Author: editor.udayarashmi@gmail.com

ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವಿಜಯದಶಮಿ ಉತ್ಸವದಲ್ಲಿ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೋಲೆಕ್ಸ, ಹುಬ್ಲಾಟ್ ಮೊದಲಾದ ವಿದೇಶಿಗರ ಬ್ರ್ಯಾಂಡ್ ಗಳನ್ನೇ ಪ್ರತಿಷ್ಠೆಯಾಗಿಸುವ ಮನೋಭಾವದಿಂದ ಹೊರಬಂದು ಸ್ವದೇಶಿ ಭಾವ ಜಾಗೃತವಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಹೇಳಿದರು.ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವತಿಯಿಂದ ನಡೆದ ವಿಜಯದಶಮಿ ಉತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘ ನೂರು ವಸಂತಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪಂಚ ಪರಿವರ್ತನೆ ಸೂತ್ರದೊಂದಿಗೆ ಬದಲಾವಣೆಗೆ ಸಂಕಲ್ಪ ಮಾಡಿದೆ ಎಂದರು.ಸ್ವದೇಶಿ ಬಟ್ಟೆ ಒಂದೇ ದಿನದ ಆಚರಣೆಯಾಗಬಾರದು, ಗೋ ಆಧಾರಿತ ಕೃಷಿ ಕೇಂದ್ರಿತ ಸ್ವದೇಶಿ ಚಿಂತನೆ, ವಿದೇಶಿ ವಸ್ತುಗಳ ವ್ಯಾಮೋಹದಿಂದ ದೂರವಾಗಬೇಕಿದೆ ಎಂದರು.ಪರಿಸರದಲ್ಲಿ ಪರಿವರ್ತನೆ ಹಾಗೂ ಸಂರಕ್ಷಣೆ, ಸಾತ್ವಿಕ ಆಹಾರ ಪದ್ದತಿ, ಕುಟುಂಬ ವ್ಯವಸ್ಥೆ ಹಾಗೂ ಶಿಕ್ಷಣ ವ್ಯವಸ್ಥೆಗೆ ಸನಾತನ ಸಂಸ್ಕೃತಿಯ ಸ್ಪರ್ಶ ಹೀಗೆ ಅನೇಕ ಪರಿವರ್ತನೆಯ ಸಂಕಲ್ಪವನ್ನು ಸಂಘ ಮಾಡಿದೆ ಎಂದರು.ನಿವೃತ್ತ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಯುವಜನಾಂಗ ದೇಶಿಯವಾದ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಮಹತ್ವ ನೀಡಬೇಕು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಹೇಳಿದರು.ಪಟ್ಟಣದಲ್ಲಿ ಗೆಳೆಯರ ಬಳಗದಿಂದ ಇತ್ತೀಚಿಗೆ ಜರುಗಿದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.ಭಾರತೀಯ ಯುವಜನತೆ ಈಗೀಗ ಕ್ರಿಕೆಟ್, ಟೆನಿಸ್, ಪುಟ್‌ಬಾಲ್‌ನಂತ ಕ್ರೀಡೆಗಳತ್ತ ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ಆದರೆ ಇವುಗಳು ಮನರಂಜನೆ ಮಾತ್ರ ನೀಡಬಹುದು ವಿನಹಃ ದೈಹಿಕ ಬೆಳವಣಿಗೆಗಳನ್ನಲ್ಲ. ಆದ್ದರಿಂದ ಮಾನಸಿಕ, ದೈಹಿಕ ಬೆಳವಣಿಗೆಗೆ ಪೂರಕವಾದ ಗ್ರಾಮೀಣ ಕ್ರೀಡೆಗಳೆನಿಸಿದ ಕುಸ್ತಿ, ಕಬಡ್ಡಿಯಂತ ಆಟಗಳ ಕುರಿತು ಗಮನ ನೀಡಬೇಕು ಎಂದರು.ಮಾಜಿಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಇಂದು ಗೆಳೆಯರ ಬಳಗದಿಂದ ಕೈಗೊಂಡಿರುವ ಕುಸ್ತಿ ಪಂದ್ಯಾವಳಿ ಅತ್ಯಂತ ಸಮಯೋಚಿತ. ಇಂತಹ ದೇಶಿಯ ಕ್ರೀಡಾಕೂಟಗಳು ಇಂದು ಅಗತ್ಯವಾಗಿವೆ ಎಂದರು.ಪಂದ್ಯಾವಳಿಯಲ್ಲಿ ಮಕ್ಕಳು ಸಹಿತ ಹಿರಿಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಪೈನಲ್ ಪಂದ್ಯಾವಳಿಯ ಸಮಯದಲ್ಲಿ ತುಂತುರು ಮಳೆಯಿಂದ ಅಡಚಣೆಯಾದ ಕಾರಣ ಜೊತೆಗೆ ಫಲಿತಾಂಶ ಸಮನಾದ ಕಾರಣ ಇಬ್ಬರೂ ಸ್ಪರ್ಧಿಗಳಿಗೆ ಬಹುಮಾನದ ಮೊತ್ತವನ್ನು ಹಂಚಲಾಯಿತು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ರಾಜಕುಮಾರ ಸಿಂದಗೇರಿ,…

Read More

ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ & ೨೦೦ನೇ ವಿಜಯೋತ್ಸವ ಆಚರಣೆ ಅದ್ಧೂರಿಯಾಗಿ ಆಚರಿಸಲು ನಿರ್ಧಾರ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಆಚರಣೆಯನ್ನು ಭವ್ಯವಾದ ಮೆರವಣಿಗೆಯ ಮೂಲಕ ಅದ್ಧೂರಿಯಾಗಿ ಆಚರಿಸೋಣ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಇಂಡಿ ರಸ್ತೆಯ ದಾನಗೊಂಡ ಬಡಾವಣೆಯಲ್ಲಿ ಭಾನುವಾರ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಆಚರಣೆ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಜಯಂತ್ಯುತ್ಸವ ಹಾಗೂ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮುದಾಯದ ಯುವಕರನ್ನು ಒಳಗೊಂಡು ಎಲ್ಲ ಪ್ರಮುಖರು ಭಾಗವಹಿಸಿ ಶೋಭೆ ತರುವಂತೆ ಮನವಿ ಮಾಡಿದರು.ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಮಾತನಾಡಿ, ಇಂದು ಎಲ್ಲ ಶರಣರು, ಮಹನೀಯರನ್ನು ಒಂದೊಂದು ಸಮುದಾಯಕ್ಕೆ ಸೀಮಿತಗೊಳಿಸುತ್ತಿರುವುದು ಖೇದಕರ. ಇಂಥ ರೂಢಿ ಬದಲಾಗಬೇಕು. ರಾಣಿ ಚನ್ನಮ್ಮ ದೇಶದ ಹೆಮ್ಮೆಯ ವೀರಮಾತೆ, ವೀರಮಾತೆಯ ಜಯಂತಿ ಹಾಗೂ ವಿಜಯೋತ್ಸವದಲ್ಲಿ ಎಲ್ಲರೂ ಭಾಗವಹಿಸುವಂತಾಗಬೇಕು ಎಂದರು.ತಾಲ್ಲೂಕು ಪಂಚಮಸಾಲಿ ಸಮಾಜದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಇಂದಿನಿಂದ 60 ದಿನಗಳವರೆಗೆ ಕಾಲ ಕಿಡ್ನಿ ಸಂಬಂಧಿಸಿದ ರೋಗಿಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ ತಿಳಿಸಿದ್ದಾರೆ.ದಿ.21ಅಕ್ಟೋಬರ್ ನಿಂದ ದಿ.21 ಡಿಸೆಂಬರ್ ವರೆಗೆ ಬೆ.9 ರಿಂದ ಸಂ.4 ಗಂಟೆಯವರೆಗೆ ಹೆಚ್ಚಿನ ಕ್ರೀಯಾಟೆನಿನ್ ಹೊಂದಿರುವ ರೋಗಿಗಳಿಗೆ ವಿಶೇಷ ಸಲಹೆ ಮತ್ತು ಚಿಕಿತ್ಸೆಯನ್ನು ಈ ಶಿಬಿರದಲ್ಲಿ ಉಚಿತವಾಗಿ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಡಾ.ಅಶ್ವಿನಿ ಸಜ್ಜನವರ ಮೊ.ನಂ: 7406737888, 8073853981 ಸಂಪರ್ಕಿಸಬಹುದು ಎಂದು ಪ್ರಾಚಾರ್ಯ ಡಾ.ಕಡ್ಲಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಜಿಫೆಸ್ಟ್ ಸಮ್ಮೇಳನಗಳು ಪರೀಕ್ಷೆ ತಯಾರಿಯಲ್ಲಿರುವ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಪತಿ ಡಾ. ಅರುಣ ಇನಾಮದಾರ ಹೇಳಿದರು.ಡೀಮ್ಡ್ ವಿವಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗ ಮತ್ತು ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಅ.18 ಶುಕ್ರವಾರ ನಡೆದ ಸ್ನಾತಕೋತ್ತರ ಪದವಿ ಪ್ರಾಯೋಗಿಕ ಪರೀಕ್ಷೆ ಆಧಾರಿತ ಮುಂದುವರೆದ ವೈದ್ಯಕೀಯ ಶಿಕ್ಷಣ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ಇಂಥ ಸಮ್ಮೇಳನಗಳಲ್ಲಿ ಅನುಭವಿ ಮತ್ತು ನುರಿತ ಪ್ರಾಧ್ಯಾಪಕರು ಭಾಗವಹಿಸುವುದರಿಂದ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಸಂದೇಹಗಳನ್ನು ನಿವಾರಿಸಿಕೊಳ್ಳಲು ಅನುಕೂಲವಾಗುತ್ತವೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮಹಾವಿದ್ಯಾಲಯದಲ್ಲಿ ವಿಶಿಷ್ಠ ಮತ್ತು ನವೀನ ಪ್ರಾಯೋಗಿಕ ಸಮ್ಮೇಳನ ಹಾಗೂ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯದ ಖ್ಯಾತ ವೈದ್ಯಕೀಯ ಲೇಖಕ ಹಾಗೂ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನ ಸಹಾಯಕ ಡೀನ್ ಡಾ. ರಾಜಗೋಪಾಲ ಶೆಣೈ ಅವರು…

Read More

ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ‌ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಚಿವ ಎಂ.ಬಿ.ಪಾಟೀಲ ಅವರ ನೀರಾವರಿ ಯೋಜನೆಗಳು ಕೃಷಿ ಮತ್ತು ರೈತರ ಬದುಕಿಗೆ ಭದ್ರತೆ ನೀಡಿವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ‌ ಹೇಳಿದ್ದಾರೆ.ಸೋಮವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ‌ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 32 ಲಕ್ಷ ವೆಚ್ಚದಲ್ಲಿ ಮತ್ತು ಹೊಕ್ಕುಂಡಿಯಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ‌ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಈ ಮುಂಚೆ ಈ ಭಾಗದಲ್ಲಿನ ಜನ ಕುಡಿಯುವ ನೀರು ಕೇಳುತ್ತಿದ್ದರು. ಆದರೆ, ಈಗ ಸಕ್ಕರೆ ಕಾರ್ಖಾನೆ ಸ್ಪಾಪಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ಸಚಿವ ಎಂ.ಬಿ.ಪಾಟೀಲರು ಕೈಗೊಂಡ ನೀರಾವರಿ‌ ಯೋಜನೆಗಳಿಂದಾಗಿ‌ ಈ ಭಾಗದಲ್ಲಿ ರೈತರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ಬಿಟ್ಟು ಈಗ ಕೃಷಿಯಲ್ಲಿ ಬದುಕು‌ ಕಟ್ಟಿಕೊಂಡಿದ್ದಾರೆ‌. ತಮ್ಮ ಜಮೀನುಗಳಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇದರಿಂದಾಗಿ ಕೃಷಿ ಮತ್ತು ಅನ್ನದಾತರ ಬದುಕಿಗೆ ಭದ್ರತೆ ಸಿಕ್ಕಂತಾಗಿದೆ ಎಂದು ಅವರು ಹೇಳಿದರು.ಇದೇ…

Read More

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸ್ತನಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ “ಪಿಂಕ್‌ ವುಮೆನ್ಸ್‌” ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು.ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.ಎಚ್‌ಸಿಜಿ ಮುಖ್ಯ…

Read More

ನಾವು ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ | ಎಂಎಲ್ಸಿ ಸಿ.ಪಿ. ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಲಿದ್ದಾರೆ | ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ ಸುದ್ದಿಗೋಷ್ಠಿ ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಒಮ್ಮತದ ಅಭ್ಯರ್ಥಿಯ ಬಗ್ಗೆ ವಿಷಯಗಳು ಗೊಂದಲಕ್ಕೊಳಗಾಗುತ್ತಿದ್ದಂತೆ, ಬಿಜೆಪಿ ಈಗ ಜೆಡಿಎಸ್ ವಿರುದ್ಧ ಪ್ಲಾನ್ ಆರಂಭಿಸಿದೆ.2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಕೋಲಾರ ಲೋಕಸಭಾ ಕ್ಷೇತ್ರವನ್ನು 2024ರಲ್ಲಿ ಜೆಡಿಎಸ್‌ಗೆ ನೀಡಲಿಲ್ಲವೇ? ಹೀಗಾಗಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್‌ಗೆ ಒತ್ತಾಯಿಸುತ್ತೇವೆ ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ ಹೇಳಿದ್ದಾರೆ. ರಾಮನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, 2019 ರ ಲೋಕಸಭೆ ಚುನಾವಣೆಯಲ್ಲಿ ಅಶ್ವತ್ಥನಾರಾಯಣಗೌಡರು 6,71,338 ಮತಗಳನ್ನು ಗಳಿಸಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಿದ್ದ ಗೌಡರು ಕಠಿಣ ಪೈಪೋಟಿ ನೀಡಿದ್ದರು, 8,78,258 ಮತ ಗಳಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನೂ ಒಳಗೊಂಡಿದೆ.ಕೋಲಾರದ ಸಂಸದರಾಗಿದ್ದ…

Read More

ಇಂದು ಪೊಲೀಸ್ ಹುತಾತ್ಮ ದಿನಾಚರಣೆ (ಅ.21) ಪ್ರಯುಕ್ತ ಈ ವಿಶೇಷ ಲೇಖನ – ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಅದೊಂದು ದೊಡ್ಡ ರಾಜಕೀಯ ಕಾರ್ಯಕ್ರಮ. ಅಲ್ಲಿ ಬಂದೋಬಸ್ತಿಗಾಗಿ ಬಂದಿರುವ ನೂರಾರು ಸಾವಿರಾರು ಪೊಲೀಸರು ಮಂತ್ರಿ ಮಾಗಧರಿಗೆ ಎಸ್ಕಾರ್ಟ್ ಆಗಿ, ಜನರನ್ನು ನಿಯಂತ್ರಿಸಲು, ವಾಹನಗಳನ್ನು ಒಂದೆಡೆ ನಿಲ್ಲಿಸಲು, ಯಾವುದೇ ಅವಘಡಗಳಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ದರಾಗಿ ನಿಂತಿದ್ದಾರೆ. ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾದರೆ ಪೊಲೀಸ್ ಇಲಾಖೆಯವರು ಆರು ಗಂಟೆಗೆ ಎದ್ದು ನಿತ್ಯವಿಧಿಗಳನ್ನು ಪೂರೈಸಿ ತಿಂಡಿ ತಿಂದು ಸ್ಥಳಕ್ಕೆ ಬಂದೋಬಸ್ತಿಗಾಗಿ ಬಂದು ನಿಂತರೆ ಕಾರ್ಯಕ್ರಮ ಮುಗಿದು ಅತಿಥಿಗಳೆಲ್ಲ ತಮ್ಮ ಮನೆ ಸೇರಿದರೂ ಇವರ ಡ್ಯೂಟಿ ಮುಗಿದಿರುವುದಿಲ್ಲ. ಬಂದೋಬಸ್ತಿನ ಗಡಿಬಿಡಿಯಲ್ಲಿ ಎಷ್ಟೋ ಬಾರಿ ಊಟ ತಿಂಡಿಗಳ ಕಡೆ ಇವರ ಗಮನ ಹರಿಯೋದೆ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಇವರ ನಿಸರ್ಗ ಕರೆಗಳಿಗೆ ಯಾವುದೇ ರೀತಿಯಾದ ವ್ಯವಸ್ಥೆಗಳು ಇರುವುದಿಲ್ಲ.ದೇಶದ ಯಾವುದೇ ಭಾಗದಲ್ಲಿ ಯಾವುದೇ ರೀತಿಯ ಹರತಾಳ, ಗಲಾಟೆ, ಹಿಂಸಾಚಾರ, ದೊಂಬಿಯಂತಹ ಘಟನೆಗಳು ಜರುಗಿದರೂ…

Read More

ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಜಾಥಾ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಕಚೇರಿ, ಶಾಲೆ, ಆಸ್ಪತ್ರೆ ಅಂಗಡಿ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ರವಿವಾರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.ಬೆಳಿಗ್ಗೆ ೧೦ ಗಂಟೆಗೆ ನಗರದ ಸೋಲಾಪುರ ರಸ್ತೆಯಲ್ಲಿರುವ ಬಂಜಾರಾ ಕ್ರಾಸ್‌ದಿಂದ ಆರಂಭಿಸಿ, ಶಿವಾಜಿ ಸರ್ಕಲ್ ಮಾರ್ಗವಾಗಿ ಗಾಂಧಿ ವೃತ್ತದ ವರೆಗೂ ಜಾಥಾ ನೇರವೇರಿತು.ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ.೬೦ ರಷ್ಟು ಕನ್ನಡ ಭಾಷೆ ಒಳಗೊಂಡಿರಬೇಕು. ಶೇ.೪೦ ರಷ್ಟು ಉಳಿದ ಭಾಷೆಗಳನ್ನು ಬಳಸಲು ಅವಕಾಶವಿದ್ದು, ಇದೇ ಅಕ್ಟೋಬರ್ ೩೦ರೊಳಗೆ ಜಿಲ್ಲೆಯ ಎಲ್ಲ ನಾಮಫಲಕಗಳು ಕನ್ನಡ ಭಾಷೆಯನ್ನು ಒಳಗೊಂಡಿರಬೇಕು. ಅಕ್ಟೋಬರ್ ೩೧ರ ನಂತರ ಕನ್ನಡ ಭಾಷೆ ಒಳಗೊಳ್ಳದ ನಾಮಫಲಕಗಳನ್ನು ಮುಟ್ಟುಗೊಲು…

Read More