಕೇಸುಗಳನ್ನು ದಾಖಲಾಗುತ್ತಿವೆ. ಆದ್ದರಿಂದ ಇಂತಹ ಕೌಂಟರ್ ಕೇಸುಗಳ ವಿರುದ್ದ ರಾಜ್ಯದಲ್ಲಿ ತ್ವರಿತ ನ್ಯಾಯಕ್ಕಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಿಕೊಡುವಂತೆ ದಿನಾಂಕ : ೨೫-೧೦-೨೦೨೪ ರಂದು ನಡೆಯುವ ರಾಜ್ಯದ…
ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಧಾರವಾಡ ಕೃಷಿ ವಿವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರು ಆರ್ಥಿಕವಾಗಿ ಸದೃಢವಾಗಬೇಕಾದರೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಜೊತೆಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ನೀಡಿದರು.ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ.ಪವಾಡ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ವಿಜಯಪುರದ ಕೃಷಿ ಕಾಲೇಜಿನ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ “ಕೃಷಿ ಸಂಪದ” ಕೃಷಿ ತಂತ್ರಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಈ ಕೃಷಿ ತಂತ್ರಜ್ಞಾನ ಮತ್ತು ವಸ್ತುಪ್ರದರ್ಶನದ ಪ್ರಯೋಜನಗಳನ್ನು ಪಡೆದುಕೊಂಡು ತಮ್ಮ ಕೃಷಿ ಉತ್ಪಾದನೆ ಹೆಚ್ಚಿಸಿಕೊಳ್ಳಬೇಕು ಎಂದರು.ಕೃಷಿ ಉತ್ಪಾದನೆ ಹೆಚ್ಚಿಸಬೇಕಾದರೆ ಮಣ್ಣು ಮತ್ತು ನೀರಿನ ನಿರ್ವಹಣೆ ಬಹಳ ಮುಖ್ಯ. ರೈತರು ನಿಯಮಿತವಾಗಿ ತಮ್ಮ ತಮ್ಮ ಭೂಮಿಯಲ್ಲಿನ ಮಣ್ಣು ಪರೀಕ್ಷೆ ಮಾಡಿಸಿ ಶಿಫಾರಸು ಮಾಡಿದಂತೆಯೇ ಗೊಬ್ಬರ ಬಳಸಬೇಕು. ಇದರಿಂದ ರೈತರು ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು…
ಅ.೨೬ಹಾಗೂ೨೭ರಂದು ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಕ್ಟೋಬರ್ ೨೬ ಹಾಗೂ ೨೭ ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಗುರುವಾರ ನಗರದ ಪಿಡಿಜೆ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅ.೨೬ ರಂದು ಜಿಲ್ಲೆಯ ೦೯ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅ.೨೭ರಂದು ೮೦ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗೆ ನಿಯೋಜಿತ ಮಾರ್ಗಾಧಿಕಾರಿಗಳು, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಓಎಂಆರ್ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಂಡು ನಿಗದಿತ ಸಮಯದಲ್ಲಿ ಹಸ್ತಾಂತರ ಮಾಡಬೇಕು. ಪರೀಕ್ಷೆ ಮುಗಿದ ನಂತರ ಜಿಲ್ಲಾ ಖಜಾನೆಗೆ ಮರಳಿ ತಲುಪಿಸುವುದು ಸೇರಿದಂತೆ ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.ಅ.೨೬ ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಪ್ರತಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹಳೆಯ ತರಕಾರಿ ಮಾರುಕಟ್ಟೆಯ ಬಳಿಯ ಶ್ರೀ ಖಾಸ್ಗತೇಶ್ವರ ಮಠದಲ್ಲಿ ಅ.೨೬ ರಂದು ಸಂಜೆ ೫ಕ್ಕೆ ದ.ರಾ ಬೇಂದ್ರೆಯವರ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ಶರಣೆ ತಾಯಿ ನೀಲಮ್ಮನವರು ವಹಿಸಲಿದ್ದು, ಗಣ್ಯ ವ್ಯಾಪಾರಿ ಬಸವರಾಜ ಮೋಟಗಿ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಬಿ.ಎಂ.ಹಿರೇಮಠರು ಉಪಸ್ಥಿತರಿರಲಿದ್ದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೋ.ಐ.ಬಿ.ಹಿರೇಮಠರು ಉಪನ್ಯಾಸ ನೀಡಲಿದ್ದು ಮುಖ್ಯ ಅತಿಥಿಗಳಾಗಿ ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ, ಗಣ್ಯ ವ್ಯಾಪಾರಸ್ಥರಾದ ಅಬ್ದುಲ್‌ಗಫಾರ ಮಕಾನದಾರ, ವಾಸುದೇವ ಶಾಸ್ತ್ರಿ, ಎಂ.ಎಸ್.ಬಿರಾದಾರ, ಅಶೋಕ ಚಟ್ಟೇರ, ಶಿಕ್ಷಕಿಯರಾದ ಸರೋಜಾ ಕೋರಿ, ಸುಮಲತಾ ಸಜ್ಜನ ಆಗಮಿಸಲಿದ್ದು, ಶಿಕ್ಷಕರಾದ ಸಿದ್ದನಗೌಡ ಬಿರಾದಾರ, ಪ್ರಭುಗೌಡ ರೆಡ್ಡಿ, ಸಿ.ಜಿ.ನಾಗರಾಳ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ.
೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ಧ ಎಂದರೆ ದೇವರಲ್ಲ, ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.ಬುದ್ಧವಿಹಾರ ನಿರ್ಮಾಣ ಸಮಿತಿಯ ಆಶ್ರಯದಲ್ಲಿ ಇಂದು ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ೬೮ನೆಯ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.೨೫೦೦ ವರ್ಷಗಳ ಹಿಂದೆ ಜೂಜಾಟ, ಸುರಾಪಾನ, ಪ್ರಾಣಿಬಲಿ ಮುಂತಾದ ಅನಿಷ್ಟಗಳ ಮೂಲಕ ಸಮಾಜವು ನೈತಿಕವಾಗಿ ಅಧಃಪತನಗೊಂಡಿದ್ದ ಮತ್ತು ದೇವರನ್ನು ಒಲಿಸಿಕೊಳ್ಳಲು ಮೌಢ್ಯವೆಂಬ ಅಂಧಃಕಾರದಲ್ಲಿ ಮುಳುಗಿದ್ದ ಸಮಯದಲ್ಲಿ ಬುದ್ಧನೆಂಬ ಹೊಸ ಬೆಳಕೊಂದು ಮೂಡಿಬಂತು. ಭಗವಾನ ಬುದ್ಧರು ದೇವರು, ಆತ್ಮ, ಪುನರ್ಜನ್ಮಗಳನ್ನು ನಿರಾಕರಿಸಿದರು. ಕರ್ಮಸಿದ್ಧಾಂತವನ್ನು ಒಪ್ಪಿಕೊಳ್ಳಲಿಲ್ಲ. ಬುದ್ಧನ ಧಮ್ಮದಲ್ಲಿ ದೇವರಿಗೆ ಸ್ಥಾನವಿಲ್ಲ, ನೈತಿಕತೆಗೆ ಸ್ಥಾನವಿದೆ ಎಂದು ಹೇಳಿದರು.ಸಾನಿಧ್ಯ ವಹಿಸಿದ್ದ ಭಂತೆ ಡಾ.ಶಾಕು ಬೋಧಿಧಮ್ಮ ಮಾತನಾಡಿ, ಶತಮಾನಗಳಿಂದ ಶೋಷಣೆಗೊಳಗಾಗಿರುವ…
ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮ್ಯಾನ್ಯುವೆಲ್ ಸ್ಕಾö್ಯವೆಂರ‍್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ೨೦೧೩ರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪೌರಕಾರ್ಮಿಕರು, ಸ್ವಚ್ಛತಾ ಕೆಲಸಗಾರರಿಗೆ ಅತ್ಯುತ್ತಮ ಗುಣಮಟ್ಟದ ಪರಿಕರ ಹಾಗೂ ಸಮವಸ್ತç ಒದಗಿಸಬೇಕು. ಪೌರಕಾರ್ಮಿಕರಿಗೆ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಸುರಕ್ಷಾ ಕಿಟ್-ಪರಿಕರ ಬಗ್ಗೆ ತರಬೇತಿ ಹಮ್ಮಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಖಾಯಂ ನೇರಪಾವತಿ-ಗುತ್ತಿಗೆ ಆಧಾರದ ಇರುವವರಿಗೆ ಕಡ್ಡಾಯವಾಗಿ ಇಎಸ್‌ಐ, ಪಿಎಫ್ ವಿಮೆ ಸೌಲಭ್ಯ ದೊರಕಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.ನಗರ ಸ್ವಚ್ಛತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಕೆಲವೊಂದು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಪಟಾಕಿ ಮಾರಾಟಗಾರರು ಸೋಮವಾರದೊಳಗೆ ಜಿಲ್ಲಾಡಳಿತಕ್ಕೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಜಿಲ್ಲೆಯ ವಿವಿಧ ಪಟಾಕಿ ವ್ಯಾಪಾರಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ಅವರು ಜಂಟಿ ಸಮೀಕ್ಷಾ ನಡೆದ ಪರವನಿಗೆಗೆ ಶಿಫಾರಸು ಮಾಡಬೇಕು. ವ್ಯಾಪಾರಸ್ಥರು ಪಟಾಕಿಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಹಾಕಲು ಪ್ರತ್ಯೇಕ ಜಾಗ ಗುರುತಿಸಬೇಕು. ಎಲ್ಲಾ ವ್ಯಾಪಾರಸ್ಥರು ಸುರಕ್ಷಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಂಡು ಪರವಾನಿಗೆಗೆ ಸಂಬಂಧಿಸಿದ ಅಧಿಕಾರಿಗಳು ಶಿಫಾರಸ್ಸು ಮಾಡಬೇಕು. ಜನನಿಬಿಡ ಪ್ರದೇಶದಲ್ಲಿ ಪಟಾಕಿ ಮಾರಾಟವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಬಗ್ಗೆ ನಾಳೆಯೇ ಎಲ್ಲಾ ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು ಪಟಾಕಿ ವ್ಯಾಪಾರಸ್ಥರ…
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಹಳೆ ಶಿಷ್ಯ ಬಳಗದ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಹೃದಯಸ್ಪಶಿ೯ ಸನ್ಮಾನಿಸಿ ಗೌರವಿಸಿದರು.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅಮೋಘ ಸೇವೆ ಸಲ್ಲಿಸಿ ಇತ್ತೀಚೆಗೆ ವಯೋಸೇವಾ ನಿವೃತ್ತಿ ಹೊಂದಿರುವ ಬಸವರಾಜ ಅನಂತಪೂರ ದಂಪತಿಗಳಿಗೆ ಶಾಲೆಯ ಹಳೆ ಶಿಷ್ಯರು ಶಾಲು ಹೊದಿಸಿ ಸನ್ಮಾನಿಸಿದರಲ್ಲದೇ ಬಿನ್ನವತ್ತಳೆ ನೀಡಿ ಗೌರವಾರ್ಪಣೆ ಸಲ್ಲಿಸಿ ಧನ್ಯತಾಭಾವ ಮೆರೆದರು.ಬಸವರಾಜ ಅನಂತಪೂರ ಮಕ್ಕಳ ಪಾಲಿನ ಅಚ್ಚುಮೆಚ್ಚಿನ ಗುರುಜಿ. ಅವರ ಕೈಯಲ್ಲಿ ಶಿಸ್ತು ಬದ್ದತೆಯ ಕ್ರೀಡಾಸಕ್ತಿ ಬೆಳೆಸಿಕೊಂಡಿದ್ದ 2006-07 ಹಾಗೂ 2008-09 ನೇ ಸಾಲಿನ ವಿದ್ಯಾರ್ಥಿಗಳು ಜಮಖಂಡಿಯಲ್ಲಿರುವ ತಮ್ಮ ಮೆಚ್ಚಿನ ಗುರುಜಿ ಮನೆಗೆ ತೆರಳಿ ಸನ್ಮಾನ ಕೈಂಕರ್ಯ ಕೈಗೊಂಡು ಪರಮ ಪವಿತ್ರತೆಯ “ಗುರು-ಶಿಷ್ಯರ” ನಿಷ್ಕಲ್ಮಶತೆಯ ಪ್ರೀತಿಭಾವವನ್ನು ಅನ್ಯೋನ್ಯತೆ ಪರಿಮಳದಲ್ಲಿ ಸಾಕ್ಷೀಕರಿಸಿದರು.ಮಕ್ಕಳ ಕಲಿಕಾ ಸಮಯದಲ್ಲಿ ಅನಂತಪೂರ ಗುರುಜಿ ಆಟೋಟಗಳ ಜ್ಞಾನಧಾರೆ ಕರುಣಿಸಿ ಕ್ರೀಡಾ ತಂತ್ರಜ್ಞಾನದ ಕೌಶಲ್ಯ ಅಂಕುರಗೊಳಿಸಿದ್ದಾರೆ. ಹೀಗಾಗಿ ಮಕ್ಕಳಿಗೆ ಅವರೆಂದರೆ ಎಲ್ಲಿಲ್ಲದ ಪ್ರೀತಿ, ಗೌರವ. ಶಿಸ್ತಿನ ಸಿಪಾಯಿಗಳಾಗಿ ಚೇತೋಹಾರದ…
