Author: editor.udayarashmi@gmail.com

ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಸರ್ಕಾರಕ್ಕೆ ಆಗ್ರಹ | ಸಿಎಂ ಡಿ.ಕೆ. ಶಿವಕುಮಾರ ಹಾಗೂ ಡಿಸಿಎಂ ಜಿ. ಪರಮೇಶ್ವರ ಅವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮಳೆಯ ಕೊರತೆಯಿಂದ ರೈತರು ಬಿತ್ತನೆ ಮಾಡಲು ಹಿಂದೇಟು ಹಾಕುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಗಾರು ಮಳೆ ಕೈಕೊಡುವ ಲಕ್ಷಣಗಳು ಕಾಣಿಸುತ್ತಿವೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಸರ್ಕಾರವನ್ನು ಆಗ್ರಹಿಸಿದರು.ಪಟ್ಟಣದಲ್ಲಿ ಬಸವನ ಬಾಗೇವಾಡಿ ಮಂಡಲ ಬಿಜೆಪಿ ಎಸ್‌ಸಿ ಮತ್ತು ಎಸ್‌ಟಿ ಕಾರ್ಯಕರ್ತರ ಸಭೆಯ ಬಳಿಕ, ತಹಶೀಲ್ದಾರ ಎಸ್.ಎಸ್. ಮ್ಯಾಗೇರಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಉಪ ಮುಖ್ಯಮಂತ್ರಿ ಕಂದಾಯ ಸಚಿವ ಜಿ. ಪರಮೇಶ್ವರ ಅವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.ಮುಂಗಾರು ಹಂಗಾಮಿನಲ್ಲಿ ಬೆಳೆಯುವ ಗೋವಿನ ಜೋಳ, ಹೆಸರು, ಅಲಸಂದಿ, ಮುಕಣಿ ಸೇರಿದಂತೆ ವರ್ಷದ ಬೆಳೆಯಾದ ಕಬ್ಬು ಕೂಡ ಮಳೆಯಿಲ್ಲದೆ ಹಾಳಾಗುವ ಹಂತಕ್ಕೆ ತಲುಪಿದೆ. ಇದರಿಂದ ರೈತರಿಗೆ ಭಾರೀ ನಷ್ಟವಾಗುವ ಸಾಧ್ಯತೆ ಇದೆ ಎಂದು ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಸೈಕ್ಲಿಂಗ್ ಗ್ರೂಪ್ ವತಿಯಿಂದ ಆಷಾಢ ಮಾಸದ ಅಂಗವಾಗಿ ಪಂಡರಪುರಕ್ಕೆ ಸೈಕಲ್ ಯಾತ್ರೆಯನ್ನು ಇಂದು ದಿ.11 ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ವಿಸಿಜಿ ಸಂಘಟನಾ ಕಾರ್ಯದರ್ಶಿ ಸೋಮಶೇಖರ ಸ್ವಾಮಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರದ ಬಿ.ಎಂ. ಪಾಟೀಲ ವೃತ್ತದಿಂದ ಶನಿವಾರ ಬೆ.5.30ಗಂ. ಆರಂಭವಾಗುವ ಸೈಕಲ್ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಚಾಲನೆ ನೀಡಲಿದ್ದಾರೆ. ವಿಸಿಜಿ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಉಪಸ್ಥಿತರಿರಲಿದ್ದಾರೆ.ಈ ಸೈಕಲ್ ಯಾತ್ರೆಯಲ್ಲಿ ಡಾ. ರವಿ ಚೌಧರಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಸದಸ್ಯರಾದ ವೀರೇಂದ್ರ ಗುಚ್ಚಟ್ಟಿ, ಡಾ. ರಾಜು ಯಲಗೊಂಡ, ಅನೀಲ ಧಾರವಾಡಕರ, ಸಿದ್ದು ನಾಯ್ಕೋಡಿ, ಶ್ರೀಕಾಂತ ಅಂಗಡಿ ಸೇರಿದಂತೆ ಒಟ್ಟು 40 ಸೈಕ್ಲಿಸ್ಟ್‌ಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೆ, ಕೊಟ್ಟಲಗಿ ಗ್ರಾಮದಲ್ಲಿ ಡಾ. ರವಿ ಸಂಖ ಅವರೊಂದಿಗೆ 5 ಜನರ ಸೈಕ್ಲಿಸ್ಟ್ ತಂಡ ಯಾತ್ರೆಯಲ್ಲಿ ಜೊತೆಯಾಗಲಿದ್ದಾರೆ. ಸುಮಾರು 100 ಕಿ.ಮೀ ದೂರದ ಈ ಪಂಡರಪುರ ಸೈಕಲ್ ಯಾತ್ರೆಯು…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಕೃಷಿ ಬಿಕ್ಕಟ್ಟು ಎದುರಾಗಿದ್ದು, ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ವತಿಯಿಂದ ರಾಜ್ಯ ಕಾರ್ಯದರ್ಶಿ ಎಚ್. ಆರ್. ಬಡಿಗೇರ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಪ್ರಸ್ತುತ 2026-27ನೇ ಸಾಲಿನಲ್ಲಿ ಕನಿಷ್ಠ ಮಳೆಯ ಮುನ್ಸೂಚನೆ ಇರುವುದರಿಂದ ಮತ್ತು ತೀವ್ರ ಕೃಷಿ ಬಿಕ್ಕಟ್ಟು ತಲೆದೋರಿರುವುದರಿಂದ ರಾಜ್ಯವನ್ನು ‘ಬರಪೀಡಿತ ಪ್ರದೇಶ’ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಎಂದು ಒತ್ತಾಯಿಸಲಾಯಿತು. ವಿಶೇಷವಾಗಿ ಉತ್ತರ ಕರ್ನಾಟಕದ ಭಾಗಗಳಲ್ಲಿ ಸಕಾಲಕ್ಕೆ ಮಳೆ ಬಾರದ ಕಾರಣ ರೈತರು ಬೆಳೆದ ಬೆಳೆಗಳು ಕಣ್ಣೆದುರೇ ಒಣಗಿಹೋಗಿವೆ. ಇತ್ತ ಜಾನುವಾರುಗಳಿಗೆ ಮೇವು ಮತ್ತು ನೀರಿನ ತೀವ್ರ ಅಭಾವ ಸೃಷ್ಟಿಯಾಗಿದೆ. ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಅವರ ಎಲ್ಲಾ ಕೃಷಿ ಸಾಲಗಳನ್ನು ಸರ್ಕಾರ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿರುವ ಗಿರೀಶ್ ರಾವ್ ಹತ್ವಾರ್ (ಜೋಗಿ) ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಜೋಗಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕನ್ನಡಪ್ರಭ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಇಂಡಿಯನ್ ಫೆಡರೇಷನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ ಹಾಗೂ ರಾಯಚೂರಿನ ಸಿದ್ದು ಬಿರಾದಾರ ಉಪಸ್ಥಿತರಿದ್ದರು.ಕ್ರೀಯಾಶೀಲ ಪತ್ರಕರ್ತರಾದ ಜೋಗಿ ಅವರ ಸಂಪಾದಕೀಯ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಕೆಯುಡಬ್ಲ್ಯೂಜೆ ಪದಾಧಿಕಾರಿಗಳು ಶುಭ ಹಾರೈಸಿದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಆಲಮಟ್ಟಿ ಆಣೆಕಟ್ಟಿನಲ್ಲಿ ಸಾಕಷ್ಟು ನೀರು ಸಂಗ್ರಹವಾಗುತ್ತಿದ್ದು, ತಕ್ಷಣವೇ ಚಿಮ್ಮಲಗಿ ಮುಖ್ಯ ಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಬೇಕೆಂದು ನಿವಾಳಖೇಡ, ಹರನಾಳ, ಮುಳಸಾವಳಗಿ ಗ್ರಾಮದ ರೈತರು ಆಗ್ರಹಿಸಿದ್ದಾರೆ.ತಾಲ್ಲೂಕು ಸೇರಿದಂತೆ ಮತಕ್ಷೇತ್ರದಲ್ಲಿ ವಾಡಿಕೆಯಂತೆ ಮುಂಗಾರಿನ ಬಹುತೇಕ ಮಳೆಗಳು ರೈತ ಸಮುದಾಯದ ನಿರೀಕ್ಷೆಯಂತೆ ಆಗದೇ ಇದ್ದು ಬರಗಾಲ ಛಾಯೆ ಆವರಿಸಿದೆ. ಆದರೆ ಸಮಾಧಾನ ತರುವ ವಿಷಯವೇಂದರೆ ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಆಲಮಟ್ಟಿ ಆಣೆಕಟ್ಟಿನಲ್ಲಿ ಹೆಚ್ಚಿನ ನೀರು ಸಂಗ್ರಹವಾಗುತ್ತಿದೆ. ಜಿಲ್ಲೆಯ ಬಹುತೇಕ ಕಾಲುವೆಗಳಿಗೆ ನೀರು ಪೂರೈಸುವ ಆಲಮಟ್ಟಿ ಆಣೆಕಟ್ಟಿನಲ್ಲಿ ದಿನದಿಂದ ದಿನಕ್ಕೆ ನೀರು ಹರಿದು ಬರುತ್ತಿರುವುದು ರೈತ ಸಮುದಾಯಕ್ಕೆ ನೆಮ್ಮದಿ ನೀಡುವಂತಿದೆ. ಈ ನೀರನ್ನು ಕಾಲುವೆಗಳಿಗೆ ಹರಿಸಲು ಯಾವುದೇ ತೊಂದರೆಯಿಲ್ಲ. ಅದಕ್ಕಾಗಿ ತಕ್ಷಣವೇ ಕಾಲುವೆಗಳ ಮುಖಾಂತರ ನಿರಂತರ ನೀರು ಹರಿಸಿ ರೈತ ಸಮುದಾಯಕ್ಕೆ ಅನುಕೂಲ ಮಾಡಿಕೊಡಬೇಕು.ದೇವರಹಿಪ್ಪರಗಿ ಭಾಗದ ಚಿಮ್ಮಲಗಿ ಮುಖ್ಯ ಕಾಲುವೆ ಹಾಗೂ ನಾಗಠಾಣ ಉಪಕಾಲುವೆಗಳಿಗೆ ಕಾಲುವೆಯ ಕೊನೆಯ ಭಾಗದವರೆಗೂ ತಲುಪುವಂತೆ ಕೂಡಲೇ ನೀರು ಹರಿಸಲು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೭–೨೮ನೇ ಶೈಕ್ಷಣಿಕ ಸಾಲಿನ ೬ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ನವೆಂಬರ್ ೨೮ ರಂದು ನಡೆಯಲಿದ್ದು. ಅರ್ಜಿ ಸಲ್ಲಿಸಲು ಜುಲೈ ೩೧ ಕೊನೆಯ ದಿನವಾಗಿದೆ. hಣಣಠಿs://ಟಿಚಿvoಜಚಿಥಿಚಿ.gov.iಟಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಚಾರ್ಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ಬಿಎಲ್ಓಗಳಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಹಾಗೂ ಇತರೆ ಇಲಾಖೆ ನೌಕರರ ಮೇಲೆ ಈ ಕಾರ್ಯ ಪ್ರಾರಂಭದ ಒಂದು ವಾರದಲ್ಲಿ ಎಲ್ಲ ಮತದಾರ ನಮೂನೆಗಳನ್ನು ವಿತರಣೆ ಮಾಡಲು ಒತ್ತಡ ಹಾಕುತ್ತಿರುವುದು ವಿಷಾದನಿಯ ಎಂದು ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅರ್ಜುನ ಲಮಾಣಿ ನೇತೃತ್ವದಲ್ಲಿ ಅಪರಜಿಲ್ಲಾಧಿಕಾರಿ ಡಾ.ಔದ್ರಾಮ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ ಇಷ್ಟು ಕಡಿಮೆ ಸಮಯದಲ್ಲಿ ಈ ಕಾರ್ಯ ಪರಿಪೂರ್ಣವಾಗಲು ಸಾಧ್ಯವಿಲ್ಲ. ಏಕೆಂದರೆ ಒಂದು ಕುಟುಂಬದ ಸದಸ್ಯರು ಒಂದೇ ಮತದಾರರ ಪಟ್ಟಿಯಲ್ಲಿ ಹತ್ತು ಹಲವು ಕಡೆ ಹಂಚಿಹೋಗಿರುತ್ತಾರೆ. ಅವುಗಳನ್ನು ಒಂದು ಗೂಡಿಸಿ ಪ್ರತಿ ಮನೆಗೆ ಹಂಚಿಕೆ ಮಾಡಬೇಕಾಗಿರುತ್ತದೆ. ಈ ಪ್ರಕ್ರೀಯೆ ಅಷ್ಟೊಂದು ಬೇಗ ಪೂರ್ಣಗೊಳ್ಳುವದಿಲ್ಲ. ಹಲವು ಮತದಾರರು ಸರಳವಾಗಿ ದೊರೆಯುವದಿಲ್ಲ. ಒಟ್ಟು ಒಂದು ತಿಂಗಳ ಸಮಯವಿದ್ದು ಆ ಸಮಯದಲ್ಲಿ ಈ ಎಲ್ಲ ಕಾರ್ಯವನ್ನು ಶಕ್ತಿಮೀರಿ ಮಾಡಿ ಬಿಎಲ್ಓಗಳು ಪೂರ್ಣಗೊಳಿಸುತ್ತಾರೆ. ಒತ್ತಡಹಾಕುವದರಿಂದ ಬಿಎಲ್ಓಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ. ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ ಬಡಾವಣೆಗೆ ಸ್ಥಳಾಂತರಗೊಂಡ ಮತದಾರರು ಈ ಹಿಂದೆ ವಾಸವಿದ್ದ ಭಾಗದ ಮತದಾರರ ಪಟ್ಟಿಯಲ್ಲಿ ವಿಳಾಸವನ್ನು ಬದಲಾಯಿಸದೆ ಇರುವುದು ಕಂಡುಬಂದಿರುತ್ತದೆ. ಆದ್ದರಿಂದ ತಮ್ಮ ಮನೆಗಳಿಗೆ ಗಣತಿ ನಮೂನೆಗಳು ತಲುಪದೇ ಇದ್ದಲ್ಲಿ ಸಂಬಂಧಪಟ್ಟ ವಾರ್ಡನಲ್ಲಿ ಸ್ಥಾಪಿಸಲಾಗಿರುವ ಮತದಾರರ ಸಹಾಯ ಕೇಂದ್ರ ಕ್ಕೆ ಭೇಟಿ ನೀಡಬಹುದಾಗಿದೆ.ಇಲ್ಲವೇ ಪಾಲಿಕೆ ಚುನಾವಣಾ ವಿಭಾಗದ ಮತದಾರರ ಸಹಾಯ ವಾಣಿ ಸಂಖ್ಯೆ : ೦೮೩೫೨-೨೦೦೪೨೫ ಕರೆ ಮಾಡಿ ತಮ್ಮ ಮತದಾರ ಗುರುತಿನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ ೧೨ ರಂದು (ಭಾನುವಾರ) ಎಂದಿನಂತೆ ಕಾರ್ಯನಿರ್ವಹಿಸಲಿವೆ.ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಅವರ ನಿರ್ದೇಶನದಂತೆ ಭಾನುವಾರವೂ ನೋಂದಣಿ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲು ಸೂಚನೆ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಹಿರಿಯ ಉಪ ನೋಂದಣಿ ಕಚೇರಿ, ವಿಜಯಪುರ, ಉಪ ನೋಂದಣಿ ಕಚೇರಿ ಬಸವನ ಬಾಗೇವಾಡಿ, ಉಪ ನೋಂದಣಿ ಕಚೇರಿ ಇಂಡಿ, ಉಪ ನೋಂದಣಿ ಕಚೇರಿ ಸಿಂದಗಿ, ಉಪ ನೋಂದಣಿ ಕಚೇರಿ ಮುದ್ದೇಬಿಹಾಳ ಹಾಗೂ ಉಪ ನೋಂದಣಿ ಕಚೇರಿ ತಿಕೋಟಾ ಜುಲೈ ೧೨ರಂದು ಎಂದಿನಂತೆ ಕಾರ್ಯನಿರ್ವಹಿಸಲಿವೆ.ಆದ್ದರಿಂದ ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದು ತಮ್ಮ ನೋಂದಣಿ ಸಂಬಂಧಿತ ಕೆಲಸಗಳನ್ನು ಸಂಬಂಧಿತ ಉಪ ನೋಂದಣಿ ಕಚೇರಿಗಳಲ್ಲಿ ನಿರ್ವಹಿಸಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರಿಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)–೨೦೨೬ರ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.​ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲೆಯ ಎಲ್ಲ ತಾಲೂಕು ತಹಶೀಲ್ದಾರರೊಂದಿಗೆ ನಡೆಸಿದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.ತಹಸೀಲ್ದಾರರು ತಮ್ಮ ಲಾಗಿನ್‌ಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಃಐಔ) ಂSಆಆ (ಂbseಟಿಣ, Shiಜಿಣeಜ,ಆuಠಿಟiಛಿಚಿಣe,ಆeಚಿಣh) ಸಂಬಂಧಿಸಿದಂತೆ ಭರ್ತಿ ಮಾಡಿ ಸಲ್ಲಿಸಿರುವ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಹಾಗೂ ಅದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಖಾತ್ರಿಪಡಿಸಿಕೊಳ್ಳಬೇಕು.ಂSಆಆ ಮತದಾರರ ವಿವರಗಳನ್ನು ಸಂಬಂಧಿತ ಬೂತ್ ಮಟ್ಟದ ಏಜೆಂಟರಿಗೆ (ಃಐಂ) ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನಿಯಮಾನುಸಾರ ಒದಗಿಸಿರುವ ಕುರಿತು ಮಾಹಿತಿ ಪಡೆಯಬೇಕು. ಈ ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಪೂರ್ಣಗೊಳಿಸಬೇಕು.​ಡಿಜಿಟಲೀಕರಣಕ್ಕೆ ಚುರುಕು: ಗಣತಿ ನಮೂನೆಗಳ…

Read More