Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿಯ ನೀಲಮ್ಮ ಹಂಪಣ್ಣ ಹಡಪದ ಇವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವದನ್ನು ಖಂಡಿಸಿ ವಿಜಯಪುರ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ (ರಿ) ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಮುಖಾಂತರ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಹಡಪದ ಸಮಾಜದ ಮುಖಂಡರು, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಮ್ಮ ಹಿಂದುಳಿದ ಹಡಪದ ಸಮಾಜಕ್ಕೆ ಸೇರಿದ ಶ್ರೀಮತಿ ನೀಲಮ್ಮ ಹಡಪದ ಇವರ ಮೇಲೆ ದುಷ್ಕರ್ಮಿಯೊಬ್ಬ ಮಾರಣಾಂತಿಕ ಹಲ್ಲೆಯನ್ನು ನಡೆಸಿ ಹತ್ಯೆಗೆ ಪ್ರಯತ್ನ ಪಟ್ಟಿದ್ದು, ದುಷ್ಕರ್ಮಿಯ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಹಿಂದುಳಿದ ಸಮಾಜಕ್ಕೆ ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕು. ಕ್ಷೌರಿಕ ವ್ರತ್ತಿಯ ಆಧಾರದ ಮೇಲಿರುವ ಈ ಸಮುದಾಯಕ್ಕೆ ಸಾಮಾಜಿಕ ಜೀವನದಲ್ಲಿ ಅಗೌರವ ಮೇಲಿಂದ ಮೇಲೆ ನಡೆಯುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಕಾರಣ ಹಲ್ಲೆಗೊಳಗಾದ ಮಹಿಳೆಯ ಕುಟುಂಬಕ್ಕೆ ಭದ್ರತೆ ನೀಡಿ ಹಲ್ಲೆ ನಡೆಸಿದ ದುಷ್ಕರ್ಮಿಯ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮತ್ತು ಸಾಮಾಜಿಕ ನ್ಯಾಯದ ಅಡಿಯಲ್ಲಿ ಮಹಿಳೆಗೆ ಜೀವನೋಪಾಯಕ್ಕೆ…

Read More

ಭೀಕರ ಅಪಘಾತದಲ್ಲಿ ನಾಲ್ವರ ದುರಂತ ಅಂತ್ಯ | ಕಣ್ಣೀರ ಕಡಲಲ್ಲಿ ಕುಟುಂಬಗಳು | ನ್ಯಾಯ ಕೊಡಿಸುವವರಿಗೆ ಅನ್ಯಾಯ ಉದಯರಶ್ಮಿ ದಿನಪತ್ರಿಕೆ – ಚೇತನ ಶಿವಶಿಂಪಿಮುದ್ದೇಬಿಹಾಳ: ಮನೆ ಮಾರಿ ಮಗನ ಉದ್ಯೋಗಕ್ಕಾಗಿ ಕಾರು ಕೊಡಿಸಿದ್ದ ಒಂದು ಕುಟುಂಬ, ಸಾರ್ವಜನಿಕರ ನ್ಯಾಯವನ್ನು ಸರಳವಾಗಿ ಬಗೆಹರಿಸಿ ಸಾಕಷ್ಟು ನೊಂದ ಕುಟುಂಬಗಳಿಗೆ ಆಸರೆಯಾಗಿದ್ದ ಸೀದಾ ಸಾದಾ ನಾಯಕನ ಇನ್ನೊಂದು ಕುಟುಂಬ, ಘಟನೆಯೊಂದರಲ್ಲಿ ತನ್ನ ಎರಡೂ ಕೈಗಳನ್ನು ಕಳೆದುಕೊಂಡು ಎದೆಗುಂದದೆ ಬಾಳ ಪಯಣದಲ್ಲಿ ದಿನ ನಿತ್ಯ ಹೋರಾಟ ಮಾಡುತ್ತ ಸಾಗುತ್ತಿದ್ದ ವ್ಯಕ್ತಿಯ ಮತ್ತೊಂದು ಕುಟುಂಬ, ಬಡತನದ ಕುಟುಂಬದಲ್ಲಿ ಬೆಳೆದು ಗುತ್ತಿದಾರನಾಗಿ ಹೆಸರುವಾಸಿಯಾಗಿದ್ದವನ ಕುಟುಂಬ, ಈ ನಾಲ್ಕೂ ಕುಟುಂಬಗಳು ಸಧ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿವೆ.ಈ ಕುಟುಂಬಗಳು ಕಣ್ಣೀರಿಡಲು ಕಾರಣವಾಗಿದ್ದೇ ಆ ಭಯಾನಕ ವಾಹನ ಅಪಘಾತ. ಬುಧವಾರ ಮಧ್ಯರಾತ್ರಿ ಮುದ್ದೇಬಿಹಾಳ-ಹುನಗುಂದ ಹೈವೇ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಡೆದ ನಾಲ್ವರ ದುರಂತ ಅಂತ್ಯಕ್ಕೆ ನಾಲ್ಕೂ ಕುಟುಂಬಗಳಿಗೆ ಬರಸಿಡಿಲು ಬಡಿದಂತಾಗಿದೆ.ದೇವರ ದರ್ಶನಕ್ಕೆಂದು ಮನೆಯಿಂದ ಹೊರಟವರು ಮರಳಿ ಮನೆಗೆ ಬಾರದೆ ಮಸಣದತ್ತ ಪಯಣ ಬೆಳೆಸಿದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷೋಥಾನ್ ಹೆರಿಟೇಜ್ ರನ್-2024ಕ್ಕೆ ಪೂರಕವಾಗಿ ಬಿ.ಎಲ್.ಡಿ.ಇ ಸಂಸ್ಥೆಯ ಎಲ್ಲ ಸಿಬ್ಬಂದಿ ಅ.7ರಂದು ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಸಸಿ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ತೆಗೆದುಕೊಳ್ಳೋಣ ಎಂದು ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ ಹೇಳಿದ್ದಾರೆ.ಗುರುವಾರ ಮುಸ್ಸಂಜೆ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್-2024ರ ಅಂಗವಾಗಿ ನಡೆದ ಸಂಸ್ಥೆಯ ನಾನಾ ಹೈಸ್ಕೂಲುಗಳ ಮುಖ್ಯೋಪಾಧ್ಯಾಯರು ಮತ್ತು ಕಾಲೇಜುಗಳ ಪ್ರಾಚಾರ್ಯರ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಅರಣ್ಯೀಕರಣಕ್ಕಾಗಿ ಎಂ. ಬಿ. ಪಾಟೀಲ ಅವರು ವೃಕ್ಷೋಥಾನ್ ಹೆರಿಟೇಜ್ ರನ್ ಪ್ರಾರಂಭಿಸುವ ಮೂಲಕ ಹಸಿರುಕರಣಕ್ಕೆ ನಾಂದಿ ಹಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಾವೆಲ್ಲರೂ ಕೈಜೋಡಿಸೋಣ. ಅ. 7 ರಂದು ಎಂ. ಬಿ. ಪಾಟೀಲರ ಜನ್ಮದಿನದ ಹಿನ್ನೆಲೆಯಲ್ಲಿ ಎಲ್ಲ ಸಿಬ್ಬಂದಿ ಒಂದೊಂದು ಸಸಿ ನೆಟ್ಟು ಅವುಗಳನ್ನು ದತ್ತು ಪಡೆದು ಬೆಳೆಸೋಣ. ಪ್ರತಿವರ್ಷ ಅವುಗಳ ಆಡಿಟ್…

Read More

ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಜಾವಾಣಿಯ ರಶ್ಮಿ ಎಸ್. ಸೇರಿ ಹಲವರ ನೇಮಕ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿಗಳಲ್ಲಿ ಅವಕಾಶ ಕಲ್ಪಿಸಿರುವಂತೆ ವಿವಿಧ ಪತ್ರಕರ್ತರ ಸಂಘಟನೆಗಳ ಪ್ರತಿನಿಧಿಗಳನ್ನು, ಅವುಗಳ ಪ್ರಾತಿನಿಧ್ಯದ ಸಂಖ್ಯೆಗೆ ಅನುಗುಣವಾಗಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಬೆಂಗಳೂರಿನ ಶಿವಾನಂದ ತಗಡೂರು, ದಾವಣಗೆರೆ ಜಿಲ್ಲೆಯ ಜನತಾವಾಣಿಯ ಇ.ಎಂ. ಮಂಜುನಾಥ್, ವಿಜಯಪುರ ಜಿಲ್ಲೆಯ ವಿಜಯ ಕರ್ನಾಟಕ ವರದಿಗಾರ ಸಂಗಮೇಶ ಚೂರಿ, ಬೆಂಗಳೂರಿನ ಸುವರ್ಣ ಟಿ.ವಿಯ ಇನ್‍ಪುಟ್ ಮುಖ್ಯಸ್ಥೆ ಶೋಭಾ ಎಂ.ಸಿ. ಹುಬ್ಬಳ್ಳಿಯ ಪತ್ರಕರ್ತ ಜೆ.ಅಬ್ಬಾಸ್ ಮುಲ್ಲಾ, ಟಿವಿ 9 ಹಿರಿಯ ಪತ್ರಕರ್ತ ಹೆಚ್.ವಿ.ಕಿರಣ್ ಬೆಂಗಳೂರಿನ ಟೈಮ್ಸ್ ಆಫ್ ಇಂಡಿಯಾದ ಹಿರಿಯ ಪತ್ರಕರ್ತ ಅನಿಲ್ ವಿ. ಗೆಜ್ಜಿ, ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಕೆಂಚೇಗೌಡ, ಉಡುಪಿ ಜಿಲ್ಲೆ ಕುಂದಾಪುರದ ಕುಂದಪ್ರಭ ಸಂಪಾದಕ ಯು. ಸುರೇಂದ್ರ…

Read More

ಸಿಎಂ ಸಿದ್ದರಾಮಯ್ಯ, ಪ್ರಭಾಕರ್ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಆದೇಶವನ್ನು ಹೊರಡಿಸಿದ್ದು, ಅದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಅಭಿನಂದಿಸುತ್ತದೆ.ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಹಕ್ಕೋತ್ತಾಯ ಪರಿಗಣಿಸಿ, ಬಜೆಟ್‌ನಲ್ಲಿಯೇ ಉಚಿತ ಬಸ್ ಪಾಸ್ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಬಜೆಟ್‌ನಲ್ಲಿಯೂ ಘೋಷಣೆ ಮಾಡಿದ್ದರು. ಈಗ ಉಚಿತ ಬಸ್ ಪಾಸ್ ಸೌಲಭ್ಯ ನನಸಾಗುವಂತೆ ಮಾಡಿರುವುದು ಶ್ಲಾಘನೀಯ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.ಉಚಿತ ಬಸ್ ಪಾಸ್‌ಗೆ 15.66 ಕೋಟಿ ರೂ ಹಣವನ್ನು ಮೀಸಲಿರಿಸಿ ಯೋಜನೆಗೆ ಅನುಮತಿ ಪಡೆಯಲು ವಾರ್ತಾ ಇಲಾಖೆ ಮತ್ತು ಹಣಕಾಸು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ ಎಂದು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಹೆಚ್.ಕೆ.ಅಂಗಡಿ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಲೇಖನಿ ಸ್ಥಗಿತಗೊಳಿಸುವ ಮೂಲಕ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಮಾತನಾಡಿದ ಅವರು, ರಾಜ್ಯ ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.೨೬ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದೇವೆ ನಮ್ಮ ಬೇಡಿಕೆ ಈಡೇರಿಕೆಯಾಗದೇ ಹೋದರೆ ಈ ಮುಷ್ಕರ ಹೀಗೆ ಲೇಖನಿ ಸ್ಥಗಿತಗೊಳಿಸುವುದು ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ವೇಳೆ ಗ್ರಾಮ ಆಡಳಿತಾಧಿಕಾರಿ ಬಸಯ್ಯ ಮಠ ಮಾತನಾಡಿ, ಆಧುನಿಕ ತಂತ್ರಾಂಶಕ್ಕೆ ಸಂಬಂಧಿಸಿದಂತೆ ಅವಶ್ಯ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವರ್ಷದ ಅತ್ಯತ್ತಮ ಕಂದಾಯ ಅಧಿಕಾರಿ 2024 ರ ಪ್ರಶಸ್ತಿಗೆ ವಲಯ ಪ್ರಭಾರಿ ಕಂದಾಯ ನಿರೀಕ್ಷಕ ರಾಜಾಸಾಬ್ ಕಂದಗಲ್ ಆಯ್ಕೆಯಾಗಿದ್ದಾರೆ.ರಾಜ್ಯಾದಾದ್ಯಂತ ಪ್ರಶಸ್ತಿ ಪುರಸ್ಕೃತ 36 ಗ್ರಾಮ ಆಡಳಿತ ಅಧಿಕಾರಿಗಳಲ್ಲಿ ರಾಜೇಸಾಬ್ ಒಬ್ಬರು. ಸೆಪ್ಟೆಂಬರ್ 27 ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಯಲ್ಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶಸ್ತಿಯನ್ನು ನೀಡುವುದಾಗಿ ತಿಳಿದುಬಂದಿದೆ.

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುದೀಪ್ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಪ್ರಾಧ್ಯಾಪಕಿ ಡಾ ನಂದಾ ವಾರದ, ಹಾಗೂ ಪ್ರಾಧ್ಯಾಪಕ ಗುಲಾಂ ಮೈಹಿಬೂಬಸಾಬ್ ಇವರುಗಳಿಗೆ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಗುರುವಾರ ಸನ್ಮಾನಿಸಿ ಗೌರವಿಸಿ ಶುಭಹಾರೈಸಿಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಈರ್ವರೂ ತಮ್ಮ ಸೇವಾವಧಿಯಲ್ಲಿ ಸಹಕಾರ ನೀಡಿದ ಸ್ಥಳೀಯರಿಗೂ ಹಾಗೂ ಸಿಬ್ಬಂದಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ 14 ವರ್ಷ ಸೇವೆ ಸಲ್ಲಿಸಿದ ಡಾ ನಂದಾ ವಾರದ ಹಾಗೂ 7 ವರ್ಷ ಸೇವೆ ಸಲ್ಲಿಸಿದ ಗುಲಾಂ ಮೈಹಿಬೂಬಸಾಬ್ ಈರ್ವರ ಸೇವೆ ಅನನ್ಯ ಎಂದು ಗುಣಗಾನ ಮಾಡಿದರು.ಡಾ ಸಿದ್ದಲಿಂಗ ರಾಠೋಡ್,‌ ಡಾ ಬಸಮ್ಮ ಎಸ್, ನಸ್ರೀನ್ ತಾಜ್, ಡಾ ಪೂಜ್ಯಾ ಹೊನ್ನುಟಗಿ, ಡಾ ಯಂಕನಗೌಡ ಪಾಟೀಲ, ಶರಣಪ್ಪ ಗೊಡ್ರಿಹಾಳ, ಸಂದೀಪ್ ಸಂಶಿಕರ್, ಸಂಗಪ್ಪ ಪಟ್ಟಣಕರ್, ಮಾಸುಮ ಅಲಿ ನಾಶಿ, ಸೇರಿದಂತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ತಾಳ್ಮೆ ಹಾಗೂ ಆತ್ಮವಿಶ್ವಾಸ ವೃದ್ಧಿಯಾಗಿ ಸುಂದರ ವ್ಯಕ್ತಿತ್ವದ ಬದುಕು ನಮ್ಮದಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಜನೆಯೊಂದಿಗೆ ಆಟೋಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಚೈತನ್ಯಶಾಲಿಗಳಾಗಿ ಸದಾ ಚಟುವಟಿಕೆಯಿಂದಿರಲು ಸಹಾಯಕವಾಗುತ್ತದೆ ಎಂದು ಹೇಳಿದರು. ಆರೋಗ್ಯ ಸಂಪತ್ತು ನಮ್ಮೆಲ್ಲರ ಸಂಪತ್ತು. ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಕ್ರೀಡೆಗಳಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸಧೃಡತೆ ಹೊಂದಿ ದೈಹಿಕ ಆರೋಗ್ಯವಾಗಿರಬೇಕು ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ನ್ಯಾಯವಾದಿ ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್ ತರಬೇತುದಾರರಾದ ರಾಜು ಚವ್ಹಾಣ, ರಫಿಕ್ ನಧಾಪ್, ಸಲ್ಲಾವುದ್ದೀನ್ ಮಳಗಿ, ಶಿವು…

Read More