Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಸೇರಿದಂತೆ ತಾಲೂಕಿನ ಹಲವೆಡೆ ಅಪಘಾತಗಳು ಹೆಚ್ಚುತ್ತಿದ್ದು ಇವುಗಳ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯಿಂದ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಿ ಜಾಗೃತಿ ಮೂಡಿಸಿದರು.ಅತೀ ವೇಗ, ತ್ರಿಬಲ್ ರೈಡರ್, ಮಧ್ಯದ ಅಮಲಿನಲ್ಲಿ ವಾಹನ ಚಲಾಯಿಸುವವರಿಗೆ ಎಚ್ಚರಿಸಲು ನಿಂತಿರುವ ಭಂಗಿಯಲ್ಲಿನ ಪೊಲೀಸ್ ಪೇದೆಯ ಕಟೌಟ್ಗಳನ್ನು ರಸ್ತೆಗಳ ತಿರುವು, ಅಪಘಾತ ವಲಯಗಳಲ್ಲಿ ಅಳವಡಿಸಲಾಗಿದೆ. ರಿಕ್ಷಾವಾಲಾ ಗಳು ಅತಿಯಾದ ವೇಗದಲ್ಲಿ ಚಲಿಸದಂತೆ, ಹೆಚ್ಚಿನ ಗ್ರಾಹಕರನ್ನು ಅಟೋದಲ್ಲಿ ಕೂಡಿಸದಂತೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್‌ಎಲ್ ಮನ್ನಾಬಾಯಿ ಅಟೋ ಸ್ಟ್ಯಾಂಡ್ ಗೆ ತೆರಳಿ ತಿಳಿ ಹೇಳಿದರು.ಅಟೋಗಳನ್ನು ಬೇಗನೆ ಗುರುತಿಸಲು ಎಲ್ಲ ಅಟೋಗಳಿಗೆ ನಂಬರ್ ಗಳನ್ನು ಅಳವಡಿಸಿದರು. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬಿಸಿ ಮುಟ್ಟಿಸಿದರು. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: 12 ನೇ ಶತಮಾನದ ಬಸವಾದಿ ಶರಣರ ಬಗ್ಗೆ ಅವಮಾನಕಾರಿಯಾಗಿ ಚಿತ್ರಿಸಿ ಬಿಡುಗಡೆಗೆ ಸಜ್ಜಾಗಿರುವ ಶರಣರ ಶಕ್ತಿ ಚಲನಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಬಾ. ಮಾ. ಗಿರೀಶ ಅವರಿಗೆ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹಾಗೂ ನ್ಯಾಯವಾದಿ ರವಿ ರಾಠೋಡ ಅವರು ದೂರನ್ನು ಸಲ್ಲಿಸಿ ವಿವಾದಾತ್ಮಕ ಶರಣರ ಶಕ್ತಿ ಚಲನಚಿತ್ರವನ್ನು ಯಾವುದೇ ಕಾರಣಕ್ಕೂ ಬಿಡುಗಡೆಗೊಳಿಸಬಾರದು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಕರ್ನಾಟಕ ಸರ್ಕಾರ ಇತ್ತೀಚೆಗೆ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಕೆಲವು ಜನರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದಾಗಿ ಬಸವಾದಿ ಶರಣರ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಚಲನಚಿತ್ರದಲ್ಲಿ ಬಸವಣ್ಣನವರ ಅಕ್ಕ ಅಕ್ಕನಾಗಮ್ಮ ಅವರ ವೈವಾಹಿಕ ಜೀವನದ ಬಗ್ಗೆ ಅಸಭ್ಯವಾಗಿ ತೋರಿಸಿದ್ದಾರೆ. ಚಲನಚಿತ್ರದಲ್ಲಿ ಜಾತಿ ಜಾತಿಗಳ ಮಧ್ಯೆ ದ್ವೇಷ ಬರುವ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಒಟ್ಟಾರೆ ಚಲನಚಿತ್ರದಲ್ಲಿ ಶರಣರ ನೈಜ ಜೀವನದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ಮತ್ತು ಇತರೆ ವ್ಯಾಜ್ಯಗಳಲ್ಲಿ ಕಾನೂನು ಸಲಹೆ ನೀಡಲು ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೧೯-೧೦-೨೦೨೪ರವರೆಗೆ ವಿಸ್ತರಿಸಲಾಗಿದೆ.ಆಸಕ್ತರು ನಿಗದಿತ ಅವಧಿಯ ಒಳಗೆ ಸ್ವವಿವರವುಳ್ಳ ಬಯೋಡಾಟಾವನ್ನು ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೯೪೮೨೯೪೫೧೦೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವಿಜಯಪುರ ವತಿಯಿಂದ ೨೦೨೪-೨೫ನೇ ಸಾಲಿನ ಆಯವ್ಯಯ ಕಂಡಿಕೆ ೨೫(೩)ರಲ್ಲಿ ಘೋಷಿಸಿರುವ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ವಿಜಯಪುರ ಜಿಲ್ಲೆಯಲ್ಲಿರುವ ಕನಿಷ್ಠ ೨೦ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಸದರಿ ಯೋಜನೆಯ ಸೌಲಭ್ಯ ಪಡೆಯಲು ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ, ಪಶು ವೈದ್ಯಾಧಿಕಾರಿಗನ್ನು ಸಂಪರ್ಕಿಸಿ ನಿಗಧಿತ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರು ಪ್ರಮಾಣ ಪತ್ರ ಪಡೆದು ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ ೨೦ ಕುರಿ/ಮೇಕೆ ಹೊಂದಿರುವ ಧೃಡೀಕರಣ ಪತ್ರ ಪಡೆದು ಸೂಕ್ತ ದಾಖಲೆಗಳೊಂದಿಗೆ ಪಶು ಚಿಕಿತ್ಸಾಲಯ, ಕಚೇರಿಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಹಾಯಕ ನಿರ್ದೇಶಕರ ಕಚೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಅಥವಾ ದೂರವಾಣಿ ಸಂಖ್ಯೆ : ೦೮೩೫೨-೨೦೦೦೭೯ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ…
ರಾಜಕಾಲುವೆ ಒತ್ತುವರಿ ತೆರವಿಗೆ ಡಿಸಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಬಲೇಶ್ವರ ನಾಕಾದ ಹತ್ತಿರವಿರುವ ಮುಜಾವರ ಗಲ್ಲಿ, ಬಾಗವಾನ ಕಾಲೋನಿ ಸೇರಿದಂತೆ ವಿವಿಧೆಡೆ ರಾಜಕಾಲುವೆ ಒತ್ತುವರಿ ತೆರವಿಗೆ ಪ್ರಾಚ್ಯವಸ್ತು ಇಲಾಖೆ, ಭೂಮಾಪನ ಹಾಗೂ ಮಹಾನಗರ ಪಾಲಿಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.ಮಂಗಳವಾರ ನಗರದ ರಹೀಮನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರ ಅವರು, ರಾಜಕಾಲುವೆ ಒತ್ತುವರಿಯಿಂದ ಮಳೆಯ ನೀರು ಸರಾಗವಾಗಿ ಹರಿಯದೇ ರಸ್ತೆ, ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒತ್ತುವರಿ ತೆರವಿಗೆ ಮುಂದಾಗಬೇಕು. ಇಬ್ರಾಹಿಂರೋಜಾದಿದ ಬಬಲೇಶ್ವರ ನಾಕದವರೆಗೆ ರಾಜಕಾಲುವೆಯ ಅಕ್ಕಪಕ್ಕ ಅತಿಕ್ರಮಣ ಮಾಡಿದವರನ್ನು ತೆರವುಗೊಳಿಸಬೇಕು. ಅತಿಕ್ರಮಣ ಮಾಡಿದವರಿಗೆ ಬೇರೆ ಕಡೆ ಸ್ಥಳಾಂತರ ಮಾಡಿಸುವಲ್ಲಿ ಅಧಿಕಾರಿಗಳು ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.ಈ ಸಂದರ್ಭ ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಪ್ರಾಚ್ಯವಸ್ತು ಇಲಾಖೆ, ಭೂಮಾಪನ ಇಲಾಖೆ, ಡಿಡಿಎಲ್‌ಆರ್, ಎಡಿಎಲ್‌ಆರ್ ಅಧಿಕಾರಿ, ಸಿಬ್ಬಂದಿಗಳು ಇದ್ದರು.
ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ | ವಕ್ಫ್ ಆಸ್ತಿ ಖಾತೆ ಬದಲಾವಣೆ | ಫ್ಲ್ಯಾಗಿಂಗ್ ಕಾರ್ಯ ೪೫ ದಿನಗಳಲ್ಲಿ ಪೂರ್ಣಗೊಳಿಸಲು ಸಚಿವರ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮುಂದಿನ ಒಂದು ತಿಂಗಳೊಳಗಾಗಿ ವಕ್ಫ್ ಖಾತೆ ಬದಲಾವಣೆ, ಫ್ಲ್ಯಾಗಿಂಗ್ ಸೇರಿದಂತೆ ಸೂಕ್ತ ಪ್ರಗತಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್‌ಅಹ್ಮದ ಖಾನ್ ಸೂಚಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತ ವಿರುವ ೨೧೪೮ ಆಸ್ತಿಗಳ ಪೈಕಿ ೧೦೯ ಆಸ್ತಿಗೆ ಸಂಬಂಧಿಸಿದಂತೆ ಮಾತ್ರ ಖಾತೆ ಬದಲಾವಣೆ ಮಾಡಲಾಗಿದ್ದು, ೨೦೩೯ ಖಾತೆ ಬದಲಾವಣೆ ಬಾಕಿ ಇದೆ. ಶೇ.೫.೦೭ ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಈ ಪ್ರಮಾಣ ಹೆಚ್ಚಾಗಿದೆ. ವಿಜಯಪುರ…
ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಪ್ರದೇಶಗಳ ರಸ್ತೆಗಳು, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿದಾಗ ಗ್ರಾಮೀಣ ಪ್ರದೇಶಗಳು ಅಭಿವೃದ್ದಿಯಾಗುವುದರೊಂದಿಗೆ ದೇಶದ ಉನ್ನತಿಗೂ ಕಾರಣವಾಗುತ್ತವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಜಿಲ್ಲಾಪಂಚಾಯತ ವಿಜಯಪುರ ಪಂಚಾಯತ ರಾಜ್ಯ ಇಂಡಿ ಉಪ ವಿಭಾಗ ಸಿಂದಗಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಗ್ರಾಮದ ವಾರ್ಡ ೪ ರಲ್ಲಿ ರೂ ೪೦ ಲಕ್ಷದಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ೨೦೨೩-೨೪ ನೇ ಸಾಲಿನ ಸ್ಥಳಿಯ ಶಾಸಕರ ಪ್ರದೇಶ ಅಭಿವೃದ್ದಿ ಯೋಜನೆಯಡಿಯಲ್ಲಿ ಜಟ್ಟಿಂಗರಾಯ ದೇವಸ್ಥಾನದ ಹತ್ತಿರ ರೂ ೪ ಲಕ್ಷದಲ್ಲಿ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ಮೂಲಬೂತ ಸೌಕರ್ಯಗಳಿಂದ ವಂಚಿತರಾಗಬಾರದು. ಈ ದೇಶ ಹಳ್ಳಿಗಳಿಂದ ಕೂಡಿದ ದೇಶ. ಮತ ಕ್ಷೇತ್ರದ ಪ್ರತಿ ಹಳ್ಳಿಗಳು ಎಲ್ಲ ಮೂಲಭೂತ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮನುಷ್ಯನಿಗೆ ಭಕ್ತಿ ವಿನಯ ಕಲಿಸುತ್ತದೆ. ಭಕ್ತಿಯಿದ್ದರೆ ದೇವರು ಒಲಿಯುತ್ತಾನೆ. ಭಕ್ತಿಯಿದ್ದರೆ ಶ್ರೀಮಂತರಾಗಲು ಸಾಧ್ಯ. ಇದಕ್ಕಾಗಿ ಪ್ರತಿಯೊಬ್ಬರಲ್ಲಿ ಭಕ್ತಿ ಇರಬೇಕೆಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಜಗದ್ಗುರು ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಅಗಸಿ ಆವರಣದಲ್ಲಿ ಗ್ರಾಮದ ಹಿರೇಮಠದ ಆನಂದದೇವರು ನೇತೃತ್ವದಲ್ಲಿ ಹನ್ನೆರಡು ದಿನಗಳ ಕಾಲ ಹಮ್ಮಿಕೊಂಡಿರುವ ಬಸವನಾಡ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಕಾರ್ಯಕ್ರಮ ಮುನ್ನ ಹಾನಗಲ್ಲ ಗುರು ಕುಮಾರೇಶ್ವರ ಶಿವಯೋಗಾಶ್ರಮದ ಅಡಿಗಲ್ಲು ನೆರವೇರಿಸಿದ ನಂತರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಹಾನಗಲ್ಲ ಗುರು ಕುಮಾರೇಶ್ವರರು ಸಮಾಜಕ್ಕೆ ದಿಕ್ಕು ತೋರಿಸಿದರು. ಅವರು ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ ಮಾಡುವ ಮೂಲಕ ಸಮಾಜದ ಏಳ್ಗೆಗೆ ಶ್ರಮಿಸಿದರು. ಅವರ ಹೆಸರಿನಲ್ಲಿ ಈ ಗ್ರಾಮದಲ್ಲಿ ಶಿವಯೋಗಾಶ್ರಮ ಆರಂಭವಾಗುತ್ತಿರುವದು ಈ ನಾಡಿಗೆ ಒಳಿತಾಗುವದರಲ್ಲಿ ಸಂದೇಹವಿಲ್ಲ. ಈ ಗ್ರಾಮದ ಹಿರೇಮಠದ ಚಿಕ್ಕವಯಸ್ಸಿನ ಆನಂದದೇವರು ಕ್ರಿಯಾಶೀಲ ಸಾಧಕರಾಗಿದ್ದಾರೆ. ಅವರು ಸಮಾಜ ಅಭಿವೃದ್ಧಿಗೆ ಸದಾ ಬದ್ಧರಾಗಿರುವದು ಅವರ ಸೇವಾ ಕೈಂಕರ್ಯ ತೋರಿಸುತ್ತಿದೆ. ಸಮಾಜಕ್ಕೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವದೆಹಲಿಯ ಎಂಎಂಟಿಸಿಸಿ ಕಾಲ್ಸ್ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನ್ಯಾಕ್ ಸಮಿತಿ, ಮಹಿಳಾ ಘಟಕದ ಸಹಯೋಗದಲ್ಲಿ ಮಂಗಳವಾರ ಕ್ಯಾನ್ಸರ್ ರೋಗದ ಅರಿವು-ಜಾಗೃತಿ ಮೂಡಿಸುವ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮದಲ್ಲಿ ತಾಲೂಕು ಆಸ್ಪತ್ರೆಯ ಪ್ರಸೂತಿ ಮತ್ತು ಹೆರಿಗೆ ತಜ್ಞ ವೈದ್ಯರಾದ ಡಾ. ಭಾಗ್ಯಲಕ್ಷ್ಮೀ ಗೋನಾಳ ಅವರು ಸ್ತನ್ ಕ್ಯಾನ್ಸರ್ ಮತ್ತು ಗರ್ಭಕಂಠ ಕ್ಯಾನ್ಸರ್ ಕುರಿತು ಮಾತನಾಡಿ, ಕ್ಯಾನ್ಸರ್ ಪ್ರಪಂಚದಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ಹೆಚ್ಚಿನ ಜೀವಗಳನ್ನು ತೆಗೆದುಕೊಳ್ಳುತ್ತದೆ. ರೋಗನಿರ್ಣಯ ಮತ್ತು ಚಿಕಿತ್ಸೆಯಲ್ಲಿ ಪ್ರಗತಿಗಳ ಹೊರತಾಗಿಯೂ ವಿಶ್ವಾದ್ಯಂತ ಕ್ಯಾನ್ಸರ್ ಪ್ರಮಾಣ ಮತ್ತು ವರ್ಷಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದು ವಿಷಾದಕರ ಸಂಗತಿ. ಕ್ಯಾನ್ಸರ್ ಗಂಭೀರ ಸಮಸ್ಯೆಯಾಗಿದೆ. ಚಿಕಿತ್ಸೆ ನೀಡದೇ ಬಿಟ್ಟರೆ ಸಾವಿಗೆ ಕಾರಣವಾಗಬಹುದು. ಕ್ಯಾನ್ಸರ್ ಅಪಾಯವಿದ್ದರೆ ನಿಯಮಿತವಾಗಿ ಪರೀಕ್ಷೆಗೆ ಒಳಗಾಗುವುದು ಬಹುಮುಖ್ಯವಾಗಿದೆ ಎಂದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ನೀಲಪ್ಪ ಹೊಸಮನಿ ವಹಿಸಿದ್ದರು.ಕಾರ್ಯಕ್ರಮದಲ್ಲಿ ನ್ಯಾಕ್ ಸಂಚಾಲಕ ಅಮಿತ ಮಿರ್ಜಿ, ಮಹಿಳಾ ಘಟಕದ ಸಂಚಾಲಕಿ ವಿಜಯಲಕ್ಷ್ಮೀ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಂಡ್ಯದಲ್ಲಿ ಡಿ.೨೦,೨೧,೨೨ ರಂದು ನಡೆಯಲಿರುವ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಹಾಗೂ ಪ್ರೇರಣೆ ಮೂಡಿಸುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಯು ನಿಡಗುಂದಿ ಪಟ್ಟಣದಿಂದ ಮಂಗಳವಾರ ಪಟ್ಟಣದ ತೆಲಗಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಆಗಮಿಸುತ್ತಿದ್ದಂತೆ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಕನ್ನಡಾಂಬೆಗೆ ಪೂಜೆ ಸಲ್ಲಿಸುವ ಮೂಲಕ ತಾಲೂಕಾಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವೃತ್ತದಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಭವ್ಯವಾಗಿ ಸ್ವಾಗತಿಸಿಕೊಂಡರು.ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆ ಗಣಪತಿ ಚೌಕ್ ಮಾರ್ಗವಾಗಿ ಪಟ್ಟಣದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತಕ್ಕೆ ಆಗಮಿಸಿತು.ಈ ಸಂದರ್ಭದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಉದ್ದೇಶಿಸಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಇಂದಿನ ಯುವಜನಾಂಗಕ್ಕೆ ಕನ್ನಡ ನಾಡು-ನುಡಿಯ ಬಗ್ಗೆ ಜಾಗೃತಿ ಮೂಡಿಸಲು ಈ ರಥಯಾತ್ರೆಯು ನಾಡಿನಲ್ಲಿ ಸಂಚರಿಸುತ್ತಿದೆ. ಆಡಳಿತ ಭಾಷೆಯಾಗಿರುವ ಕನ್ನಡ ಸಂರಕ್ಷಣೆ ಮಾಡುವ ಜೊತೆಗೆ ಅದನ್ನು ಬೆಳೆಸುವ ಅಗತ್ಯವಿದೆ ಎಂದರು.ಜಿಲ್ಲಾ…
