Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ತೆರವುಗೊಳಿಸಲಾದ ಶೆಡ್ ನ ನೊಂದ ದಲಿತ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ನಗರದ ಎಸ್‌ಸಿಎಸ್‌ಟಿ ಹಾಗೂ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ತಾಲೂಕು ದಂಡಾಧಿಕಾರಿಗಳ ಮೂಲಕ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.ತೆರವು ಜಾಗೆಯಿಂದ ಶುರುವಾದ ಪ್ರತಿಭಟನೆ ಪಟ್ಟಣದ ತಂಗಡಗಿ ಮುಖ್ಯ ರಸ್ತೆ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ಸಾಗಿತು. ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಡಿಎಸ್‌ಎಸ್ ಮುಖಂಡ ಹರೀಶ ನಾಟೆಕಾರ ಮಾತನಾಡಿ, ದುಡಿದು ತಿನ್ನುವ ನಮ್ಮ ಜನರ ಮನೆಗಳನ್ನು ನೆಲಸಮ ಮಾಡಲಾಗಿದೆ ಈ ಘಟನೆಯನ್ನು ನಮ್ಮ ಸಂಘಟನೆ ಖಂಡಿಸುತ್ತದೆ. ನಿವಾಸಿಗಳ ಬಳಿ ಕೊಳಚೆ ಮಂಡಳಿ ನೀಡಿದ ಹಕ್ಕುಪತ್ರ, ನ್ಯಾಯಾಲಯದ ಸ್ಟೇ ಪ್ರತಿ ಇದ್ದರೂ ಕೂಡ ಯಾವುದನ್ನೂ ಲೆಕ್ಕಿಸಿಲ್ಲ. ಹುಡ್ಕೋ ಗೇಟ್ ಬಳಿ ಇರುವ ಬೆಂಗಳೂರು ಬೇಕರಿ ಕಿತ್ತದೇ ನಮ್ಮವರ ಮನೆಗಳನ್ನು ಕಿತ್ತಿದ ಇವರ ನಡವಳಿಕೆ…

Read More

ರಾಹುಲ್ ಗಾಂಧಿ ವಿರುದ್ಧ ಅವಾಚ್ಯ ಶಬ್ದ ಬಳಕೆ | ಕಾಂಗ್ರೆಸ್ ನಗರಸಭಾ ಸದಸ್ಯ ಪರಶುರಾಮ ಹೊಸಮನಿ ದೂರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ನಿಂದಿಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಕಾಂಗ್ರೆಸ್ ನಗರಸಭಾ ಸದಸ್ಯ ಪರಶುರಾಮ ಹೊಸಮನಿ ಅವರ ದೂರಿನ ಮೇರೆಗೆ ಶುಕ್ರವಾರ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 15 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಅವರು ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹೊಸಮನಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.ಅವರ ದೂರಿನ ಆಧಾರದ ಮೇಲೆ, ಯತ್ನಾಳ್ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಶಾಂತಿ ಕದಡುವ ಉದ್ದೇಶಪೂರ್ವಕ ಅವಮಾನ ಮತ್ತು ಸುಳ್ಳು ಮತ್ತು ತಪ್ಪು ಮಾಹಿತಿ ಹರಡಿದ ಪ್ರಕರಣವನ್ನು ದಾಖಲಿಸಲಾಗಿದೆ. ಶಾಂತಿ ಸೌಹಾರ್ಧವನ್ನು ಕೆಡಿಸುವ ದುರುದ್ದೇಶದಿಂದ ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹೀಯಾಳಿಸಿ,…

Read More

ಸಿಎಂ ಸಿದ್ದರಾಮಯ್ಯ ರಕ್ಷಿಸಲು ಹುನ್ನಾರ | ಸಿಎಂ ರಾಜೀನಾಮೆಗೆ ಆಗ್ರಹ | ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸುವ ಸಲುವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳನ್ನು ಸುಟ್ಟು ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮೈಸೂರಿಗೆ ಹೋಗಿದ್ದರು. 1997ರ ನಂತರದ ಎಲ್ಲಾ ಕಡತಗಳನ್ನು ಕಾರಿನಲ್ಲಿ ತುಂಬಿಕೊಂಡು ಹೋಗಿದ್ದರು. ಆ ಕಡತಗಳು ಎಲ್ಲಿ ಹೋದವು? ನಿಮ್ಮ ರಕ್ಷಣೆಗಾಗಿ ಮುಡಾದ ಎಲ್ಲಾ ಕಡತಗಳು ಸಚಿವ ಸುರೇಶ್ ಒಯ್ದು ಸುಟ್ಟು ಹಾಕಿದ್ದಾರಾ ಎಂದು ಪ್ರಶ್ನಿಸಿದ್ದಾರೆ.ಇದೇ ವೇಳೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಅಷ್ಟೇ ಅಲ್ಲದೆ ಬೈರತಿ ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಕೇವಲ ಸಿದ್ದರಾಮಯ್ಯನವರ ಬಾಮೈದ ಹಾಗೂ ಜಮೀನು…

Read More

ಬಿಮಾ ಯೋಜನೆಗಳ ಕುರಿತ ಪ್ರಗತಿ ಪರಿಶೀಲನೆ ಹಾಗೂ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಬಿಮಾ ಸುರಕ್ಷಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಿ ನಿಗದಿತ ಗುರಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಧಾನಮಂತ್ರಿ ಸುರಕ್ಷಾ, ಪ್ರಧಾನಮಂತ್ರಿ ಜೀವನಜ್ಯೊತಿ ಸೇರಿದಂತೆ ವಿವಿಧ ಬಿಮಾ ಯೋಜನೆಗಳ ಕುರಿತ ಪ್ರಗತಿ ಪರಿಶೀಲನೆ ಹಾಗೂ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕೇಂದ್ರ ಸರ್ಕಾರದ ಬಿಮಾ ಯೋಜನೆಗಳು ಯಾವುದೇ ನಿಗದಿತ ವರ್ಗಗಳಿಗೆ ಮೀಸಲಾಗದೇ, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದ ಜನರನ್ನು ಈ ಯೋಜನೆಯಡಿ ನೊಂದಣಿಗೆ ಅವಕಾಶವಿದ್ದು, ಜಿಲ್ಲೆಗೆ ಬಿಮಾ ಯೋಜನೆಯಡಿ ೧೦.೨೫ ಲಕ್ಷ ಗುರಿ ಎದುರು, ೨.೭೫ ಲಕ್ಷ ನೊಂದಣಿ ಮಾಡಿಸಲಾಗಿದೆ. ಎಲ್ಲ ಇಲಾಖೆ ಜಿಲ್ಲಾ ಮಟ್ಟದ, ತಾಲೂಕಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳ ನೊಂದಣಿ ಮಾಡಿಸಿ ನಿಗದಿತ ಗುರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೩೧-೧೦-೨೦೨೪ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ – ಶಿವಕುಮಾರ್ ಉಪ್ಪಿನ(ಆಲಮೇಲ) ಈ ದಂಪತಿಗೆ ಬಸವಾದಿ ಶರಣರೆಂದರೆ ಪ್ರಾಣ. ಮಂಡ್ಯದಂತಹ ಒಕ್ಕಲಿಗರ ಬಿರು ನೆಲದಲ್ಲಿ ಬಸಣ್ಣನವರು ಬೆಳಗಿದ ಜ್ಯೋತಿಯನ್ನು ಹಚ್ಚಿ ಅದು ಆರದಂತೆ ತಮ್ಮ ಕೈಗಳನ್ನು ಗಟ್ಟಿಯಾಗಿ ಅಡ್ಡ ಹಿಡಿದ ಅಪರೂಪದ ಜೋಡಿ ಎಂ. ಶಿವಕುಮಾರ್ ಹಾಗೂ ಅಪರ್ಣಾ ಅವರು.ಶಿವಕುಮಾರ್ ಮೂಲತಃ ಪತ್ರಕರ್ತರು. ಕಳೆದ ಎರಡು ದಶಕಗಳಿಂದ ವೃತ್ತಿ ಪತ್ರಿಕೋದ್ಯಮದಲ್ಲಿದ್ದು, ಒಂದೂವರೆ ದಶಕಗಳ ಹಿಂದೆ ಕಾಯಕಯೋಗಿ ಪ್ರಾತಿಷ್ಠಾನವನ್ನು ಆರಂಭಿಸಿ ಅನೇಕ ಸಮಾಜಮುಖಿ ಕೆಲಸಗಳಿಂದ ಪರಿಚಿತರಾಗಿದ್ದಾರೆ. ಮಂಡ್ಯ ನಗರದ ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕವೇ ಒಂದು ದೊಡ್ಡ ಉದ್ಯಾನವನ್ನು ನಗರಸಭೆಯಿಂದ ದತ್ತು ಪಡೆದು ಅದಕ್ಕೆ ತುಮಕೂರಿನ ಜ್ಞಾನ ದಾಸೋಹಿ, ಶಾತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯ ಹೆಸರನ್ನಿಟ್ಟು, ಅಚ್ಚಕುಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹಿರಿಯ ಶ್ರೀಗಳಿದ್ದಾಗಿನಿಂದ ತುಮಕೂರು ಮಠಕ್ಕೆ ನೆಚ್ಚಿನ ಶಿಷ್ಯರಾಗಿದ್ದಾರೆ. ಹಾಗೆಯೇ ಎಲ್ಲೆಡೆ ಗಿಡಗಳನ್ನು ಸಹ ಹಚ್ಚಿ ಪರಿಸರ ಪ್ರೇಮ ಮೆರೆಯುತ್ತಿದ್ದಾರೆ. ಇಂತಹ ಕೆಲಸಗಳ ಜೊತೆ ಬಸವಾದಿ ಶರಣರ ವಿಚಾರಗಳನ್ನು ಮಂಡ್ಯದ ಪರಿಸರದಲ್ಲಿ ತಮ್ಮ ಧರ್ಮಪತ್ನಿ ಅಪರ್ಣಾ ಅವರ ಜೊತೆ ಬಿತ್ತುತ್ತಿದ್ದಾರೆ. ಸತಿಪತಿಗಳೊಂದಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ಅಕ್ಟೋಬರ್ ೨೧ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ, ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನೊಳಗೊಂಡಂತೆ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೫-೧೦-೨೦೨೪ರಂದು ಸಂಜೆ ೫ ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಕಥಾ ವಿಭಾಗದಲಿ ಡಾ.ಲಕ್ಷ್ಮಣ ವಿ.ಎ ಅವರ ‘ಜಿರಿ ಮಳೆಯ ಕಣ್ಣು’ ಹಾಗೂ ಕಾವ್ಯಹಸ್ತಪ್ರತಿ ಬೆಂಗಳೂರಿನ ಭಾಗ್ಯವಸು ಅವರ ‘ರೆಪ್ಪೆಗಂಬದ ಮೇಲೆ ಕೂತ ಮರಿ ಹಕ್ಕಿ’ ಆಯ್ಕೆಯಾಗಿದೆ ಹಾಗೂ ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ೨೦೨೩ರ ಸಾಲಿನ ಪುಸ್ತಕ ಪ್ರಶಸ್ತಿಗೆ ದಾವಣಗೆರೆಯ ಮಲ್ಲಿಕಾರ್ಜುನ ಕಡಕೋಳ ಅವರ ಪರಿಮಳದ ಹಾದಿಯ ಪಯಣಿಗರು ಕೃತಿಯು ಆಯ್ಕೆಯಾಗಿದೆ ಎಂದು ಬೆರಗು ಪ್ರಕಾಶನದ ಪ್ರಕಾಶಕಿ ವಿಜಯಲಕ್ಷ್ಮಿ ಆರ್.ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಯುವಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಯುವ ಕಾವ್ಯ ಪುರಸ್ಕಾರ ನೀಡಲು ಇದೇ ವರ್ಷದಿಂದ ನಿರ್ಧರಿಸಿದ್ದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪಿ. ನಂದಕುಮಾರ ಅವರ “ಹಂಗಿನ ಕಿರೀಟಕ್ಕೆ ಜೋತು ಬಿದ್ದ ನಾಲಿಗೆ’ಹಸ್ತಪ್ರತಿ ಆಯ್ಕೆಯಾಗಿದೆ.ಬೆರಗು ಪ್ರಕಾಶನವು ಕಳೆದ ಐದು ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ ೧೫೭ ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ ೭೪ ಹಸ್ತಪ್ರತಿಗಳು ನಾಡಿನ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವು ರೋಗಿಗಳ ಸೇವೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು, ಇದನ್ನು ಬೇಗನೆ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು. ಡಯಾಲಿಸಿಸ್ ಕೇಂದ್ರವು ಬಡವರಿಗೆ ಅನುಕೂಲವಾಗಿದ್ದು, ೨೪ ಗಂಟೆಗಳ ಸೇವೆ ನೀಡಲಾಗುವುದು ಎಂದು ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.ಸಮುದಾಯ ಆರೋಗ್ಯ ಕೇಂದ್ರದಲ್ಲಿ ಫಂಗಸ್ ಚಿಕಿತ್ಸೆ ಹಾಗೂ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತ, ಪಟ್ಟಣಕ್ಕೆ ಹದಿನಾರುವರೆ ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧವು ನಿರ್ಮಾಣವಾಗುವುದು. ಈಗಾಗಲೇ ಎಂಟುವರೆ ಕೋಟಿ ಹಣ ಬಿಡುಗಡೆಯಾಗಿದ್ದು, ಬೇಗನೆ ಕಾಮಗಾರಿ ಪ್ರಾರಂಭಿಸಲಾಗುವುದು. ಪಟ್ಟಣದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಶ್ರಮಿಸುವೆನು. ವೈದ್ಯರು ರೋಗಿಗಳನ್ನು ದೇವರಂತೆ ಕಂಡು ಚಿಕಿತ್ಸೆ ನೀಡಬೇಕು ಎಂದರು.ಚಡಚಣ ಏತ ನೀರಾವರಿ ಯೋಜನೆ ಬೇಗನೆ ಪ್ರಾರಂಭಿಸಲಾಗಿ ೪ ತಿಂಗಳಲ್ಲಿ ನೀರು ಬರುವಂತೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವೆ. ಇಲ್ಲಿ ವೈದ್ಯರ ಕೊರತೆಯಿದ್ದು ತಜ್ಞ ವೈದ್ಯರನ್ನು ನೇಮಕ ಮಾಡಲಾಗುವುದು. ಸಿಬ್ಬಂದಿಯ ಕೊರತೆಯನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡುವೆನು. ಯಾವುದೇ ದೂರು ಬರದಂತೆ ಕಾರ್ಯ ನಿರ್ವಹಿಸಿರಿ ಎಂದು ಶಾಸಕ ಕಟಕಧೊಂಡ ಹೇಳಿದರು.ಪ್ರಾಸ್ತಾವಿಕವಾಗಿ…

Read More