Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯೂ ವಿಜಯಪುರದ ಸಿಕ್ಯಾಬ್ ಪದವಿಪೂರ್ವ ಕಾಲೇಜಿನಲ್ಲಿ ಇದೇ ಅಕ್ಟೋಬರ್ ೦೬ರಂದು ಜರುಗಲಿದೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ೮:೩೦ರಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು, ಇತರರು ಹಾಗೂ ಅಭ್ಯರ್ಥಿಗಳು ಆಧುನಿಕ ಎಲೆಕ್ಟ್ರಾನಿಕ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಮಾರ್ಕರ್, ವೈಟ್ ಫ್ಲೂಯಿಡ್, ವೈರ್ಲೆಸ್ ಸೆಟ್, ಪುಸ್ತಕ ಇತ್ಯಾದಿಗಳನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ ಸೆಂಟರ್ ಗಳು, ಇಂಟರನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೩ ಗ್ರಾಮ ಪಂಚಾಯತಿಯ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.ಇಂಡಿ ತಾಲೂಕಿನ ಅರ್ಜುಣಗಿ ಬಿ.ಕೆ., ಗುಬ್ಬೇವಾಡ ಹಾಗೂ ಸಂಗೋಗಿ, ಆಲಮೇಲ ತಾಲೂಕಿನ ಕಕ್ಕಳಮೇಲಿ ಮತ್ತು ರಾಮನಳ್ಳಿ, ವಿಜಯಪುರ ತಾಲೂಕಿನ ಕುಮಟಗಿ, ನಿಡಗುಂದಿ ತಾಲೂಕಿನ ಗಣಿ ಆರ್.ಸಿ, ಬಳಬಟ್ಟಿ ಮತ್ತು ಬೇನಾಳ ಆರ್.ಸಿ, ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ, ಸಿಂದಗಿ ತಾಲೂಕಿನ ನಾಗಾವಿ ಬಿ,ಕೆ ಮತ್ತು ಕನ್ನೊಳ್ಳಿ ಹಾಗೂ ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿಯ ಗ್ರಂಥಾಲಯಗಳ ಮೇಲ್ವಿಚಾರಕರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ್ದು, ಸದರಿ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ದಿನಾಂಕ:೨೩-೧೦-೨೦೨೪ರೊಳಗಾಗಿ ಜಿಲ್ಲಾ ಪಂಚಾಯತಿಯ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಝಡ್ ಜಮೀರ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೭ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಅದಾಲತ್‌ನಲ್ಲಿ ಕರ್ನಾಟಕ ರಾಜ್ಯ ಔಕಾಫ್ ಮಂಡಳಿ ಅಧ್ಯಕ್ಷರಾದ ಅನ್ವರ ಬಾಷಾ ಕೆ ಅವರು ಉಪಸ್ಥಿತರಿರಲಿದ್ದಾರೆ.ಆದ್ದರಿಂದ, ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಯ ಮುತವಲ್ಲಿ, ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ವಕ್ಫ್ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ತಾಲೂಕಿನ ನಿಡೋಣಿಯ ಮಂಜರಗಿವಸ್ತಿ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ದಿನದಂದು ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪರಗೊಂಡ ಶಹಾಪೂರ್ ಗಾಂಧಿ ಮತ್ತು ಶಾಸ್ತ್ರೀಜಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವುದಲ್ಲದೇ, ದೇಶಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಹೇಳಿದರು.ನಿಡೋಣಿ ಗ್ರಾಮ ಪಂಚಾಯತಿಯಿಂದ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ವಿನಾಯಕ ಕೊಟ್ಟಲಗಿ, ಇತ್ತೀಚಿಗೆ ಕಲುಷಿತ ನೀರಿನಿಂದ ಹಲವಾರು ಖಾಯಿಲೆಗಳು ಬರುತ್ತಿದ್ದು, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಅತ್ಯಗತ್ಯವಾಗಿದೆ. ಎಲ್ಲ ಮಕ್ಕಳು ನಿಮ್ಮ ಜ್ಞಾನ ಸಂಪಾದನೆಯ ಜೊತೆಗೆ ಶಾಲೆಯಲ್ಲಿ ನೀಡುವ ಹಾಲು, ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಪೌಷ್ಟಿಕ ಆಹಾರ ಹಾಗೂ ಶುದ್ಧ ನೀರನ್ನು ಸೇವಿಸಿ ಸದೃಢ ಆರೋಗ್ಯವನ್ನು ಸಂಪಾದಿಸಬೇಕು ಎಂದರು.ಈ ಸಂದರ್ಭದಲ್ಲಿ ಶಿವಪ್ಪ ಚಿಕ್ಕಲಕಿ, ಧರೆಪ್ಪ ಸಾಳಪ್ಪಗೋಳ,ನೂರಅಲಿ ಝಂಡೆ, ಬೈರಪ್ಪ ಮಾಳಿ, ರಾಚಪ್ಪ ಮಾಳಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲ್ಲೂಕಿನ ಕಗ್ಗೋಡದಲ್ಲಿರುವ ಶ್ರೀ ರಾಮನಗೌಡ ಬಾ.ಪಾಟೀಲ (ಯತ್ನಾಳ) ಗೋ ರಕ್ಷಾ ಕೇಂದ್ರದ ಆವರಣದಲ್ಲಿ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿ. 162ನೇ ಶಾಖೆಯನ್ನು ಸಹಕಾರಿ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಗುರುವಾರ ಉದ್ಘಾಟಿಸಿದರು.ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಬಸಯ್ಯ ಹಿರೇಮಠ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ಶೈಲಜಾ ಪಾಟೀಲ, ಸೀಮಾ ಕೋರೆ, ರಮೇಶ ಬಿರಾದಾರ, ಗಣಪತಿ ಜಾಧವ, ಸಿದ್ದೇಶ್ವರ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ, ಬಸವರಾಜ ಸುಗೂರ, ಜಂಟಿ ಕಾರ್ಯದರ್ಶಿ ಮಲ್ಲಿಕಾರ್ಜುನ ಸಜ್ಜನ, ಕೋಶಾಧ್ಯಕ್ಷ ಶಿವಾನಂದ ನೀಲಾ, ನಿರ್ದೇಶಕರಾದ ನಿಂಗೊಂಡಪ್ಪ ಗೋಲಾಯಿ, ವಿಜಯಕುಮಾರ ಡೋಣಿ, ಬಸವರಾಜ ಗಣಿ, ಸಂಗನಗೌಡ ನಾಡಗೌಡ, ಸುಧೀರ ಚಿಂಚಲಿ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಸಿದ್ದಸಿರಿ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಜೊತಿಬಾ ಖಂಡಾಗಳೆ, ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ರಾಘವ್ ಅಣ್ಣಿಗೇರಿ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ (ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಹಾಗೂ ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಸ್ನಾತಕ ಪದವಿಯ ೬ನೆಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ. ಐದು ಸೆಮಿಸ್ಟರ್‌ಗಳ ಅಂಕಪಟ್ಟಿಯೊಂದಿಗೆ ಈಗಲೇ ಅರ್ಜಿ ಸಲ್ಲಿಸಿ. ಪರೀಕ್ಷಾ ಫಲಿತಾಂಶ ಬಂದ ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆಯಾ ವಿಭಾಗಗಳಿಗೆ ೬ನೆಯ ಸೆಮಿಸ್ಟರ್ ಅಂಕಪಟ್ಟಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಅಕ್ಟೋಬರ್ ೨೦ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Index ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ಪತ್ರಿಕೋದ್ಯಮದ ವಿಭಾಗದ ಕಚೇರಿ ಅಥವಾ ವಿಶ್ವವಿದ್ಯಾನಿಲಯದ ಕಚೇರಿಗೆ ಅಕ್ಟೋಬರ್ ೨೧ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ(ಕೆ.ಡಿ.ಪಿ) ಸಮಿತಿಗೆ ಆರು ಜನರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.ಶೇಗುಣಸಿ ಗ್ರಾಮದ ಪ್ರಕಾಶ ಗಂಗಪ್ಪ ಕೋರಿ, ಕಾಖಂಡಕಿ ಗ್ರಾಮದ ಮಹಾಂತೇಶ ಕಾಖಂಡಕಿ, ಹೊಸೂರ ಗ್ರಾಮದ ತಿರುಪತಿ ಬಿರಾದಾರ, ನಿಡೋಣಿ ಗ್ರಾಮದ ಜಾಫರ ನಿಡೋಣಿ, ಕಾತ್ರಾಳ ಗ್ರಾಮದ ಮಲ್ಲೇಶಿ ಕೊಕಟನೂರ, ಜೈನಾಪುರ ಗ್ರಾಮದ ಸವಿತಾ ವಿಠ್ಠಲ ಪೂಜಾರಿ ಅವರನ್ನು ಕೆಡಿಪಿ ಸಮಿತಿಯ ಅಧಿಕಾರೇಯರ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಈ ನೇಮಕ ಮಾಡಲಾಗಿದೆ.ಈ ನೇಮಕಕ್ಕೆ ಸಂತಸ ವ್ಯಕ್ತಪಡಿಸಿರುವ ಆರು ಜನ ಸದಸ್ಯರು, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಿನನಿತ್ಯ ಕನಿಷ್ಠ ೩೦ ನಿಮಿಷ ಬಿರುಸಿನ ನಡಿಗೆ, ನಿಯಮಿತವಾಗಿ ವ್ಯಾಯಾಮ, ೨೦ ನಿಮಿಷ ಈಜು, ನಿಯಮಿತ ಯೋಗಾಭ್ಯಾಸ ಸೇರಿದಂತೆ ಉತ್ತಮ ಅಭ್ಯಾಸ ರೂಢಿಸಿಕೊಳ್ಳುವ ಮೂಲಕ ಕ್ರೀಯಾಶೀಲರಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ಎನ್.ಸಿ.ಡಿ.ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ ಡಾ|| ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ಅಶ್ವಿನಿ ಇನ್ಸಿಟ್ಯೂಟ್ ವಿವಿದ ನರ್ಸಿಂಗ್ ಕಾಲೇಜಗಳು ಇವರ ಸಹಯೋಗದಲ್ಲಿ ಗುರುವಾರ ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ, ಜಿಲ್ಲಾ ಕಾರಾಗೃಹ ಅಧಿಕ್ಷಕರಾದ ಡಾ. ಐ.ಜೆ ಮ್ಯಾಗೇರಿ ಮತ್ತು ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ.ಎಲ್.ಎಚ್.ಬಿದರಿಯವರು ಜಂಟಿಯಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಜನ ಜಾಗೃತಿ…
Udayarashmi kannada daily newspaper
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ ಉಪನ್ಯಾಸಕರು, ಬೆಳಗಾವಿ ಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಇಬ್ಬರು ಗೆಳೆಯರು ಕಾಡಿನಲ್ಲಿ ಮಾತನಾಡುತ್ತ ಹೋಗುತ್ತಿದ್ದರು. ಹಠಾತ್ತಾಗಿ ತುಸುದೂರದಲ್ಲಿ ಕರಡಿಯೊಂದು ಕಾಣಿಸಿಕೊಂಡಿತು. ಅದರಲ್ಲಿ ಒಬ್ಬನು ಗೆಳೆಯನ ಬಗೆಗೆ ಯೋಚಿಸದೆ, ತನ್ನನ್ನು ರಕ್ಷಿಸಿಕೊಳ್ಳಲು ಮರ ಏರಿ ಕುಳಿಕುಕೊಳ್ಳುತ್ತಾನೆ. ಇನ್ನೊಬ್ಬನಿಗೆ ಮರ ಹತ್ತಲು ಬರುತ್ತಿರಲಿಲ್ಲ. ಆತ ಏನು ಮಾಡುವುದೆಂದು ಹೆದರಿದ. ಮೃತದೇಹವನ್ನು ಕರಡಿ ಏನೂ ಮಾಡುವುದಿಲ್ಲವೆನ್ನುವ ಸಂಗತಿ ಅವನಿಗೆ ನೆನಪಾಯಿತು. ಕರಡಿ ಅವನ ಹತ್ತಿರ ಸಮೀಪಿಸುತ್ತಿದ್ದಂತೆ ಅವನು ಶವದಂತೆ ಅಲ್ಲಿಯೇ ಬಿದ್ದುಕೊಂಡನು. ಕರಡಿ ಅವನ ಸಮೀಪ ಬಂದಿತು. ಅವನ ಮೂತಿ ಕಣ್ಣು ಕಿವಿಗಳ ಮೇಲೆ ತನ್ನ ಮೂತಿಯನ್ನು ಆಡಿಸಿತು. ಆತ ಅಲುಗಾಡದಿರುವುದನ್ನು ಕಂಡು ಅವನು ಸತ್ತು ಹೋಗಿರಬೇಕೆಂದು ತಿಳಿದು ಅಲ್ಲಿಂದ ಹೊಟಿತು. ಸ್ವಲ್ಪ ಸಮಯದ ನಂತರ ಮರದ ಮೇಲಿದ್ದವನು ಕೆಳಗಿಳಿದನು. ಶವದಂತೆ ಮಲಗಿದವನು ಆ ಕಡೆ ಈ ಕಡೆ ನೋಡಿ ಕರಡಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಎದ್ದುನಿಂತನು. ಮರದಿಂದ ಇಳಿದವನು ‘ಗೆಳೆಯ, ಕರಡಿ ನಿನ್ನ ಕಿವಿಯ ಬಳಿ ತನ್ನ ಮುಖ ಇಟ್ಟಿದ್ದನ್ನು ನಾನು ನೋಡಿದೆ.…
