Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾಧಿಕಾರಿ ರಿಷಿ ಆನಂದ ಅವರು ಬುಧವಾರ ಜಿಲ್ಲೆಯ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿರುವುದರಿಂದ ಡೋಣಿಗೆ ಸೇರುವ ಕಾಲುವೆಗಳ ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಇರುವ ಅವಕಾಶಗಳು ಮತ್ತು ಡೋಣಿ ನದಿಯಿಂದ ಬೇರೆ ಕಾಲುವೆ, ಕೆರೆ-ಕಟ್ಟೆಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಆರೋಗ್ಯ ಸೇವೆ, ಆರ್ಥಿಕ ಭದ್ರತೆ, ಸಾಮಾಜಿಕ ಪ್ರತ್ಯೇಕತೆ ಮತ್ತು ಹಿರಿಯರ ನಿಂದನೆ ಹೀಗೆ ವೃದ್ಧರಿಗೆ ಸಂಬಂಧಿತ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಹಲವು ಕಾನೂನುಗಳು ಜಾರಿಯಲ್ಲಿದ್ದು ಅವುಗಳ ಸದ್ಬಳಕೆಯಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚೆಗೆ ಹಿರಿಯ ನಾಗರಿಕರನ್ನು ಅವರ ವಾರಸುದಾರರು ಕಡೆಗಣಿಸುವ ಬಗ್ಗೆ ವರದಿಗಳಾಗಿವೆ. ಯಾರೇ ಹಿರಿಯ ನಾಗರಿಕರಿಗೆ ತೊಂದರೆಯಾದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಗೆ ಸಂಪರ್ಕಿಸಿ ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದು ಎಂದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪೂಜ್ಯ ನಿರಂಜನ ಸ್ವಾಮಿಜಿಯವರ ಯೋಗ ಹಾಗೂ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜು ಆವರಣದಲ್ಲಿ ಮಂಗಳವಾರ ಸಾಯಂಕಾಲ ಆರಂಭಗೊಂಡ ಸಭೆಯಲ್ಲಿ ಅ.೨೫ ರಿಂದ ನವೆಂಬರ್ ೧೦ ವರೆಗೆ ಜರುಗಲಿರುವ ಹಿಮಾಲಯನ್ ಧ್ಯಾನಯೋಗ ಹಾಗೂ ಸಾಮೂಹಿಕ ಭಜನೆ ಮತ್ತು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಬಗ್ಗೆ ಚರ್ಚೆ ಆರಂಭಗೊಂಡಿತು.ಸಭೆಯಲ್ಲಿ ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರ ತಜ್ಞ ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆಲಮೇಲ ಪಟ್ಟಣದ ವೈದ್ಯ ಶ್ರೀಶೈಲ ಪಾಟೀಲ, ಸಿಂದಗಿ ಪಟ್ಟಣದ ಹಿರಿಯ ಧುರೀಣರಾದ ಮಾಂತೇಶ ಪಟ್ಟಣಶೆಟ್ಟಿ, ಅಶೋಕ ಅಲ್ಲಾಪೂರ, ಡಾ.ಮಹಾಂತೇಶ ಹಿರೇಮಠ ಹಾಗೂ ದೇವರಹಿಪ್ಪರಗಿ ತಾಲ್ಲೂಕು ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿದರು.ಸ್ಥಳೀಯ ಜಡಿಮಠದ ಜಡಿಸಿದ್ಧೇಶ್ವರ ಶ್ರೀಗಳು ಹಾಗೂ ರಾಮಪುರ ಆರೂಢಮಠದ ಶ್ರೀಗಳು ಸಾನಿಧ್ಯ ವಹಿಸಿ ಮಾತನಾಡಿದರು.ಹಿಮಾಲಯದಲ್ಲಿ ೬ ವರ್ಷಗಳ ಕಾಲ ಯೋಗ ಸಾಧನೆ ಮಾಡಿದ ನಿರಂಜನಶ್ರೀಗಳು ದಿ: ೨೫ ರಿಂದ ನವೆಂಬರ್ ೧೦ ವರೆಗೆ ನಿರಂತರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಹಾಗೂ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟಗಳು ಇಂದಿನ ಮಕ್ಕಳಿಗೆ ಸ್ಪೂರ್ತಿದಾಯಕಗಳಾಗಿವೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದಲ್ಲಿ ಬುಧವಾರ ಕಿತ್ತೂರು ರಾಣಿ ಚನ್ನಮ್ಮಳ ೨೪೬ ನೇ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಲಘಾಣದ ಎಸ್.ಬಿ.ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಸುನೀಲ ಮಾಗಿ ಹಾಗೂ ವಿದ್ಯಾರ್ಥಿನಿ ಸ್ನೇಹಾ ಬಿರಾದಾರ ತನ್ನ ಚುಟುಕು ಮಾತುಗಳಿಂದ ಎಲ್ಲರ ಗಮನ ಸೆಳೆದರು.ಇದೇ ಸಂದರ್ಭದಲ್ಲಿ ನೂತನ ವೃತ್ತಕ್ಕೆ ಪೂಜೆ ಸಲ್ಲಿಸಲಾಯಿತು.ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ. ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ (ಜಲಕತ್ತಿ), ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಂಡೆಪ್ಪ ಬಿರಾದಾರ(ದಿಂಡವಾರ), ವ್ಹಿ.ಕೆ.ಪಾಟೀಲ, ಶ್ರೀಶೈಲ…

Read More

ವಿಜಯಪುರ ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ | ಭಾವಚಿತ್ರ ಮೆರವಣಿಗೆ | ವಿಶೇಷ ಉಪನ್ಯಾಸ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೀರ ರಾಣಿ ಕಿತ್ತೂರು ಚೆನ್ನಮ್ಮ ಇತಿಹಾಸದ ಪುಟಗಳಲ್ಲಿ ಶೌರ್ಯದ ಪ್ರತೀಕವಾಗಿ ಗುರುತಿಸಲ್ಪಟ್ಟ ವೀರ ಮಹಿಳಾ ಹೋರಾಟಗಾರ್ತಿ. ಬ್ರಿಟೀಷರ ವಿರುದ್ಧ ಸಮರಸಾರಿ ಇಡೀ ದೇಶವೇ ಸ್ವಾತಂತ್ರ ಸಂಗ್ರಾಮಕ್ಕೆ ದುಮ್ಮಿಕ್ಕುವಂತೆ ಪ್ರೇರಣೆ ನೀಡಿದ ರಾಣಿ ಚೆನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ನಡೆದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯ ವಿರುದ್ಧ ಹೋರಾಟ ಮಾಡಿ, ಸಹಾಯಕ ಸೈನ್ಯ ಪದ್ಧತಿಯನ್ನು ತಿರಸ್ಕರಿಸಿದ ಚೆನ್ನಮ್ಮಳ ದೈರ್ಯ, ಸಾಹಸಗಾಥೆಗಳನ್ನು ಇಂದಿನ ಹೆಣ್ಣುಮಕ್ಕಳು ಅರಿಯಬೇಕು. ಇತಿಹಾಸ ಅರಿತವರು ಇತಿಹಾಸ ನಿರ್ಮಿಸುತ್ತಾರೆ ಎಂಬಂತೆ ಇಂದಿನ ಪೀಳಿಗೆಗೆ ಚೆನ್ನಮ್ಮಳ ಇತಿಹಾಸದ ಪರಿಚಯ ಮಾಡಿಸುವುದು…

Read More

ತೆರವಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಾದ್ಯಂತ ಕೋಟೆಗೋಡೆ ಸುತ್ತಲೂ ಇರುವ ಕಂದಕದ ಸ್ಥಳಗಳಲ್ಲಿ ಅತಿಕ್ರಮಣ-ಒತ್ತುವರಿಯಾದ ಪ್ರದೇಶವನ್ನು ಸರ್ವೇ ಮಾಡಿ, ಒತ್ತುವರಿಗೊಂಡಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ವಿಜಯಪುರ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವಾರು ಬಡಾವಣೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದರಿಂದ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಇತ್ತೀಚೆಗೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.ನಗರದ ಮುಖ್ಯ ರಾಜ ಕಾಲುವೆಗಳು, ಮಳೆನೀರು, ಚರಂಡಿಗಳು, ಕೋಟೆಗೋಡೆಯ ಸುತ್ತಲೂ, ನೈಸರ್ಗಿಕ ನಾಲೆಗಳು ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಒತ್ತುವರಿಯಾಗಿರುವುದರಿಂದ ಹಾಗೂ ಹೂಳು ತುಂಬಿರುವುದರಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದೇ, ತೊಂದರೆಗಳು ಉಂಟಾಗುತ್ತಿರುವ ಹಿನ್ನಲೆಯಲ್ಲಿ ಕಂದಕಗಳನ್ನು ಅತಿಕ್ರಮ ಮಾಡಿರುವ ಒತ್ತುವರಿದಾರರಿಗೆ ನೋಟಿಸ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಹೆಸರು ಮರುನಾಮಕರಣ ಹಾಗೂ ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಣಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಇಂದಿಗೆ ೩ನೇ ದಿನಕ್ಕೆ ಕಾಲಿಟ್ಟಿದೆ.ಈ ಸಂದರ್ಭದಲ್ಲಿ ಡಾ,ಗುರುಶಾಂತವೀರ ಶಿವಾಚಾರ್ಯರು ಮಾತನಾಡಿ, ಈ ಮೂರು ಬೇಡಿಕೆಗಳು ಬಹಳಷ್ಟು ಹಳೆಯದಾಗಿದ್ದು, ಈ ಬಗ್ಗೆ ಜಿಲ್ಲಾಡಳಿತದ ಕಣ್ತೆರೆಯುವ ಕೆಲಸಕ್ಕೆ ನಮ್ಮಿಂದ ಸಂಪೂರ್ಣ ಬೆಂಬಲ ವಿದೆ. ಇವು ಬಹು ಮುಖ್ಯ ಬೇಡಿಕೆಗಳಾಗಿದ್ದು, ಇವುಗಳನ್ನು ಈಡೇರಿಸುವವರೆಗೆ ಈ ಧರಣಿ ಸತ್ಯಾಗ್ರಹ ಕೊನೆಗೊಳ್ಳುವುದಿಲ್ಲ ಎನ್ನುವದನ್ನು ಜಿಲ್ಲಾಡಳಿತ ಹಾಗೂ ಸರಕಾರ ಅರಿತುಕೊಳ್ಳಬೇಕೆಂದು ತಿಳಿಸಿದರು.ಜಿಲ್ಲಾಧ್ಯಕ್ಷ ಸಂಗಮೇಶ ಗೌಡ ದಾಶ್ಯಾಳ ಮಾತನಾಡಿ, ನಾವು ಚಿಕ್ಕವರಾಗಿದ್ದಲೂ ಸಹ ಗಾಂಧಿವೃತ್ತವು ಇಲ್ಲಿಯವರೆಗೆ ಪುನಶ್ಚೇತನಗೊಂಡಿಲ್ಲ. ಇಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆ ಕಂಡು ಬರುತ್ತಿದೆ. ಕಿತ್ತೂರ ರಾಣಿ ಚೆನ್ನಮ್ಮ ರಂಗಮಂದಿರ ಸ್ಥಗಿತಗೊಂಡು ದಶಕಗಳೇ ಕಳೆದಿವೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ೨೦೨೩-೨೪ ಹಾಗೂ ೨೪-೨೫ನೇ ಸಾಲಿನ ಕಾಲೇಜು ಅಭಿವೃದ್ಧಿ ಸಮಿತಿ ನಿಧಿಯಿಂದ ನಿರ್ಮಾಣ ಮಾಡಲಾದ ಸಭಾಭವನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ೧೫೦ ವರ್ಷಗಳ ಇತಿಹಾಸ ಹೊಂದಿರುವ ಈ ಕಾಲೇಜಿನಲ್ಲಿ ೬ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ವಿಷಯ. ಇಲ್ಲಿ ಕಲಿಯುವ ಮಕ್ಕಳ ಶಿಕ್ಷಣಕ್ಕೆ ಅವಶ್ಯಕತೆಯಿರುವ ಕೊಠಡಿಗಳು, ಲ್ಯಾಬ್, ಶೌಚಾಲಯ ಮತ್ತಿತರೆ ಮೂಲಭೂತ ಸೌಕರ್ಯವನ್ನು ಹಂತ ಹಂತವಾಗಿ ಕಲ್ಪಿಸಲಾಗಿದೆ. ಮುಂದೆ ಕೂಡ ಈ ಕಾಲೇಜು ಸೇರಿದಂತೆ ನಗರದಲ್ಲಿರುವ ಪ್ರತಿಯೊಂದು ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.ಇದಕ್ಕೂ ಮೊದಲು ೨೦೨೨-೨೩ನೇ ಸಾಲಿನ ಜಿಲ್ಲಾ ಪಂಚಾಯಿತಿಯ ವಿವೇಕ ಶಾಲಾ ಕೊಠಡಿ ಯೋಜನೆಯಡಿ ಮಂಜೂರಿಸಲಾದ ರೂ.೧.೨೫ ಕೋಟಿ ಅನುದಾನದಲ್ಲಿ ಹೊಸ ೫ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.ಬಾಲಕಿಯರ ಪದವಿಪೂರ್ವ ಕಾಲೇಜು ಸುಧಾರಣಾ ಸಮಿತಿ ಸದಸ್ಯರು, ಪ್ರಾಚಾರ್ಯರು,…

Read More

ಕಡಿವಾಣಕ್ಕೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ & ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಜಂಟಿ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರ ಜಮೀನುಗಳನ್ನು ವಕ್ಪ ಆಸ್ತಿಯೆಂದು ವಕ್ಪ್ ಕಮೀಟಿಗೆ ವರ್ಗಾಯಿಸುವ ಹುನ್ನಾರ ನಡೆಸುತ್ತಿದ್ದು ಇದಕ್ಕೆ ತಕ್ಷಣ ಕಡಿವಾಣ ಹಾಕಿ ಈ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಇವರ ಮುಖಾಂತರ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಹಾಗೂ ಜಿಲ್ಲಾಧಿಕಾರಿಗೆ ಪ್ರತ್ಯೇಕವಾಗಿ ಅಖಂಡ ಕರ್ನಾಟಕ ರೈತ ಸಂಘ, ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಂಟಿಯಾಗಿ ಪ್ರತಿಭಟನೆ ಹಮ್ಮಿಕೊಂಡು ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರೈತರ ಜಮೀನುಗಳು ಹಿಂದಿನ ಕಾಲದಿಂದಲೂ ಹಿರಿಯರ ಮುಖಾಂತರ ವಾರ್ಸಾ ನಾತಿಯಿಂದ ಬಂದಂತಹ ಜಮೀನುಗಳಾಗಿದ್ದು, ಇಂತವುಗಳನ್ನು ಉದ್ದೇಶ ಪೂರ್ವಕವಾಗಿ ಹಾಳು ಮಾಡುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ನೀಡುವ ” ಜಾನಪದ ಪ್ರಪಂಚ ” ಪ್ರಶಸ್ತಿಗೆ ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮದ ಹಲಗೆ ಮಜಲು ಕಲಾವಿದ ಗಂಗಾಧರ ಹಣಮಂತ ಬಡಿಗೇರ ಆಯ್ಕೆಯಾಗಿದ್ದಾರೆ.ಗ್ರಾಮದೇವಿ ಹಲಗೆ ಮಜಲು ಸಂಘ ಕಟ್ಟಿಕೊಂಡು ಸುಮಾರು 30 ವರ್ಷಗಳಿಂದ ರಾಜ್ಯದ ತುಂಬೆಲ್ಲಾ ಕಲಾಪ್ರದರ್ಶನ ನೀಡುತ್ತಾ ಮತ್ತು ಯುವಕರಿಗೆ ತರಬೇತಿ ನೀಡುತ್ತಾ ಜಾನಪದ ಕಲೆ ಉಳಿಸುತ್ತ ಬಂದಿದ್ದಾರೆ.ಪ್ರಸ್ತುತ ಕನ್ನಡ ಜಾನಪದ ಪರಿಷತ್ ಇವರ ಸಾಧನೆ ಮೆಚ್ಚಿ ಆಯ್ಕೆ ಮಾಡಲಾಗಿದೆ. ಅ.26 ರಂದು ಬೆಂಗಳೂರಿನ ಸೇಂಟ್ ಲಾರೆನ್ಸ್ ಸಭಾ ಭವನದಲ್ಲಿ ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿಯವರ ನೇತೃತ್ವದಲ್ಲಿ ಪ್ರಶಸ್ತಿ , ಸ್ಮರಣಿಕೆ ಮತ್ತು 5000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ತಿಳಿಸಿದ್ದಾರೆ.ಪ್ರಶಸ್ತಿ ಪುರಸ್ಕೃತ ಗಂಗಾಧರ ಬಡಿಗೇರವರಿಗೆ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ, ತಾಲೂಕು ಘಟಕ, ವಲಯ ಘಟಕ ಮತ್ತು ಗ್ರಾಮ ಘಟಕದ ಪದಾಧಿಕಾರಿಗಳು…

Read More