Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ವಿಜಯಪುರದ ಸ್ನಾತಕ, ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಮತ್ತು ಮಂಡ್ಯ, ಸಿಂಧನೂರು, ಬೀದರ ಹಾಗೂ ಉಡುತಡಿ ಸ್ನಾತಕೋತ್ತರ ಕೇಂದ್ರಗಳಿಗೆ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನವನ್ನು ಇದೇ ದಿ. ೨೪ ಮತ್ತು ೨೫ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಇಲ್ಲಿಯ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಬಿಜೆಪಿ ನಗರ ಮಂಡಲದ ಪ್ರಕೋಷ್ಟಕ ಸಂಯೋಜಕರಾಗಿ ಅರವಿಂದ ರಾಮಸಿಂಗ್ ಲಮಾಣಿ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳನ್ನಾಗಿ ದೇವೇಂದ್ರ ಜಗದೇವ ಹಡ್ಲಗಿ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ಭಾರತಿ ಶಿವಾನಂದ ಬೂಯ್ಯಾರ ಅವರನ್ನು ಜಿಲ್ಲಾ ಪ್ರಕೋಷ್ಟಕ ಸದಸ್ಯರನ್ನಾಗಿ ನಿಯುಕ್ತಿಗೊಳಿಸಲು ನಗರ ಮಂಡಲದಿಂದ ಜಿಲ್ಲಾ ಘಟಕಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರ ಮಂಡಲ ಅಧ್ಯಕ್ಷರಾದ ಶಂಕರ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸತತ ಐದು ದಿನಗಳಿಂದ ನಡೆದ ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆ ನಾಡಿನ ಮೂಲೆಗಳಿಂದ ಬಂದ ಸಹಸ್ರಾರು ಭಕ್ತರ ಮದ್ಯೆ ಶುಕ್ರವಾರ ಸಂಪನ್ನವಾಯಿತು.ಪಟ್ಟಣದ ಹೊರವಲಯದಲ್ಲಿರುವ ಮಲ್ಲಯ್ಯನ ದೇವಸ್ಥಾನಕ್ಕೆ ಕಳೆದ ಸೋಮವಾರದಂದು ತೆರಳಿದ್ದ ರಾವುತರಾಯನನ್ನು ತೆರೆದ ಬಂಡಿಯಲ್ಲಿ ಸಹಸ್ರಾರು ಭಕ್ತಾಧಿಗಳ ಜಯಘೋಷದ ಮದ್ಯೆ ಮೂಲ ದೇವಸ್ಥಾನಕ್ಕೆ ಕರೆ ತರಲಾಯಿತು. ನಾಡಿನ ಹಾಗು ಮಹಾರಾಷ್ಟç, ಆಂಧ್ರ, ಗೋವಾ ರಾಜ್ಯಗಳಿಂದ ಆಗಮಿಸಿದ ಭಕ್ತ ಸಮೂಹ ವಾಸ್ತವ್ಯ ಹೂಡಿ ವಿವಿಧ ಪೂಜಾ ಕರ‍್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾದರು. ಬೆಳಿಗ್ಗೆ ೭.೦೦ ಗಂಟೆಗೆ ಪ್ರಾರಂಭವಾದ ಭವ್ಯ ಬಂಡಿ ಮೆರವಣಿಗೆಯಲ್ಲಿ ವಿರಾಜಮಾನನಾಗಿ ಕಂಗೊಳಿಸಿದ ರಾವುತರಾಯನನ್ನು ಭಕ್ತಾಧಿಗಳು ಭಕ್ತಿಯೊಂದಿಗೆ ಭಂಡಾರ ಎಸೆದು ಏಳು ಕೋಟಿ-ಏಳು ಕೋಟಿ ಗೇ ಎಂಬ ಜಯಕಾರದೊಂದಿಗೆ ಭಕ್ತಿ ಸಮರ್ಪಿಸಿದರು.ಜಾತ್ರೆಯಲ್ಲಿ ವಿಶೇಷವಾಗಿ ಮಹಿಳಾ ಮತ್ತು ಪುರುಷ ವಗ್ಗೆಗಳು ಹೆಗಲ ಮೇಲೆ ಕಂಬಳಿ ಹೊತ್ತು, ಕೈಯಲ್ಲಿ ತ್ರಿಶೂಲ ಹಿಡಿದು ಹಣೆ ತುಂಬ ಭಂಡಾರ ಬಡಿದುಕೊಂಡು ರಾವುತರಾಯನ ಬಂಡಿ ಮುಂದೆ ಮೈದುಂಬಿ ಕುಣಿಯುತ್ತ ಜನರ ಗಮನ ಸೆಳೆದರು. ಪಟ್ಟಣದ ಜನರು ಐದು…

Read More

ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣ ಆಚರಣೆಗೆ ನಿರ್ಧಾರ | ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಲು ಸೂಚನೆ | ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದಿಂದ ಇದೇ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯೊಂದಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು. ರಾಜ್ಯೋತ್ಸವ ಕಾರ್ಯಕ್ರಮದ ವಿವಿಧ ಸಿದ್ಧತೆಗಳ ವ್ಯವಸ್ಥೆಗೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ರಾಜ್ಯೋತ್ಸವ ಸಂದೇಶ ತಯಾರಿಗಾಗಿ ವಿವಿಧ ಇಲಾಖೆಗಳ ಪ್ರಗತಿ ವರದಿಯನ್ನು ಅಕ್ಟೋಬರ್ ೨೫ರೊಳಗಾಗಿ ಸಲ್ಲಿಸುವಂತೆ ಅವರು ಸೂಚನೆ…

Read More

ಕರ್ನಾಟಕ ಸಹಕಾರ ಸಂಘಗಳ ನಿಬಂಧಕರಿಗೆ ಮನವಿ | ವೈಜ್ಞಾನಿಕವಾಗಿ ಸಿಬ್ಬಂದಿ ಬಲ ಪುನರ್ಘಟಿಸಲು ಒತ್ತಾಯ | ಬ್ಯಾಂಕಿನ ಆರ್ಥಿಕ ಪರಿಸ್ಥಿತಿ ಇಳಿಕೆಯ ಆತಂಕ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯು ಈಗ ತೆರವಾಗಿರುವ ೧೧೭ ಹುದ್ದೆಗಳಲ್ಲಿ ೪೮ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ತಡೆಹಿಡಿಯಬೇಕೆಂದು ಆಗ್ರಹಿಸಿ ಬ್ಯಾಂಕಿನ ಸದಸ್ಯರ ಗುಂಪೊಂದು ಕರ್ನಾಟಕ ಸಹಕಾರ ಸಂಘಗಳ ನಿಬಂಧಕರಿಗೆ ಮನವಿ ಸಲ್ಲಿಸಿದ ಘಟನೆ ಕೊಂಚ ತಡವಾಗಿ ಬೆಳಕಿಗೆ ಬಂದಿದೆ.ಕಳೆದ ವಾರದಂದು (೮/೧೦/೨೦೨೪) ಬೆಂಗಳೂರಿಗೆ ತೆರಳಿ ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದ “ಅ” ವರ್ಗದ ಕೆಲ ಸದಸ್ಯರು ಸಿದ್ದೇಶ್ವರ ಬ್ಯಾಂಕಿಗೆ ಈ ಹಿಂದೆ ಅವೈಜ್ಞಾನಿಕವಾಗಿ ಮಂಜೂರಾಗಿರುವ ೨೬೮ ಸಿಬ್ಬಂದಿ ಬಲವನ್ನು ರದ್ದುಪಡಿಸಿ ಬ್ಯಾಂಕಿನ ಈಗಿನ ಕಾರ್ಯಭಾರ ಮತ್ತು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರಿ ಸಂಘಗಳ ಕಾಯ್ದೆ (೧೯೫೯ & ೧೯೬೦ ರ ಉಪನಿಯಮ ೧೭(೧) & ೧೭(೧)C ) ಪ್ರಕಾರ ವೈಜ್ಞಾನಿಕವಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ ೩ ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಮನೋಶಾಸ್ತç ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ರೂ.೩೦೦೦/- ಸಂಭಾವನೆ ನಿಗದಿಗೊಳಿಸಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಭೇತಿ ನೀಡಲಾಗುತ್ತದೆ.ಅರ್ಜಿ ನಮೂನೆಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪಡೆದುಕೊಂದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ ೨೯-೧೦-೨೦೨೪ರ ಸಂಜೆ ೫.೩೦ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ೪/೩, ಬಿ.ಎಮ್. ಪಾಟೀಲ್ ಶಾಲೆ ಹತ್ತಿರ, ವಿವೇಕ ನಗರ ವಿಜಯಪುರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ತಾಲೂಕು ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪವಿಭಾಗದ ವತಿಯಿಂದ ಅಕ್ಟೋಬರ್ ೧೯ರಂದು ಮಧ್ಯಾಹ್ನ ೪ ಗಂಟೆಗೆ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಹಮ್ಮಿಕೊಳ್ಳಲಾಗಿದೆ. ಹೆಸ್ಕಾಂ ಗ್ರಾಮೀಣ ಉಪ ವಿಭಾಗಕ್ಕೆ ಒಳಪಡುವ ಗ್ರಾಮಗಳ ಗ್ರಾಹಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ವಿಜಯಪುರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2024-25 ನೇ ಸಾಲಿನ ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರು ಆಯ್ಕೆಯಾಗಿದ್ದಾರೆ. ಅವರ ಮುಂದಿನ ಪ್ರಯತ್ನಗಳು. ಅಧ್ಯಕ್ಷರು ಮತ್ತು ಎಲ್ಲಾ ಅಧಿಕಾರಿಗಳು ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು, ಕಲ್ಬುರ್ಗಿ ರಾಜ್ಯಾಧ್ಯಕ್ಷ ಗುರಯ್ಯ ಸ್ವಾಮಿ ಹಾಗೂ ಕಾರ್ಯದರ್ಶಿ ಪ್ರಭಾಕರ್ ಸಲಗರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಎಲ್ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ ಎಂ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಮಹಾವಿದ್ಯಾಲಯದ ಐಕ್ಯೂ ಎಸಿ ಸಹಭಾಗಿತ್ವದಲ್ಲಿ ಯೂತ್ ಕ್ರಾಸ್ ವಿಭಾಗ ಮತ್ತು ಎನ್ಎಸ್ಎಸ್ ಘಟಕ ಒಂದು ಮತ್ತು ಎರಡು ಎಂ ಬಿ ಪಾಟೀಲ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರವನ್ನು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಆರ್.ಎಂ.ಮಿರ್ದೇ ರಿಬ್ಬನ್ ಕತ್ತರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ, ಸಾಮಾನ್ಯ ತಪಾಸಣೆ ಮಾಡಿದರು. ವಿದ್ಯಾರ್ಥಿಗಳ ಅಗತ್ಯ ಔಷಧಿ ಬರೆದು ಕೊಟ್ಟರು. ಕೆಲವ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರೀಕ್ಷೆ ಮತ್ತು ಚಿಕಿತ್ಸೆಯ ಅಗತ್ಯವಿರುವವರಿಗೆ ಬಿ ಎಲ್ ಡಿ ಇ ಆಸ್ಪತ್ರೆಗೆ ಭೇಟಿ ನೀಡುವಂತೆ ಸೂಚಿಸಿದರು.ಶಿಬಿರದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಎನ್ಎಸ್ಎಸ್ ಮುಖ್ಯಸ್ಥ ತರುಣಮ ಜಬೀನ್ ಖಾನ್, ಮಿಲನ್ ರಾಟೋಡ್, ಹಾಗೂ ಯೂತ್ ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥ ಅನಿಲ್ ಪಾಟೀಲ್, ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು ಹಾಗೂ ಗ್ರಾಪಂ ಬರಟಗಿ ಸಹಕಾರದೊಂದಿಗೆ “೧೦ ದಿನಗಳ ಬಂಜಾರ ಆಭರಣ ತಯಾರಿಕಾ ಕಾರ್ಯಾಗಾರ” (ಅ.೧೮ರಿಂದ ೨೭ವರೆಗೆ)ದ ಉದ್ಘಾಟನಾ ಸಮಾರಂಭವನ್ನು ಬರಟಗಿ ಗ್ರಾಪಂ ಅಧ್ಯಕ್ಷೆ ಕವಿತಾ ರಜಪೂತ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು, ಎಲ್ಲ ಬಂಜಾರ ಶಿಬಿರಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಜೀವನ ಉನ್ನತ ಮಟ್ಟಕ್ಕೆ ತಗೆದುಕೊಂಡು ಹೋಗಬೇಕು ಎಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಮನಗೌಡ ಎನ್ ಬಿರಾದಾರ ಅವರು, ಬಂಜಾರರಿಗೆ ಇಂತಹ ತರಬೇತಿ ನೀಡುತ್ತಿರುವುದು ಇದೇ ಮೊದಲು. ಈ ಹಿಂದೆ ಯಾರು ಕೂಡ ಆಲೋಚನೆ ಮಾಡಿರಲಿಲ್ಲ. ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ಅದ್ಬುತವಾದ ಕಾರ್ಯವನ್ನು ಮಾಡುತ್ತಿದೆ. ತಾಂಡಾದಲ್ಲಿಯೇ ಇಂತಹ ಕಾರ್ಯಾಗಾರವನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.ಕಲ್ಯಾಣಶಿಂಗ್ ಎಸ್ ಹಜೇರಿ ಆಭರಣಗಳ ಹೊಸ ವಿನ್ಯಾಸ ಕುರಿತು ಮಾತನಾಡಿದರು.ಖ್ಯಾತ ಬಂಜಾರ ಗಾಯಕ ಆರ್ ಬಿ ನಾಯಕ್ ಮಾತನಾಡಿ, ಇಂದಿನ ಯುವ ಪೀಳಿಗೆಯು ಆಭರಣ ತಯಾರಿಕೆಯನ್ನು ಕಲಿತುಕೊಳ್ಳುವುದರ ಜೊತೆಗೆ ಹೊಸ ಹೊಸ ವಿನ್ಯಾಸದ…

Read More