Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರ 67ನೇ ಜನ್ಮದಿನವನ್ನು ಸರಳ ಹಾಗೂ ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲು ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಜನ್ಮದಿನವಾದ ಅಕ್ಟೋಬರ್ 11ರಂದು ಮುಂಜಾನೆ ಏಳು ಗಂಟೆಗೆ ಶ್ರೀ ಖಾಸ್ಗತೇಶ್ವರ ಮಠದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕವನ್ನು ನಡೆಸಲಾಗುವುದು, 10: 00 ಗಂಟೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಒನ್ನೊಳಗೊಂಡು ವಿವಿಧ ಆಸ್ಪತ್ರೆಗಳಲ್ಲಿಯ ಒಳ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಗುವುದು. ಸಂಜೆ 6: 00 ಗಂಟೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ಜನ್ಮದಿನದ ಅಂಗವಾಗಿ ನಡೆಯುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದು ಎಂದು ತೀರ್ಮಾನಿಸಲಾಯಿತು.ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಚೋರಗಸ್ತಿ, ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಶರಣ ಭೂಪಾಲ ದೇಶಮುಖ, ಸಂಗನಗೌಡ ಅಸ್ಕಿ, ಮುನ್ನಾ ಅರ್ಜುಣಗಿ,…
ಜಾತಿ ಗಣತಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಬಿಜೆಪಿ | ರಾಜ್ಯವ್ಯಾಪಿ ಜನಾಂದೋಲನ ನಡೆಸಲು ನಿರ್ಧಾರ | ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ಆರೋಪ ಬೆಂಗಳೂರು: ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ತಂದಿದ್ದಾರೆಂದು ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿರುವ ಬಿಜೆಪಿ ಇದೀಗ ಬ್ರಹ್ಮಾಸ್ತ್ರವೊಂದನ್ನು ಪ್ರಯೋಗಿಸಲು ಮುಂದಾಗಿದೆ.ಜಾತಿಗಣತಿ ವರದಿ ಮಂಡನೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದೇ ವೇಳೆ ಒಳ ಮೀಸಲಾತಿ ಜಾರಿ ತರುವಂತೆ ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ ನಡೆಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ಸಿಗರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ, ಯಾರೂ ಮನೆಗೆ ಬಂದೇ ಇಲ್ಲ ಎಂಬುದಾಗಿ ಲಿಂಗಾಯತ, ಒಕ್ಕಲಿಗ ಸೇರಿದಂತೆ ಇತರೆ ಸಮುದಾಯದವರು ತಿಳಿಸಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ ಮತ್ತು ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಮತ್ತು ಅವೈಜ್ಞಾನಿಕತೆ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ತಮಗೆ ಬಂದಂತ ೧೨ ತಿಂಗಳ ಗ್ರಹಲಕ್ಷ್ಮಿ ಹಣವನ್ನು ಕೂಡಿಟ್ಟು ನವರಾತ್ರಿ ನಿಮಿತ್ಯ ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ ದೇವಿ ಮೂರ್ತಿಗೆ ೨೫೦ ಗ್ರಾಮ (೨೫ ತೊಲಿ) ಬೆಳ್ಳಿ ಕೀರಿಟ ಮಾಡಿಸಿ ಮಾದರಿಯಾಗಿದ್ದಾರೆ.ಈ ವಿಷಯ ತಿಳಿದು ಗ್ರಾಮಕ್ಕೆ ಬೇಟಿ ನೀಡಿದ ಶಾಸಕ ಅಶೊಕ ಮನಗೂಳಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿದರು.ನಂತರ ಶಾಸಕ ಅಶೋಕ ಮನಗೂಳಿ ಮಾತನಾಡಿ, ಕಾಂಗ್ರೇಸ್ ಪಕ್ಷ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ ೧.೬೦ ಕೋಟಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ ಈ ಯೋಜನೆ ಯಾವುದೆ ಕಾರಣಕ್ಕೂ ನಿಲ್ಲುವುದಿಲ್ಲ ಎಂದರು.ಹುವಿನಹಳ್ಳಿ ಗ್ರಾಮದ ಭಾಗಮ್ಮ ದಂಪತಿ ತಮಗೆ ಬಂದಂತ ಗ್ರಹಲಕ್ಷ್ಮಿ ಹಣದಿಂದ ನವರಾತ್ರಿ ನಿಮಿತ್ಯ ಪ್ರತಿಷ್ಠಾಪಿಸಿರುವ ದೇವಿ ಮೂರ್ತಿಗೆ ೨೫೦ ಗ್ರಾಮ ಬೆಳ್ಳಿ ಕೀರಿಟ ಅರ್ಪಿಸಿದ್ದು ಅವರ ಈ ಕಾರ್ಯವನ್ನು ರಾಜ್ಯದ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿಯಲಿದೆ. ಹಾಗೂ ಭಾಗಮ್ಮ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಜಯದಶಮಿಯ ಪ್ರಯುಕ್ತ ಬಸವನ ಬಾಗೇವಾಡಿ ಮತಕ್ಷೇತ್ರದ ಮತದಾರ ಬಂಧುಗಳ ಹಾಗೂ ಸಾರ್ವಜನಿಕರ ಸಂಪರ್ಕದೊಂದಿಗೆ ನಡೆಯುವ ಪರಸ್ಪರ ಬನ್ನಿ ವಿನಿಮಯ ಕಾರ್ಯಕ್ರಮವು ಇದೇ ಅ.೧೩ ರವಿವಾರ ದಿವಸ ಕೊಲ್ಹಾರ ಪಟ್ಟಣದ ಸ್ವಗೃಹದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ತಿಳಿಸಿದರು.ಈ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಅವರು ಎಂದಿನಂತೆ ದಶಕಗಳಿಂದ ನಡೆದುಕೊಂಡು ಬಂದ ಮೈದುಂಬಿ ಹರಿಯುವ ಕೃಷ್ಣಾ ನದಿ ಮಾತೆಗೆ ಗಂಗಾ ಪೂಜೆಯನ್ನು ನೆರವೇರಿಸಲಾಗುವದು ಅಂದು ಗಂಗಾ ಮಾತೆಯ ಭಾವಚಿತ್ರದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರ್ತಿ ಕೊಲ್ಹಾರ ಸೇತುವೆಯ ದಡದಲ್ಲಿ ಸುಮಂಗಲೆಯರ ಆರತಿ ಬೆಳಗುವದರೊಂದಿಗೆ ನದಿಗೆ ಬಾಗೀನ ಅರ್ಪಿಸಲಾಗುವದು ಎಂದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ದೃಷ್ಟಿ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ತ ಗುಣಾರಿ ಜಾಥಾಕೆ ಚಾಲನೆ ನೀಡಿದರು. ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ, ಗಾಂಧಿ ವೃತ್ತ, ಶಿವಾಜಿ ವೃತ್ತದ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯವರೆಗೆ ನಡೆಯಿತು.ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನ್ಯ ಸರ್ವೋಚ್ಛ ನ್ಯಾಯಾಲಯ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ನಿರ್ದೇಶನದಂತೆ ಅಪಘಾತಕ್ಕೆ ಸಂಬಂಧಿಸಿದ ವಿವರವನ್ನು ಎಲ್ಲಾ ಆಸ್ಪತ್ರೆಗಳು e-ಆಂಖ ತಂತ್ರಾಂಶದಲ್ಲಿ (eಟeಛಿಣಡಿoಟಿiಛಿ ಆeಣಚಿiಟeಜ ಂಛಿಛಿiಜeಟಿಣ ಖeಠಿoಡಿಣs) ವರದಿ ಮಾಡುವುದು ಕಡ್ಡಾಯವಾಗಿರುತ್ತದೆ. ಈ ಕುರಿತು ಜಿಲ್ಲಾ ಮಾಹಿತಿ ಕೇಂದ್ರ ವಿಜಯಪುರ ವತಿಯಿಂದ ರಸ್ತೆ ಸಂಚಾರ ಅಪಘಾತಗಳನ್ನು ನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರು, ವೈದ್ಯರು ಸಿಬ್ಬಂದಿಗಳಿಗೆ e-ಆಂಖ ತಂತ್ರಾಂಶದ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾ ಭವನದಲ್ಲಿ ೧೫-೧೦-೨೦೨೪ರಂದು ವಿಜಯಪುರ ನಗರ ಹಾಗೂ ವಿಜಯಪುರ ತಾಲೂಕು ವ್ಯಾಪ್ತಿಗೆ ಒಳಪಡುವ ಖಾಸಗಿ ಆಸ್ಪತ್ರೆಗಳು, ೧೬-೧೦-೨೦೨೪ರಂದು ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ ಹಾಗೂ ಸಿಂದಗಿ ತಾಲೂಕು ವ್ಯಾಪ್ತಿಗೆ ಒಳಪಡುವ ಖಾಸಗಿ ಆಸ್ಪತ್ರೆಗಳ ವೈದ್ಯರು ಸಿಬ್ಬಂದಿಗಳಿಗೆ ಬೆಳಿಗ್ಗೆ ೧೦ ಗಂಟೆಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ತರಬೇತಿಗೆ ರಸ್ತೆ ಸಂಚಾರ ಅಪಘಾತ ನಿರ್ವಹಿಸುವ ಎಲ್ಲಾ ಖಾಸಗಿ ಆಸ್ಪತ್ರೆಗಳ ಮಾಲೀಕರು, ವೈದ್ಯರು ಸಿಬ್ಬಂದಿಗಳು ಕಡ್ಡಾಯವಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ನಗರ ವ್ಯಾಪ್ತಿಯಲ್ಲಿ ಖಾಲಿಯಿರುವ ೩೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೮೬ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ೦೯-೧೧-೨೦೨೪ ಕೊನೆಯ ದಿನವಾಗಿದ್ದು, https//karnemakaone.nic.in/abcdವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಜಯಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಯಕ್ಷೇತ್ರದ ಚಟುವಟಿಕೆಯಲ್ಲಿ ಮಾನಸಿಕ ಒತ್ತಡಗಳಿಂದ ಪಾರಾಗಲು ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಸದೃಢತೆ ಹೊಂದಲು ಸಹಾಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ‘ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ ಈಗ ಬಂದಿದೆ’ ಎಂಬ ಘೋಷವಾಕ್ಯದಡಿಯಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರು ಮನಸ್ ಉಚಿತ ಸಹಾಯವಾಣಿ ೧೪೪೧೬ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದಕೊಳ್ಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮನೋವೈದ್ಯರು,…
ಗ್ರಂಥಾಲಯ ಸ್ಥಳ ವೀಕ್ಷಣೆ ಮಾಡಿದ ಡಿಸಿ ಟಿ.ಭೂಬಾಲನ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನ ಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದAತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಾಧಿಕಾರಿ ರಿಷಿ ಆನಂದ, ಬಸವನ ಬಾಗೇವಾಡಿ ತಹಶೀಲ್ದಾರ್ ವಾಯ್.ಎಸ್. ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ ಸೇರಿದಂತೆ ಅಧಿಕಾರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗವಾಗಿದ್ದು, ಇದು ವಿಶ್ವದಲ್ಲೇ ಅತಿ ದೊಡ್ಡದಾದ ಸಂಪರ್ಕ ಜಾಲವನ್ನು ಹೊಂದಿದೆ. ತಂತ್ರಜ್ಞಾನ ಬೆಳೆದಂತೆ ಇಂದಿನ ಜನರು ಅಂಚೆ ಸೇವೆಗಳ ಬಳಕೆಯನ್ನು ಕಡಿಮೆ ಮಾಡಿದ್ದು ಕಳವಳಕಾರಿಯಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಅವರು ಗುರುವಾರದಂದು ನಾಗಠಾಣ ಗ್ರಾಮದ ಅಂಚೆ ಕಚೇರಿಯಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ಅಂಚೆ ದಿನ’ ವನ್ನು ಉದ್ಧೇಶಿಸಿ ಮಾತನಾಡಿದರು.ಸಾರ್ವಜನಿಕ ಯೋಜನೆಗಳನ್ನು ಸುಲಭಗೊಳಿಸುವಲ್ಲಿ ಅಂಚೆ ಸೇವೆಗಳ ಪಾತ್ರ ಅನನ್ಯ.ಪ್ರಪಂಚದ ನಾನಾ ಭಾಗಗಳ ಜನತೆ, ಸಂಸ್ಥೆಗಳ ನಡುವಿನ ಸಂಪರ್ಕಕ್ಕೆ ಅತ್ಯಂತ ಹಳೆಯ ಸಾಧನವಾಗಿ ಅಂಚೆ ಸೇವೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಮಾತನಾಡಿ, ಅಂಚೆ ಇಲಾಖೆ ಉತ್ತಮ ಗ್ರಾಹಕ ಸ್ನೇಹಿಯಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಸವಲತ್ತುಗಳನ್ನು ಒದಗಿಸುವ ಮೂಲಕ ದೇಶದ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಹೇಳಿದರು.ಸಹಾಯಕ ಅಂಚೆ ಅಧಿಕಾರಿ ಪ್ರಸಾದ ನಾಯ್ಕೋಡಿ, ಯುವ ಮುಖಂಡ ರಾಜು ಕತ್ನಳ್ಳಿ, ಪಿಕೆಪಿಎಸ್ ನಿರ್ದೇಶಕ ಪ್ರಭಾಕರ ಅರಕೇರಿ, ಗ್ರಾಮಸ್ಥರಾದ…
