Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನ ಸೆರಬಲ್ ಪಾಲ್ಸಿ, ಮಸ್ಕ್ಯುಲರ್, ಡಿಸ್ಟೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.೧,೦೦೦ ಪ್ರೋತ್ಸಾಹಧನವನ್ನು ನೀಡುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.೩೦-೧೦-೨೦೨೪ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕವಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದವರನ್ನು ಹೊರತುಪಡಿಸಿ ಉಳಿದ ಮೇಲಿನ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತ ಕಾರ್ಯಾಲಯಗಳಲ್ಲಿ ಕಾರ್ಯಾನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ರವಿ ರಾಠೋಡ (ವಿಜಯಪುರ-೯೦೦೩೫೫೫೩೩೭), ಪರಶುರಾಮ ಬೋಸಲೆ (ಇಂಡಿ-೯೯೭೨೪೪೧೪೬೪), ಮುತ್ತುರಾಜ ಸಾತಿಹಾಳ (ಸಿಂದಗಿ-೯೯೮೦೦೧೯೬೩೫), ಎಸ್. ಡಿ ಬಿರಾದಾರ (ಬಸವನ ಬಾಗೇವಾಡಿ- ೮೭೨೨೧೩೫೬೬೦) ಹಾಗೂ ಎಸ್.ಕೆ. ಘಾಟಿ (ಮುದ್ದೇಬಿಹಾಳ- ೯೭೪೦೬೮೨೯೭೯) ಹಾಗೂ ಕಚೇರಿ ದೂರವಾಣಿ ಸಂಖ್ಯೆ೦೮೩೫೨-೭೯೬೦೬೦ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳಾದ ಶ್ರೀಮತಿ ಸವಿತಾ ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಇವರ ವತಿಯಿಂದ ಅಂಗವಿಕಲರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ, ಹಾಗೂ ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ೧೫-೧೦-೨೦೨೪ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾತಯ ಆವರಣ ಅಥವಾ ದೂರವಾಣಿ ಸಂಖ್ಯೆ: ೦೮೩೫೬-೭೯೬೦೬೦ಗೆ ಅಥವಾ WWW.dwdsc.kar.nic.in ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಸವಿತಾ ಕಾಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತವು ಹಲವು ವೈವಿಧ್ಯಗಳನ್ನು ಒಳಗೊಂಡ ದೇಶವಾಗಿದ್ದು, ಕರ್ನಾಟಕ ತನ್ನದೇಯಾದ ವಿಶಿಷ್ಟತೆ ಹೊಂದಿದ್ದು, ರಾಜ್ಯದ ಜನರ ದೈನಂದಿನ ಜೀವನದ ಕನ್ನಡ ಭಾಷೆಯ ಬಗ್ಗೆ ನಿರಂತರವಾಗಿ ಅಭಿಮಾನವಿರಲಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಬುಧವಾರ ಅವರು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ, ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನ್ನಡ ಜ್ಯೋತಿ ರಥ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಂಚರಿಸಲಿದೆ. ಕನ್ನಡ ಜ್ಯೋತಿ ರಥಕ್ಕೆ ಸಾರ್ವಜನಿಕರು ಅಭೂತಪೂರ್ವ ಸ್ವಾಗತ ಕೋರಿ ಕನ್ನಡ ಸಾಹಿತ್ಯ ಸಮೇಳನದ ಯಶಸ್ಸಿಗೆ ಸಹಕರಿಸಬೇಕು. ಪ್ರತಿಯೊಬ್ಬರೂ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ದಿನವೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳಸಿಕೊಳ್ಳಬೇಕು. ನಾಡುನುಡಿಯ ಬಗ್ಗೆ ನಿರಂತರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಿನಾಂಕ ೦೮-೦೯-೨೦೨೪ರಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಜೆಡ್.ಜಮೀರ್‌ಅಹ್ಮದ ಖಾನ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೈರಾಗಿರುವ ಸಿಂದಗಿಯ ಪುರಸಭೆಯ ಮುಖ್ಯಾಧಿಕಾರಿ ಸುರೇಶ ನಾಯಕ ಅಮಾನತಿಗೆ ಸೂಚಿಸಿದ್ದರು.ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ನಜರಚೂಕಿನಿಂದ/ಕಣ್ತಪ್ಪಿನಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತಿಗೆ ಸೂಚಿಸಿದ್ದಾರೆ ಎಂದು ಸುದ್ದಿ ಬಿಡುಗಡೆಯಾಗಿತ್ತು. ಇದನ್ನು ಪುರಸಭೆಯ ಮುಖ್ಯಾಧಿಕಾರಿ ಸುರೇಶ ನಾಯಕ ಅವರನ್ನು ಅಮಾನತಿಗೆ ಸೂಚನೆ ನೀಡಿದ್ದಾರೆ ಎಂದು ತಿದ್ದುಪಡಿಯಾಗಿ ಮರು ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರದಂದು ಜರುಗಿದ ಅಂತರ್ ವಲಯ ಮಟ್ಟದ ಪುರುಷರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಬಿಎಡ್ ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ವಿಜಯಶಾಲಿಗಳಾಗುವ ಮೂಲಕ ಚಾಂಪಿಯನ್‌ರಾಗಿ ಹೊರಹೊಮ್ಮಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ರಾಜಶೇಖರ ಚವ್ಹಾಣ್, ಕಾಲೇಜು ಪ್ರಾಚಾರ್ಯರು ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರದಂದು ಜರುಗಿದ ಅಂತರ್ ವಲಯ ಮಟ್ಟದ ಪುರುಷರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಬಿಎಡ್ ಕಾಲೇಜಿನ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ವಿಜಯಶಾಲಿಗಳಾಗುವ ಮೂಲಕ ಚಾಂಪಿಯನ್‌ರಾಗಿ ಹೊರಹೊಮ್ಮಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷರಾದ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ರಾಜಶೇಖರ ಚವ್ಹಾಣ್, ಕಾಲೇಜು ಪ್ರಾಚಾರ್ಯರು ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಶಿವಾಜಿ ಗಲ್ಲಿಯಲ್ಲಿರುವ ಅಂಬಾಭವಾನಿ ದೇವಸ್ಥಾನದಲ್ಲಿ ಅ.೧೧ ರಂದು ಸಂಜೆ ೬ ಗಂಟೆಗೆ ನವರಾತ್ರಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಮುಖ್ಯ ಅತಿಥಿಗಳಾಗಿ ಅಂಬಾಭವಾನಿ ದೇವಸ್ಥಾನದ ಅಧ್ಯಕ್ಷ ಯಮನೂರಿ ಬಿದರಕುಂದಿ, ಅತಿಥಿಗಳಾಗಿ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಕೆಕೆಎಂಪಿ ಅಧ್ಯಕ್ಷ ಬಸವರಾಜ ಬಿಜಾಪುರ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಪುರಸಭೆ ಸದಸ್ಯರಾದ ರವಿ ಪಟ್ಟಣಶೆಟ್ಟಿ, ಅಶೋಕ ಗುಳೇದ, ರಾಷ್ಟ್ರೀಯ ಬಸವ ಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಗಣ್ಯ ವ್ಯಾಪಾರಸ್ಥ ಶಿವಪುತ್ರ ಕೆಂಭಾವಿ, ಯುವ ಮುಖಂಡರಾದ ಬಸವರಾಜ ಕೋಟಿ, ಸಂಗಮೇಶ ಓಲೇಕಾರ, ರವಿ ಚಿಕ್ಕೊಂಡ, ಸುರೇಶ ಪಡಶೆಟ್ಟಿ, ಮುದಕಣ್ಣ ಗೊಳಸಂಗಿ ಆಗಮಿಸುವರು ಎಂದು ಅಂಬಾಭವಾನಿ ದೇವಸ್ಥಾನದ ನವರಾತ್ರಿ ಉತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಹತ್ತರಕಿಹಾಳ ಗ್ರಾಮದ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಅ. ೧೨ ರಂದು ಬೆಳಗ್ಗೆ ೧೦.೩೦ ಗಂಟೆಗೆ ಶ್ರೀರಾಮ, ಲಕ್ಷ್ಮಣ, ಸೀತಾ, ಹನುಮ ಮತ್ತು ವಶಿಷ್ಠ, ವಾಲ್ಮೀಕಿ ಮಹರ್ಷಿ ದೇವರುಗಳ ನೂತನ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ನಾಡದೇವಿಯ ಆರಾಧನೆಯಂಗವಾಗಿ ಧರ್ಮ ಸಭೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಮನಗೂಳಿಯ ಅಭಿನವ ಸಂಗನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಪ್ರವಚನಕಾರ ಕಲಬುರ್ಗಿಯ ಶಂಕ್ರೆಮ್ಮ ತಾಯಿಯವರು ವಹಿಸುವರು. ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಹಿಸುವರು. ಸಚಿವ ಶಿವಾನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೋಮನಗೌಡ ಪಾಟೀಲ ಮನಗೂಳಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕಲ್ಲು ದೇಸಾಯಿ ಆಗಮಿಸುವರು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ ಹನುಮ, ವಶಿಷ್ಠ, ವಾಲ್ಮೀಕಿ ಮಹರ್ಷಿ ದೇವರುಗಳ ನೂತನ ಮೂರ್ತಿಗಳ ಮೆರವಣಿಗೆ ಕಾರ್ಯಕ್ರಮಕ್ಕೂ ಮುನ್ನ ಪೂರ್ಣಕುಂಭ ಮೇಳದೊಂದಿಗೆ ನಡೆಯಲಿದೆ ಎಂದು ಗ್ರಾಮದ ಈರಣ್ಣ ಕಲ್ಯಾಣಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ೧೨ ನೇ ಶತಮಾನದ ಅವಿರಳಜ್ಞಾನಿ ಚನ್ನಬಸವಣ್ಣನವರ ಕರಣ ಹಸಿಗೆಯಲ್ಲಿ ನಮ್ಮ ದೇಹದ ಪ್ರತಿಯೊಂದು ಅಂಗಗಳ ಬಗ್ಗೆ ವೈಜ್ಞಾನಿಕವಾಗಿ ನಿರೂಪಿಸಲಾಗಿದೆ. ಎಲ್ಲ ಧರ್ಮದವರಿಗೂ ಅನ್ವಯವಾಗುವ ಕರಣ ಹಸಿಗೆ ಅರಿತುಕೊಂಡರೆ ಎಲ್ಲರೂ ಆರೋಗ್ಯಕರವಾದ ಜೀವನ ನಡೆಸಲು ಪೂರಕವಾಗುತ್ತದೆ ಎಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಸಮೀಪವಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡದಲ್ಲಿ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ಚನ್ನಬಸವ ಸ್ವಾಮೀಜಿಗಳಿಂದ ಹನ್ನೊಂದು ದಿನಗಳ ಕಾಲ ಜರುಗಿದ ಚನ್ನಬಸವಣ್ಣನವರ ಕರಣ ಹಸಿಗೆ ಪ್ರವಚನದ ಮುಕ್ತಾಯ ಸಮಾರೋಪದಂಗವಾಗಿ ಸೋಮವಾರ ಜರುಗಿದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕರಣ ಹಸಿಗೆ ಯಾವುದೇ ಜನಾಂಗ, ಯಾವುದೇ ಧರ್ಮಕ್ಕೆ ಸಿಮೀತವಾಗಿರದೇ ಎಲ್ಲ ಧರ್ಮ, ಜನಾಂಗದವರಿಗೆ ಅನ್ವಯವಾಗುತ್ತದೆ. ಇದು ಇಂದಿನ ವೈದ್ಯಕೀಯ, ವಿಜ್ಞಾನ ಲೋಕಕ್ಕೆ ಇಂದಿಗೂ ಸವಾಲಾಗಿದೆ ನಿಂತಿದೆ. ದೇಹದ ಪ್ರತಿಯೊಂದು ಭಾಗಗಳನ್ನು ವೈಜ್ಞಾನಿಕ ಹಿನ್ನೆಲೆಯಲ್ಲಿ ಕರಣ ಹಸಿಗೆಯಲ್ಲಿ ನಿರೂಪಿಸಲ್ಪಟ್ಟಿವೆ. ಇಂತಹ ಕರಣ ಹಸಿಗೆಯನ್ನು ಸಾಮಾನ್ಯ ಜನರಿಗೂ ತಿಳಿಯುವ ರೀತಿಯಲ್ಲಿ ಪ್ರವನಚನಗೈದಿರುವ ಹಿರಿಯ ಸ್ವಾಮೀಜಿಗಳಾದ ಚನ್ನಬಸವ…

Read More

ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ರಾಜ್ಯಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ ಮಹಿಳೆಯರ ಸಬಲಿಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕರಾದ ಸಂತೋಷ ಕುಮಾರ ರೈ. ಅವರು ಹೇಳಿದರು.ಚಡಚಣ ಪಟ್ಟಣದ ಗೋಡಿಹಾಳ ರಸ್ತೆಯಲ್ಲಿರುವ ಶ್ರೀ ಗುರು ಕೃಪಾ ಮಂಗಲ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ(ರಿ) ಇಂಡಿ ಇವರು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಡತನ ರೇಖೆಯಲ್ಲಿರುವ ಗ್ರಾಮೀಣ ಭಾಗದ ಮಹಿಳೆಯರ ಜೀವನ ಮಟ್ಟವನ್ನು ಸುಧಾರಿಸುತ್ತಿದೆ. ಮಹಿಳೆಯರು ಸಂಘದಿಂದ ಸಾಲ-ಸೌಲಭ್ಯವನ್ನು ಪಡೆದು ಕಾಲಮಿತಿಯಲ್ಲೇ ಸರಿಯಾಗಿ ಸಾಲ ಮರುಪಾವತಿಸುವ ಮೂಲಕ ಹೆಚ್ಚಿನ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಕಾಶೀಬಾಯಿ ವಾಲಿಕಾರ ಅವರು, ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರಾದ ಮೇಲೆ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಇದರಿಂದ ಸಮಾಜದ ಮುಖ್ಯ ವಾಹಿನಿಗೆ ಮಹಿಳೆಯರು ಬರಲು ಸಾದ್ಯವಾಗುತ್ತಿದೆ ಎಂದರು.ಈ…

Read More