Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗವಾಗಿದ್ದು, ಇದು ವಿಶ್ವದಲ್ಲೇ ಅತಿ ದೊಡ್ಡದಾದ ಸಂಪರ್ಕ ಜಾಲವನ್ನು ಹೊಂದಿದೆ. ತಂತ್ರಜ್ಞಾನ ಬೆಳೆದಂತೆ ಇಂದಿನ ಜನರು ಅಂಚೆ ಸೇವೆಗಳ ಬಳಕೆಯನ್ನು ಕಡಿಮೆ ಮಾಡಿದ್ದು ಕಳವಳಕಾರಿಯಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಅವರು ಗುರುವಾರದಂದು ನಾಗಠಾಣ ಗ್ರಾಮದ ಅಂಚೆ ಕಚೇರಿಯಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ಅಂಚೆ ದಿನ’ ವನ್ನು ಉದ್ಧೇಶಿಸಿ ಮಾತನಾಡಿದರು.ಸಾರ್ವಜನಿಕ ಯೋಜನೆಗಳನ್ನು ಸುಲಭಗೊಳಿಸುವಲ್ಲಿ ಅಂಚೆ ಸೇವೆಗಳ ಪಾತ್ರ ಅನನ್ಯ.ಪ್ರಪಂಚದ ನಾನಾ ಭಾಗಗಳ ಜನತೆ, ಸಂಸ್ಥೆಗಳ ನಡುವಿನ ಸಂಪರ್ಕಕ್ಕೆ ಅತ್ಯಂತ ಹಳೆಯ ಸಾಧನವಾಗಿ ಅಂಚೆ ಸೇವೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಮಾತನಾಡಿ, ಅಂಚೆ ಇಲಾಖೆ ಉತ್ತಮ ಗ್ರಾಹಕ ಸ್ನೇಹಿಯಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಸವಲತ್ತುಗಳನ್ನು ಒದಗಿಸುವ ಮೂಲಕ ದೇಶದ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಹೇಳಿದರು.ಸಹಾಯಕ ಅಂಚೆ ಅಧಿಕಾರಿ ಪ್ರಸಾದ ನಾಯ್ಕೋಡಿ, ಯುವ ಮುಖಂಡ ರಾಜು ಕತ್ನಳ್ಳಿ, ಪಿಕೆಪಿಎಸ್ ನಿರ್ದೇಶಕ ಪ್ರಭಾಕರ ಅರಕೇರಿ, ಗ್ರಾಮಸ್ಥರಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂದವಾಗಿರುವುದು ಮುಖ್ಯವಲ್ಲ ಆನಂದವಾಗಿರುವುದು ಮುಖ್ಯ. ಬದಲಾವಣೆ ನನ್ನಿಂದ ಪ್ರಾರಂಭವಾದಾಗ ಮಾತ್ರ ಅದು ಕಾರ್ಯಸಾಧ್ಯವಾಗುತ್ತದೆ ಎಂದು ಮಹಿಳಾ ವಿವಿಯ ಎನ್.ಎಸ್.ಎಸ್ ಕೋಶದ ಸಂಯೋಜಕ ಪ್ರೊ.ಎ.ಬಿ.ಸುರಪುರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ “ಸ್ವಚ್ಛತಾ ಹಿ ಸೇವಾ” ಅಂಗವಾಗಿ ಸ್ವಚ್ಛತೆ, ಯೋಗ ಮತ್ತು ಆರೋಗ್ಯ ಎಂಬ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ರೋಗಗಳ ನಿರ್ಮೂಲನೆಗಾಗಿ ನಾವೆಲ್ಲರೂ ಯೋಗ ಮಾಡಬೇಕು ಎಂದರು.ಇದೇ ಸಂದರ್ಭದಲ್ಲಿ ಜ್ಯೋತಿ ಉಪಾಧ್ಯಾಯ ಮಾತನಾಡಿ, ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಮತ್ತು ಸ್ವಚ್ಛತೆ ಬಹು ಮುಖ್ಯ ಎಂದರು.ಇದೇ ಸಂದರ್ಭದಲ್ಲಿ ಪ್ರೊ.ಯು.ಕೆ. ಕುಲಕರ್ಣಿ ಮಾತನಾಡಿ, ವರ್ತಮಾನದ ಒತ್ತಡದ ಬದುಕಿನಲ್ಲಿ ಯಾವ ರೀತಿ ಬದುಕು ಕಂಡುಕೊಳ್ಳಬೇಕು ಎಂಬುದನ್ನು ತಿಳಿಸಿಕೊಟ್ಟರು.ಕಾರ್ಯಕ್ರಮದಲ್ಲಿ ಶಿಕ್ಷಣ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಸವಿತಾ ನಿರೂಪಿಸಿದರು. ಅಮೃತಾ ಸ್ವಾಗತಿಸಿದರು ಹಾಗೂ ಪವಿತ್ರಾ ವಂದಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ನಿರ್ಮಲ ಸಿ ಅವರು ಸಲ್ಲಿಸಿದ್ದ “ಪ್ರಿಸರ್ವೇಶನ್ ಆ್ಯಂಡ್ ಕನ್ರ‍್ವೇಶನ್ ಆಫ್ ಮ್ಯಾನುಸ್ಕಿçಪ್ಟ್ ಇನ್ ದಿ ಲೈಬ್ರರೀಸ್ ಆಫ್ ಕರ್ನಾಟಕ: ಎ ಸ್ಟಡಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ನಿರ್ಮಲ ಸಿ ಅವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಜಿ.ತಡಸದ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ನಿರ್ಮಲ ಸಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಬೇನಾಳ ಆರ್.ಸಿ.ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿಜೇತ ತಂಡಕ್ಕೆ ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಲಾಳಶೀರಿ, ವಿಜಯಪುರ ನಗರ ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಎಸ್ ಜೆ ಬಿರಾದಾರ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಂ. ಪಾಟೀಲ,ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ನಿಡಗುಂದಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರ ಎಸ್.ಎಂ. ಪಾಟಿಲ, ವಿಜಯಪುರ ಜಿಲ್ಲಾ ಕೋಕೋ ಸಂಸ್ಥೆಯ ಗೌರವ ಅಧ್ಯಕ್ಷ ವೀರೇಶ ಗದಗ, ಅಧ್ಯಕ್ಷ ನಾಗಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿ,ಎಸ್.ಎಸ್.ಗೌಡರ, ವೀರೇಶ ಸೇರಿದಂತೆ ಸದಸ್ಯರು ಖೋಖೋ ಪಂದ್ಯಾಟದಲ್ಲಿ ಜಯ ದಾಖಲಿಸಿ ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ಶುಭ ಹಾರೈಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕ ಸರಕಾರಿ‌ ನೌಕರ ಸಂಘದ ನೌಕರರ ಮತದಾರ ಪಟ್ಟಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು ಅದನ್ನು ತೀವ್ರವಾಗಿ ಖಂಡಿಸುತ್ತೆವೆ. ಅದಲ್ಲದೇ ನಿವೃತ್ತ, ಮೈತ, ವರ್ಗಾವಣೆ, ಸತತ ಗೈರು ಹಾಜರಿದ್ದ ಶಿಕ್ಷಕ ನೌಕರರನ್ನು ಮತದಾರ ಪಟ್ಟಿಯಿಂದ ಕೈ ಬಿಡಬೇಕಾಗಿತ್ತು. ಆದರೆ ಮತದಾರ ಪಟ್ಟಿಯಿಂದ ಕೈ ಬಿಡದೆ ಚುನಾವಣೆ ನಡೆಸುತ್ತಿದ್ದು ಅತ್ಯಂತ ನೋವಿನ ವಿಷಯ.‌ ಈ ಕೂಡಲೇ ಮತದಾರ ಪಟ್ಟಿ ಸರಪಡಿಸಿ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ತಾಲ್ಲೂಕು ಘಟಕದಿಂದ ಆಗ್ರಹಿಸುತ್ತೆವೆ ಎಂದು ಅಧ್ಯಕ್ಷ ವಾಯ್ ಟಿ ಪಾಟೀಲ ಹೇಳಿದರು.ಬುಧವಾರ ಪಟ್ಟಣದ ಗುರುಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.2024-29 ರ ವರೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಾಕಾರಿ‌ ಸಮಿತಿ ಚುನಾವಣೆ ಮತದಾರ ಪಟ್ಟಿ ಉದ್ದೇಶಪೂರ್ವಕವಾಗಿ ಅರ್ಹತಾ ಮತದಾರರನ್ನು ಹೊರತು ಪಡಿಸಿ, ಅವರಿಗೆ ಅನುಕೂಲವಾಗುವಂತೆ ಮತದಾರ ಪಟ್ಟಿ ಸಿದ್ದಪಡಿಸಿಕೊಂಡಿದ್ದಾರೆ. ಈ ಸದ್ಯ ಚುನಾವಣೆ ನಾಮ ಪತ್ರ ಸಲ್ಲಿಕೆ ಪ್ರಾರಂಭವಾದರೂ ಮತದಾರ ಪಟ್ಟಿ ಪ್ರಕಟಣೆ ಮಾಡಿರುವುದಿಲ್ಲ‌. ಇನ್ನೂ ಶಿಕ್ಷಣ ಇಲಾಖೆಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ಗುಡಿಗಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಗಮೇಶ ನವಲಿ ಅವರನ್ನು ಕೂಡಲೇ ಅಮಾನತ್ತುಗೊಳಿಸಬೇಕು. ಇಲ್ಲದಿದ್ದಲ್ಲಿ ಲೋಕಾಯುಕ್ತರಿಗೆ ದೂರು ನೀಡಿ ಉಪನಿರ್ದೇಶಕರ ಕಚೇರಿಯ ಎದುರು ಧರಣಿ ನಡೆಸುತ್ತೇವೆ ಎಂದು ಗ್ರಾಮಸ್ಥರು ಉಪನಿರ್ದೇಶಕರಿಗೆ ದೂರಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಸ್ಥ ಅಪ್ಪುಗೌಡ ಮಾಡಗಿ ಕಳೆದ ಕೆಲವು ದಿನಗಳ ಹಿಂದೆ ತಾಲೂಕಿನ ಗುಡಿಹಾಳ ಗ್ರಾಮದ ಪ್ರಭಾರಿ ಶಿಕ್ಷಕ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಟ್ಟಿಲ್ಲ ಅಂತಾ ದಿಢೀರ ಧರಣಿ ನಡೆಸಿದ್ದರು. ಈ ಬಗ್ಗೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಭೇಟಿ ನೀಡಿ ಮುಖ್ಯಾಧಿಕಾರಿಯ ಆರೋಪ ಸಾಬೀತಾದ ಬಗ್ಗೆ ವರದಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಹ ವರದಿ ನೀಡಿದ್ದು ಉಪನಿರ್ದೇಶಕರು ಮಾತ್ರ ಪ್ರಭಾರ ಮುಖ್ಯ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕಾರಣ ನಾವೇ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮನವಿ ನೀಡಿದ್ದೇವೆ. ಕೂಡಲೇ ಕ್ರಮ ವಹಿಸದಿದ್ದಲ್ಲಿ ಕಚೇರಿಯ ಎದುರು ಹೋರಾಟ ನಡೆಸುತ್ತೇವೆ…

Read More

ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಿನ್ನೆ ಮೊನ್ನೆಯವರೆಗೂ ನಮ್ಮೊಂದಿಗೆ ಹಾಳು ಹರಟೆ ಹೊಡೆಯುತ್ತಿದ್ದವನು ನೋಡು ನೋಡುವುದರಲ್ಲಿ ಯಶಸ್ಸಿನ ಶಿಖರಕ್ಕೆ ತಲುಪಿದ್ದಾನೆ/ಳೆ ಅಂದರೆ ನಂಬಲು ಆಗುತ್ತಿಲ್ಲ. ಕೊನೆ ಬೆಂಚಿನಲ್ಲಿ ಕುಳಿತುಕೊಳ್ಳುತ್ತಿದ್ದವಳು ದೊಡ್ಡ ಅಧಿಕಾರಿ ಆಗಿದ್ದಾಳೆ. ಅದ್ಹೇಗೆ ಸಾಧ್ಯವಾಯಿತು? ನಾವೆಲ್ಲ ಅವಳಿಗಿಂತ ಓದಿನಲ್ಲಿ ಬಹಳ ಮುಂದೆ ಇದ್ದೆವು. ಕಂಪ್ಯೂಟರ್ ಪರದೆ ತೆರೆಯಲು ಬರದವನು ಈಗ ಹೈಟೆಕ್ ಜೀವನ ಸಾಗಿಸುತ್ತಿದ್ದಾನೆ. ಇಂಥ ವಿಚಿತ್ರಗಳನ್ನು ಪಟ್ಟಿ ಮಾಡುತ್ತ ಹೋದರೆ ಹನುಮನ ಬಾಲದಂತೆ ಬೆಳೆಯುತ್ತಲೇ ಹೋಗುತ್ತದೆ. ಹಾಗಾದರೆ ಮೊದಲು ಏನೂ ಇಲ್ಲದ ಪರಿಸ್ಥಿತಿಯಲ್ಲಿದ್ದವರು ನಂತರ ಏನೆಲ್ಲ ಪಡೆಯುವ ಸ್ಥಿತಿಗೆ ಹೇಗೆ ತಲುಪಿದರು ಎಂದು ಯೋಚಿಸಿದರೆ ನಮಗೆ ಉತ್ತರವಾಗಿ ಸಿಕ್ಕುವುದು ನಮ್ಮ ಆಯ್ಕೆಗಳು. ಹುಟ್ಟಿದಾಗ ನಾವೆಲ್ಲ ರಕ್ತ ಮಾಂಸದ ಮುದ್ದೆಗಳು ಬಿಟ್ಟರೆ ಮತ್ತೇನಿಲ್ಲ. ಕಣ್ಣು ಬಿಟ್ಟು ನೋಡುತ್ತ, ಕಿವಿಯಿಂದ ಆಲಿಸುತ್ತ, ಬಾಯಿಯಿಂದ ಆಸ್ವಾದಿಸುತ್ತ, ಮೂಗಿನಿಂದ ಆಘ್ರಾಣಿಸುತ್ತ, ಕೈಗಳಿಂದ ಸ್ಪರ್ಷಿಸುತ್ತ ತೇಟು ಪ್ರಾಣಿಯಂತೆ ಇರುತ್ತೇವೆ. ಹುಟ್ಟುವಾಗ ಎಲ್ಲರೂ ಒಂದೇ ಇದ್ದೆವು ಆದರೆ ನಮ್ಮೆಲ್ಲರ ಬದುಕು ಭಿನ್ನ ವಿಭಿನ್ನ ಹೇಗಾಯ್ತು?…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ನಾಡು-ನುಡಿ, ನೆಲ, ಜಲ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿ ವರ್ಷ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಕನ್ನಡ ಸಾಹಿತ್ಯದ ಮಹತ್ವವನ್ನು ಸಾರುವ ಈ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು.ನಗರದ ಕನ್ನಡಾಂಬೆ ವೃತ್ತದಲ್ಲಿ ಮಂಡ್ಯದಲ್ಲಿ ನಡೆಯುವ ೮೭ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜ್ಯೋತಿ ರಥವನ್ನ ತಾಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಭವ್ಯವಾಗಿ ಬರಮಾಡಿಕೊಂಡು ಮಾತನಾಡಿದ ಅವರು, ಕನ್ನಡ ಕೇವಲ ಭಾಷೆಯಲ್ಲ. ತನ್ನದೇ ಆದ ನೆಲ, ಜಲ, ಸಂಸ್ಕೃತಿಯ ಹಿರಿಮೆಯನ್ನು ಒಳಗೊಂಡಿದೆ. ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.ಇದೇ ಸಂದರ್ಭದಲ್ಲಿ ಅಶೋಕ ಅಲ್ಲಾಪುರ, ಶೋಭಾ ಚಿಗರಿ ಮಾತನಾಡಿ, ಡಿ.೨೦ ರಿಂದ ೨೨ರವರೆಗೆ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ…

Read More

ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ “ಮಾಸ್ಟರ್‌ಮೈಂಡ್” ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ | ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯ ನವದೆಹಲಿ: ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ “ಮಾಸ್ಟರ್‌ಮೈಂಡ್” ಆಗಿದ್ದು, ಈ ಹಿಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗೆ ರಾಜ್ಯ ಸರ್ಕಾರದ ಸಂಸ್ಥೆಯಿಂದ ಬೇರೆಡೆಗೆ ವರ್ಗಾಯಿಸಲಾದ ಹಣವನ್ನು ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಹೇಳಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಕೇಂದ್ರ ತನಿಖಾ ಸಂಸ್ಥೆಯೂ ಪ್ರಾಸಿಕ್ಯೂಷನ್ ದೂರು ಅಥವಾ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿಸಿದೆ.ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಇಡಿ ಹೇಳಿದೆ.ಮಾಜಿ ಸಚಿವ ಬಿ ನಾಗೇಂದ್ರವಾಲ್ಮೀಕಿ ಹಗರಣ: ಇಡಿ ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಕಿಂಗ್‌ಪಿನ್”ಸತ್ಯನಾರಾಯಣ ವರ್ಮ, ಏಟಕಾರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕೆಂಟಿ ನಾಗರಾಜ್…

Read More