Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ರೈತ ಈ ದೇಶದ ಬೆನ್ನೆಲುಬು. ರೈತರ ಪ್ರಗತಿಯೇ ದೇಶದ ಪ್ರಗತಿ ಎಂದು ಯಾಳವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ರಾಜುಗೌಡ ನಾಡಗೌಡ್ರ ಹೇಳಿದರು.ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ಸೋಮವಾರ ವಿ.ಪ್ರಾ.ಗ್ರಾ.ಕೃ.ಸ ಸಂಘದ ೪೮ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರೈತ ಸ್ವಾವಲಂಬಿಯಾಗಿ, ಬದುಕನ್ನು ಆರ್ಥಿಕವಾಗಿ ಉಜ್ವಲಗೊಳಿಸಿಕೊಳ್ಳಬೇಕಾದರೆ ಸಹಕಾರಿ ಸಂಘಗಳಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಹಕಾರ ಸಂಘಗಳ ಬೆಳವಣಿಗೆಗೆ ರೈತರು ಸಹಕಾರ ನೀಡಬೇಕು ಜೊತೆಗೆ ಸಮಯಕ್ಕನುಸಾರ ಸಾಲ ಮರುಪಾವತಿಸಬೇಕು. ಇದರಿಂದ ಉಳಿದ ರೈತರು ಸಾಲಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಮುಂಬರುವ ವರ್ಷದಿಂದ ನಮ್ಮ ಸಂಘದ ಮೂಲಕ ಬೀಜ ವಿತರಣಾ ಕೇಂದ್ರ ಆರಂಭಿಸಲಾಗುವುದು ಎಂದರು.ಕಡಕೋಳ ಹಿರೇಮಠದ ಮಹಾಲಿಂಗಸ್ವಾಮೀಜಿ ಸಾನಿಧ್ಯ ವಹಿಸಿ, ದೀಪ ಬೆಳಗಿಸಿ ಆಶೀರ್ವಚನ ನೀಡಿದರು.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆಯ್.ಲಗಳಿ ವರದಿ ವಾಚಿಸಿ, ೧೫೦೭ ಸದಸ್ಯ ಬಲದ ಸಂಘ ೨೦೨೩-೨೪ನೇ ಸಾಲಿನಲ್ಲಿ ೪ ಲಕ್ಷ ಮೂವತ್ತನಾಲ್ಕು ಸಾವಿರ ಲಾಭಗಳಿಸಿದೆ ಎಂದರು.ನಂತರ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿನಿಯರು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಇದು ಅವರನ್ನು ಸಾಧನೆ ಮತ್ತು ಯಶಸ್ಸಿನತ್ತ ಪ್ರೇರೇಪಿಸುತ್ತದೆ ಎಂದು ಮಹಿಳಾ ವಿವಿಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಆರ್.ವಿ.ಗಂಗಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ೨ನೇ ಅಥ್ಲೆಟಿಕ್ ಪ್ರೋಜೆಕ್ಟ್ ಮೀಟ್ -೨೦೨೪ವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಿರಂತರ ಅಧ್ಯಯನ, ಅಭ್ಯಾಸ, ಮತ್ತು ತರಬೇತಿ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗುತ್ತವೆ. ಕಠಿಣ ಪರಿಶ್ರಮ, ಸಮರ್ಪಣೆ, ಮತ್ತು ಸ್ಪಷ್ಟತೆ ಅವರನ್ನು ಮುನ್ನಡೆಸಲು ಅಡಿಪಾಯವಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಪಿ.ಬಳಿಗಾರ ಮಾತನಾಡಿ, ವಿದ್ಯಾರ್ಥಿನಿಯರು ದೇಶದ ಆಸ್ತಿ. ಎಲ್ಲರೂ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಪ್ರೊ. ರಾಜಕುಮಾರ ಪಿ ಮಾಲಿಪಾಟೀಲ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಶಿಸ್ತು, ಬದ್ದತೆ, ಆತ್ಮವಿಶ್ವಾಸ ಮತ್ತು ನಿರಂತರ ತರಬೇತಿಯಿಂದ ಉತ್ತಮ ಸಾಧನೆ ಮಾಡಬಹುದು ಎಂದರು.ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪ್ರತಿ ನಿತ್ಯ ಪಟ್ಟಣವನ್ನು ಸ್ವಚ್ಚಗೊಳಿಸುವ ಮೂಲಕ ಪ್ರತಿಯೊಬ್ಬರ ಜೀವನದ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನ ಪ್ರತಿಯೊಬ್ಬರು ಗೌರವದಿಂದ ಕಾಣಬೇಕು ಎಂದು ಪುರಸಭೆ ಸದಸ್ಯ ಜಗದೇವಿ ಗುಂಡಳ್ಳಿ ಹೇಳಿದರು.ಪಟ್ಟಣದ ಪುರಸಭೆ ಸಭಾ ಭವನದಲ್ಲಿ ಪುರಸಭೆ ಹಾಗೂ ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೇ ದುಡ್ಡು ಕೊಟ್ಟರೂ ಮಾಡದೆ ಇರುವ ಕನಿಷ್ಠ ಕೆಲಸವನ್ನು ಪೌರಕಾರ್ಮಿಕರು ನಿರ್ವಹಿಸುತ್ತಿದ್ದಾರೆ. ಇವರಿಂದ ನಗರ ಅಂದವಾಗಿ ಕಾಣುತ್ತಿದೆ ಅಲ್ಲದೆ ಆರೋಗ್ಯಕರವಾಗಿ ಕಾಣುವಂತಾಗಿದೆ ಎಂದರು.ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುವ ಮೂಲಕ ಪ್ರತಿಯೊಬ್ಬರ ರಕ್ಷಣೆಗಾಗಿ ಶೃಮಿಸುವ ಪೌರ ಕಾರ್ಮಿಕರೊಂದಿಗೆ ನಾವಿದ್ದೇವೆ ಎಂದು ಗೌರವ ಪೂರ್ವಕ ಹೇಳುವ ಸಂಧರ್ಭದಲ್ಲಿ ಬಹುತೇಕ ತಾಲೂಕಿನ ಹಿರಿಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿರುವುದು ಪೌರ ಕಾರ್ಮಿಕರಿಗೆ ಅವಮಾನಿಸಿದಂತಾಗಿದೆ ಎಂದರು.ಭಾರತೀಯ ಸ್ಟೇಟ್ ಬ್ಯಾಂಕ್‌ನ ಅಧಿಕಾರಿ ಈರಣ್ಣ ಚಿಮ್ಮಲಗಿ ಮಾತನಾಡಿ, ಪೌರಕಾರ್ಮಿಕರು ಆರ್ಥಿಕ ಸಂಪತ್ತು ಹೊಂದಲು ಭಾರತ ಸರಕಾರದ ಸಾಮಾಜಿಕ ಸುರಕ್ಷಾ ಯೋಜನೆಗಳ ಸದುಪಯೋಗವನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರಗುವ ಜನನ ಮರಣ ಘಟನೆಗಳನ್ನು ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ ನೋಂದಣಿ ಕಾರ್ಯ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರುಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜನನ ಮರಣ ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳು ನಮೂನೆ ಒಂದು ಹಾಗೂ ನಮೂನೆ ೨ರ ಮೂಲ ನಮೂನೆಗಳನ್ನು ಬಳಸಬೇಕು. ಹಾಗೆಯೇ ಜನನ ಮರಣ ನಮೂನೆ ಭರ್ತಿ ಮಾಡುವಾಗ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ ಪರೀಶೀಲಿಸಬೇಕು ಎಂದು ಹೇಳಿದರು.ಗ್ರಾಮಾಂತರ ಪ್ರದೇಶದ ಎಲ್ಲಾ ನೋಂದಣಿ, ಉಪನೋಂದಣಾಧಿಕಾರಿಗಳಿಂದ ಪ್ರತಿ ತಿಂಗಳು ೫ನೇ ತಾರೀಕಿನೊಳಗಾಗಿ ಸಂಬಂಧಿಸಿದ ತಹಶೀಲ್ದಾರರು ಮಾಹಿತಿಯನ್ನು ಸ್ವೀಕರಿಸಿ, ದಿನಾಂಕ ೧೦ರೊಳಗಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಗೆ ಮಾಹಿತಿಯನ್ನು ಸಲ್ಲಿಸಬೇಕು. ಎಲ್ಲಾ ತಹಶೀಲ್ದಾರರು ಪ್ರತಿ ತಿಂಗಳು ತಾಲೂಕು ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯನ್ನು ನಡೆಸಿ ವರದಿಯನ್ನು ಜಿಲ್ಲಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಕ್ರೀಡಾಸಕ್ತಿಯನ್ನು ಹೊಂದುವಂತೆ ಪ್ರೇರೆಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.ಮಂಗಳವಾರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾಳಿಕೋಟೆಯಲ್ಲಿ ೧೦-೧೧-೨೦೨೪ರಿಂದ ನಡೆಯುವ ರಾಜ್ಯ ಮಟ್ಟದ ವ್ಹಾಲಿಬಾಲ್ ಕ್ರಿಡಾಕೂಟದ ಆಯೋಜನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇಂದಿನ ಸ್ಪರ್ಧಾ ಜಗತ್ತಿನಲ್ಲಿ ಕ್ರೀಡೆಗಳಲ್ಲಿ ಬಹಳಷ್ಟು ಜನರು ಆಸಕ್ತಿ ತೋರಬೇಕು. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಪಾಲಕರು, ಶಿಕ್ಷಕರು ಮಕ್ಕಳಲ್ಲಿರುವ ಕ್ರೀಡಾಸಕ್ತಿಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವಬೇಕು. ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟಗಳಲ್ಲಿ ಭಾಗವಹಿಸಿ ದೇಶದ ಕೀರ್ತಿ ತರುವಂತಾಗಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ಹಾಗೂ ಆರೋಗ್ಯ ಸದೃಢತೆ ಹೋಂದಬಹುದಾಗಿದೆ ಎಂದು ಅವರು ಹೇಳಿದರು.ರಾಜ್ಯ ಮಟ್ಟದ ವ್ಹಾಲಿಬಾಲ್ ಕ್ರೀಡಾಕೂಟವನ್ನು ನಮ್ಮ ಜಿಲ್ಲೆಯಲ್ಲಿ ಆಯೋಜಿಸುತ್ತಿರುವುದು ಸಂತಸದ ವಿಷಯ. ಈ ಕ್ರೀಡಾಕೂಟದಲ್ಲಿ ಆಗಮಿಸುವ ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಇತರ ಅವಶ್ಯಕ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನಲ್ಲೆಡೆ ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹಳ್ಳಕೊಳ್ಳ ಬಾಂದಾರಗಳು ತುಂಬಿ ಹರಿಯುತ್ತಿದ್ದು, ರೈತರ ತೋಟಗಳಿಗೆ ನೀರು ನುಗ್ಗಿದ್ದರಿಂದ ದ್ರಾಕ್ಷಿ ಪಡಗಳು ನೀರಲ್ಲೆ ನಿಂತಿವೆ.ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳದ ಬಾಂದಾರ ತುಂಬಿ ಹರಿಯುತ್ತಿದ್ದು, ಅಪಾಯಮಟ್ಟ ಮೀರಿ ಹರಿದು ಸೇತುವೆ ಮೇಲಗಡೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವದರಿಂದ ವಾಹನ ಸವಾರರಿಗೆ ತೊಂದರೆಯುಂಟಾಗಿ ಸಾಲುಗಟ್ಟಲೆ ವಾಹನಗಳು ನಿಂತಿದ್ದವು. ಸಂಗಮನಾಥ ದೇವಾಲಯದ ಗರ್ಭಗುಡಿಯ ಒಳಗೆ ನೀರು ನುಗ್ಗಿದ್ದರಿಂದ ಪೂಜಾ ಕಾರ್ಯಗಳು ಸ್ಥಗಿತಗೊಂಡಿವೆ.ಡೋಣಿ ನದಿ ಹರಿವು ಮಳೆಯಿಂದಾಗಿ ಹೆಚ್ಚಾಗಿದ್ದರಿಂದ ರೈತರ ತೋಟಗಳಿಗೆ ನೀರು ಹರಿದು ತೊಗರಿ ಇತರೆ ಬೆಳೆಗಳು ಜಲಾವೃತ್ತವಾಗಿವೆ. ಕೆಲವೆಡೆ ಸೇತುವೆ ಮೇಲಿರುವ ಡಾಂಬರಿ ಕಿತ್ತು ಹೋಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವದರಿಂದ ಶಾಲಾ ಮಕ್ಕಳಿಗೆ ಶಾಲೆಗಳಿಗೆ ತೆರಳಲು ತೊಂದರೆಯಾಯಿತು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜಯಪುರ ಮುಖ್ಯ ಆವರಣ ಹಾಗೂ ಮಂಡ್ಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸ್ಗಳ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ನಕಲು ದ್ವಿಪ್ರತಿಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಭರಿಸಿ, ನಿಗದಿಪಡಿಸಿದ ವೇಳಾಪಟ್ಟಿಯನುಸಾರ ಅಕ್ಟೋಬರ ೦೧ ರಂದು ಮಧ್ಯಾಹ್ನ ೩.೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಇಂದು ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಎಲ್ಲ ತಾಲೂಕುಗಳ ತಹಸೀಲ್ದಾರರಿಂದ ಮಳೆಯ ಪ್ರಮಾಣ ಮತ್ತು ಅದರಿಂದ ಉಂಟಾಗಿರುವ ಆಸ್ತಿ- ಪಾಸ್ತಿ ಹಾನಿಯ ಕುರಿತು ಕೂಡಲೇ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.ವಿಜಯಪುರ ನಗರ ಮತ್ತು ಜಿಲ್ಲಾದ್ಯಂತ ಮಳೆಯಿಂದ ಸಮಸ್ಯೆ ಎದುರಾಗಿರುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಬೇಕು. ಮಳೆ ನೀರಿನಿಂದ ಸಂತ್ರಸ್ತರಾದ ಜನರ ನೆರವಿಗೆ ಧಾವಿಸುವಂತೆ ಹೇಳಿದ್ದೇನೆ. ಬೆಳೆಹಾನಿ, ಆಸ್ತಿಪಾಸ್ತಿ ನಷ್ಟದ ಕುರಿತು ಕಂದಾಯ, ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಇಲಾಖೆಗಳು ಸಮನ್ವಯತೆಯಿಂದ…
ಲೇಖಕರುವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಉದಯರಶ್ಮಿ ದಿನಪತ್ರಿಕೆ ಜಗತ್ತಿನ ಪ್ರಖ್ಯಾತ ಬಾಣಸಿಗರಲ್ಲಿ ಒಬ್ಬರಾದ ಸ್ಟಾರ್ ಶೆಫ್ ವಿಕಾಸ್ ಖನ್ನ ಯಾರಿಗೆ ಗೊತ್ತಿಲ್ಲ. ರುಚಿಕರವಾದ ಖಾದ್ಯಗಳನ್ನು ಮಾಡಿ ಬಡಿಸುವುದರ ಜೊತೆ ಜೊತೆಗೆ ತನ್ನ ಸರಳತೆಗೂ ಹೆಸರಾದ ವ್ಯಕ್ತಿ ವಿಕಾಸ್ ಖನ್ನ. 2020 ರಲ್ಲಿ ಬಿಬಿಸಿ ವರ್ಲ್ಡ್ ಚಾನೆಲ್ ಗೆ ನೀಡಿದ ಸಂದರ್ಶನವೊಂದರಿಂದ ಇದೀಗ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.ಭಾರತೀಯ ಪಾಕ ಕಲೆಯ ಸಾಂಸ್ಕೃತಿಕ ಇತಿಹಾಸವನ್ನು ಅರಿಯದ, ಸಹಭೋಜನ, ಪ್ರಸಾದ, ದಾಸೋಹಗಳ ಹೆಸರಿನಲ್ಲಿ ದೀನ ದಲಿತರಿಗೆ ಉಣ ಬಡಿಸುವ ಭಾರತ ದೇಶದ ಶ್ರೀಮಂತ ಸಂಸ್ಕೃತಿಯ ಗರಿಮೆಯನ್ನು ಅರಿಯದ ಬಿಬಿಸಿಯ ಸಂದರ್ಶಕ ವಿಕಾಸ ಖನ್ನ ಅವರಿಗೆ ಭಾರತದಲ್ಲಿ ಬಡತನ ತಾಂಡವವಾಡುತ್ತಿರುವ ಕಾರಣ ನಿಮಗೆ ಹಸಿವು ಎಂಬ ಪದದ ಅರಿವು ಉಂಟಾಯಿತಲ್ಲವೇ? ಎಂದು ಪ್ರಶ್ನೆಯೆಸಗಿದ.ಅತ್ಯಂತ ಶಾಂತವಾದ ಮನಸ್ಥಿತಿಯೊಂದಿಗೆ ವಿಕಾಸ್ ಖನ್ನ ಉತ್ತರಿಸಿದರು “ನನಗೆ ‘ಹಸಿವು’ ಎಂಬ ಪದದ ಅರಿವು ಭಾರತ ದೇಶದಲ್ಲಿ ಆಗಿಯೇ ಇಲ್ಲ ಕಾರಣ ನಾನು ಹುಟ್ಟಿ ಬೆಳೆದದ್ದು ಭಾರತ ದೇಶದ ಗೋದಿಯ ಕಣಜ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೆಂಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ೨೦೨೪-೨೫ನೆಯ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಜ್ಞಾನ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ.ಸ್ಥಳೀಯ ನ್ಯಾಯವಾದಿ ಪಿ.ಎಂ.ಹೊಸಮನಿ ಅವರ ಚಿರಂಜೀವಿಯಾದ ಕು.ಶ್ರೀಷನ ಅಪರೂಪದ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶಿವಾನಂದ ಶಿವಾಚಾರ್ಯರು, ಕಾರ್ಯದರ್ಶಿ ಸತೀಶ ಹಿರೇಮಠ ಸೇರಿದಂತೆ ಶಾಲೆಯ ಮುಖ್ಯಗುರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಶಾಸಕರಿಂದ ಶ್ರೀಷ ಗೆ ಸನ್ಮಾನಸಿಂದಗಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಅಬು ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈಚೆಗೆ ನಡೆದ ಕ್ರೀಡಾಕೂಟ ಸಮಾರಂಭದಲ್ಲಿ ಶಾಸಕ ಅಶೋಕ ಮನಗೂಳಿ ಅವರು ವಿದ್ಯಾರ್ಥಿ ಶ್ರೀಷ ಹೊಸಮನಿ ಸಾಧನೆಯನ್ನು ಗೌರವಿಸಿ ಸನ್ಮಾನಿಸಿದರು.ಈ ವೇಳೆ ಪುರಸಭೆ ಅಧ್ಯಕ್ಷ ಶಾಂತಗೌಡ ಬಿರಾದಾರ, ಶಿಕ್ಷಣ ಇಲಾಖೆ…
