Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಧ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಚಹಾ ಅಂಗಡಿಯ ಮಾಲೀಕನೊಬ್ಬನ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲೂಕಿನ ಕುಂಟೋಜಿ ಗ್ರಾಮದ ಶೇಕಪ್ಪ ಹೂಗಾರ ಮೇಲೆ ಪ್ರಕರಣ ದಾಖಲಾಗಿದ್ದು ಗ್ರಾಮದ ಬಸವೇಶ್ವರ ವೃತ್ತದ ಬಳಿ ಇರುವ ತನ್ನ ಚಹಾದ ಅಂಗಡಿಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮಾಡಲು ಗ್ಲಾಸು, ನೀರು ಮತ್ತು ತಿನಿಸು ಕೊಟ್ಟು ಪ್ರಕರಣಕ್ಕೆ ದಾರಿ ಮಾಡಿಕೊಂಡಿದ್ದಾನೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅವಿನಾಭಾವ ಬಾಂಧವ್ಯ ಇರುತ್ತದೆ. ಶಿಕ್ಷಕರ ಸ್ಥಾನ ಜವಾಬ್ದಾರಿಯುತ ಆಗಿದ್ದು, ವಿದ್ಯಾರ್ಥಿಗಳು ಸಮಾಜದ ಪ್ರಗತಿಗೆ ಸೇವೆ ಸಲ್ಲಿಸಿದಾಗ ಶಿಕ್ಷಕನ ಸೇವೆ ಸಾರ್ಥಕವಾಗುತ್ತದೆ. ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್‌ರವರು ಹೇಳಿದರು.ಬಂಜಾರಾ ಶಿಕ್ಷಣ ಸಂಸ್ಥೆಯಲ್ಲಿ ಸುರ್ದಿರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದ ಅವರು. ಶಿಕ್ಷಕ ವಿದ್ಯಾರ್ಥಿಗಳಿಗೆ ಬರೀ ಜೌಪಚಾರಿಕ ಶಿಕ್ಷಣ ಮಾತ್ರ ನೀಡದೇ ಸಂಸ್ಕಾರಯುತ ಬೋಧನೆಯೊಂದಿಗೆ ಬದುಕಿನ ಸವಾಲುಗಳನ್ನು ಎದುರಿಸಲು ಕೌಶಲಗಳನ್ನು ಕರಗತ ಮಾಡಿಕೊಡುತ್ತಾನೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಸೇವೆ ಸಲ್ಲಿಸಿ ತಮ್ಮ ಇಳಿ ಪ್ರಾಯದಲ್ಲೂ ವಿವಿಧ ಕ್ಷೆತ್ರಗಳಲ್ಲಿ ನಿಸ್ಪೃಹ ಸೇವೆ ಸಲ್ಲಿಸುತ್ತಿರುವ ನಿವೃತ್ತ ಶಿಕ್ಷಕರಾಗಿರುವ ಬಿ.ಡಿ.ಚವ್ಹಾಣ್, ಬಿ.ಎಸ್.ಕುಂಬಾರ, ಎ.ಪಿ.ಕಳಸರಡ್ಡಿ, ಎಸ್.ವ್ಹಿ.ಬುರ್ಲಿ, ಎಸ್.ವ್ಹಿ.ದೇಶಪಾಂಡೆ ಹಾಗೂ ಜಿ.ಎ.ಉಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ವೇಳೆಯಲ್ಲಿ ತಿಡಗುಂದಿ, ಜಾಲಗೇರಿ, ಕಳಬಳಗಿ ಹಾಗೂ ನಗರದ ಬಂಜಾರಾ ಪ್ರಾಥಮಿಕ ಹಾಗೂ ಪ್ರೌಢ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜಾಜಿ ನಗರದ ನಾಡದೇವಿ ಉತ್ಸವವು ಅಕ್ಟೋಬರ ೩ ರಿಂದ ಆರಂಭವಾಗಲಿದೆ ಎಂದು ನಾಡದೇವಿ ಉತ್ಸವ ಸಮಿತಿಯ ಅಧ್ಯಕ್ಷರಾದ ಬಾಬು ಏಳಗಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಭಕ್ತಿ ಶ್ರದ್ದೆಗಳಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದೊಂದಿಗೆ ದಿನಾಂಕ ೩ ರಿಂದ ೧೨ ರವರೆಗೆ ಸಾಂಗವಾಗಿ ಆಚರಿಸಲಾಗುವುದು. ರಾಜಾಜಿ ನಗರ ಹಾಗೂ ಸುತ್ತಲಿನ ಬಡಾವಣೆಗಳ ಸದ್ಭಕ್ತರು ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ನಾಡದೇವಿ ಉತ್ಸವ ಸಮಿತಿಯ ಅಧ್ಯಕ್ಷ ಬಾಬು ಏಳಗಂಟಿ ಅವರು ಮನವಿ ಮಾಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಾತ್ಮಾಗಾಂಧೀಜಿಯವರಿಗೆ ಸತ್ಯವೇ ದೇವರು. ಸಾಮಾಜಿಕ ನ್ಯಾಯವನ್ನು ಪರಿಪಾಲಿಸುವಲ್ಲಿ ಸದಾ ಗಾಂಧೀಜಿಯವರ ಮೌಲ್ಯಗಳನ್ನು ಯುವಕರು ಅಳವಡಿಕೊಳ್ಳಬೇಕು. ಅವರ ಸಂದೇಶಗಳು ಸರ್ವ ಕಾಲಿಕ ಸತ್ಯ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ ಮಹಾತ್ಮಾ ಗಾಂಧೀಜಿಯವರ ಮತ್ತು ಲಾಲ ಬಹಾದ್ದೂರ ಶಾಸ್ತ್ರೀಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಲಾಲ ಬಹಾದ್ದೂರ ಶಾಸ್ತ್ರೀಜಿಯವರು ದೇಶಕ್ಕಾಗಿ ಊಟ ಬಿಟ್ಟು, ಪ್ರಾಣ ಕೊಟ್ಟ ಮಹಾನ ನಾಯಕ, ಜೈ ಜವಾನ ಜೈ ಕಿಸಾನ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ದಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ ಎಂದರು.ತಹಸೀಲ್ದಾರ ಬಿ.ಎಸ್.ಕಡಕಬಾವಿ, ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ ಟಿ.ಎಸ್.ಅಲಗೂರ, ಎಸ್.ಆರ್.ನಡಗಡ್ಡಿ, ಎಸ್.ಆರ್.ರುದ್ರವಾಡಿ, ಎಸ್.ಆರ್.ಮುಜಗೊಂಡ, ಬಸವರಾಜ ರಾಹೂರ, ರಾಹುಲ್ ನಾಯಕ, ಫರೀನಾ ವಣಕ್ಯಾಳ, ತಾ.ಪಂ ವ್ಯವಸ್ಥಾಪಕ ನಾರಾಯಣಪುರ, ಪ್ರಕಾಶ ಕಾಂಬಳೆ, ವೀಣಾ ಕೊಳುರಗಿ, ಸುವರ್ಣಾ ಹಾವಿನಾಳ, ಸೌಮ್ಯ ಚಾಂದಕವಟೆ, ಎಸ್.ಎಸ್.ಪಾಟೀಲ, ಎಂ.ಪಿ.ಕೊಡತೆ ಮತ್ತಿತರಿದ್ದರು.

Read More

ಅಕ್ಕಮಹಾದೇವಿ ಮಹಿಳಾ ವಿವಿ ಎನ್ನೆಸ್ಸೆಸ್ ಕೋಶ & ಗಾಂಧಿ ಅಧ್ಯಯನ ಕೇಂದ್ರದಿಂದ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮಾಗಾಂಧೀಜಿ ಅವರು ಪ್ರತಿಪಾದಿಸಿದ ಅಭಿವೃದ್ಧಿ ಮಾದರಿಗಳನ್ನು ದೇಶದಲ್ಲಿ ಅನುಷ್ಟಾನಗೊಳಿಸಿದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ವಿಕಸಿತ ಭಾರತದ ಗುರಿಗಳನ್ನು ಸುಲಭವಾಗಿ ಸಾಧಿಸಲು ಸಾಧ್ಯವಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಪ್ರತಿಪಾದಿಸಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮಸ್ವರಾಜ್ಯ, ಗುಡಿ ಕೈಗಾರಿಕೆಗಳ ಅಭಿವೃದ್ಧಿ ಹೀಗೆ ಹಲವು ಬಗೆಯ ಅಭಿವೃದ್ಧಿ ಮಾದರಿಗಳ ಮೂಲಕ ನಾವು ದೇಶದ ಪ್ರಗತಿಗೆ ಮುಂದಾಗಬೇಕಿದೆ ಎಂದು ಅವರು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಪತ್ತಾರ ಅವರು, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮೌಲ್ಯಗಳು ಇವತ್ತಿಗೂ ಪ್ರಸ್ತುತವಾಗಿದ್ದು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಉತ್ತರ ಕರ್ನಾಟಕದ ದಸರಾ ಎಂದೇ ಈ ಭಾಗದಲ್ಲಿ ಖ್ಯಾತಿಯಾಗಿರುವ ತಾಲ್ಲೂಕಿನ ತಾಂಬಾ ನಾಡದೇವಿ ಉತ್ಸವಕ್ಕೆ ಅಪಾರ ಜನಸ್ತೋಮದ ಸಮ್ಮುಖ, ಗುರುವಾರ ಸಿಂದಗಿ ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆಯಲ್ಲಿ ಬಹು ವಿಜೃಂಭಣೆಯಿಂದ ಜರುಗಲಿದೆ.‌ಜಿಲ್ಲೆಯ ಗ್ರಾಮೀಣ ಪರಿಸರದಲ್ಲಿ ನಡೆಯುವ ವೈಭವದ ದಸರಾ ಉತ್ಸವಗಳಲ್ಲಿ ತಾಂಬಾ ನಾಡದೇವಿ ಉತ್ಸವ ಮೊದಲ ಸ್ಥಾನ ಪಡೆದಿದೆ. ೫೩ ವರ್ಷ ಗಳಿಂದ ಈ ಉತ್ಸವ ಗ್ರಾಮದಲ್ಲಿ ಆಯೋಜನೆಗೊಳ್ಳುತ್ತಿರುವುದು ವಿಶೇಷ. ಶ್ರೀ ಜಗದಂಬಾ ವಿದ್ಯಾವರ್ಧಕ ಸಂಘ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಪೂಲಸಿಂಗ್ ಚವ್ಹಾಣ ಆರಂಭಿಸಿದ ನಾಡದೇವಿ ಉತ್ಸವವನ್ನು ಇದೀಗ ಪುತ್ರರಾದ ನಾಗಠಾಣ ಮಾಜಿ ಶಾಸಕ ದೇವಾನಂದ ಎಫ್ ಚವ್ಹಾಣ ಮತ್ತು ಜಗದಂಬಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಕುಮಾರ ಚವ್ಹಾಣಮುಂದುವರೆಸಿಕೊಂಡು ಬಂದಿದ್ದಾರೆ. ವರ್ಷದಿಂದ ವರ್ಷಕ್ಕೆ ಉತ್ಸವದ ವಿಜೃಂಭಣೆ ಹೆಚ್ಚುತ್ತಿದೆ. ಮೈಸೂರ ದಸರಾ ವೀಕ್ಷಿಸಲು ಸಾಧ್ಯವಾಗದ ಗ್ರಾಮೀಣ ಜನರು ತಾಂಬಾ ನಾಡದೇವಿ ಉತ್ಸವವನ್ನೇ ಕಣ್ತುಂಬಿಕೊಳ್ಳುವುದು ವಿಶೇಷ.ಕಲಾವಿದರ ಮೆರುಗು ಇದೇ ೦೩ರದ್ದು ಗುರುವಾರ ನಡೆಯಲಿರುವ ನಾಡದೇವಿ ದಸರಾ ಉತ್ತವದ ಉದ್ಘಾಟನಾ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಪಂಚಾಯಿತಿ ಹಾಗೂ ತಹಶೀಲ್ದಾರ ಕಾರ್ಯಾಲಯಗಳಲ್ಲಿ ಗಾಂಧಿ ಹಾಗೂ ಶಾಸ್ತ್ರೀಜಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.ಪಟ್ಟಣದ ಹೊಸನಗರದ ಹಳೇ ಕೃಷಿ ಕೇಂದ್ರದ ಆವರಣದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ ನೇತೃತ್ವದಲ್ಲಿ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ನೆರವೇರಿಸಿದರು.ನಂತರ ಸದಸ್ಯರು ಹಾಗೂ ಸಿಬ್ಬಂದಿ ಸಸಿ ನೆಟ್ಟು ನೀರುಣಿಸಿದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಸದಯ್ಯನಮಠದ ವೀರಗಂಗಾಧರ ಶ್ರೀಗಳು ಮಾತನಾಡಿದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಸು ಜಮಾದಾರ, ಸುಮಂಗಲಾ ಸೇಬೆನವರ, ಸಿಂಧೂರ ಡಾಲೇರ, ಸಿಬ್ಬಂದಿ ಮುತ್ತುರಾಜ ಹಿರೇಮಠ, ನಾಮ ನಿರ್ದೇಶಿತ ಸದಸ್ಯರು ಹಾಗೂ ಪೌರ ಕಾರ್ಮಿಕರು ಇದ್ದರು.ತಹಶೀಲ್ದಾರ ಕಾರ್ಯಾಲಯ: ತಹಶೀಲ್ದಾರ ಪ್ರಕಾಶ ಸಿಂದಗಿ ನೇತೃತ್ವದಲ್ಲಿ ಕಾರ್ಯಾಲಯದ ಆವರಣವನ್ನು ಸ್ವಚ್ಛಗೊಳಿಸಿ ಗಾಂಧಿ ಹಾಗೂ ಶಾಸ್ತ್ರೀಜೀ ಜಯಂತಿ ಆಚರಿಸಲಾಯಿತು.ಬಸವಶರಣ ಸೇವಾ ಸಂಗಮ ಸಮಿತಿಯ ಅಧ್ಯಕ್ಷ ಸಂಗಪ್ಪಣ್ಣ ತಡವಲ್, ವಚನ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ತಹಶೀಲ್ದಾರ ಮಾತನಾಡಿದರು.ಶಿರಸ್ತೇದಾರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಕೂಡ ಹಣ ಬಿಡುಗಡೆ ಆಗದೇ ಇರುವದರಿಂದ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್, ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟರಗೆ ₹ 1,80 ಲಕ್ಷ (ಒಂದು ಲಕ್ಷ ಎಂಬತ್ತು ಸಾವಿರ) ಜಮೆಯಾಗಿರುವುದದು. ಹವಾಮಾನ ವಿಜಯಪೂರ ಮತ್ತು ಬಾಗಲಕೋಟದಲ್ಲಿ ಅದೆ ಮಾದರಿಯಲ್ಲಿರುವದರಿಂದ, ಈ ಜಿಲ್ಲೆಗಳಿಗೆ ಅದೇ ರೀತಿ ಹಣ ಸಂದಾಯವಾಗಬೇಕು. 2023-24ರಲ್ಲಿ ರೈತರು ವಿಮಾ ತುಂಬಿದ ಹಣ ಜಮಾ ಆಗಬೇಕಾಗಿತ್ತು ಎಪ್ರೀಲ್ 31ಕ್ಕೆ ವಿಮಾ ಅವಧಿ ಮುಕ್ತಾಯವಾಗಿರುತ್ತದೆ. ಆದರೆ 6 ತಿಂಗಳು ಕಳೆದರೂ ಕೂಡಾ ರೈತರಿಗೆ ಹಣ ಜಮೆಯಾಗಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಹಣವನ್ನು ತ್ವರಿತವಾಗಿ ಜಮಾ ಮಾಡುವ ವ್ಯವಸ್ಥೆ ಮಾಡಬೇಕು. ಪಕ್ಕದ ಜಿಲ್ಲೆಯಾದ ಬೆಳಗಾವಿಯ ಎಲ್ಲ ದ್ರಾಕ್ಷಿ ಬೆಳೆಗಾರರಿಗೆ ವಿಮಾ ತುಂಬಿದ ರೈತರ ಖಾತೆಗೆ…

Read More

ರಾಮಕೃಷ್ಣ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ರಾಮಕೃಷ್ಣ ನಗರದ ಶ್ರೀ ಗಜಾನನ್ ಮಿತ್ರ ಮಂಡಲದ ವತಿಯಿಂದ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಜಯಂತಿ ಅಂಗವಾಗಿ ಬುಧವಾರ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆರೋಜಿಸಲಾಗಿತ್ತು.ಶ್ರೀ ಗಜಾನನ ಮಿತ್ರ ಮಂಡಲದ ಸಂಚಾಲಕ ಸಂಜೀವ ನಾನಾಗೌಡ ಪಾಟೀಲ ಸ್ವಯಂ ರಕ್ತದಾನ ಮಾಡುವುದರ ಮೂಲಕ ರಕ್ತದಾನ ಮತ್ತು ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಸಂಜೀವ ಪಾಟೀಲ, ರಕ್ತದಾನವು ದಾನಗಳಲ್ಲಿಯೇ ಅತ್ಯಂತ ಶ್ರೇಷ್ಠ ದಾನವಾಗಿದ್ದು, ಓರ್ವ ವ್ಯಕ್ತಿಯ ರಕ್ತದಾನದಿಂದ ಮೂರು ಜನರ ಪ್ರಾಣ ಉಳಿಸಬಹುದಾಗಿದೆ. ಕಾರಣ ಪ್ರತಿಯೊಬ್ಬರೂ ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರೀಜಿಯವರು ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಗಾಂಧೀಜಿಯವರು ಸ್ವಚ್ಛತೆಗೆ ಬಹಳ ಮಹತ್ವ ನೀಡಿದ್ದರು. ನಾವೆಲ್ಲ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು…

Read More

ಬಿ ಎಲ್ ಡಿ ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶಕ್ಕೆ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತಿಯವರ ಅವರ ಕೊಡುಗೆ ಅಪಾರವಾದದ್ದು, ಭಾರತಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡಲು ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಮಹಾತ್ಮ ಗಾಂಧೀಜಿ ಸ್ವಾತಂತ್ರ‍್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಗಾಂಧೀಜಿಯವರ ಸತ್ಯ ಅಹಿಂಸೆಯ ಸಿದ್ಧಾಂತ ಬೋಧನೆಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತ್ರಿ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ವೇಳೆ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಉಷಾದೇವಿ ಹಿರೇಮಠ ಮಾತನಾಡಿ, ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ್ ಶಾಸ್ತಿಯವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕತೆ ಇದೆ. ಅದೇ ರೀತಿಯಾಗಿ ಲಾಲಬಹಾದ್ದೂರ ಶಾಸ್ತ್ರೀಜಿಯವರ ಕೊಡುಗೆಯನ್ನು ನಾವು ಸ್ಮರಿಸಬೇಕಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ…

Read More