Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: 2016 ಕ್ಕಿಂತ ಮುಂಚೆ 1 ರಿಂದ 7/8 ಕ್ಕೆ ನೇಮಕಗೊಂಡ ಶಿಕ್ಷಕರ ಹಿಂಬಡ್ತಿಯನ್ನು ಕೂಡಲೇ ಹಿಂಪಡೆದು, ಪದವಿ ಹೊಂದಿದ ಎಲ್ಲ ಶಿಕ್ಷಕರನ್ನು ಒಂದೇ ಬಾರಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರೆಂದು ಸೇವಾಹಿರಿತನದೊಂದಿಗೆ ಪದನಾಮೀಕರಿಸುವುದರ ಜೊತೆಗೆ ಮುಖ್ಯಶಿಕ್ಷಕ ಹುದ್ದೆಗೆ ಹಾಗೂ ಪ್ರೌಢಶಾಲಾ ಶಿಕ್ಷಕ ಬಡ್ತಿಗೆ ಈ ಮುಂಚಿನ ನಿಯಮಾವಳಿಯಂತೆ ಸೇವಾ ಹಿರಿತನದ ಆಧಾರದ ಮೇಲೆ ನೀಡಲು ಆಗ್ರಹಿಸಿ ಸರಕಾರಕ್ಕೆ ಒತ್ತಾಯಿಸಲು ಹಾಗೂ ಸರಕಾರ ರಚಿಸಿರುವ ಸಮಿತಿಯು ನಿಗದಿತ ಕಾಲಮಿತಿಯೊಳಗೆ ವರದಿಯನ್ನು ನೀಡಿ 2016 ಕ್ಕಿಂತ ಮುಂಚೆ ನೇಮಕವಾದ ಸಮಸ್ತ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹಿಸಿ, ಬಬಲೇಶ್ವರ ತಾಲೂಕು ಶಿಕ್ಷಕ ಸಂಘದ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಅವರಿಗೆ ರವಿವಾರ ಮನವಿ ಸಲ್ಲಿಸಲಾಯಿತು.ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಶಾಸಕರು ಈ ಕುರಿತು ಮುತುವರ್ಜಿ ವಹಿಸಿ ಸಮಿತಿಗೆ ಮನವರಿಕೆ ಮಾಡವುದರ ಜೊತೆಗೆ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಶಿಕ್ಷಕರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ರೋಣಿಹಾಳ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ಶಿಕ್ಷಕ ಸಂಗಮೇಶ ಜಂಗಮಶೆಟ್ಟಿ ಅವರಿಗೆ ಬೆಂಗಳೂರಿನ ಜನಸಿರಿ ಪೌಂಡೇಶನ ವತಿಯಿಂದ ಪುಟ್ಟಣ್ಣ ಚೆಟ್ಟಿ ಪುರಭವನ (ಬೆಂಗಳೂರ)ದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ಹಬ್ಬ 2024 ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.ಗುಣಾತ್ಮಕ ಶಿಕ್ಷಣ ಹೆಚ್ಚಿಸುತ್ತಾ ತಾಲ್ಲೂಕ, ಜಿಲ್ಲಾ, ರಾಜ್ಯ ಹಾಗೂ ಅಂತರಾಜ್ಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ ಹಲವಾರು ಶಿಕ್ಷಕರಿಗೆ ಕಾರ್ಯಗಾರ ನೀಡಿ ಗುಣಾತ್ಮಕ ಶಿಕ್ಷಣ ಹೆಚ್ಚಿಸಲು ಶ್ರಮ ವಹಿಸಿದ್ದಾರೆ. ಇವರಿಗೆ ಅಧಿಕಾರಿಗಳು, ಶಿಕ್ಷಕರು ಶುಭ ಹಾರೈಸಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡಿದ 131 ಅತ್ಯುತ್ತಮ ಶಿಕ್ಷಕರನ್ನು ಗುರ್ತಿಸಿ ಜನಸಿರಿ ತಂಡದ ಮುಖ್ಯಸ್ಥ ನಾಗಲೇಖ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯಿಂದ ಶಿಕ್ಷಕರಾದ ಪರಮೇಶ್ವರ ಗದ್ಯಾಳ, ಈರಣ್ಣಾ ಹೊಸಟ್ಟಿ, ರೇಷ್ಮಾ ಪವಾರ, ಸಚಿನ ತಳವಾರ ಪ್ರಶಸ್ತಿಗೆ ಭಾಜನರಾದರು.

Read More

ಬಾಬಾನಗರ ಗ್ರಾಮದಲ್ಲಿ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ ಆಯೋಜನೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕು ವ್ಯಾಪ್ತಿಯ ಬಾಬಾನಗರ ಗ್ರಾಮದಲ್ಲಿ ತಾಲೂಕು ಪಂಚಾಯತಿ ತಿಕೋಟಾ ಹಾಗೂ ಗ್ರಾಮ ಪಂಚಾಯತಿ ಬಾಬಾನಗರ ಅವರ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ಹಮ್ಮಿಕೊಂಡ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೇಣುಕಾ ಸೋಲಾಪುರ ರವರು, ಸೆ.೧೪ ರಿಂದ ನಮ್ಮ ಬಾಬಾನಗರ ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ ವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ಇಂದು ನಮ್ಮ ಗ್ರಾಮದ ವಿವಿಧ ಸರಕಾರಿ ಶಾಲೆ ಮಕ್ಕಳಿಂದ ಜಾಥಾ ಆಯೋಜನೆ ಮಾಡಲಾಗಿದೆ. ಅದರ ಜೊತೆಗೆ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಪಕ್ಕ ಮನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಕಲ್ಯಾಣಿ ಹತ್ತಿರ ಶ್ರಮದಾನ ಮಾಡುವ ಮೂಲಕ ಈ ಅಭಿಯಾನದ ಮುಖ್ಯ ಉದ್ಧೇಶವಾದ ಬೂದು ನೀರು ನಿರ್ವಹಣೆ ಕುರಿತು ಜನ ಜಾಗೃತ್ತಿ ಮೂಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.ಬೂದು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಬಸವಭವನದಲ್ಲಿ ಶನಿವಾರ ತಾಜ್ ಸೋಶಿಯಲ್ ಗ್ರುಫ್ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರನ್ನು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಭಾವಚಿತ್ರ ನೀಡುವ ಮೂಲಕ ಸನ್ಮಾನಿಸಿದರು.ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ್ ಪಾಟೀಲ, ಕೆಪಿಸಿಸಿ ವಕ್ತಾರ ನಿಕಿತರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಅಧ್ಯಕ್ಷ ಪರಶುರಾಮ ಜಮಖಂಡಿ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ಪ್ರವೀಣ ಪೂಜಾರಿ, ನಜೀರ ಗಣಿ,ಟಿಎಪಿಎಂಸಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಬಸವೇಶ್ವರ ದೇವಾಲಯ ಇಂಟರ್ನ್ಯಾಷನಲ್ ಶಾಲೆಯ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡುವ ಜೊತೆಗೆ ಪ್ರೋತ್ಸಾಹಿಸುವ ಕೆಲಸವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ, ಬೀದರಿನ ಡಾ.ಸಂಜೀವಕುಮಾರ ಅತಿವಾಳೆ ಹೇಳಿದರು.ಪಟ್ಟಣದ ಮಾರ್ಗವಾಗಿ ಗುಡ್ಡಾಪುರಕ್ಕೆ ತೆರಳುವ ಸಂದರ್ಭದಲ್ಲಿ ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ನಿವಾಸದಲ್ಲಿ ಭಾನುವಾರ ಸಂಜೆ ಸನ್ಮಾನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಂದಾಗಿ ಕನ್ನಡ ಕಟ್ಟುವ ಕೆಲಸವನ್ನು ಮಾಡಬೇಕಿದೆ. ಗಡಿ ಪ್ರದೇಶದಲ್ಲಿ ಕನ್ನಡ ಬೆಳವಣಿಗೆಗೆ ಇನ್ನೂ ಹೆಚ್ಚು ಒತ್ತು ನೀಡಬೇಕಾಗಿದೆ. ಗಡಿ ಪ್ರದೇಶದಲ್ಲಿರುವ ಕನ್ನಡ ಶಾಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅವಶ್ಯಕತೆ ಇಂದು ಹೆಚ್ಚಾಗಿದೆ ಎಂದರು.ಇದೇ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿಗೆ ಭಾಜನರಾದ ಬೀದರ ಖ್ಯಾತ ಸಾಹಿತಿ, ಕನ್ನಡಪರ ಹೋರಾಟಗಾರ ಪಂಚಾಕ್ಷರಿ ಪುಣ್ಯಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ, ತಾಲೂಕು ಶರಣ ಸಾಹಿತ್ಯ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಅಧಿಕಾರ ಶಾಶ್ವತ ಅಲ್ಲ ಇರುವ ದಿನಗಳು ಸಾರ್ವಜನಿಕರ ಬಡವರ ನೊಂದವರ ದನಿಯಾಗಿ ಕಾರ್ಯ ಮಾಡೋಣ, ತಾಲೂಕಿನ ತಾಂಬಾ ಗ್ರಾಮದ ಅಭಿವೃದ್ಧಿಗೆ ಜೀತದಾಳಿನಂತೆ ದುಡಿದು ಗ್ರಾಮ ಮಾದರಿ ಗ್ರಾಮನ್ನಾಗಿಸುತ್ತೇನೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ೨೦೨೩-೨೪ನೇ ಸಾಲಿನ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆಗೆ ಅಂದಾಜು ರೂ ೫೦ ಲಕ್ಷ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ ಈ ರಸ್ತೆ ಸುಧಾರಣೆ ಮಾಡಬೇಕೆಂಬ ಸಂಕಲ್ಪದಂತೆ ಕಾಮಗಾರಿಗೆ ಅನುದಾನ ನೀಡಲಾಗಿದೆ.ಯಾವುದೇ ಧರ್ಮ ಹಾಗೂ ಜಾತಿಗೆ ಅಂಟಿಕೊಂಡು ಕೆಲಸ ಮಾಡದೆಯೆ, ಎಲ್ಲ ಧರ್ಮ ಹಾಗೂ ಪ್ರತಿಯೊಂದು ಜಾತಿಯವರ ಕೆಲಸ ಕಾರ್ಯ ಮಾಡುತ್ತಿದ್ದೇನೆ. ಅದಕ್ಕೆ ಪ್ರತಿಯೊಂದು ಸಮಾಜದವರು ಯಾವುದೇ ಕೆಲಸ ಕಾರ್ಯಗಳಿದ್ದರೆ ನಿರ್ಭಿತಿಯಿಂದ ಬಳಿ ಬಂದು ಕೆಲಸ ಮಾಡಿಕೊಳ್ಳುವಂತೆ ಮನವಿ ಮಾಡಿದರು. ನಾನು ನಿಮ್ಮಂತೆ ಒಬ್ಬ ವ್ಯಕ್ತಿ. ನಿಮ್ಮ ಕಷ್ಟಗಳಿಗೆ ಸ್ಪಂದಿಸಿ, ಸಹಾಯ ಮಾಡುವ ಸೇವಕನಾಗಿದ್ದೇನೆ. ಹೊರತು ನಾಯಕನಲ್ಲ..! ಗ್ರಾಮದಲ್ಲಿ ಆಗದೆಯಿರುವ ಕೇಲಸಗಳನ್ನು ಈಗಿರುವ ಅಧಿಕಾರದಲ್ಲಿ ಮಾಡಿತೋರಿಸುವೆ. ಜನ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಳಿಕೋಟೆ ತಾಲೂಕು ಆದ ಬಳಿಕ ನಡೆಯುತ್ತಿರುವ ಪ್ರಥಮ ತಾಳಿಕೋಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲ ಸಾಹಿತಿಗಳು, ಕನ್ನಡಾಭಿಮಾನಿಗಳು ಭಾಗಿಯಾಗಿ ಕನ್ನಡದ ತೇರನ್ನು ಎಳೆಯುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.೧ ರಂದು ಸಮ್ಮೇಳನ ನಿಗದಿಯಾಗಿದ್ದು ಅಂದು ಬೆಳಿಗ್ಗೆ ಸಮ್ಮೇಳನಕ್ಕೆ ತೆರಳಲು ಮತ್ತು ಸಂಜೆ ಅಲ್ಲಿಂದ ಮರಳಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿಕೊಳ್ಳೋಣ. ನಮ್ಮ ತಾಲೂಕಿನ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾದಲ್ಲಿ ಸಮ್ಮೇಳನ ಯಶಸ್ವಿ ಸಾಧ್ಯತೆ ಹೆಚ್ಚಿರುವದರಿಂದ ಶಾಲೆಗಳಿಗೆ ರಜೆ ಕೊಡಿಸುವ ಪ್ರಯತ್ನ ಮಾಡುವೆ ಎಂದರು.ಸಾಹಿತಿಗಳಾದ ಅಶೋಕ ಮಣಿ, ಪಿ.ಎಚ್.ಉಪ್ಪಲದಿನ್ನಿ, ಶಿವಕುಮಾರ ಹಡಪದ, ಪ್ರಭುಗೌಡ ರಾಯರೆಡ್ಡಿ, ಬಿ.ವಿ.ಕೋರಿ, ಎಂ.ಬಿ.ಪಾಟೀಲ ಮತ್ತೀತರರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.ಈ ವೇಳೆ ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಜಯ ಕರ್ನಾಟಕ ಸಂಘಟನೆಯ…

Read More

ಸೇತುವೆಯ ಮೇಲೆ ಸಿಸಿ ರಸ್ತೆಗೆ ಆಗ್ರಹ | 4 ಗಂಟೆ ರಸ್ತೆ ತಡೆ | ಸಂಚಾರ ಅಸ್ತವ್ಯಸ್ತ ಉದಯರಶ್ಮಿ ದಿನಪತ್ರಿಕೆ ಆಲಮೇಲ: 65 ವರ್ಷಗಳ ಹಳೆಯದಾದ ದೇವಣಗಾಂವ ಐತಿಹಾಸಿಕ ಸೇತುವೆ ಕಳೆದ ಹಲವಾರು ವರ್ಷಗಳಿಂದ ಸೇತುವೆಯ ಮೇಲ್ಭಾಗ ಮಾತ್ರ ಕುಸಿಯುತ್ತ ಸಾಗಿದ್ದು ಕೆಳಗಿನ ಭಾಗ ಸಂಪೂರ್ಣ ಇನ್ನೂ ಗಟ್ಟಿಮುಟ್ಟಾಗಿದೆ ಆದ್ದರಿಂದ ಮೇಲ್ಭಾಗದ ರಸ್ತೆ ದುರಸ್ತಿ ಮಾಡಬೇಕೆಂದು ಆಗ್ರಹಿಸಿ ದೇವಣಗಾಂವ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಸೋಮವಾರ 4 ತಾಸು ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದರು.ಸಾಮಾಜಿಕ ಹೋರಾಟಗಾರ ದತ್ತಾತ್ರೇಯ ಸೊನ್ನ ಮಾತನಾಡಿ ಕಳೆದ 15 ವರ್ಷದಿಂದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಐತಿಹಾಸಿಕ ಭೀಮಾ ನದಿಗೆ ಅಡ್ಡಲಾಗಿರುವ ಸೇತುವೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ ನಾವು ಈ ಪ್ರತಿಭಟನೆ ಮಾಡುವ ಉದ್ದೇಶ ಸೇತುವೆಯ ಮೇಲೆ ಸಿಸಿ ರಸ್ತೆ ಮಾಡಬೇಕು ಹಾಗೂ ತಾಲ್ಲೂಕಾ ಕೇಂದ್ರವಾದ ಆಲಮೇಲ ಪಟ್ಟಣಕ್ಕೆ ಹೋಗಲು ಸರಿಯಾದ ರಸ್ತೆ ಇಲ್ಲ ಈ ರಸ್ತೆಯ ಮೇಲೆ ಸಂಚಾರ ಮಾಡಬೇಕಾದರೆ ಜೀವ ಕೈಯಲ್ಲಿ ಹಿಡಿದು…

Read More

ಅದ್ಧೂರಿಯಾಗಿ ಜರುಗಿದ ಗಡಿ ಕನ್ನಡಿಗರ ಸಮಾವೇಶ | ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ೭೪೨ ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು.ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವಿಜಯಪುರ, ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ ಟ್ರಸ್ಟ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ-೫೦, ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕರ್ನಾಟಕ ಗಡಿ ಪ್ರಾಧಿಕಾರದ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ರಾಜ್ಯದಲ್ಲಿಯೇ ಮೊಟ್ಟಮೊದಲ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಕಗ್ಗೋಡ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಸೆ.೨೮ರಂದು ಶನಿವಾರ ವಿಶ್ವ ರೇಬೀಸ್ ದಿನಾಚರಣೆ ಆಚರಿಸಲಾಯಿತು.ಈ ವೇಳೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ಮಾತನಾಡಿ, ನಾಯಿಯು ಸ್ನೇಹಮಯಿ ಮತ್ತು ಆಜ್ಞಾಪಾಲಕ ಪ್ರಾಣಿಯಾಗಿದ್ದರೂ ಸಹ ಅದಕ್ಕೆ ರೇಬೀಸ್ ರೋಗ ತಗುಲಿದರೆ ಅದರಿಂದ ಮಾನವನ ಜೀವಕ್ಕೆ ಅಪಾಯವಿದೆ. ಕಾರಣ ನಾಯಿ ಸಾಕುವವರು ಮತ್ತು ಸಾರ್ವಜನಿಕರು ಈ ಕುರಿತು ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.ಈ ವರ್ಷ ಇಲಾಖೆ ವತಿಯಿಂದ ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಗಳಲ್ಲಿ ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕೆ ಹಾಕಲಾಗಿದೆ. ಅಲ್ಲದೇ ಶಾಲಾ ಮಕ್ಕಳಿಗೆ ರೇಬೀಸ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಎಂದು ಡಾ.ಕನಮಡಿ ವಿವರಿಸಿದರು.ಕುಮಟಗಿ ಗ್ರಾಪಂ ಅಧ್ಯಕ್ಷ ರಮೇಶ ಸಜ್ಜನ, ಹಿರಿಯ ಪಶುವೈದ್ಯಾಧಿಕಾರಿ ಡಾ.ಬಾಳಾಸಾಹೇಬ ಬಂಡಿ ಹಾಗೂ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರಿದ್ದರು.ಈ ಸಂದರ್ಭದಲ್ಲಿ ಸುಮಾರು ೩೫ ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕೆ ಹಾಕಲಾಯಿತು.

Read More