Author: editor.udayarashmi@gmail.com

ಬೆಂಗಳೂರು: ಖಾಸಗಿ ಶಾಲೆಗಳು, ಹೋಟೆಲ್​, ಏರ್​ಪೋರ್ಟ್​​ಗಳ ನಂತರ ಇದೀಗ ಬೆಂಗಳೂರಿನ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.ಬಸವನಗುಡಿಯ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಹಾಗೂ ಸದಾಶಿವನಗರದ ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ.ಪೊಲೀಸ್ ಮೂಲಗಳ ಪ್ರಕಾರ, ಕೂಡಲೇ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.ಪರಿಶೀಲನೆ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ್ದರು.”ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ(ದಕ್ಷಿಣ ವಿಭಾಗ) ಲೋಕೇಶ್ ಬಿ ಜಗಲಾಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಲೇಜುಗಳಿಗೆ ಬಾಂಬ್ ಬೆದರಿಕೆಯ…

Read More

ಕಾನೂನು ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಇರುವ ಶಾಲಾ ಕಾಲೇಜಿನ ಕಂಪೌಂಡಿನಿಂದ ೧೦೦ ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಪದಾರ್ಥಗಳ ಮಾರಾಟವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲಾ ಕಾಲೇಜು ಆವರಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಂದು ಶಾಲಾ-ಕಾಲೇಜುಗಳು ಇದರ ಬಗ್ಗೆ ದೃಢೀಕರಣವನ್ನು ನೀಡಬೇಕು. ಬಾಕಿ ಇರುವ ಶಾಲಾ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಈ ಕಾಯ್ದೆಯನ್ನು ಅನಿಷ್ಠಾನಗೊಳಿಸುವ ಬಗ್ಗೆ ಕ್ರಮಕೈಗೊಂಡು ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.ತಂಬಾಕು ಉತ್ಪನ್ನಗಳ ಉಪಯೋಗದಿಂದಾಗುವ ದುಷ್ಟರಿಣಾಮ ಹಾಗೂ ಕೊಟ್ಪಾ ಕಾಯ್ದೆ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ತನಿಖಾದಳ ರಚಿಸಿಕೊಂಡು ಕ್ರೀಯಾಶೀಲತೆಯಿಂದ ಕಾಲ-ಕಾಲಕ್ಕೆ ದಾಳಿ ನಡೆಸಬೇಕು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ತಂಬಾಕು ದುಷ್ಪರಿಣಾಮ ಕುರಿತು ಜಾಗೃತಿ…

Read More

ಡಾ. ಬಿ.ಆರ್.ಅಂಬೇಡ್ಕರ್ ಬಾಲಕರ ವಸತಿ ನಿಲಯ ಪರಿಶೀಲಿಸಿದ ಜಿ.ಪಂ ಸಿಇಒ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ದಿನ ವಸತಿ ನಿಲಯದ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಶೌಚಾಲಯ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕ ಈ ಎಲ್ಲ ವ್ಯವಸ್ಥೆಗಳನ್ನು ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.ವಿಜಯಪುರ ನಗರದ ಭೂತನಾಳ ಕ್ರಾಸ್ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಶುಕ್ರವಾರ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ವಸತಿ ನಿಲಯದ ಹೊರಾಂಗಣ ಆವರಣ, ಆಹಾರ ದಾಸ್ತಾನು ಕೊಠಡಿ, ನೀರಿನ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ವ್ಯವಸ್ಥೆಗಳನ್ನು ಸ್ವಚ್ಛತೆಯಿಂದ ಇರುವಂತೆಯೂ ಮತ್ತು ನಿರ್ವಹಣೆ ಉತ್ತಮವಾಗಿರಬೇಕು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಉತ್ತಮ ಪುಸ್ತಕಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಚುನಾವಣೆ ಬಂದಾಗ ಮಾತ್ರ ಪಕ್ಷ, ಪಂಗಡ ಎನ್ನಬೇಕು. ಉಳಿದೆಲ್ಲ ದಿನಗಳಲ್ಲಿ ಜನರ ಏಳಿಗೆಗೋಸ್ಕರ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲ್ಲೂಕಿನ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ನೀರ್ಮಾಣ ಕಾಮಗಾರಿ ಮತ್ತು ೨೦೨೨-೨೩ನೇ ಸಾಲಿನ ಜಲಜೀವನ ಮಿಷನ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ರೂ೨೫ ಲಕ್ಷ ಮತ್ತು ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ರೂ ೧೮೬.೪೩ ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದೇನೆ, ಮತ್ತು ಈ ಗ್ರಾಮದಲ್ಲಿ ಹಲವಾರು ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡುತ್ತೇನೆ. ಈ ಗ್ರಾಮದ ಅಭಿವೃದ್ಧಿ ಜವಾಬ್ದಾರಿ ನನ್ನ ತಲೆ ಮೇಲಿದೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ಪೂರ್ವಾಗ್ರಹ ಪೀಡಿತರಾಗಬಾರದು. ನಾವೆಲ್ಲರೂ ಜನರ ಸೇವಕರು ಅನ್ನೋದನ್ನ ಅರಿತುಕೊಳ್ಳಬೇಕು. ಸಂದರ್ಭ ಬಂದಾಗ ಮಾನವೀಯತೆ ದೃಷ್ಟಿಯಿಂದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಉದ್ಯಮಶೀಲರು ಸೋಲಿನಿಂದ ಧೃತಿಗೆಡದೇ ಸಮರ್ಥ ಮಾರ್ಗದರ್ಶನ ,ಸ್ಪಷ್ಟ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧ್ಯ. ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ಸದುಪಯೋಗ ಮಾಡಿಕೊಂಡಾಗ ಸರಕಾರ ರೂಪಿಸುವ ಯೋಜನೆಗಳು ಯಶಸ್ವಿಗೆ ಸಾಕ್ಷಿಯಾಗುತ್ತವೆ ಎಂದು ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ ಹೇಳಿದರು.ಪಟ್ಟಣದ ಸಹನಾ ರೆಸ್ಟೋರೆಂಟ್ ವಿಕೆಜೆ ಇಂಟರ್ನ್ಯಾಷನಲ್ ಸಭಾಭವನದಲ್ಲಿ ಏರ್ಪಡಿಸಿದ್ದಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅನುಭವ ಹಂಚಿಕೊಂಡರು.ಸಮಾಜವನ್ನು ಸದೃಢವಾಗಿ ಕಟ್ಟಲು ಉದ್ಯಮಶೀಲತೆ ಬಹಳ ಮುಖ್ಯ, ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಮಹಿಳೆಯರ ಯುವಜನರಲ್ಲಿ ಸಂಚಲನ ಮೂಡಿಸಲು, ಕೌಶಲ್ಯ ಬೆಳಸಲು ಅತ್ಯಂತ ಸೂಕ್ತ ಕಾರ್ಯ ವಿಜಯಪುರ ಸಿಡಾಕ್ ಸಂಸ್ಥೆ ಮಾಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿರುವ ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರೀತಾ ಬ ಬಳ್ಳಾರಿ, ತರಬೇತಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸದೃಡ ದೇಹ, ಶಾಂತಿ, ಮನಸ್ಸು ನೆಲೆಗೊಳ್ಳಲು ಕ್ರೀಡೆಗಳು ಮಕ್ಕಳಿಗೆ ಅಗತ್ಯವಾಗಿವೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ತಾಲ್ಲೂಕಿನ ಮಣೂರ ಗ್ರಾಮದ ಕೆಎಸ್‌ಎಲ್‌ಎ ಪ್ರೌಢಶಾಲೆಯಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವ್ಹಾಲಿಬಾಲ್ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿ, ಚಾಲನೆ ನೀಡಿ ಮಾತನಾಡಿದರು. ಕ್ರೀಡಾಚಟುವಟಿಕೆಗಳಿಂದ ನಮಗೆ ಆರೋಗ್ಯ ಭಾಗ್ಯ ದೊರೆಯಬಲ್ಲದು. ಆದ್ದರಿಂದ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳತ್ತಲೂ ಗಮನ ಹರಿಸುವಂತೆ ಸಲಹೆ ನೀಡಿದರು.ಸಾನಿಧ್ಯ ವಹಿಸಿದ್ದ ದೇವೂರ ಹಿರೇಮಠದ ಮರುಳಾರಾಧ್ಯಶ್ರೀಗಳು ಮಾತನಾಡಿದರು.ಪಂದ್ಯಾವಳಿಯಲ್ಲಿ ಮಣೂರ ಗ್ರಾಮದ ಕೆಎಸ್‌ಎಲ್‌ಎ ಪ್ರೌಢಶಾಲೆ ಬಾಲಕರು ಹಾಗೂ ಇಂಡಿ ತಾಲ್ಲೂಕಿನ ಲಚ್ಯಾಣದ ಜಿಎಚ್‌ಎಸ್ ಬಾಲಕಿಯರು ಪ್ರಥಮ ಸ್ಥಾನ ಪಡೆದರೆ, ಪ್ರಾಥಮಿಕ ಶಾಲಾ ಮಟ್ಟದಲ್ಲಿ ಇಂಡಿ ಎಂಡಿಆರ್‌ಎಸ್ ಬಾಲಕರು ಹಾಗೂ ಆಲಮಟ್ಟಿ ಡ್ಯಾಸೈಟಿನ್ ಶಾರದಾ ಕನ್ನಡ ಪ್ರಾಥಮಿಕ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ವಿಜೇತರಾದರು.ಸಿಂದಗಿ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ, ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಲ್.ಆರ್.ಅಂಗಡಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನಾಮದೇವ ಚವ್ಹಾಣ, ಮುಖ್ಯಶಿಕ್ಷಕ ಎಸ್.ಸಿ.ಕಿತ್ತೂರ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಡೋಣಿ ತೀರದ ಗ್ರಾಮಾಗಳಾದ ಯಾಳವಾರ, ಸಾತಿಹಾಳ, ಕೊಂಡಗೂಳಿ ಗ್ರಾಮಗಳಿಗೆ ತಹಶೀಲ್ದಾರ ಪ್ರಕಾಶ ಸಿಂದಗಿ ಭೇಟಿ ನೀಡಿ ಪರಿಶೀಲಿಸಿದರು.ತಾಲ್ಲೂಕಿನ ಡೋಣಿ ತೀರದ ಗ್ರಾಮಗಳು ಡೋಣಿ ನದಿಯ ಪ್ರವಾಹಕ್ಕೆ ಒಳಗಾಗಿದ್ದು, ಗ್ರಾಮಗಳ ವ್ಯಾಪ್ತಿಯ ಜಮೀನುಗಳು ನೀರಿನಿಂದ ಆವೃತ್ತವಾಗಿವೆ. ಇದರಿಂದ ಜಮೀನುಗಳಲ್ಲಿನ ತೊಗರಿ ಸೇರಿದಂತೆ ಬಹುತೇಕ ಬೆಳೆಗಳು ಹಾಳಾಗಿವೆ ಎಂದು ಕೆಲವು ದಿನಗಳ ಹಿಂದೆ ಕೊಂಡಗೂಳಿ ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ತಹಶೀಲ್ದಾರ ಸಾತಿಹಾಳ ಗ್ರಾಮದ ಸೇತುವೆ ಹಾಗೂ ಡೋಣಿ ತೀರದ ಎಲ್ಲ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಬೆಳೆಗಳ ವಾಸ್ತವಿಕ ಸ್ಥಿತಿಗತಿಗಳನ್ನು ವೀಕ್ಷಿಸಿದರು. ನಂತರ ಗ್ರಾಮಸ್ಥರೊಂದಿಗೆ ಮಾತನಾಡಿ, ನೀರು ನಿಂತು ಹಾಳಾದ ಬೆಳೆಗಳ ಕುರಿತು ಸರ್ಕಾರಕ್ಕೆ ಸಮಗ್ರ ಮಾಹಿತಿ ನೀಡಲಾಗುವುದು ಎಂದರು.ಕಂದಾಯ ನಿರೀಕ್ಷಕ ಸಂಗಮೇಶ ಗ್ವಾಳೇದ, ಗ್ರಾಮಾಡಳಿತ ಅಧಿಕಾರಿಗಳಾದ ಅನೀಲಕುಮಾರ ರಾಠೋಡ, ಪ್ರಕಾಶ ಬನ್ನಟ್ಟಿ, ಸಿದ್ದು ನಾಯ್ಕೋಡಿ, ಕೃಷಿ ಇಲಾಖೆಯ ಪಾಟೀಲ ಹಾಗೂ ಗ್ರಾಮಸ್ಥರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ’ಗುರು ದೇವೋಭವ’ ಎನ್ನುವಂತೆ ಶಿಕ್ಷಕರಿಂದ ಮಾತ್ರ ಆರೋಗ್ಯವಂತ ಸಮಾಜವನ್ನು ನಿಮಿಸಲು ಸಾಧ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲೆ ಮತ್ತು ಬಬಲೇಶ್ವರ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬಬಲೇಶ್ವರ ಶ್ರೀ ಬಾಪೂಜಿ ಪ್ರಾಥಮಿಕ ಶಾಲೆಯ ಕವಿ ಶಂ.ಗು. ಬಿರಾದಾರ ವೇದಿಕೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ ಮಾತನಾಡಿ, ಅನುದಾನಿತ ಶಾಲಾ ಶಿಕ್ಷಕರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ೨೦೦೬ ರಿಂದ ನೇಮಕವಾದ ಶಿಕ್ಷಕರಿಗೆ ಸರಕಾರ ಓಪಿಎಸ್ ಪಿಂಚನಿಯಾ ಕೊಟ್ಟಿಲ್ಲ, ಎನ್.ಪಿ.ಎಸ್. ಪಿಂಚನಿಯಾ ನೀಡಿಲ್ಲ, ನಾನು ಪಿಂಚನಿ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.ವಿ.ಎನ್. ಬಿರಾದಾರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನೌಕರಿ ಕೊಡಿಸುವುದಾಗಿ ಅನಾಮಿಕ ವ್ಯಕ್ತಿಗಳು ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಆದರೆ, ಇದುವರೆಗೆ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಯಾವುದೇ ಅಧಿಸೂಚನೆ ಹೊರಡಿಸಿರುವುದಿಲ್ಲ ಹಾಗೂ ನೇಮಕಾತಿ ಪ್ರಕ್ರಿಯೆ ಆರಂಭಿಸಿಲ್ಲ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ.ಈ ಸಂಬಂಧ ಇಂದು ಇಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನೇಮಕಾತಿ ಮಾಡಿಸುವುದಾಗಿ ಯಾರಾದರೂ ಹೇಳುತ್ತಿದ್ದಲ್ಲಿ ಅಂಥವರ ಹೆಸರನ್ನು ವಿಶ್ವವಿದ್ಯಾನಿಲಯದ ಗಮನಕ್ಕೆ ತರುವುದು ಮತ್ತು ಸಮೀಪದ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಬಹುದಾಗಿದೆ. ಯಾರಾದರೂ ಇಂತಹ ಮೋಸದ ಜಾಲಕ್ಕೆ ಸಿಲುಕಿದ್ದರೆ ಅದಕ್ಕೆ ವಿಶ್ವವಿದ್ಯಾನಿಲಯವು ಹೊಣೆಯಾಗಿರುವುದಿಲ್ಲವೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕರ, ಸಂಘ-ಸಂಸ್ಥೆಗಳ ಆಸ್ತಿಗಳನ್ನು ಹಾಗೂ ಮಹಾನಗರ ಪಾಲಿಕೆ, ನಗರಾಭಿವೃದ್ಧಿ, ಕಂದಾಯ ಇಲಾಖೆಗೆ ಒಳಪಟ್ಟ ಸರ್ಕಾರಿ ಆಸ್ತಿಯನ್ನು ವಕ್ಫ್ ಆಸ್ತಿಯನ್ನಾಗಿ ಮಾಡಲು ಹೊರಟಿರುವ ಕ್ರಮದ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ವಿನಂತಿಸಿದ್ದಾರೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು, ಇದೇ ಸೋಮವಾರ (ಅ.೮) ದಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲೆಯ ಮುತ್ತಾವಲ್ಲಿಗಳ ಸಮ್ಮೇಳನ ಮತ್ತು ವಕ್ಫ್ ಅದಾಲತ್ ನಡೆಸಿ ಹಾಗೂ ಮಂಗಳವಾರ (ಅ.೯ ರಂದು) ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ, ವಿಜಯಪುರ ಜಿಲ್ಲೆಯಾದ್ಯಂತ ಅತೀ ಕಡಿಮೆ ವಿಸ್ತೀರ್ಣದಲ್ಲಿ ಸಣ್ಣದಾದ ಸ್ಮಾರಕ, ಹಳೆಯ ಕಾಲದ ಬಿಳುವ ಹಂತದಲ್ಲಿರುವ ಸಣ್ಣ ಕಟ್ಟಡಗಳಿರುವ ಸರ್ವೆ ನಂಬರ್ಗೆ ಒಳಪಟ್ಟ ಸಂಪೂರ್ಣ ಆಸ್ತಿಯನ್ನು ವಕ್ಫ್ ಆಸ್ತಿಯನ್ನಾಗಿ ದಾಖಲು ಮಾಡಲಾಗುತ್ತಿದೆ ಎಂಬ…

Read More