Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಜಾಪ್ರಭುತ್ವ ಮಾದರಿ ದೇಶದಲ್ಲಿರುವ ಕಾರ್ಮಿಕರ ಹಕ್ಕುಗಳಾದ ಸಂಘಟನೆಯ ಹಕ್ಕು, ಮುಷ್ಕರದ ಹಕ್ಕು, ಅಗತ್ಯ ಕನಿಷ್ಟ ವೇತನ, ಸಮಾಜಿಕ ಮತ್ತು ಆರ್ಥಿಕ ಭದ್ರತೆ ಹಕ್ಕನ್ನು ಉಳಿಸಲು ದೇಶದ್ಯಾಂತ ಆಲ್ ಇಂಡಿಯಾ ಯನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ತಾಲೂಕು ಘಟಕ ಸಿಂದಗಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಧರ್ಮಶೆಟ್ಟಿ ಹೇಳಿದರು.ಪಟ್ಟಣದ ಆಡಳಿತ ಸೌಧದ ಮುಂಭಾಗದಲ್ಲಿ ಎಐಯುಟಿಸಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಬಿಜೆಪಿ ನೇತೃತ್ವದ ಎನಡಿಎ ಸರಕಾರ ತಂದಿರುವ ೪ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳ ಮೂಲಕ ಪಿಎಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ದೇಶದ ಶ್ರೀಮಂತರಿಗೆ ಅನುಕೂಲವಾಗುವ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರಕಾರ ಕಾರ್ಮಿಕ ವರ್ಗಕ್ಕೆ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ರೂಪಾ ಆಲಮೇಲ, ಪಾರ್ವತಿ ಕಟ್ಟಿಮನಿ, ಶಿವಮ್ಮ ಬೂದಿಹಾಳ, ನಾಗಮ್ಮ, ರಜನಿ ಸೇರಿದಂತೆ ಆಲ್ ಇಂಡಿಯಾ ಯನೈಟೆಡ್…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಜಾನಪದ ಪರಿಷತ್ತಿನ ಸಿಂದಗಿ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಉಪನ್ಯಾಸಕ ಹಾಗೂ ಪತ್ರಕರ್ತ ಮಹಾಂತೇಶ ನೂಲಾನವರ ಅವರನ್ನು ಆಯ್ಕೆಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆದೇಶ ಹೊರಡಿಸಿದ್ದಾರೆ. ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ೭೬ ಎಂಎಂ, ಇಂಡಿ ತಾಲೂಕಿನಲ್ಲಿ ಕನಿಷ್ಠ ೭ಎಂಎಂ, ವಿಜಯಪುರ ನಗರ ಸೇರಿದಂತೆ ವಿಜಯಪುರ ತಾಲೂಕಿನಲ್ಲಿ ೪೦ಎಂಎಂ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ವಿವಿಧೆಡೆ ನೀರು ನಿಂತಿರುವ ಪ್ರದೇಶಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ಯಂತ್ರಗಳಿಂದ ನೀರು ಹೊರ ಹಾಕುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.ಮನೆಹಾನಿ: ಜಿಲ್ಲೆಯಲ್ಲಿ ೫೭ ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಮನೆಹಾನಿ ಯಾವುದು ಇಲ್ಲ. ಯಾವುದೇ ಜನ-ಜಾನುವಾರ ಸಂಭವಿಸಿರುವುದಿಲ್ಲ. ೨೦೦೦ ಹೆಕ್ಟೆರಷ್ಟು ಅಂದಾಜು ಬೆಳೆ ಹಾನಿಯಾಗಿದೆ. ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆ ಮುಗಿದ ನಂತರ ನಿಖರ ಮಾಹಿತಿ ದೊರೆಯಲಿದೆ ಎಂದು ಹೇಳಿದರು.ಸೆಪ್ಟೆಂಬರ್ ೨೫ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಮನವಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ, ಸಚಿವರ ನಿರ್ದೇಶನದಂತೆ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read More

ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ | ಸತ್ಯಕ್ಕೆ ಜಯ | ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಸತ್ಯಕ್ಕೆ ಜಯ ಸಿಗಲಿದೆ. ತನಿಖೆಯನ್ನು ಎದುರಿಸಲು ನಾನು ಹಿಂಜರಿಯುವುದಿಲ್ಲ, ಕಾನೂನಿನಡಿಯಲ್ಲಿ ಅಂತಹ ತನಿಖೆಗೆ ಅನುಮತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ತಜ್ಞರನ್ನು ಸಂಪರ್ಕಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.ಕಾನೂನು ಮತ್ತು ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಹೇಳಿದ ಅವರು, ಈ ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ತನಗೆ ತೊಂದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦/೧೧ ಕೆವಿ ಹಿರೇನೆವನೂರ, ೧೧೦/೧೧ ಕೆವಿ ರೋಡಗಿ, ೧೧೦/೧೧ ಕೆವಿ ಹೀರೆಮಸಳಿ, ೧೧೦/೧೧ ಕೆವಿ ಇಂಚಗೇರಿ, ೧೧೦/೧೧ ಕೆವಿ ಚಡಚಣ, ೧೧೦/೧೧ಕೆವಿ ಕೆರೂರ, ೧೧೦/೧೧ಕೆವಿ ಮೊರಟಗಿ, ೧೧೦/೧೧ ಕೆವಿ ದೇವಣಗಾಂವ, ೧೧೦/೧೧ ಕೆವಿ ಮಲಘಾಣ ವಿದ್ಯುತ್ ವಿತರಣ ಕೇಂದ್ರಗಳಲ್ಲಿ ೩೩ಕೆವಿ ಹಾಗೂ ೧೧ಕೆವಿ ಬೇಗಳ ಎರಡನೇ ತ್ರೈಮಾಸಿಕ ಕಾರ್ಯ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ ೩೩ಕೆವಿ, ೧೧ಕೆವಿ ಮಾರ್ಗಗಳಲ್ಲಿ ಸೆಪ್ಟೆಂಬರ್ ೨೬ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೩ರವವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಇಂಡಿ ಕಾರ್ಯನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಇವರ ಸಹಯೋಗದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪೂರದ ಶ್ರೀ ದಾನಮ್ಮದೇವಿ ದೇವಸ್ಥಾನದಲ್ಲಿ ಸೆಪ್ಟೆಂಬರ್ ೩೦ರಂದು ನಡೆಯುವ ಕರ್ನಾಟಕ ಸುವರ್ಣ ಸಂಭ್ರಮ-೫೦ರ ಆಚರಣೆ ಹಾಗೂ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ ವಿಭಾಗದ ತಾಲೂಕಾ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಸಾರಿಗೆ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕಕರಸಾ ನಿಗಮ ವಿಜಯಪುರದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡುವುದಕ್ಕಾಗಿ ಸೆಪ್ಟೆಂಬರ್ ೨೬ರಂದು ಸೋಲಾಪೂರ ಬೈಪಾಸ ಭರಟಗಿ ರೋಡ ಸರಸ್ವತಿ ಸ್ಕೂಲ್ ಹತ್ತಿರ ಪುರುಷ ಹಾಗೂ ಮಹಿಳಾ ಸೈಕ್ಲಿಂಗ್ ಕ್ರೀಡಾಪಟುಗಳ ಆಯ್ಕೆ ಪ್ರಕಿಯೆ ನಡೆಯಲಿದೆ.ಭಾಗವಹಿಸುವ ಸೈಕ್ಲಿಂಗ್ ಕ್ರೀಡಾಪಟುಗಳು ನೇರವಾಗಿ ಬೆಳಿಗ್ಗೆ ೬ ಗಂಟೆಗೆ ಜಿಲ್ಲಾ ಕ್ರಿಡಾ ವಸತಿ ನಿಲಯದಲ್ಲಿ ವರದಿ ಮಾಡಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ:೯೪೪೮೨೩೪೮೮೩, ೯೭೪೨೪೯೮೬೪೫ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆ | ಹಲವು ಪ್ರದೇಶಗಳು ಜಲಾವೃತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಥಮಾಧ್ಯತೆಯ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಅಧಿಕಾರಿ ಸೂಚಿಸಿದರು.ಪಾಲಿಕೆಯ ೩ ವಲಯಗಳ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆ ಅಂಗಡಿ ಪ್ರದೇಶಗಳ ಕುರಿತು ಮಾಹಿತಿ ಪಡೆದುಕೊಂಡು ಸಮರೋಪಾದಿಯಲ್ಲಿ ಪಾಲಿಕೆಯ ಅಧಿಕಾರಿ, ಸಿಬ್ಬಂದಿಗಳ ತಂಡ ರಚಿಸಿಕೊಂಡು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಿದರು.ನಗರದ ವಾರ್ಡ್ ನಂ ೬, ೧೦, ೧೧, ೧೩, ೧೪, ೨೦, ೨೪, ೨೬, ೩೩ ಹಾಗೂ ೩೩ರ ಹಾಗೂ ಬಾಗವಾನ ಕಾಲೋನಿ, ಪ್ರೇಮ್ ನಗರ, ಕೆ.ಸಿ.ನಗರ, ಆಲಕುಂಟೆ ನಗರ, ಗಚ್ಚಿನಕಟ್ಟಿ ಕಾಲೋನಿಯ ಪ್ರದೇಶದ ಜನವಸತಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡ ಬಗ್ಗೆ ಮಾಹಿತಿ ದೊರೆತ ತಕ್ಷಣ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

Read More

ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಪರಿಶಿಷ್ಟ ಪಂಗಡದ ತಳವಾರ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ತಳವಾರ ಸಮಾಜ ಸೇವಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಸಮಾಜದ ಮುಖಂಡರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ತಳವಾರ ಸಮಾಜ ೧.೨೫ ಲಕ್ಷ ಜನಾಂಗ ವಾಸವಾಗಿದ್ದು ಶೋಷಣೆಗೆ ಒಳಗಾಗುತ್ತಲೇ ಬಂದಿದೆ. ಯಾವುದೇ ಪ್ರಾತಿನಿಧ್ಯ ದೊರಕಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದಿಂದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಸರ್ಕಾರ ಈ ಸಮುದಾಯದ ಏಳಿಗೆಗಾಗಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಏಕಲವ್ಯ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ವಸತಿ ನಿಲಯ ಮಂಜೂರು ಮಾಡಬೇಕು. ಶೋಷಿತ ಸಮುದಾಯದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸಲು ಬ್ಯಾಕ್‌ಲಾಗ್ ಹುದ್ದೆಗಳಿಗೆ ತಕ್ಷಣದಿಂದಲೇ ಭರ್ತಿ ಮಾಡಿಕೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮೀಣ ಕೃಷಿ ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಸದಸ್ಯರ, ನಿರ್ದೇಶಕರ ಸಹಕಾರ, ಅವಲೋಕನ ಹಾಗೂ ಮುಖ್ಯವಾಗಿ ರೈತ ಸಮುದಾಯದ ಸಕ್ರೀಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಸದಯ್ಯನಮಠದ ವೀರಗಂಗಾಧರ ಸ್ವಾಮೀಜಿ ಹೇಳಿದರು.ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆವರಣದಲ್ಲಿ ಮಂಗಳವಾರ ಜರುಗಿದ ೧೧೨ ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.ವಿಜಯಪುರ ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಹಿನ್ನಡೆಯಲ್ಲಿದ್ದ ಸಂಘವು ಕಳೆದ ವರ್ಷದಿಂದ ಪ್ರಗತಿಪಥದಲ್ಲಿದ್ದು, ಈ ವರ್ಷ ರೂ.೪೧ ಲಕ್ಷ ಲಾಭಗಳಿಸಿದೆ. ಮುಂದಿನ ದಿನಗಳಲ್ಲಿ ವ್ಹಿಡಿಸಿಸಿ ಬ್ಯಾಂಕಿನ ದೇವರಹಿಪ್ಪರಗಿ ಶಾಖೆಯ ಕಟ್ಟಡ ನಿರ್ಮಿಸಲು ನಾವೆಲ್ಲ ಮುಂದಾಗೋಣ ಎಲ್ಲರ ಸಹಕಾರವಿರಲಿ ಎಂದರು.ಕಾರ್ಯನಿರ್ವಹಣಾಧಿಕಾರಿ ಶರಣಗೌಡ ಅಂಗಡಿ ವರದಿವಾಚಿಸಿ, ೧೯೧೨ರಲ್ಲಿ ಆರಂಭಗೊಂಡ ಸಂಘವು ೨೩೭೨ ಸದಸ್ಯ ಬಲದಲ್ಲಿ ೧೧೭೨ ಸಾಲಗಾರರಿಗೆ ಸಾಲ ಹಂಚಿದ್ದು, ೨೦೨೩-೨೪ನೇ ಸಾಲಿನಲ್ಲಿ ಒಟ್ಟು ೪೧ ಲಕ್ಷ ರೂ.ಗಳ ಲಾಭ ಗಳಿಸಿದೆ. ಸಂಘ ಹಿಂದಿನ ಲೆಕ್ಕಪತ್ರ ವರ್ಗೀಕರಣದಲ್ಲಿ “ಬಿ”…

Read More