Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ರಕ್ತದಾನದಿಂದ ಮನುಕುಲ ಉಳಿಯಲಿಕ್ಕೆ ಸಾಧ್ಯ. ಆರೋಗ್ಯವಂತ ಯುವಕರು ರಕ್ತದಾನ ಮಾಡಲಿಕ್ಕೆ ಮುಂದೆ ಬರಬೇಕು ಎಂದು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣ ಹೇಳಿದರು.ಮಂಗಳವಾರ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಅಂಬಾಭವಾನಿ ಎಜುಕೇಶನ್ ಟ್ರಸ್ಟ ಹಾಗೂ ಜಗದಂಬಾ ವಿದ್ಯಾವರ್ಧಕ ಸಂಘ ಹಮ್ಮಿಕೊಂಡ ನಾಡದೇವಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ, ತಾಲೂಕ ಆಸ್ಪತ್ರೆ ಮತ್ತು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಏರ್ಪಡಿಸಿದ ಉಚಿತ ರಕ್ತದಾನ ಶಿಬಿರ, ಆರೋಗ್ಯ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು.ರಕ್ತ ಕೊಡವದರಿಂದ ಹೊಸ ರಕ್ತವನ್ನು ಉತ್ಪತ್ತಿಯಾಗಿ ಮರಣಾಂತಿತ ರಕ್ತ ಹೀನತೆಯಲ್ಲಿರುವ ಎಷ್ಟೋ ಜನರಿಗೆ ಜೀವ ಉಳಿವುದರ ಜೊತೆಗೆ ಒಬ್ಬ ಆರೋಗ್ಯವಂತ ವ್ಯಕ್ತಿಯಾಗಿ ಇರುವುದಕ್ಕೆ ಸಾಧ್ಯವಾಗುತ್ತದೆ. ದಿನನಿತ್ಯ ಅತ್ಯವಶ್ಯಕ ಬೇಕಾದ ಆಹಾರ, ವಸ್ತು ಉತ್ಪಾದನೆ ಮಾಡಬಹುದು ಆದರೆ ರಕ್ತ ಮಾತ್ರ ಕೃತಕವಾಗಿ ಉತ್ಪಾದನೆ ಮಾಡಲು ಸಾಧ್ಯವಿಲ್ಲ. ದಾನಿಯ ದೇಹದಿಂದ ಮಾತ್ರ ರಕ್ತ ಪಡೆಯಲು ಸಾಧ್ಯ. ಆದರಿಂದ ಆರೋಗ್ಯವಂತ ವ್ಯಕ್ತಿಗಳನ್ನು ಮಾಡುವ ರಕ್ತದಾನ ಮತ್ತೋಬ್ಬರಿಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಂಡ್ಯ ಜಿಲ್ಲೆಯಲ್ಲಿ ಮುಂಬರುವ ಡಿಸೆಂಬರ್ ತಿಂಗಳ ೨೦,೨೧,೨೨ನೇ ದಿನಾಂಕಗಳಂದು ಜರುಗುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇಂದು ಪಟ್ಟಣಕ್ಕೆ ಕನ್ನಡ ಜ್ಯೋತಿ ರಥಯಾತ್ರೆ ಆಗಮಿಸಲಿದೆ.ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಜನರಲ್ಲಿ ಸಾಹಿತ್ಯಕ ಅಭಿಮಾನವನ್ನು ಮೂಡಿಸುವ ಅಂಗವಾಗಿ ಇಂದು ಮಧ್ಯಾನ್ಹ ೩ ಗಂಟೆಗೆ ಅಂಬೇಡ್ಕರ್ ವೃತ್ತಕ್ಕೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ಸ್ವಾಗತ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಪಟ್ಟಣದ ಎಲ್ಲ ಪ್ರಗತಿಪರ ಸಂಘ ಸಂಸ್ಥೆಗಳು, ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ಕೃಷಿ ವೆಚ್ಚ, ಕುಂಠಿತವಾಗುತ್ತಿರುವ ಉತ್ಪಾದನೆ ಮತ್ತು ಅನಿಶ್ಚಿತವಾಗಿರುವ ಮಾರುಕಟ್ಟೆಯಂತಹ ಜ್ವಲಂತ ಸಮಸ್ಯೆಗಳಿಂದ ಬಸವಳಿದು ಅಸ್ತಿತ್ವ ಕಳೆದುಕೊಳ್ಳುವ ಅಪಾಯದಂಚಿನಲ್ಲಿರುವ ಕೃಷಿ ಕ್ಷೇತ್ರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಹಾಗೂ ಸಹ ಸಂಶೋಧನಾ ನಿರ್ದೇಶಕ ಡಾ. ಅಶೋಕ ಸಜ್ಜನ ಕರೆ ನೀಡಿದರು.ತಾಲೂಕಿನ ಮಡಿಕೇಶ್ವರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮಂಗಲ ಭವನದಲ್ಲಿ ಕುಕ್ಕುಟ ಸಹಕಾರಿ ಮಹಾಮಂಡಳ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ, ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ, ಬಸರಕೋಡ, ಶ್ರೀ ಪರಮಾನಂದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹರನಾಳ ಹಾಗೂ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಮೃತ ರೈತ ಉತ್ಪಾದಕ ಸಂಸ್ಥೆಗಳ ಯೋಜನೆ ಅನುದಾನದಲ್ಲಿ ಏರ್ಪಡಿಸಲಾಗಿದ್ದ ಕೋಳಿ ಸಾಕಾಣಿಕೆ, ಕೃಷಿ ಮತ್ತು ತೋಟಗಾರಿಕೆಯಲ್ಲಿ ಆಧುನಿಕತೆಗಳ ಅಳವಡಿಕೆಗಳ ಕುರಿತಾದ ಹೋಬಳಿ ಮಟ್ಟದ ರೈತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೃಷಿ ಸುಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಾಸಕ ಹಾಗೂ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ ನ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿಯವರ ೬೭ನೇ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅ.೧೧ ರಂದು ಪಟ್ಟಣದಲ್ಲಿ ವಿವಿಧ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ.ಬೆಳಿಗ್ಗೆ ೧೦ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ, ೧೧ಕ್ಕೆ ಪಟ್ಟಣದ ಬಸ್ ನಿಲ್ದಾಣದ ಎದುರಿನ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣು ತಪಾಸಣೆ, ಮಧ್ಯಾಹ್ನ ೧೨ಕ್ಕೆ ನಿರ್ಗತಿಕರಿಗೆ ಹಾಸಿಗೆ ಕಿಟ್ ವಿತರಣೆ ಸಂಜೆ ೬ಕ್ಕೆ ಪಟ್ಟಣದ ಹುಡಕೋ ಕಾಲೋನಿಯ ಗ್ರಾಮದೇವತೆ ಕುಸ್ತಿ ಮೈದಾನದಲ್ಲಿ ಹುಟ್ಟು ಹಬ್ಬಕ್ಕೆ ಶುಭಕೋರುವ ಕಾರ್ಯಕ್ರಮ ಜರುಗಲಿದೆ.ಈ ಕಾರ್ಯಕ್ರಮದ ಸಾನಿಧ್ಯವನ್ನು ಇಂಗಳೇಶ್ವರದ ಚನ್ನಬಸವ ಮಹಾಸ್ವಾಮಿಗಳು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು, ತಾಳಿಕೋಟೆಯ ಖಾಸ್ಗತೇಶ್ವರಮಠದ ಬಾಲ ಶಿವಯೋಗಿ ಸಿದ್ಧಲಿಂಗದೇವರು ವಹಿಸುವರು.

Read More

ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಶರಣರ ನಾಡಿನ ನಾಡದೇವಿಯ ೭ನೇ ವರ್ಷದ ಉತ್ಸವದ ಅಂಗವಾಗಿ ದೇವಿಯ ಮೆರವಣಿಗೆ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.ಪಟ್ಟಣದ ಬುದ್ನಿ ಓಣಿಯಲ್ಲಿ ದಿ:೦೮ ರಿಂದ ೧೨ ರವರೆಗೆ ಪ್ರತಿಷ್ಠಾಪನೆಗೊಳ್ಳುತ್ತಿರುವ ನಾಡದೇವಿ ಮಹೋತ್ಸವದ ಅಂಗವಾಗಿ ದೇವಿಯ ಮೆರವಣಿಗೆ ಮಂಗಳವಾರ ಸಾಯಂಕಾಲ ಇಂಡಿ ರಸ್ತೆಯ ಕೆ.ಇ.ಬಿಯಿಂದ ಪ್ರಾರಂಭಗೊಂಡು, ಅಂಬೇಡ್ಕರ ವೃತ್ತ, ಮೊಹರೆ ವೃತ್ತ ಮಾರ್ಗವಾಗಿ ಮೇನ್ ಬಜಾರ್, ಪತ್ತಾರಕಟ್ಟೆಯ ಮೂಲಕ ಪ್ರತಿಷ್ಠಾಪನೆಯ ಸ್ಥಳ ರಾತ್ರಿ ತಲುಪಿತು. ಉತ್ಸವದಲ್ಲಿ ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರ ತಜ್ಞ ಪ್ರಭುಗೌಡ ಬಿ.ಎಲ್.(ಚಬನೂರ) ಪಾಲ್ಗೊಂಡು ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ಹಲಗೆ, ಡೋಳ್ಳು ವಾಧ್ಯಗಳ ತಂಡಗಳು ಹಾಗೂ ಅಬ್ಬರ ಸಂಗೀತದ ನಡುವೆ ಯುವಕರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನೋಡುಗರ ಗಮನ ಸೆಳೆದರು.ಉತ್ಸವ ಸಮೀತಿ ಅಧ್ಯಕ್ಷ ಕಲ್ಮೇಶ ಬುದ್ನಿ, ಪರದೇಶಿಮಠಶ್ರೀ, ಸೋಮಶೇಖರ ಹಿರೇಮಠ, ಸೋಮು ದೇವೂರ, ಕಾಶೀನಾಥ ಕೋರಿ, ಪ್ರಕಾಶ ಮಲ್ಲಾರಿ, ಕಾಶೀನಾಥ ಹಿರೇಮಠ, ಶ್ರೀಶೈಲ ಯಂಭತ್ನಾಳ, ವೀರೇಶ ಬುದ್ನಿ, ದತ್ತಾತ್ರೇಯ ಕುಲಕರ್ಣಿ,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜ್ಞಾನ ಮತ್ತು ವಿಜ್ಞಾನ ಸಹಿತವಾಗಿರುವ ಭಗವದ್ಗೀತೆ ನಮಗಷ್ಟೆ ಅಲ್ಲದೆ ನಮ್ಮ ಮುಂದಿನ ತಲೆಮಾರಿಗೆ ಬೇಕಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿ ಪಿ. ನಾಗೇಶ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಶಿರಸಿ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನವನ್ನು ಸಂಘಟಿಸುವ ಉದ್ದೇಶದಿಮದ ಹಮ್ಮಿಕೊಳ್ಳಲಾದ ಪ್ರಶಿಕ್ಷಣ ವರ್ಗದಲ್ಲಿ ಅವರು ಮಾತನಾಡಿದರು.ಜ್ಞಾನವಿದ್ದಲ್ಲಿ ವಿಜ್ಞಾನವನ್ನು ವಿಶ್ಲೇಷಣೆ ಮಾಡಬಹುದಾಗಿದೆ. ವಿಜ್ಞಾನವನ್ನು ಅಧ್ಯಯನ ಮಾಡಬೇಕಾದರೆ ಜ್ಞಾನದ ಅರಿವು ಇರಬೇಕಾಗುತ್ತದೆ. ಅಂತಹ ಜ್ಞಾನ, ವಿಜ್ಞಾನ, ಮನೋವಿಜ್ಞಾನ ಅಲ್ಲದೆ ಸರ್ವಜ್ಞಾನ ಸದೃಶ ಗ್ರಂಥ ಭಗವದ್ಗೀತೆಯಾಗಿದೆ. ಆದುದರಿಂದ ಇದನ್ನು ಅಭ್ಯಸಿಸಿ ಅನ್ವಯಿಸಿಕೊಳ್ಳಲೇಬೇಕಾಗಿದೆ. ಈ ರೀತಿ ಪ್ರಶಿಕ್ಷಣ ವರ್ಗಕ್ಕೆ ಬರುವಾಗ ನಾವು ನಮ್ಮ ಮಕ್ಕಳನ್ನ, ಮನೆಯ ಸದದ್ಯರುಗಳನ್ನ, ಪರಿಚಿತರೊಂದಿಗೆ ಜೊತೆಗೂಡಿ ಬಂದಲ್ಲಿ ಅನೂಕೂಲವಾಗುತ್ತದೆ. ಅಲ್ಲದೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಅಡಗಿರುವ ಜ್ಞಾನ ನಿರಂತರವಾಗಿ ಹರಿಯಲು ಸಾಧ್ಯವಾಗುತ್ತದೆ ಎಂದರು.ಅಭಿಯಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರೀತಿ ದೇಗಿನಾಳ, ಅಭಿಯಾನ…

Read More

ಸಚಿವ ಜಮೀರ್ ಅಹ್ಮದ್ ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಮೀರ್ ಅಹ್ಮದ್ ಅವರೇ, ಅಪ್ಪನಿಂದ ಬಂದ ಆಸ್ತಿ ಕಾನೂನು ಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ/ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿರುಗೇಟು ನೀಡಿದ್ದಾರೆ.ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಭಾರತದ ಮೂರನೇ ಅತಿದೊಡ್ಡ ಭೂ ಒಡೆಯ ಆಗಿದೆಯಾ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ? ಅಸಲಿಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ, ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್ ಕಾನೂನುಗಳು ಅರಾಜಕತೆ ಉಂಟುಮಾಡುತ್ತದೆ ಎಂಬುದನ್ನು ತಿಳಿಯಿರಿ.ಸಿಕ್ಕ ಸಿಕ್ಕ ಭೂಮಿ ನಮ್ಮದು…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಶ್ರೀ ಭವಾನಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಶ್ರೀ ದೇವಿಯ ಮೂರ್ತಿಗೆ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಯಿತು.ಇದೇ ವೇಳೆ ದೇವಸ್ಥಾನದ ಕಮೀಟಿ ಮತ್ತು ದೇವಿ ಉಪಾಸಕರಾದ ಮೋತಿಲಾಲ ಕುಲಕರ್ಣಿ ಅವರ ಸಂಕಲ್ಪದಂತೆ ೧೦೦೧ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಹಿರೂರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ಕೆ ಚಾಲನೆ ನೀಡಲಾಯಿತು ಮತ್ತು ಸುಮಂಗಲೆಯರಿಗೆ ವಿಶೇಷವಾದ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಅಲ್ಪ ಸಂಖ್ಯಾತರ ಹಿತ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗ್ರಾಮದಲ್ಲಿ ಮಂಜೂರಾದ ಶಾದಿಮಹಲ್ ಕಟ್ಟಡಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಚುನಾವಣೆ ಸಂದರ್ಭದಲ್ಲಿ ಈ ಭಾಗದಲ್ಲಿ ಶಾದಿಮಹಲ್ ನಿರ್ಮಿಸಿಕೊಡುವುದಾಗಿ ಆಶ್ವಾಸನೆ ನೀಡಲಾಗಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡು ಸಿಂದಗಿ ಮತಕ್ಷೇತ್ರದ ಮಲಘಾಣ ಹಾಗೂ ಮೋರಟಗಿ ಗ್ರಾಮಗಳಲ್ಲಿ ಶಾದಿಮಹಲ್ ನಿರ್ಮಾಣಕ್ಕೆ ವಿಶೇಷ ಕಾಳಜಿ ವಹಿಸಿ ಅನುದಾನ ತರಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ೨೨೪ ಮತಕ್ಷೇತ್ರಗಳ ಪೈಕಿ ಸಿಂದಗಿ ಮತಕ್ಷೇತ್ರದಲ್ಲಿ ಮಾತ್ರ ಎರಡು ಶಾದಿಮಹಲ್ ಗಳನ್ನು ಮಂಜೂರು ಮಾಡಲಾಗಿದ್ದು, ನಾವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಅವರಿಗೆ ಋಣಿಯಾಗಿರಬೇಕು ಎಂದರು.ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಯರಗಲ್ ಬಿ.ಕೆ., ರಾಂಪುರ ಹಾಗೂ ಚಟ್ಟರಕಿ ಗ್ರಾಮಗಳಲ್ಲೂ ಶಾದಿಮಹಲ್ ಮಂಜೂರು ಹಂತದಲ್ಲಿವೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧವಾದ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ೫ ಕೋಟಿ…

Read More

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಬದ್ಧ :ಶಾಸಕ ಮನಗೂಳಿ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಅಲ್ಪ ಸಂಖ್ಯಾತರ ಹಿತ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗ್ರಾಮದಲ್ಲಿ ಮಂಜೂರಾದ ಶಾದಿಮಹಲ್ ಕಟ್ಟಡಕ್ಕೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಚುನಾವಣೆ ಸಂದರ್ಭದಲ್ಲಿ ಈ ಭಾಗದಲ್ಲಿ ಶಾದಿಮಹಲ್ ನಿರ್ಮಿಸಿಕೊಡುವುದಾಗಿ ಆಶ್ವಾಸನೆ ನೀಡಲಾಗಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡು ಸಿಂದಗಿ ಮತಕ್ಷೇತ್ರದ ಮಲಘಾಣ ಹಾಗೂ ಮೋರಟಗಿ ಗ್ರಾಮಗಳಲ್ಲಿ ಶಾದಿಮಹಲ್ ನಿರ್ಮಾಣಕ್ಕೆ ವಿಶೇಷ ಕಾಳಜಿ ವಹಿಸಿ ಅನುದಾನ ತರಲಾಗಿದೆ. ಪ್ರಸಕ್ತ ವರ್ಷ ರಾಜ್ಯದ ೨೨೪ ಮತಕ್ಷೇತ್ರಗಳ ಪೈಕಿ ಸಿಂದಗಿ ಮತಕ್ಷೇತ್ರದಲ್ಲಿ ಮಾತ್ರ ಎರಡು ಶಾದಿಮಹಲ್ ಗಳನ್ನು ಮಂಜೂರು ಮಾಡಲಾಗಿದ್ದು, ನಾವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಅವರಿಗೆ ಋಣಿಯಾಗಿರಬೇಕು ಎಂದರು.ಸಿಂದಗಿ ಮತಕ್ಷೇತ್ರ ವ್ಯಾಪ್ತಿಯ ಯರಗಲ್ ಬಿ.ಕೆ., ರಾಂಪುರ ಹಾಗೂ ಚಟ್ಟರಕಿ ಗ್ರಾಮಗಳಲ್ಲೂ ಶಾದಿಮಹಲ್ ಮಂಜೂರು ಹಂತದಲ್ಲಿವೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧವಾದ…

Read More