Author: editor.udayarashmi@gmail.com

ಸಾವಿರಾರು ಶಿಕ್ಷಕರಿಂದ ಜಿಲ್ಲಾಧಿಕಾರಿ, ಜಿಪಂ ಸಿಇಓ, ಡಿಡಿಪಿಐಗೆ ಮನವಿ ವಿಜಯಪುರ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗಸ್ಟ್ 12 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಬೃಹತ್ ಹೋರಾಟಕ್ಕಾಗಿ ಬುಧವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಹಾಗೂ ಡಿಡಿಪಿಐ ಎನ್.ಎಚ್.ನಾಗೂರ ಅವರಿಗೆ ಸಾವಿರಾರು ಶಿಕ್ಷಕರು ರ್‍ಯಾಲಿ ಮೂಲಕ‌ ಸಾಗಿ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ಬೇವನೂರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಬೇಕು. 1ರಿಂದ 8 ನೇ ತರಗತಿಗೆ ನೇಮಕ ಹೊಂದಿದವರನ್ನು ಪಿ.ಎಸ್.ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದ್ದನ್ನು ಹಿಂಪಡೆಯಬೇಕು. 2016 ಕ್ಕಿಂತ ಮುಂಚೆ ನೇಮಕ ಹೊಂದಿದ ಎನ್.ಸಿ.ಟಿ.ಈ ನಿಯಮಾವಳಿ…

Read More

ತಾಳಿಕೋಟಿ: ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜೊತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಆರೋಗ್ಯದ ಕುರಿತು ನಿರ್ಲಕ್ಷ ಬೇಡ ಎಲ್ಲ ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಅಮೂಲ್ಯವಾಗಿದೆ ಎಂದು ತಾಲೂಕಾ ಪಂಚಾಯತ ಮನರೇಗಾ ಸಹಾಯಕ ನಿರ್ದೇಶಕಿ ಶ್ರೀಮತಿ ಸುಜಾತ ಯಡ್ರಾಮಿ ಹೇಳಿದರು. ಬುಧವಾರ ತಾಲೂಕಿನ ಬಾವೂರ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಉಚಿತ ಆರೋಗ್ಯ ತಪಸಾಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ಶಂಕರ ತಳವಾರ ಅವರು ಮಾತನಾಡಿ ಆರೋಗ್ಯವಾಗಿದ್ದರೆ, ಸುಖ ಹಾಗೂ ನೆಮ್ಮದಿಯಿಂದ ಬಾಳಬಹುದು. ಮನುಷ್ಯ ಆರೋಗ್ಯವನ್ನು ಹಾಳು ಮಾಡಿಕೊಂಡು ರೋಗಗಳಿಗೆ ತುತ್ತಾದರೆ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುವುದರ ಜೊತೆಗೆ ದುಡಿದು ಸಂಪಾದಿಸಿದ ಹಣವನ್ನು ಆಸ್ಪತ್ರೆಗೆ ಖರ್ಚು ಮಾಡಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣಗಳು ಕಾಣುವ ಮುನ್ನವೇ ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು ಎಂದು ತಿಳಿಸಿದರು.ಈ ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ ಕಾಯಿಲೆಗಳ ತಪಾಸಣೆ ನೆಡೆಸಿ ಅಗತ್ಯ ಇರುವ ರೋಗಿಗಳಿಗೆ…

Read More

ಆಲಮೇಲ: ಪಟ್ಟಣದ ಪ್ರಾಚೀನ ಕಾಲದ ವಿಶ್ವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಪರ್ಯಂತವಾಗಿ ಬಸವ ಪುರಾಣ ಪ್ರವಚನ ಸಾಯಂಕಾಲ ೭ ರಿಂದ೮ ರವರೆಗೆ ಪರಮಪೂಜ್ಯ ಪಂಚಾಕ್ಷರಿ ದೇವರು ತಾ.ಚಿಂಚೋಳಿ ಇವರ ವಾಣಿಯಿಂದ ಕಲ್ಯಾಣ ಕುಮಾರ ಹಾಗೂ ರಾಜು ಇವರ ಸಂಗೀತ ಸಂಯೋಜನೆಯಲ್ಲಿ ಸಾಗಿಬರುವುದು.ಬಸವ ಪುರಾಣ ಪ್ರವಚನಕ್ಕೆ ಕಾರ್ಯಕ್ರಮದಲ್ಲಿ ಕೆ.ಪಿ.ಆರ್ ಸಕ್ಕರೆ ಕಾರ್ಖಾನೆಯ ಆಡಳಿತಾಧಿಕಾರಿ ಪಾರ್ಥಿಬನ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಶಿವಕುಮಾರ್ ಗುಂದಗಿ, ಬಿಕೆ. ರೇಣುಕಾ ಅಕ್ಕನವರು, ಶಂಕರಲಿಂಗ ಮಹಾರಾಜರು, ಗುರುಲಿಂಗ ಶಿವಾಚಾರ್ಯರು, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಪ್ರಭು ವಾಲಿಕಾರ, ಪಿ.ಎಸ್. ಐ ಅರವಿಂದ ಅಂಗಡಿ. ಮಾಜಿ.ಗ್ರಾ.ಪಂ ಅಧ್ಯಕ್ಷ ಹನಮಂತ ಹೂಗಾರ, ಕಮಿಟಿ ಅಧ್ಯಕ್ಷ ಬಸವರಾಜ ತೆಲ್ಲೂರ, ವ್ಯಾಪಾರಿ ಸಂಘದ ಅಧ್ಯಕ್ಷ ದೇವಪ್ಪ ಗುಣಾರಿ, ಮತ್ತಿತರು ಇದ್ದರು.

Read More

ಕಲಕೇರಿ: ಚಿಕ್ಕ ಮಕ್ಕಳಿಗೆ ಅಂಗನವಾಡಿಗಳು ಆಶಾಕಿರಣ ಇಂತಹ ಅಂಗನವಾಡಿಗಳು ಸುಧಾರಣೆಯಾಗಬೇಕಾದರೆ ಕಲಿಕೆಗೆ ಪೂರಕವಾದ ಸಾಮಗ್ರಿಗಳು ಬೇಕು. ಪ್ರತಿ ಹಳ್ಳಿಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಸಾಮಗ್ರಿಗಳನ್ನು ಸದ್ಬಳಕೆ ಮಾಡಿದಾಗ ಮಾತ್ರ ಯೋಜನೆ ಸಾರ್ಥಕತೆಯಾಗುತ್ತದೆ ಎಂದು ಕೆರುಟಗಿ ಹಿರೇಮಠದ ಶಿವಬಸವ ಶಿವಾಚಾರ್ಯರು ಹೇಳಿದರು.ಸಮೀಪದ ಕೆರೂಟಗಿ ಗ್ರಾಮ ಪಂಚಾಯಿತಿಯಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸತ್ಯವ್ವ ಪರಶುರಾಮ ದೊಡಮನಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ನಮಗೆ ಎರಡು ಕಣ್ಣುಗಳಿದ್ದಂತೆ ಆಟದೊಂದಿಗೆ ಪಾಠ, ಆರೋಗ್ಯ ರಕ್ಷಣೆಯಲ್ಲಿ ನಿಮ್ಮ ಪಾತ್ರ ಬಹಳ ಮುಖ್ಯ ಎಂದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಎ ಟಿ ಅಂಗಡಿ ಮಾತನಾಡಿ, ತಾಲೂಕು ಪಂಚಾಯತ್ ನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಭಾರತಿ ಚಲುವಯ್ಯ ಅವರ ಮಾರ್ಗದರ್ಶನದಂತೆ ಕಿಟ್ ನೀಡಿದ್ದೇವೆ ಎಂದರು.ಬಾಬು ರಾಠೋಡ ಮಾತನಾಡಿದರು.ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆರೂಟಗಿ, ತಿಳಗೂಳ, ಕುದರಗುಂಡ ಮತ್ತು ಕೆರೂಟಗಿ ಎಲ್…

Read More

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೨೦ರಂದು ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಆಗಸ್ಟ್ ೯ರ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಜಿಲ್ಲಾ ಮಟ್ಟದ ವಿವಿಧ ಅಧಿಕಾರಿ, ಸಂಘ-ಸಂಸ್ಥೆ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಅಗಸ್ಟ್ ೯ರಂದು ಕಟ್ಲಾ, ರೋಹು ಮೀನುಮರಿಗಳನ್ನು ತಲಾ ಒಂದು ರೂಪಾಯಿಯಂತೆ ಮಾರಾಟ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳವಂತೆಯೂ, ಹೆಚ್ಚಿನ ಮಾಹಿತಿಗಾಗಿ ಮೊ:೯೪೮೦೫೧೮೬೭೯, ೯೪೮೦೫೧೮೬೭೯, ೯೯೪೫೯೫೯೭೦೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ೩೦-೦೯-೨೦೨೪ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ,ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸೈನಿಕರ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ೩೦-೦೯-೨೦೨೪ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಯಲ್ಲಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕರ್ನಾಟಕದ ರಹವಾಸಿಯಾಗಿರುವ ಮಾಜಿ ಸೈನಿಕರ ಮಕ್ಕಳಿಂದ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.ವಿಜಯಪುರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿಯನ್ನು ಪಡೆದು, ತ್ರಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಲು ೩೧-೧೦-೨೦೨೪ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೩ರ ಇಂಗ್ಲೀಷ್ ಭಾಷಾ ವಿಷಯದಲ್ಲಿ ಜಿಲ್ಲೆಯ ಒಟ್ಟು ೨,೮೦೯ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ೨,೧೬೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ೬೪೦ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More