Author: editor.udayarashmi@gmail.com

ತೋಂಟದಾರ್ಯ ಸ್ವಾಮೀಜಿ ಸಂಸ್ಕರಣಾ ದಿನ ಪ್ರಯುಕ್ತ ಹೆಜ್ಜೆ ಗುರುತುಗಳ ಒಂದು ಮೆಲುಕು ಉದಯರಶ್ಮಿ ದಿನಪತ್ರಿಕೆ – ಗುಲಾಬಚಂದ ಜಾದವವಿಜಯಪುರ: ಗಟ್ಟಿ ಛಾತಿ,ಮೃದು ಹೃದಯದ ತೋಂಟದ ಲಿಂ, ಡಾ. ಸಿದ್ದಲಿಂಗ ಪೂಜ್ಯರು ಜಗಮನದಲ್ಲಿ ಸದಾ ಆಜರಾಮರು ! ಅದಕ್ಕೆ ಕಾರಣ ಶ್ರೀಗಳು ತಮ್ಮ ಜೀವಿತಾವಧಿಯಲ್ಲಿ ಬಸವ ತತ್ವದಡಿಯಲ್ಲಿ ಗೈದ ಸಮಾಜಪರ ಎಂದು ಮರೆಯಲಾಗದ ಅಭೂತಮಯ ಕಾಯಕಗಳು ! ಪದಗುಚ್ಛಗಳ ಮೂಲಕ ಈ ಕನ್ನಡ ಕುಲಗುರುವಿನ ವೈವಿಧ್ಯಮಯ ಕಾಯಕ ಪ್ರಜ್ಞೆಗಳನ್ನು ಸ್ಮರಿಸೋಣ ಬನ್ನಿ..!ಶಿಕ್ಷಣ, ಆರೋಗ್ಯ ಸೇರಿದಂತೆ ಐದು ದಶಕಗಳಷ್ಟು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ತೋಂಟದಾರ್ಯ ಮಠದ ಶ್ರೀ ಡಾ.ಸಿದ್ದಲಿಂಗ ಸ್ವಾಮೀಜಿಯವರ ಸಂಸ್ಮರಣಾ ದಿನವಿದು. ಅಕ್ಟೋಬರ್. ೨೦ , ೨೦೧೮ರಂದು ಈ ಲೋಕವನ್ನಗಲಿದ ಸ್ವಾಮೀಜಿ ಅವರು ೭೬ ವರ್ಷ ಈ ಲೋಕದಲ್ಲಿ ನಡೆದಾಡಿದ್ದರು.ಶ್ರೀಗಳು ಹಲವಾರು ದಶಕಗಳಿಂದ ಅನ್ನದಾಸೋಹ ನಡೆಸಿಕೊಂಡು ಬಡ ಮಕ್ಕಳ ಶ್ರೇಯೋಭಿವೃದ್ದಿಗೆ ಹೆಸರಾಗಿದ್ದರು. ತಾವು ಪೀಠಾಧಿಪತಿಗಳಾದ ನಂತರ ಗದಗ, ಹಾವೇರಿ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹಿಡಿದು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದ ಸಹಯೋಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ‘ಪ್ರಸ್ತುತ ಸಾಮಾಜಿಕ ನೆಲೆಯಲ್ಲಿ ವಾಲ್ಮೀಕಿ ರಾಮಾಯಣ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇದೇ ದಿ.೨೨ ರಂದು ಮಧ್ಯಾಹ್ನ ೦೩:೦೦ ಗಂಟೆಗೆ ಕನ್ನಡ ಅಧ್ಯಯನ ವಿಭಾಗದ ಸಭಾಭವನದಲ್ಲಿ ಜರುಗಲಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗೋಪಾಲ್ ಎನ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಯೋಜಕ ಸಂದೀಪ್ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಎಲ್ಲರು ಮಹಾತ್ಮರ ಸ್ಮರಣೆ ಮಾಡಬೇಕು. ಇದರಿಂದ ಎಂತಹ ಕಷ್ಟಗಳು ಬಂದರೂ ಪರಿಹಾರವಾಗುತ್ತವೆ ಎಂದು ಕಾಶಿ ಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ವಾರರು ಹೇಳಿದರು.ಶನಿವಾರ ತಾಲೂಕಿನ ಹಲಸಂಗಿ ಗ್ರಾಮದ ಶ್ರೀ ದೇವಿ ಉತ್ಸವ ಹಾಗೂ ಅಡ್ಡ ಪಲ್ಲಕ್ಕಿ ಮಹೋತ್ಸವ, ಧರ್ಮ ಸಭೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಕರ್ಮದ ಹಾದಿ ಬಿಟ್ಟು, ಧರ್ಮದ ಹಾದಿ ಹಿಡಿಯುವುದರಿಂದ ಧರ್ಮ ನಮ್ಮನ್ನು ಕಾಯುತ್ತದೆ. ಮೂಲ ಪುರುಷನನ್ನು ನಂಬಿದವರು ಯಾರೂ ಕೆಟ್ಟಿಲ್ಲ. ಸತ್ಯದ ಮಂತ್ರವನ್ನು ಬಿಟ್ಟು ಮಿಕ್ಕಿದ ಮಂತ್ರವನ್ನು ನಂಬಿದವರು ಯಾರಿಗೂ ಒಳ್ಳೆಯದಾಗಿಲ್ಲ ಎಂದರು.ಅತಿಯಾದ ಆಶೆ ಮನುಷ್ಯನನ್ನ ಹಾಳು ಮಾಡುತ್ತದೆ. ಇರುವುದರಲ್ಲಿಯೇ ಬದುಕು ನಡೆಸುವ ಕಲೆಯನ್ನ ನಾವುಗಳು ಕಲಿಯಬೇಕು. ಶರಣರು ದೊಡ್ಡ ದೊಡ್ಡ ಕಟ್ಟಡಗಳನ್ನ ನಿರ್ಮಾಣ ಮಾಡಲಿಲ್ಲ ಅವರಿಂದ ಸಣ್ಣ ಸಣ್ಣ ಮನೆಗಳಲ್ಲಿಯೇ ದೊಡ್ಡ ದೊಡ್ಡ ಧರ್ಮದ ಕಾರ್ಯಗಳನ್ನ ಮಾಡಿ ತೋರಿಸಿದವರು. ಆದರೆ ನಾವುಗಳು ದೊಡ್ಡ ದೊಡ್ಡ ಮನೆಗಳಲ್ಲಿ ಇದ್ದೇವೆ, ಆದರೆ ಧರ್ಮದ ಕಾರ್ಯಗಳಿಗೆ ತನು ಮನ ಧನದಿಂದ ಸೇವೆ ಮಾಡುವುದನ್ನ ಮರೆತು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಅವಿನಾಶ ತಳಕೇರಿ ದಕ್ಷಿಣ ವಲಯ ೧೮ ವರ್ಷದೊಳಗಿನ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಚಕ್ರ ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿ ಅವಿನಾಶ ಆಂಧ್ರಪ್ರದೇಶದ ಗುಂಟೂರು ನಾಗಾರ್ಜುನ ಕ್ರೀಡಾಂಗಣದಲ್ಲಿ ಜರುಗಿದ ಏಳು ರಾಜ್ಯಗಳ ಕ್ರೀಡಾಪಟುಗಳು ಪಾಲ್ಗೊಂಡ ದಕ್ಷಿಣ ವಲಯ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಚಕ್ರ ಎಸೆತ ವಿಭಾಗದಲ್ಲಿ ಭಾಗವಹಿಸಿ ೫೦.೪೧ ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಪಡೆದಿದ್ದಾನೆ.ಸಾಧಕ ವಿದ್ಯಾರ್ಥಿ ಅವಿನಾಶ ಇವನು ಪಡಗಾನೂರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ತಳಕೇರಿ ಇವರ ಪುತ್ರನಾಗಿದ್ದು, ವಿದ್ಯಾರ್ಥಿಯ ಅತ್ಯುತ್ತಮ ಸಾಧನೆಗೆ ತಾಲ್ಲೂಕಿನ ಶಿಕ್ಷಕರ ಬಳಗ ಹರ್ಷ ವ್ಯಕ್ತಪಡಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಅಕ್ಟೋಬರ್ 21 ರಂದು ಸೋಮವಾರ ಬಬಲೇಶ್ವರ ತಾಲೂಕಿನ ನಾನಾ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.ಸೋಮವಾರ ಬೆ. 9 ಗಂಟೆಗೆ ಬಬಲೇಶ್ವರ ಪಟ್ಟಣದ ಈದ್ಗಾ ಮೈದಾನದ ಎದುರಿಗೆ ತಿಗಣಿ ಬಿದರಿ ರಸ್ತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 32 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.ನಂತರ ಬೆಳಿಗ್ಗೆ 10 ಗಂಟೆಗೆ ಹೊಕ್ಕುಂಡಿ ಗ್ರಾಮದ ಅಗಸಿ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.ನಂತರ ಬೆಳಿಗ್ಗೆ 11 ಗಂಟೆಗೆ ನಿಡೋಣಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಕಾಲನಿಗಳಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಮತ್ತು ಪಿ.ಆರ್.ಇ.ಡಿ ವತಿಯಿಂದ ರೂ. 100 ಲಕ್ಷ…

Read More

ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ವಕ್ಫ್ ಆಸ್ತಿ ಎಂದು ನೋಟಿಸು ಬಂದಿರುವ ಹಿನ್ನೆಲೆಯಲ್ಲಿ ಯಾರೂ ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ” ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ತಿಕೋಟಾ ತಾಲೂಕಿನ ಹೊನವಾಡ ಕೆಲವು ಜಮೀನುಗಳನ್ನು ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡುತ್ತಾರೆ ಎಂಬ ಆತಂಕದ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ ಹೊನವಾಡದ ಕೆಲವು ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, “ಅನಗತ್ಯವಾಗಿ ಯಾವುದೇ ಖಾಸಗಿ ಆಸ್ತಿ ಅಥವಾ ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲಾಗುವುದಿಲ್ಲ. ಯಾವುದೇ ನೋಟಿಸ್ ಪಡೆದರೆ ಅದಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಸಾಕು. ಈಗಾಗಲೆ ಜಿಲ್ಲಾಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇನೆ. ಮುಂದಿನವಾರ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಿ, ಕೂಲಂಕುಷವಾಗಿ ಎಲ್ಲ ವಿಷಯಗಳನ್ನು ಚರ್ಚಿಸಲಾಗುವುದು. ಜನರು ಅನಗತ್ಯವಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ” ಎಂದರು.ಹೊನವಾಡದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೈದ್ಯಕೀಯ ಕಾಲೇಜುಗಳಿಗೆ ದೇಹದಾನ ಮಾಡುವುದು ಸಾಮಾನ್ಯ. ಆದರೆ, ಇದೇ ಮೊದಲ ಬಾರಿಗೆ ಆಯುರ್ವೇದ ನಗರದ ಬಿ.ಎಲ್.ಡಿ ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯಕ್ಕೆ ಇದೇ ಮೊದಲ ಬಾರಿಗೆ ದೇಹದಾನ ಮಾಡಲಾಗಿದೆ.ದೇಹದಾನ ಜಾಗೃತಿಗಾಗಿ ತಂದೆಯ ಮೃತ ದೇಹ ಛೇದನ ಮಾಡಿ ವೈದ್ಯಕೀಯ ಇತಿಹಾಸ ಸೃಷ್ಠಿಸಿದ ಬೆಳಗಾವಿ ಕೆ.ಎಲ್.ಇ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಕೆ. ಆಯುರ್ವೇದ ಮಹಾವಿದ್ಯಾಲಯದ ಶರೀರ ರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಹಾಂತೇಶ ರಾಮಣ್ಣವರ ಅವರು ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೆಬಲ್ ಟ್ರಸ್ಟಿನ ಟ್ರಸ್ಟ್ ವತಿಯಿಂದ ಅ.16 ರಂದು ಬುಧವಾರ ಈ ದೇಹದಾನ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಎವಿಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅಧ್ಯಯನಕ್ಕೆ ತಮ್ಮ ಟ್ರಸ್ಟ ಮೂಲಕ ಒಂದು ಮೃತ ಶರೀರವನ್ನು ಈ ದೇಹದಾನ ಮಾಡಲಾಗಿದೆ ಎೞದು ಹೇಳಿದರು. ಅಲ್ಲದೇ, ದೇಹದಾನ, ಅಂಗಾಂಗ ದಾನ, ರಕ್ತದಾನ ಹಾಗೂ ಅಂಗಾಂಗ ಕಸಿಯ ಕುರಿತು ಬಿಎಎಂಎಸ್ ವಿದ್ಯಾರ್ಥಿಗಳಿಗೆ ಸವಿವರವಾಗಿ ಮಾಹಿತಿ ನೀಡಿದರು.ಶರಣ ವಿಚಾರ…

Read More

ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರದಲ್ಲಿ “ಡಿಜಿಟಲ್ ಯುಗದಲ್ಲಿ ಮಾರ್ಕೆಟಿಂಗ್ ತಂತ್ರಗಳು” ವಿಷಯ ಕುರಿತು ಉಪನ್ಯಾಸ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾಂಪ್ರದಾಯಿಕವಾಗಿ ತಯಾರಿಸುವ ಆಭರಣಗಳನ್ನು ಹೇಗೆ ಆಧುನಿಕರಣಕ್ಕೆ ಸಂಬಂಧಿಸಿದಂತೆ ಮತ್ತು ಬೇಡಿಕೆಗಳ ಅನುಗುಣವಾಗಿ ಹೇಗೆ ತಯಾರಿಸಬೇಕು ಎಂಬುದನ್ನು ತಿಳಿಯಬೇಕು. ಇಂದಿನ ದಿನಗಳಲ್ಲಿ ಆನ್‌ಲೈನ್ ಮಾರ್ಕೆಟಿಂಗ್ ಬಹಳ ಪ್ರಮುಖ ಪಾತ್ರವಹಿಸುತ್ತಿದೆ. ತಯಾರಿಸಿದ ಆಭರಣಗಳು ನೇರವಾಗಿ ಮಾರುಕಟ್ಟೆಗೆ ಹೋಗಬೇಕೆಂದರೆ ಮತ್ತು ಅದರ ನೇರ ಲಾಭ ಪಡೆಯಬೇಕೆಂದರೆ ಆನ್‌ಲೈನ್ ಮಾರ್ಕೆಟಿಂಗ್‌ನ್ನು ತಿಳಿದಿರಬೇಕು ಎಂದು ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಡಾ.ಚಂದ್ರಶೇಖರ್ ಮಠಪತಿ ಹೇಳಿದರು.ರವಿವಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ಹಾಗೂ ಗ್ರಾಮ ಪಂಚಾಯತ್, ಬರಟಗಿ ಸಹಕಾರದೊಂದಿಗೆ “೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ” ದಲ್ಲಿ ಅವರು “ಡಿಜಿಟಲ್ ಯುಗದಲ್ಲಿ ಮಾರ್ಕೆಟಿಂಗ್ ತಂತ್ರಗಳು” ಎಂಬ ವಿಷಯ ಕುರಿತು ಮಾತನಾಡಿದರು.ಫೇಸ್‌ಬುಕ್, ವಾಟ್ಸ್ಪ್, ಅಮೇಜಾನ್, ಫ್ಲಿಪ್‌ಕಾರ್ಟ್ ಮುಂತಾದವುಗಳಲ್ಲಿ ಹೇಗೆ ಸೇಲ್‌ರ್ ಅಕೌಂಟ್ ಒಪನ್ ಮಾಡಿಕೊಳ್ಳಬೇಕು ಎಂಬುದನ್ನು ತಿಳಿಸಿದ ಅವರು, ಪ್ರಾದೆಶೀಕವಾಗಿ ಮಾರುಕಟ್ಟೆ ಮಳಿಗೆಗಳಿಗೆ ಬೇಟಿ…

Read More

ಸೂರ್ಯ ಫೌಂಡೇಶನ್ ನಿಂದ ಮಹತ್ತರ ಹೆಜ್ಜೆ | ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಯಶಸ್ವಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ನಿರುದ್ಯೋಗ ಕ್ಷೇತ್ರದಲ್ಲಿ ಸುಧಾರಣೆಗೆ ಅಗಾಧ ಅವಕಾಶವಿದ್ದು, ನಾಡಿನ ನಿರುದ್ಯೋಗಿ ಯುವಕ,ಯುವತಿಯರಿಗೆ ಮತ್ತು ಪದವೀಧರರಿಗೆ ವಿವಿಧ ಪ್ರತಿಷ್ಠಿತ ಕಂಪನಿಗಳ ಮೂಲಕ ಉದ್ಯೋಗಾವಕಾಶ ಕಲ್ಪಿಸಿ, ಕುಟುಂಬದ ಆರ್ಥಿಕತೆಯನ್ನು ಬಲಪಡಿಸುವದೇ ನಮ್ಮ ಸೂರ್ಯ ಫೌಂಡೇಶನ್ ಮುಖ್ಯ ಗುರಿಯಾಗಿದೆ ಎಂದು ಸೂರ್ಯ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸೋಮೇಶ್ ನವೋದಯ ಹೇಳಿದರು.ಅವರು ನಗರದ ಹೆಸರಘಟ್ಟದ ಹುರುಳಿ ಚಿಕ್ಕನಹಳ್ಳಿಯಲ್ಲಿರುವ ಇಂಡೋಗ್ಲೋಬ್ ಶಿಕ್ಷಣ ಸಂಸ್ಥೆಯಲ್ಲಿ ಬೆಂಗಳೂರಿನ ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ, ಇಂಡೋಗ್ಲೋಬ್ ಇನ್ ಸ್ಟಿಟ್ಯೂಷನ್ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಸಹಯೋಗದಲ್ಲಿ ಜರುಗಿದ ‘ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ’ದ ಎರಡನೇ ದಿನದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಸೂರ್ಯ ಫೌಂಡೇಶನ್ ಮೂಲಕ ನಿರುದ್ಯೋಗಿ ಯುವಕರಿಗೆ ಅವರ ಇಚ್ಚೆಯನುಸಾರ ಉದ್ಯೋಗಕ್ಕೆ ಸಂಬಂಧಿತ ಕೌಶಲ್ಯಗಳು ಮತ್ತು ತರಬೇತಿಯನ್ನು ನೀಡಿ, ಸ್ವಯಂ ಪ್ರೇರಿತರಾಗಿ ಉದ್ಯೋಗದಲ್ಲಿ…

Read More