Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ನಾದ ಕೆಡಿ ಗ್ರಾಮದ ಕಾಶಿಬಾಯಿ ತೆನೆಹಳ್ಳಿ ಪ್ರಥಮ ಹೆರಿಗೆ ನೋವಿನಿಂದ ಮಧ್ಯಾನ್ಹ ನರಳುತ್ತಿದ್ದರು.ಕಾಶಿಬಾಯಿ ಗಂಡ ಪರಶುರಾಮ ಆಶಾ ಕಾರ್ಯಕರ್ತೆ ಜ್ಯೋತಿ ಇಂಡಿ ಮತ್ತು ಎಸ್.ಎ. ಶೇಖ ಇವರನ್ನು ಸಂಪರ್ಕಿಸಿದರು.ಆಗ ಆಶಾ ಕಾರ್ಯಕರ್ತೆಯರು ಕ್ಷೇತ್ರ ಆರೋಗ್ಯ ಮೇಲ್ವಿಚಾರಕ ವೈ.ಎಂ.ಪೂಜಾರಿ ಇವರನ್ನು ಸಂಪರ್ಕಿಸಿದರು.ಆಗ ವೈ.ಎಂ.ಪೂಜಾರಿಯವರು ಖಾಸಗಿ ವಾಹನದಲ್ಲಿ ಹೆರಿಗೆ ವೇಳೆ ಬೇಕಾಗುವ ಸಲಕರಣೆ ಗಳೊಂದಿಗೆ ಬರಲು ಜ್ಯೋತಿ ಇಂಡಿ, ಶೇಖ ಆಶಾ ಕಾರ್ಯಕರ್ತರಿಗೆ ಬರಲು ತಿಳಿಸಿದರು.ಇಂಡಿ ಬರುವ ಮಧ್ಯೆ ಸಾಲೋಟಗಿ ಗ್ರಾಮದ ತೋಟದ ಹತ್ತಿರ ನೋವು ಹೆಚ್ಚಾದಾಗ ತೋಟದ ಮಾಲಿಕರ ಪರವಾನಿಕೆ ಪಡೆದು ಅಲ್ಲಿಯೇ ವಾಹನ ನಿಲ್ಲಿಸಿ ಅವರಿಂದ ಆಸರೆಗೆಂದು ಸೀರೆ ಪಡೆದು ಕಾರಿನಲ್ಲಿಯೇ ಹೆರಿಗೆ ಮಾಡಿದ ಘಟನೆ ನಡೆದಿದೆ.ಹೆರಿಗೆ ನಂತರ ತಾಯಿ ಮತ್ತು ಮಗುವನ್ನು ಇಂಡಿಯ ಸರಕಾರಿ ಆಸ್ಪತ್ರೆಗೆ ತಂದಿದ್ದಾರೆ.ಅಲ್ಲಿ ಚಿಕ್ಕ ಮಕ್ಕಳ ತಜ್ಞ ಡಾ.ವಿಪುಲ್ ಕೋಳೆಕರ, ಡಾ.ಪ್ರಶಾಂತ ಧೂಮಗೊಂಡ, ಶುಶ್ರಿಕೆ ವಿಜಯಲಕ್ಷ್ಮಿ ಹಾದಿಮನಿ ಮತ್ತು ವೈ.ಎಂ.ಪೂಜಾರಿ ತಪಾಸಣೆ ಮಾಡಿ ಮಗು ೧ ಕೆ.ಜಿ ೫೦೦ ಗ್ರಾಂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅನುಸೂಚಿತ ಜಾತಿ, ಪಂಗಡದ ಜನರ ಮೇಲೆ ದೌರ್ಜನ್ಯ ನಡೆದ ದೂರು ದಾಖಲಾದರೆ ತ್ವರಿತವಾಗಿ ಕ್ರಮ ಕೈಕೊಳ್ಳಬೇಕು ಇಲ್ಲದಿದ್ದರೆ ಸಂಬಂದಿತ ಅಧಿಕಾರಿವಿರುದ್ಧ ಕ್ರಮ ಕೈಕೊಳ್ಳಲಾಗುವುದು ಎಂದು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಉಪವಿಬಾಗಾಧಿಕಾರಿಗಳ ಸಭಾಭವನದಲ್ಲಿ ನಡೆದ ಉಪವಿಭಾಗೀಯ ಮಟ್ಟದ ಎಸ್ ಸಿ, ಎಸ್ ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿ ಹಾಗೂ ಸಿಬ್ಬಂದಿವರ್ಗ ಸೌಜನ್ಯದಿಂದ ವರ್ತಿಸಬೇಕು. ಪರಿಶಿಷ್ಠ ಜಾತಿ, ಪಂಗಡದವರು ವಿವಿಧ ಯೋಜನೆಗಳ ಸಾಲ ಸೌಲಭ್ಯ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಿ ಶೀಘ್ರ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.ಡಿ.ವಾಯ್.ಎಸ್.ಪಿ ಜಗದೀಶ ಮಾತನಾಡಿ ದೌರ್ಜನ್ಯದಲ್ಲಿ ನೊಂದ ಸಂತೃಸ್ತರಿಗೆ ತಕ್ಷಣ ಇಲಾಖೆಯಿಂದ ಪರಿಹಾರ ಧನ ನೀಡಲು ಕೇಳಿಕೊಂಡರು.ಸಹಾಯಕ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ ಇಂಡಿಯ ಉಮೇಶ ಲಮಾಣಿ ಮಾತನಾಡಿ ಜನೇವರಿ ೨೦೨೪ ರಿಂದ ಇಲ್ಲಿಯ ವರೆಗೆ ೧೭ ಪ್ರಕರಣ ದಾಖಲಾಗಿದ್ದು ಅದರಲ್ಲಿ ೯ ಪ್ರಕರಣಗಳಿಗೆ ಪರಿಹಾರ ನೀಡಿದ್ದು…
Udayarashmi kannada daily newspaper
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಿ ಜಿಲ್ಲೆಯ ಫಲಿತಾಂಶ ಸುಧಾರಣೆಗೆ ರೂಪುರೇಷೆ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಿ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಸೂಚಿಸಿದರು.ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯಗಳಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವಸತಿನಿಲಯಗಳ ಸುತ್ತಮುತ್ತಲೂ ಹಾಗು ವಸತಿನಿಲಯ ಹೊಂದಿಕೋಮಡಿರುವ ರಸ್ತೆಗೆ ಬೀದಿದೀಪಗಳ ವ್ಯವಸ್ಥೆಯನ್ನು ಕಲ್ಪಿಸಿ, ವಿದ್ಯಾರ್ಥಿಗಳ ಸುರಕ್ಷತೆ ವಹಿಸಬೇಕು. ಗ್ರಂಥಾಲಯಯಗಳಲ್ಲಿ ನಿಯತಕಾಲಿಕೆ, ಸ್ಪರ್ಧಾತ್ಮಕ ಪುಸ್ತಕಗಳನ್ನು ಒದಗಿಸಿ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಬಾಲಕಿಯರ ವಸತಿ ನಿಲಯಗಳಲ್ಲಿ ಸೂಕ್ತ ಸುರಕ್ಷತೆ ಒದಗಿಸಿದಲು ಸಿಸಿಟಿವಿ ಅಳವಡಿಸಿಬೇಕು. ಕಾಲಕಾಲಕ್ಕೆ ಜಿಲ್ಲಾ ಹಾಗೂ ತಾಲೂಕು…
ಸೆ.೩೦ರಂದು ಕರ್ನಾಟಕ ಸಂಭ್ರಮ-೫೦ರ ಆಚರಣೆ | ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ, ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ ೩೦ ರಂದು ಕರ್ನಾಟಕ ಸಂಭ್ರಮ-೫೦’ರ ಆಚರಣೆಯ ಜೊತೆಯಲ್ಲಿ ಶ್ರೀಮತಿ ಡಾ.ಜಯದೇವಿ ತಾಯಿ ಲಿಗಾಡೆ” “ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಮತ್ತು “ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರಿನಲ್ಲಿ ಗಡಿ ಪ್ರಾಧಿಕಾರದಿಂದ ನೀಡುತ್ತಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಾಗೂ ಹೊರನಾಡ ಗಡಿ ಕನ್ನಡಿಗರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗೂರು ರಾಮಚಂದ್ರಪ್ಪ ಅವರ ಸಮಿತಿಯು ೨೦೨೩-೨೪ನೇ ಸಾಲಿಗೆ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡಿನ ಚೇತನ ಪ್ರಶಸ್ತಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹಾಗೂ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ನಗರದ ದರಬಾರ ಕಾಲೇಜಿನ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಹಾಗೂ ಪಿ.ಎಸ್.ಐ ಸ್ಪರ್ದಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಸೆಪ್ಟೆಂಬರ್ ೨೯ರ ಭಾನುವಾರಂದು ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ೧೨ ತಾಲೂಕುಗಳ ೯೩ ಪರೀಕ್ಷೆ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಗೆ ಒಟ್ಟು ೩೮,೭೪೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂದು ಬೆಳಿಗ್ಗೆ ೧೦-೩೦ ಗಂಟೆಗೆಯಿಂದ ೧೨-೩೦ರ ವರೆಗೆ ಪರೀಕ್ಷೆ ಜರುಗಲಿದೆ.ಪಿ.ಎಸ್.ಐ ಪರೀಕ್ಷೆಯು ಅಕ್ಟೋಬರ್ ೩ ರಂದು ೧೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು ೪,೯೨೦ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ ೧೦-೩೦ರಿಂದ ೧೨-೦೦ರವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೧೨-೩೦ರಿಂದ ಮಧ್ಯಾಹ್ನ ೨-೦೦ ರವರೆಗೆ ಪತ್ರಿಕೆ-೨ರ…
ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಧಿಕಾರಿಗಳಿಗೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ಪ್ರವಾಸಿ ತಾಣಗಳು ದೇಶ, ವಿದೇಶದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಗೋಳ ಗುಮ್ಮಟದ ದ ಆವರಣದಲ್ಲಿ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸುತ್ತಿರುವುದು ಹೆಮ್ಮೆಯ ವಿಷಯ, ಸ್ಮಾರಕಗಳ ರಕ್ಷಣೆಯ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ, ಸಿಕ್ಯಾಬ್ ಇನ್ಸ್ಟಿಟ್ಯೂಷನ್ ಹಾಗೂ ಹೋಟೆಲ್ ಅಸೋಸಿಯೇಶನ್ ಇವರ ಸಹಯೋಗದಲ್ಲಿ ಶುಕ್ರವಾರ ಗೋಳಗುಮ್ಮಟ ಆವರಣದಲ್ಲಿ ಪ್ರವಾಸೋದ್ಯಮ ಮತ್ತು ಶಾಂತಿ ಘೋಷವಾಕ್ಯದಡಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಇತಿಹಾಸದ ಘಟನೆ ಹಾಗೂ ಸ್ಮಾರಕಗಳ ಬಗ್ಗೆ ಅಧ್ಯಯನ ಮಾಡಿ ಅವುಗಳ ಮಹ್ವತವನ್ನು ಅರಿಯಬೇಕು. ನಮ್ಮ ರಾಜ್ಯದಲ್ಲಿ ಹಲವಾರು ಸ್ಮಾರಕ, ಪ್ರವಾಸಿ ಸ್ಥಳಗಳ ಮಹತ್ವ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.ಮುಸ್ತಾಕ್ ಮಹ್ಮದ್ ಇನಾಮದಾರ,ಉಪನ್ಯಾಸ ನೀಡಿದರು.ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ ೧ರಂದು ಬೆಳಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಆಯೋಜಿಸಲಾಗಿದೆ.ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ಯ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ಗೆ ಸಂಪರ್ಕಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕುಡಿಯುವ ನೀರಿನ ಅಸಮರ್ಪಕ ಪೂರೈಕೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಕೆರೂಟಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಾಂತು ರಾಠೋಡಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಕೆರೂಟಗಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ತಾಂಡಾದ ನೀರು ಪೂರೈಕೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅಸಮಾಧಾನ ವ್ಯಕ್ರಪಡಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ಗ್ರಾಮದ ತಾಂಡಾದಲ್ಲಿ ನೀರು ಇದ್ದರೂ ವಾಟರ್‌ಮ್ಯಾನ್ ಇಲ್ಲದ ಕಾರಣ ಸಮಯಕ್ಕೆ ಸರಿಯಾಗಿ ನೀರು ಪೂರೈಸುತ್ತಿಲ್ಲ. ಇನ್ನೂ ಗ್ರಾಮ ಪಂಚಾಯಿತಿಯ ಪಿಡಿಓ ಹಾಗೂ ಕಾರ್ಯದರ್ಶಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದರಿಂದ ತಾಂಡಾದ ಚರಂಡಿಗಳು ಸರಿಪಡಿಸದೇ ಮಲೀನವಾಗಿ ಗಬ್ಬು ನಾರುತ್ತಿವೆ. ಜೊತೆಗೆ ಪ್ರಾಥಮಿಕ ಶಾಲೆಯ ಕಟ್ಟಡ ಕಾಮಗಾರಿಗಳಿಗೆ ಕೇಳುವವರೇ ಇಲ್ಲದೇ ಕಳಪೆಯಾಗಿ ತೋರುತ್ತಿವೆ. ಈ ಬಗ್ಗೆ ದೂರವಾಣಿ ಮೂಲಕ ಅಧ್ಯಕ್ಷರಿಗೆ ಹೇಳಿದರೂ ಸ್ಪಂದನೆಯಿಲ್ಲ. ಸಂಘಟನೆ ಹಾಗೂ ಗ್ರಾಮಸ್ಥರ ಮನವಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೇ ಇದ್ದಲ್ಲಿ ಪಂಚಾಯಿತಿ ಕಾರ್ಯಾಲಯದ ಮುಂದೆ…
ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಸಂಘದಿಂದ ಅನಿರ್ಧಿಷ್ಠಾವಧಿ ಮುಷ್ಕರ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಮ್ಮ ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಕೇಂದ್ರ ಸಂಘದ ನಿರ್ದೇಶನದಂತೆ ಬೇಡಿಕೆ ಈಡೇರುವವರೆಗೆ ಲೆಕ್ಕಣಿಗೆ ಬದಿಗಿಟ್ಟು ಮುಷ್ಕರ ಮುಂದುವರೆಸಲಾಗುವುದು ಎಂದು ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಸಂಗಮೇಶ ಗ್ವಾಳೇದ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಮುಂದೆ ಗುರುವಾರ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಕೇಂದ್ರ ಸಂಘ ಕರೆ ಕೊಟ್ಟ ಶಾಂತಿಯುತ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಬೆಂಬಲವಾಗಿ ಗುರುವಾರ ಇಲ್ಲಿನ ತಹಸೀಲ್ದಾರ್ ಕಚೇರಿ ಬಳಿ ತಾಲ್ಲೂಕು ಸಂಘದ ವತಿಯಿಂದ ಜರುಗಿದ ಮುಷ್ಕರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸರಕಾರ ನಮ್ಮ ಕೆಲಸಕ್ಕೆ ತಕ್ಕಂತೆ ಸಮಾನ ವೇತನ ನೀಡದೆ ಕೇವಲ ಕೆಲಸ ತೆಗೆದುಕೊಳ್ಳುವುದರಲ್ಲಿ ನಿರತವಾಗಿದೆ. ತಾಂತ್ರಿಕತೆ ಗೊತ್ತಿಲ್ಲದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ತಾಂತ್ರಿಕ ಕಾರ್ಯಗಳಲ್ಲಿ ತೊಡಗಿಸುತ್ತಿದ್ದು ಅದಕ್ಕೆ ಸಂಭಾವನೆ ನೀಡುತ್ತಿಲ್ಲ. ಈ ವಿಷಯದ ಕುರಿತು ಹಲವಾರು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆಯಿಟ್ಟು ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರದ ೨೧ ಸೇವೆಗಳು ಗ್ರಾಮಾಡಳಿತದ ಮೂಲಕವೇ ಅನುಷ್ಠಾನಗೊಳ್ಳುತ್ತಿವೆ.…
