Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ವೇದಿಕೆಗಳಾಗಿವೆ. ಇಂತಹ ಸಮ್ಮೇಳನಗಳು ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಹಿರಿಯ-ಕಿರಿಯ ಸಾಹಿತಿಗಳ ನಡುವೆ ಸಾಹಿತ್ಯಿಕ ಸಂವಾದಕ್ಕೆ ಅವಕಾಶ ಕಲ್ಪಿಸುತ್ತವೆ ಎಂದು ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹ.ಮ.ಪೂಜಾರ ಹೇಳಿದರು.ಸಿಂದಗಿ ನಗರದಲ್ಲಿ ನಡೆಯುವ ೨೧ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಿಮಿತ್ಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಓದುವ ಹವ್ಯಾಸ, ಸೃಜನಶೀಲತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಹಾಗೂ ಸಾಹಿತ್ಯದ ಶ್ರೀಮಂತಿಕೆಯನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಹೊಣೆಗಾರಿಕೆಯಾಗಿದೆ. ನನ್ನನ್ನು ೨೧ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಜಿಲ್ಲಾ ಹಾಗೂ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸ್ಥಳೀಯ ಶಾಸಕರಿಗೂ, ಸಾಹಿತ್ಯಾಭಿಮಾನಿಗಳು ಹಾಗೂ ಜಿಲ್ಲೆಯ ಸಮಸ್ತ ಕನ್ನಡ ಮನಸ್ಸುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.ಸಮ್ಮೇಳನವನ್ನು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಕುಟುಂಬ ಕಲ್ಯಾಣ ಸೇವೆಗಳು ಸಂಪೂರ್ಣ ಉಚಿತವಾಗಿ ಲಭ್ಯವಿವೆ. ಬಾಲ್ಯ ವಿವಾಹವನ್ನು ತಡೆದು ಸೂಕ್ತ ವಯಸ್ಸಿನಲ್ಲಿ ವಿವಾಹವಾಗಬೇಕು. ಕುಟುಂಬ ಯೋಜನೆ ಪ್ರತಿಯೊಬ್ಬರ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎ.ಎ.ಮಾಗಿ ಹೇಳಿದರು.ಸಿಂದಗಿ ನಗರದ ಜಿ.ಪಿ.ಪೋರವಾಲ್ ಕಾಲೇಜಿನಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯ ಇಲಾಖೆ, ಜಿ.ಪಿ.ಪೋರವಾಲ ಮಹಾವಿದ್ಯಾಲಯ, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳದಿಂದ ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ಹೆಚ್ಚುವ ಸಾಧ್ಯತೆ ಇದೆ. ಸುಸ್ಥಿರ ಅಭಿವೃದ್ಧಿಗೆ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದ್ದು, ಆರೋಗ್ಯ ಹಾಗೂ ಶಿಕ್ಷಣ ಸೇವೆಗಳ ಮೇಲಿನ ಒತ್ತಡವೂ ಹೆಚ್ಚುತ್ತದೆ ಎಂದರು.ಈ ವೇಳೆ ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ ಮಾತನಾಡಿ, ಜನಸಂಖ್ಯೆ ಸ್ಫೋಟದಿಂದ ನಿರುದ್ಯೋಗ, ವಸತಿ ಕೊರತೆ, ಮೂಲಸೌಕರ್ಯಗಳ ಮೇಲಿನ ಒತ್ತಡ ಸೇರಿದಂತೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಉತ್ತಮ ಜೀವನಶೈಲಿಗಾಗಿ ಕುಟುಂಬ ಯೋಜನೆ ಹಾಗೂ ಶಿಸ್ತುಬದ್ಧ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ ಹಾಗೂ ಮಂಜೂರಾಗದೇ ಬಾಕಿ ಇರುವ ನೋಂದಾಯಿತ ಬಿಡ್ಡದಾರರಿಗೆ ಜು. ೧೫ರಂದು ವಿಜಯಪುರದ ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ತರಬೇತಿ ಹಾಗೂ ಇ-ಹರಾಜು ಆಯೋಜಿಸಲಾಗಿದೆ. ಪೋರ್ಟಲ್: hಣಣಠಿs://ತಿತಿತಿ.msಣಛಿeಛಿommeಡಿಛಿe.ಛಿom. ವಿಳಾಸದಲ್ಲಿ ಇ-ಹರಾಜಿಗೆ ನೋಂದಣಿ ಕಾರ್ಯ ಜು. ೩ ರಿಂದ ಆರಂಭಗೊಂಡಿದೆ.ಈ ಸಂಬಂಧ ಅಧಿಸೂಚನೆಯಲ್ಲಿ ಸೂಚಿಸಿದ ಎಲ್ಲಾ ರೀತಿಯ ಶುಲ್ಕಗಳು ಹಾಗೂ ಷರತ್ತುಗಳಿಗೆ ಒಳಪಟ್ಟು ಇಚ್ಛೆವುಳ್ಳ ವ್ಯಕ್ತಿ /ಸಂಸ್ಥೆ / ಕಂಪನಿ ಇತ್ಯಾದಿಯವರು ಭಾಗವಹಿಸಬಹುದಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ಸ್ವಾಮ್ಯದ ಸಂಸ್ಥೆಯಾದ ಎಂಎಸ್‌ಟಿಸಿ ಲಿಮಿಟೆಡ್ ಇ-ಹೋಟೆಲ್‌ನಲ್ಲಿ ಇಂಡಿ ಗಿಎP೩೯/ಐಓಆ೨೨೮/ಅಐಂ೨A/೦೦೧, ಬಸವನಬಾಗೇವಾಡಿಗಿಎP೩೯/ಃಂS೨೨೬/ಅಐ೨A/೦೦೧-ಜಿಇಎನ್, ಮುದ್ದೇಬಿಹಾಳ ಗಿಎP೩೯/ಒUಆ೨೨೯/ಅಐ೨ಂ/೦೦೧, ಸಿಂದಗಿ ಗಿಎP೩೯/SIಓ೨೩೦/ಅಐ೨ಂ/೦೦, ಬಸವನಬಾಗೇವಾಡಿ ಗಿಎP೩೯/ಃಂS೨೨೬/ಅಐ೨A/೦೦೨, ಮುದ್ದೇಬಿಹಾಳ ಗಿಎP೩೯/ಒUಆ೨೨೯/ಅಐ೨ಂ/೦೦೨, ಸಿಂದಗಿ ಗಿಎP೩೯/SIಓ೨೩೦/ಅ೨ಂ೦೦೨ ಈ ಸಿಎಲ್-೨(ಎ) ಸನ್ನದುಗಳ ಉಇಓ ಮೀಸಲಾತಿಗಳಾಗಿದ್ದು. ಇವುಗಳ ಬೇಸಿಕ್ ಪ್ರೈಸ್ ಇಂಡಿ ೯೦ ಲಕ್ಷ, ಇಎಂಡಿ- ೧೮೦೦೦೦, ಉಳಿದ ಕ್ರ. ಸಂ:೨ ರಿಂದ ೭ ವರೆಗಿನ ಪ್ರತಿಯೊಂದು ಸನ್ನದುಗಳಿಗೆ ಬೇಸ್ ಪ್ರೈಸ್ ಇoಡಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಮತಕ್ಷೇತ್ರದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಬಬಲೇಶ್ವರ ಮತಕ್ಷೇತ್ರದ ಒಟ್ಟು ೨,೨೫,೭೭೯ ಮತದಾರರ ಪೈಕಿ ೨,೨೫,೪೨೧ ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಶೇ. ೯೯.೮೪ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು. ಮತದಾರರಿಂದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ರುಜು ಪಡೆದು ಮರಳಿ ಬಿ.ಎಲ್.ಓ ತಂತ್ರಾಂಶದಲ್ಲಿ ಗಣಕೀಕರಣಗೊಂಡ ಒಟ್ಟು ೭೭,೧೫೭ ಗಣತಿ ನಮೂನೆಗಳನ್ನು ಸ್ವೀಕರಿಸಲಾಗಿದೆ. ಶೇ. ೩೪.೧೭ ರಷ್ಟು ಪ್ರಗತಿಯಾಗಿದೆ ಎಂದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಹಾಗೂ ಅನ್ನಭಾಗ್ಯ ಯೋಜನೆಯಡಿ ಜುಲೈ ೨೦೨೬ ನೇ ತಿಂಗಳಿಗೆ ಆಹಾರ ಧಾನ್ಯಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ. ೧ ರಿಂದ ೩ ಸದಸ್ಯರಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ ೩೫ ಕೆಜಿ. ಇದರಲ್ಲಿ ೨೧ ಕೆಜಿ ಜೋಳ ಹಾಗೂ ಇನ್ನುಳಿದಂತೆ ೧೪ ಕೆಜಿ ಅಕ್ಕಿ, ಅದರಂತೆ ೪ ಹಾಗೂ ಅದಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಅನ್ನ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ೧೦ ಕೆಜಿಯಂತೆ ಲೆಕ್ಕಾಚಾರದಡಿ ೨೧ ಕೆಜಿ ಜೋಳ ಮತ್ತು ಇನ್ನುಳಿದಂತೆ ಅಕ್ಕಿಯನ್ನು ಹಂಚಿಕೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ. ಬಿಪಿಎಲ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೂ ೩ ಕೆಜಿ ಜೋಳ ಹಾಗೂ ೭ ಕೆಜಿ ಅಕ್ಕಿಯಂತೆ ಹಂಚಿಕೆ ನೀಡಲಾಗಿರುತ್ತದೆ. ಪಡಿತರ ಚೀಟಿದಾರರು ಆಯಾ ನ್ಯಾಯ ಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿ ಪಡಿತರ ವಸ್ತುಗಳನ್ನು ಪಡೆಯಬಹುದಾಗಿದೆ.ಸಾರ್ವಜನಿಕ ವಿತರಣಾ ಪದ್ಧತಿಯಡಿ ಹಂಚಿಕೆ ಮಾಡಲಾಗಿರುವ ಆಹಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಭೂತನಾಳದಲ್ಲಿರುವ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜುಲೈ ೧೭ ರಂದು ಕಟ್ಲಾ ಮತ್ತು ರೋಹು ತಳಿಯ ಮೀನುಮರಿಗಳ ಮಾರಾಟ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಕೇವಲ ೧ ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಮೀನುಮರಿಗಳನ್ನು ಖರೀದಿಸಬಹುದಾಗಿದೆ ಎಂದು ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೈತರು ಹಾಗೂ ಮೀನುಗಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ ಮೀನುಮರಿಗಳನ್ನು ಖರೀದಿಸಲು ಬರುವವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ತರಲು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : ೯೯೪೫೯೫೯೭೦೪, ೯೯೦೦೭೭೬೨೦೫ ಅಥವಾ ೯೪೮೦೫೧೮೬೭೯ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಭೂತನಾಳ ಕೇಂದ್ರದ ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅವಧಿಗೆ ಮುನ್ನವೇ ಶೇ. ನೂರರಷ್ಟು ಪ್ರಗತಿ ಸಾಧಿಸಿದ ಮತಗಟ್ಟೆ ಅಧಿಕಾರಿಗಳನ್ನು ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಒಟ್ಟು ೨೪೪ ಮತಗಟ್ಟೆಗಳ ಪೈಕಿ ಪ್ರಥಮವಾಗಿ ತಿಕೋಟಾ ತಾಲೂಕಿನ ಧನರ್ಗಿ ಗ್ರಾಮದ ಭಾಗ ಸಂಖ್ಯೆ-೬೦ ರ ಮತಗಟ್ಟೆ ಮಟ್ಟದ ಅಧಿಕಾರಿ ಎಸ್. ಬಿ. ಮಡಸನಾಳ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶ್ರೀಮತಿ ಜ್ಯೋತಿ ಕೊಣ್ಣೂರ ಅವರನ್ನು ಮೇಲಧಿಕಾರಿಗಳು ಸನ್ಮಾನಿಸಿದರು.ಈ ಸಿಬ್ಬಂದಿ ಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅವಧಿಗೆ ಮುನ್ನವೇ ಶೇ.ನೂರರಷ್ಟು ಪ್ರಗತಿ ಸಾಧಿಸಿದ್ದಾರೆ. ಈ ಇಬ್ಬರು ಮತಗಟ್ಟೆ ಅಧಿಕಾರಿಗಳು ಎನ್ಯುಮರೇಶನ್ ಫಾರ್ಮಗಳ ಹಂಚಿಕೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ನಿಗದಿತ ಅವಧಿಗಿಂತ ಮುನ್ನವೇ ಮುಗಿಸಿದ್ದರಿಂದ ಸನ್ಮಾನಿಸಲಾಯಿತು. ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಬಬಲೇಶ್ವರ ತಹಶೀಲ್ದಾರ್ ಶಾಂತಲಾ ಚಂದನ್, ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಇದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿಗಾಗಿ ನ್ಯಾಯಾಂಗ ಆಡಳಿತದಲ್ಲಿ ಕಾನೂನು ಪದವೀಧರರನ್ನು ತರಬೇತಿಗೆ ಆಯ್ಕೆ ಮಾಡಲು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.ಹಿಂದುಳಿದ ವರ್ಗಗಳಾದ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಪ್ರವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಂದ ದ್ವಿ- ಪ್ರತಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಜು. ೧೩ರಿಂದ ಆಗಸ್ಟ್ ೧೩ರೊಳಗಾಗಿ ಅರ್ಹ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಪಡೆಯಬುದಾಗಿದೆ.ಈ ತರಬೇತಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ೧೦ ಕಾನೂನು ಪದವೀಧರರನ್ನು ಆಯ್ಕೆ ಮಾಡಲಾಗುವುದು. ಪ್ರವರ್ಗ-೧, ರ ಅಭ್ಯರ್ಥಿಗಳಿಗೆ ೩.೫೦ ಲಕ್ಷ, ೩(ಬಿ) ವರ್ಗಗಳಿಗೆ ೨.೫೦ ಲಕ್ಷಗಳ ವಾರ್ಷಿಕ ಆದಾಯ ಮಿತಿಯಿದೆ. ತರಬೇತಿ ಅವಧಿಯು ೪ ವರ್ಷಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ೪೦೦೦ ರೂ. ತರಬೇತಿ ಭತ್ಯೆ ನೀಡಲಾಗುವುದು.ಅರ್ಜಿ ಸಲ್ಲಿಸುವ ಪ್ರವರ್ಗ-೧, ೪೦ವರ್ಷ, ೨(ಎ), ೩(ಎ) ಹಾಗೂ ೩(ಬಿ) ಅಭ್ಯರ್ಥಿಗಳಗೆ ೩೮ ವರ್ಷಗಳು ಮೀರಿರಬಾರದು. ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಪೂರ್ಣ, ತಡವಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಚುನಾವಣಾ ಕೆಲಸದಲ್ಲಿ ಅಡ್ಡಿಪಡಿಸುತ್ತಿರುವ ಸಂಗತಿಗಳು ಗಮನಕ್ಕೆ ಬಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಬ್ಬಂದಿಯ ಕರ್ತವ್ಯಕ್ಕೆ ಮತ್ತೆ ಅಡಚಣಿಯನ್ನುಂಟು ಮಾಡಿದಲ್ಲಿ ಅಂತಹವರ ವಿರುದ್ಧ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮತದಾರರ ನೋಂದಣಿ ಅಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಎಚ್ಚರಿಕೆ ನೀಡಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮನೆ ಮನೆ ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಈ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಸಾರ್ವಜನಿಕರು ಬಿಎಲ್ ಒ ಗಳಿಗೆ ಸಹಕರಿಸುವುದು ಆದ್ಯ ಕರ್ತವ್ಯವಾಗಿದೆ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳ ಸಭೆ ಕರೆದು, ಆಯಾ ಪಕ್ಷಗಳಿಂದ ಬಿಎಲ್ ಎ ಗಳನ್ನು ನೇಮಕ ಮಾಡಲಾಗಿದೆ. ಈ ಬಿಎಲ್ ಎಗಳು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮತದಾರರ…
