Author: editor.udayarashmi@gmail.com

ನೀಟ್’ ಸೀಟು ಪಡೆಯುವಲ್ಲಿ ಶತಕ ದಾಟಿದ ಎಕ್ಸಲೆಂಟ್ ವಿಜ್ಞಾನ ಪ.ಪೂ ಕಾಲೇಜ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುಣಮಟ್ಟದ ಶಿಕ್ಷಣವನ್ನು ನೀಡಿದರೆ ಅತ್ಯುತ್ತಮವಾದ ಫಲಿತಾಂಶ ದೊರೆಯುತ್ತದೆ. ಅತ್ಯುತ್ತಮ ಫಲಿತಾಂಶವು ಸಮಾಜದ ವ್ಯವಸ್ಥೆಯನ್ನು ಮತ್ತಷ್ಟು ಅತ್ಯುತ್ತಮಗೊಳಿಸುವುದಕ್ಕೆ ಸಾಧ್ಯವಾಗಿಸುತ್ತದೆ. ಆ ನಿಟ್ಟಿನಲ್ಲಿ ಸದಾ ಉತ್ತಮ ಫಲಿತಾಂಶವನ್ನು ನೀಡುವುದರ ಮೂಲಕವೇ ಜನಮಾನಸದಲ್ಲಿ ಉಳಿದಿರುವ ಎಕ್ಸಲೆಂಟ್ ವಿಜ್ಞಾನ ಪದವಿಪೂರ್ವ ಕಾಲೇಜು ಎನ್‌ಇಇಟಿ (ನೀಟ್) ಪರೀಕ್ಷೆಯಲ್ಲಿ ತನ್ನ ಸಾಧನೆಯ ಪಥವನ್ನು ವಿಸ್ತಿರಿಸಿಕೊಂಡಿದ್ದು, ೨೦೨೪ ನೇ ಸಾಲಿನಲ್ಲಿ ೧೦೯ ವೈದ್ಯಕೀಯ ಸೀಟುಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಒದಗಿಸಿದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ತಿಳಿಸಿದರು.ನೀಟ್ ಪರೀಕ್ಷೆಯ ಸೀಟು ಹಂಚಿಕೆಯ ಕೊನೆಯ ಸುತ್ತಿನ ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಅವರು, ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾರಂಭಗೊಂಡಾಗಿನಿಂದ ಪ್ರಗತಿ ಪಥದತ್ತ ಹೆಜ್ಜೆ ಹಾಕಿದೆ. ಅದರಲ್ಲೂ ವೈದ್ಯಕೀಯ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ನಮ್ಮ ಸಂಸ್ಥೆ ಒಂದು ಹೆಜ್ಜೆ ಮುಂದಿಡುತ್ತಿದೆ. ಈ ಕಾರಣದಿಂದಾಗಿ ಪ್ರತಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನೂರಾರು ವಿಕಲಚೇತನರಿಗೆ ಸಂಗೀತ, ಪುರಾಣ-ಪ್ರವಚನ ಕಲೆಗಳನ್ನು ಕಲಿಸಿ ಸ್ವತಂತ್ರವಾಗಿ ಬದುಕು ಸಾಗಿಸಲು ಆತ್ಮವಿಶ್ವಾಸ ತುಂಬಿದ್ದ ಗಾನಯೋಗಿ ಪುಟ್ಟರಾಜ ಗವಾಯಿಗಳ ಶರೀರ ಮಾತ್ರ ನಮ್ಮನ್ನ ಅಗಲಿದೆ. ಆದರೆ ಅವರ ಆದರ್ಶ ತತ್ವಗಳು ಸದಾ ಜೀವಂತವಾಗಿವೆ ಎಂದು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.ಪಟ್ಟಣದ ಪುರಸಭೆ ಎದುರಿಗೆ ಪುಟ್ಟರಾಜ ಗವಾಯಿಗಳ ಕನ್ನಡ ಸಾಂಸ್ಕೃತಿಕ ಕಲಾ ಬಳಗ, ವಿಕಲಚೇತನರ ಕಲಾಬಳಗ, ಡಾ.ಪುನೀತ್ ರಾಜಕುಮಾರ ಮೆಲೋಡೀಸ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಂಡಿತ ಪುಟ್ಟರಾಜ ಗವಾಯಿಗಳ ೧೪ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಕ್ತರ ಸಂತಸದಲ್ಲಿ ತೃಪ್ತಿ ಕಾಣುತ್ತಿದ್ದ ಗವಾಯಿಗಳು ಸಂಗೀತ, ಸಾಹಿತ್ಯ, ಆಧ್ಯಾತ್ಮದಲ್ಲಿ ಅವರು ತೋರಿದ ಶ್ರದ್ಧೆ ಅನನ್ಯವಾದದ್ದು. ಕಲಾವಿದರು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುವಂತಾಗಬೇಕು ಎಂದರು.ಸಾನಿಧ್ಯ ವಹಿಸಿದ್ದ ಶರಣ ಸೋಮನಾಳದ ಮಹಾದೇವ ಶಾಸ್ತ್ರಿಗಳು ಆಶೀರ್ವಚನ ನೀಡಿದರು.ಸಮಾಜ ಸೇವಕ ಸಿಬಿ ಅಸ್ಕಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಮಾತನಾಡಿದರು.…

Read More

ಇವಣಗಿ ಗ್ರಾಮದಲ್ಲಿ ತಾಲೂಕು ೧೦ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದ ಆರಾಧ್ಯದೈವ ಲಕ್ಕಮ್ಮದೇವಿ ದೇವಸ್ಥಾನ ಆವರಣದಲ್ಲಿ ಗುರುವಾರ ಸಂಜೆ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆ, ಸಿದ್ಧತೆ ಕುರಿತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ, ಗ್ರಾಮದ ಮುಖಂಡರ, ಗ್ರಾಮಸ್ಥರ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ೧೩ ರಂದು ನಡೆಸಲು ತೀರ್ಮಾನಿಸಲಾಯಿತು.ಸಭೆಯ ಉದ್ದೇಶಿಸಿ ಗ್ರಾಮದ ವಕೀಲ ಚಂದ್ರಶೇಖರ ಸುಭಾನಪ್ಪನವರ ಮಾತನಾಡಿ, ಬರುವ ನವೆಂಬರ್ ೧೩ ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ನಮ್ಮ ಗ್ರಾಮದಲ್ಲಿ ನಡೆಯುತ್ತಿರುವದು ಈ ಭಾಗದ ಜನರಿಗೆ ತುಂಬಾ ಸಂತಸ ಉಂಟು ಮಾಡಿದೆ. ಈ ಸಮ್ಮೇಳನದ ಯಶಸ್ವಿಗೆ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸಹಕಾರ ನೀಡುತ್ತಾರೆ. ಕನ್ನಡ ಭುವನೇಶ್ವರಿ ತೇರು ನಮ್ಮ ಗ್ರಾಮದಲ್ಲಿ ಎಳೆದರೆ ಅದು ನಮ್ಮ ಗ್ರಾಮದ ಆರಾಧ್ಯದೈವ ಲಕ್ಕಮ್ಮದೇವಿಯ ತೇರು ಎಳೆದಂತೆ ಎಂದರು.ಜಿಲ್ಲಾ ಕನ್ನಡ ಸಾಹಿತ್ಯ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕುಂಟೋಜಿ ಪೆಟ್ರೋಲ್ ಪಂಪ್ ಎದುರಿಗೆ ಇದ್ದ ಟೀ ಪಾಯಿಂಟ್ ಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶುಕ್ರವಾರ ವ್ಯಕ್ತಿಯೊರ್ವ ಮೃತ ಪಟ್ಟ ಘಟನೆ ಜರುಗಿದೆ.ಮೃತ ದುರ್ದೈವಿ ಕಾಸೀಂಸಾಬ ಮಲ್ಲಿಕಸಾಬ ನದಾಫ್(೫೧) ಅವರು ಟೀ ಪಾಯಿಂಟ್ ನಡೆಸುತ್ತಿದ್ದರು. ಎಂದಿನಂತೆ ಟೀ ಪಾಯಿಂಟ್ಚ ನಡೆಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಟೀ ಪಾಯಿಂಟ್ ಗೆ (ಕಬ್ಬಿಣದ ತಳ್ಳಗಗಾಡಿ) ವಿದ್ಯುತ್ ತಗುಲಿದ ಪರಿಣಾಮ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ, ಪಿಎಸ್ಐಗಳಾದ ಐ.ಎಂ.ದುಂಡಸಿ, ವಿನೋದ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು.ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿರುವ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಜಯಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ದಸರಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.ಪುರುಷರ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಕ್ಕೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಹಿಳೆಯರ ಹ್ಯಾಂಡ್ಬಾಲ್ನಲ್ಲಿ ದ್ವಿತೀಯ ಸ್ಥಾನ, ಪುರುಷರ ಟೇಬಲ್ ಟೆನ್ನಿಸ್ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಮಹೇಶ ಸಂಗಮ, ವಿಜಯ ರಾಠೋಡ ತರಬೇತಿ ನೀಡಿದ್ದಾರೆ. ತರಬೇತಿ ನೀಡಿದ ಶಿಕ್ಷಕರಿಗೆ, ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಪ್ರಾಚಾರ್ಯೆ ಆರ್.ಎಂ.ರೋಣದ, ಶಿಕ್ಷಕ ಸಿಬ್ಬಂದಿ ಅಭಿನಂದಿಸಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಆಟಗಳಲ್ಲಿ ಬಾಲಕರ ಥ್ರೋಬಾಲ್‌ದಲ್ಲಿ ಪ್ರಥಮಸ್ಥಾನ, ಬಾಲಕರ ನೆಟ್‌ಬಾಲ್ ದ್ವಿತೀಯ, ಬಾಲಕಿಯರ ನೆಟ್‌ಬಾಲ್ ದ್ವಿತೀಯ, ಬಾಲಕಿಯರ ಹ್ಯಾಂಡ್‌ಬಾಲ್, ಚೆಸ್‌ನಲ್ಲಿ ದ್ವಿತೀಯ ಸ್ಥಾನಗಳನ್ನು ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ೨೯ ಜನ ವಿದ್ಯಾರ್ಥಿಗಳು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ಸುನೀಲ ಪಾಟೀಲ, ಎನ್.ಬಿ.ಪೂಜಾರಿ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಡಾ. ಶರಣಬಸವ ಜೋಗೂರ, ಎಸ್.ಜಿ.ಮಾರ್ಸನಳ್ಳಿ, ಎಸ್.ಎಚ್.ಜಾಧವ, ಡಾ.ವಿಶ್ವನಾಥ ನಂದಿಕೋಲ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ರಾಹುಲ ದಾಸರ್, ಸುಮಿತ್ರಾ ಕರನಾಳ, ಭಾಗ್ಯ ಕೋರಿ, ಎ.ಬಿ.ಬಮ್ಮಣ್ಣಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಚಾಲಿತ ಬೈಕ್ ನ ಹಿಂಬದಿ ಓಡಿ ಬಂದು ಬೈಕ್ ಬ್ಯಾಗ್‌ನಲ್ಲಿದ್ದ ರೂ.೨ ಲಕ್ಷ ರೂಪಾಯಿಗಳನ್ನು ಎಗರಿಸಿದ ಘಟನೆ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಕೆನರಾ ಬ್ಯಾಂಕ್ ಬಳಿ ಶುಕ್ರವಾರ ಮದ್ಯಾಹ್ನ ನಡೆದಿದೆ.ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಯೊಬ್ಬರು ಮಧ್ಯಾಹ್ನ ೧೨ರ ಸುಮಾರು ಕೆನರಾ ಬ್ಯಾಂಕ್ ನಲ್ಲಿ ೨ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿಕೊಂಡು ತಮ್ಮ ಸಿಟಿ ೧೦೦ ಬೈಕ್ ನ ಹಿಂಬದಿಯ ಬಟ್ಟೆಯ ಬ್ಯಾಗ್‌ನಲ್ಲಿಟ್ಟು ಹೋಗುವಾಗ ಬ್ಯಾಂಕ್ ಎದುರಿಗೆ ಕಾಯುತ್ತಿದ್ದ ಖದೀಮನೊಬ್ಬ ಬ್ಯಾಗ್‌ನಲ್ಲಿರುವ ಹಣ ಎಗರಿಸಿ ಪರಾರಿಯಾಗಿದ್ದಾನೆ. ಬ್ಯಾಂಕಿನ ಸಿಸಿಟಿವಿಯಲ್ಲಿ ಖದೀಮ ಹಣ ಕಬಳಿಸಿದ ವಿಡಿಯೋ ಸೆರೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳ್ಳನ ಕೈಗೆ ಕೋಳ ತೊಡಿಸಲು ಪೊಲೀಸರು ಬಲೆ ಬೀಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ರುದ್ರೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಿಷಯದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ಡುಣಗಿ ಹಾಗೂ ಕೇರೂರು ಗ್ರಾಮದ ಭೈರವನಾಥ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ವಿಠ್ಠಲ್ ಸಿದ್ದಗೊಂಡಪ್ಪ. ತಿಕ್ಕುಂಡಿ ಸೇವೆ ಸಲ್ಲಿಸುತ್ತಿರುವದನ್ನು ಗುರುತಿಸಿ, ಇವರನ್ನು ‘ಚಡಚಣ ತಾಲೂಕು ಮಟ್ಟದ ಶಿಕ್ಷಕರತ್ನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇವರ ವತಿಯಿಂದ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸೆಪ್ಟೆಂಬರ್. 29 ರ ಭಾನುವಾರದಂದು ಜರುಗುವ ‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ’ ಸಮಾರಂಭದಲ್ಲಿ ‘ಶಿಕ್ಷಕ ಧರೇಪ್ಪ ಪೂಜಾರಿ’ ಇವರನ್ನು ‘ಶಿಕ್ಷಕ ರತ್ನ ಪ್ರಶಸ್ತಿ’ಯನ್ನು ಪ್ರದಾನ ಮಾಡಿ, ಗೌರವಿಸಲಾಗುವುದು ಎಂದು ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಜಿಲ್ಲಾ ಕಾನಿಪ ಸಂಘದ ನಿರ್ದೇಶಕ ಶಂಕರ ಹಾವಿನಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿಕ್ಷಕರೊಬ್ಬನನ್ನು ಅಪ್ಪಿ, ನೀವು ನಮ್ಮ ಶಾಲೆ ಬಿಟ್ಟು ಹೋಗಬೇಡಿ ಎಂದು ಅತ್ತು ಗೋಗರೆಯುತ್ತಿದ್ದರು. ಗುರುವಾರ ಬೆಳಿಗ್ಗೆಯಿಂದಲೂ ಸಂಜೆ ಅವರು ಶಾಲೆಯ ಆವರಣ ಬಿಟ್ಟು ಕದಲಲು ವಿದ್ಯಾರ್ಥಿಗಳು ಬಿಡಲಿಲ್ಲ, ವಿದ್ಯಾರ್ಥಿಗಳ ಭಾವುಕ ಕ್ಷಣಗಳಿಗೆ ಹಲವಾರು ಶಿಕ್ಷಕರ ಕಣ್ಣೀರಿನ ಹನಿಗಳೇ ಸಾಕ್ಷಿಗಳಾದವು.ಹೌದು, ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದು ಆಲಮಟ್ಟಿ ಆರ್.ಎಸ್. ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ.ಅಲ್ಲಿಯ ವಿಜ್ಞಾನ ಶಿಕ್ಷಕ ರಾಘವೇಂದ್ರ ವಂದಗನೂರ ಈಚೆಗೆ ವರ್ಗಾವಣೆಗೆ ಕೌನ್ಸಲಿಂಗ್ ನಲ್ಲಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಮಾಗಿ ಶಾಲೆಗೆ ಆಯ್ಕೆ ಮಾಡಿಕೊಂಡಿದ್ದರು. ಗುರುವಾರ, ಅವರು ಶಾಲೆಯಿಂದ ರಿಲೀವ್ ಆಗಿ ಇಂದು ಬೀಳ್ಕೊಡುವಾಗ ವಿದ್ಯಾರ್ಥಿಗಳ ರೋಧನ, ಆಪ್ತತೆ ನೆರೆದ ಎಲ್ಲರ ಮನಸ್ಸು ಭಾವುಕಗಳಾದವು.ಅವರು ಕಳೆದ ಮೂರು ವರ್ಷಗಳಿಂದ ವಿಜ್ಞಾನ ಶಿಕ್ಷಕರಾಗಿ ವಿಶಿಷ್ಟವಾಗಿ ಸೇವೆ ಸಲ್ಲಿಸಿದ್ದ ರಾಘವೇಂದ್ರ ವಂದಗನೂರ ಅವರ ಸೇವೆ ಅನನ್ಯ. ಅವರು ಹೋಗಬಾರದು ಎಂಬುದೇ ಅಲ್ಲಿ ನೆರೆದಿದ್ದ ಶಾಲೆಯ ೨೦೦ ಕ್ಕೂ ಅಧಿಕ ಮಕ್ಕಳ ಮುಗ್ಧ ಭಾವನೆಗಳು ಶಿಕ್ಷಕರ ಸೇವೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂದಿನ ಜನತೆ ಆರೋಗ್ಯಯುತ, ಸದೃಢ-ಸಶಕ್ತರಾಗಿ ಸ್ವಾಭಿಮಾನದಿಂದ ಬದುಕಬೇಕೆಂದರೆ ಸ್ವಚ್ಛತೆಯ ಅಭ್ಯಾಸಗಳನ್ನು ಪ್ರತಿನಿತ್ಯ ರೂಢಿಸಿಕೊಂಡು, ಸ್ವಚ್ಛತೆಯನ್ನು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕುಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಅವರು ಶುಕ್ರವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ‘ಸ್ವಚ್ಛತೆಯೇ ಸೇವೆ’ ಅಭಿಯಾನದಡಿ “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಆರೋಗ್ಯದ ಮೂಲವೇ ಸ್ವಚ್ಛತೆ ಮತ್ತು ನೈರ್ಮಲ್ಯವಾಗಿದ್ದು, ಇಂದಿನ ಯುವಕರು ಸಮೃದ್ಧ ಸಮಾಜವನ್ನು ನಿರ್ಮಿಸಲು ತಮ್ಮ ದಾಪುಗಾಲನ್ನು ಹಾಕಬೇಕು.’ಸ್ವಚ್ಛ ಮೇವ ಜಯತೇ’ ಎಂದು ಜಗತ್ತಿಗೆಲ್ಲ ಸಾರೋಣ. ಪ್ರತಿಯೊಬ್ಬರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಹೇಳಿದರು.ಪ್ರಭಾರಿ ಪ್ರಾಚಾರ್ಯ ಪರಶುರಾಮ ರಜನಿಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸ್ವಚ್ಛತೆಯನ್ನು ಸೇವೆ’ ಎಂದು ಪರಿಗಣಿಸಿ ಅದಕ್ಕೆ ಹೆಚ್ಚು ಒತ್ತು ನೀಡಿದ್ದ ಗಾಂಧೀಜಿ ಅವರು, ಸಾರ್ವಜನಿಕ ಸ್ವಚ್ಛತೆಯ ಮಹತ್ವವನ್ನು ಸಾರಿದ್ದರು.ಪ್ರತಿಯೊಬ್ಬರ ಮನದಲ್ಲೂ ಸ್ವ-ಆಸಕ್ತಿಯಿಂದ ಸ್ವಚ್ಛತೆಯ ಅರಿವು ಜಾಗೃತವಾದಾಗ ಸ್ವಚ್ಛ ಭಾರತದ ಕನಸು ನನಸಾಗುತ್ತದೆ ಎಂದು ಹೇಳಿದರು.ಉಪನ್ಯಾಸಕರಾದ…

Read More