Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೆಂಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ೨೦೨೪-೨೫ನೆಯ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಜ್ಞಾನ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ.ಸ್ಥಳೀಯ ನ್ಯಾಯವಾದಿ ಪಿ.ಎಂ.ಹೊಸಮನಿ ಅವರ ಚಿರಂಜೀವಿಯಾದ ಕು.ಶ್ರೀಷನ ಅಪರೂಪದ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶಿವಾನಂದ ಶಿವಾಚಾರ್ಯರು, ಕಾರ್ಯದರ್ಶಿ ಸತೀಶ ಹಿರೇಮಠ ಸೇರಿದಂತೆ ಶಾಲೆಯ ಮುಖ್ಯಗುರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಶಾಸಕರಿಂದ ಶ್ರೀಷ ಗೆ ಸನ್ಮಾನಸಿಂದಗಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಅಬು ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈಚೆಗೆ ನಡೆದ ಕ್ರೀಡಾಕೂಟ ಸಮಾರಂಭದಲ್ಲಿ ಶಾಸಕ ಅಶೋಕ ಮನಗೂಳಿ ಅವರು ವಿದ್ಯಾರ್ಥಿ ಶ್ರೀಷ ಹೊಸಮನಿ ಸಾಧನೆಯನ್ನು ಗೌರವಿಸಿ ಸನ್ಮಾನಿಸಿದರು.ಈ ವೇಳೆ ಪುರಸಭೆ ಅಧ್ಯಕ್ಷ ಶಾಂತಗೌಡ ಬಿರಾದಾರ, ಶಿಕ್ಷಣ ಇಲಾಖೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ತೆಗೆದು ಹಾಕುತ್ತೇನೆ ಎಂದು ಹೇಳಿರುವ ರಾಹುಲ್ ಗಾಂಧಿ ದಲಿತ ವಿರೋಧಿ ಹೇಳಿಕೆ ಖಂಡನೀಯ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಸಿಂದಗಿ ತಾಲೂಕು ಬಿಜೆಪಿ ಎಸ್.ಟಿ.ಮೋರ್ಚಾ ಅಧ್ಯಕ್ಷ ಪ್ರಶಾಂತ ಕದ್ದರಗಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕಾಂಗ್ರೆಸ್ ಪಕ್ಷ ೬೫ ವರ್ಷಗಳಿಂದ ದಲಿತರನ್ನು ತಮ್ಮ ಮನಃ ಬಂದ ಹಾಗೆ ಬಳಕೆ ಮಾಡಿಕೊಂಡಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ತೆಗೆದುಹಾಕುತ್ತೇನೆ ಎಂದು ಹೇಳಿದ ಲೋಕಸಭಾ ಸದಸ್ಯ ರಾಹುಲ ಗಾಂಧಿಯವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕು. ಸಂವಿಧಾನ ಬರೆದ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರನ್ನೇ ಎರಡು ಬಾರಿ ಸೋಲಿಸಿದ ಪಕ್ಷದ ನಾಯಕ ಮೀಸಲಾತಿಯನ್ನು ತೆಗೆಯುತ್ತೇನೆ ಎಂದು ಹೇಳಿರುವುದು ಶೋಷಿತ ಸಮುದಾಯಕ್ಕೆ ದಶಕಗಳಿಂದ ಮಾಡುತ್ತಿರುವ ಅವಮಾನವಾಗಿದೆ. ದಲಿತರಿಗೆ ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷೆಯಲ್ಲ, ಅದು ಡಾ.ಬಿ.ಆರ್.ಅಂಬೇಡ್ಕರ್ ಶೋಷಿತ ವರ್ಗಕ್ಕೆ…
Udayarashmi kannada daily newspaper
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಾಗಲೋಟದಲ್ಲಿ ಬೆಳೆಯುತ್ತಿರುವ ವಿಜ್ಞಾನದ ಮಧ್ಯದಲ್ಲಿ ನಮ್ಮ ಮಕ್ಕಳು ಬೆಳೆಯಬೇಕಾದರೆ ಅವರಿಗೆ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯ, ತಂತ್ರಜ್ಞಾನ, ಅನೇಕ ಚಟುವಟಿಕೆಗಳನ್ನು ಕಲಿಸುವುದು ಅನಿವಾರ್ಯವಾಗಿದೆ ಎಂದು ಎಚ್.ಜಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಪಟ್ಟಣದ ಬಂದಾಳ ರಸ್ತೆಯ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಡೆದ ಯೂತ್ ಫೆಸ್ಟಿವಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಕರಿಗಿಂತ ಹೆಚ್ಚು ಸಮಯವನ್ನು ಕಳೆಯುವುದು ಪಾಲಕರ ಬಳಿ. ಶಿಕ್ಷಕರಷ್ಟೇ ಜವಾಬ್ದಾರಿಯನ್ನ ಪಾಲಕರು ಮಕ್ಕಳ ಮೇಲೆ ಇಡಬೇಕು. ವಿಜ್ಞಾನದ ಭರಾಟೆಯಲ್ಲಿ ಮಕ್ಕಳಲ್ಲಿ ಮಾನವೀಯ ಸಂಬಂಧಗಳು, ವಿವೇಚನಾ ಶಕ್ತಿ, ಸೃಜನಶೀಲ ಚಟುವಟಿಕೆಗಳು ಕುಸಿತಗೊಳ್ಳುತ್ತಿವೆ ಇದರ ಬಗ್ಗೆ ಹೆಚ್ಚು ಪಾಲಕರು ಮತ್ತು ಶಿಕ್ಷಕರು ಗಮನಹರಿಸಬೇಕು ಎಂದರು.ಸಂಸ್ಥೆಯ ಮಾರ್ಗದರ್ಶಕ ಎಚ್‌ಜಿ ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿದರು.ಶಾಲೆಯ ಪ್ರಾಚಾರ್ಯ ಶಾನಿಮೋಲ್ ರಾಬಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಕ್ಕಳು ನೀಡಿದ ವಿವಿಧ ರೀತಿಯ ಚಟುವಟಿಕೆಗಳ ನಿರ್ಣಾಯಕರಾಗಿ ಶಿಕ್ಷಕಿ ಬಂಗಾರಿ ಕುಲಕರ್ಣಿ ಆಗಮಿಸಿದ್ದರು.ಸಂಸ್ಥೆಯ ಅಧ್ಯಕ್ಷೆ ನೀಲಮ್ಮ ಹೆಗ್ಗಣದೊಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ಅತ್ಯಂತ ಅವಶ್ಯವಾಗಿದೆ. ಅಧ್ಯಯನ ನಮ್ಮನ್ನು ಕ್ರೀಯಾಶೀಲರನ್ನಾಗಿ ಮಾಡುತ್ತದೆ ಎಂದು ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸಕ ಪಿ.ವ್ಹಿ.ಮಹಲಿನಮಠ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ವಿಜಯಪುರದ ಗೆಜ್ಜಿ ಕರಿಯರ್ ಅಕಾಡಮಿಯಿಂದ ಹಮ್ಮಿಕೊಂಡ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರೀಕ್ಷೆಗಳಿಗೆ ಮಾರ್ಗದರ್ಶನ ಅತ್ಯಂತ ಮುಖ್ಯವಾಗಿದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಾಗ ನೀವು ಯಾವ ಅಧ್ಯಯನ ಸಾಮಗ್ರಿಯನ್ನು ಬಳಸುತ್ತಿರಿ ಎಂಬುದನ್ನು ಮೊದಲು ಸ್ಪಷ್ಟ ಪಡಿಸಬೇಕು. ಬಹಳಷ್ಟು ಪುಸ್ತಕಗಳನ್ನು ಓದುವುದು ನಿಮ್ಮ ಸಿದ್ದತೆಗಳಿಗೆ ಅಡ್ಡಿಯಾಗಬಹುದು ನಿರ್ದಿಷ್ಟ ಪರೀಕ್ಷೆಯ ತಯಾರಿಗಾಗಿ ಮೂಲ ಮತ್ತು ಪ್ರಮಾಣಿತ ಪುಸ್ತಕಗಳನ್ನು ಅಧ್ಯಯನ ಮಾಡಲು ಖಚಿತ ಪಡಿಸಿಕೊಳ್ಳಿ. ವೇಳಾ ಪಟ್ಟಿಗೆ ಅನುಗುಣವಾಗಿ ಓದಿನ ರೂಡಿ ಮಾಡಿಕೊಳ್ಳಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ನೀಡಿದರು.ಈ ವೇಳೆ ಮಹಾವಿದ್ಯಾಲಯದ ಪ್ರಾಚಾರ್ಯ ಜೆ.ಸಿ.ನಂದಿಕೋಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆ ಮೇಲೆ ವಿಜಯಪುರದ ಗೆಜ್ಜಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೨೦/೧೧೦/೧೧ ಕೆ.ವಿ ಬಸವನ ಬಾಗೇವಾಡಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ೨೨೦ ಕೆ.ವಿ ಐಸೋಲೇಟರ್‌ಗಳ ನಿರ್ವಹಣೆ ಕೈಗೊಂಡಿರುವುದರಿಂದ ೧೧೦ ಕೆ.ವಿ ಮಾರ್ಗಗಳಲ್ಲಿ ಬರುವ ೧೧೦/೧೧ ಕೆ.ವಿ ಮಟ್ಟಿಹಾಳ, ಮಲಘಾಣ, ರೋಣಿಹಾಳ, ಮುದ್ದೇಬಿಹಾಳ, ಹಿರೇಮುರಾಳ, ಕೋಳೂರು, ಉಕ್ಕಲಿ ಹಾಗೂ ನಂದಿಹಾಳ ಉಪಕೇಂದ್ರಗಳಲ್ಲಿಯೂ ಸಹ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯಕೈಗೆತ್ತಿಕೊಳ್ಳುವ ಹಿನ್ನೆಲೆಯಲ್ಲಿ ಈ ವಿದ್ಯುತ್ ಉಪಕೇಂದ್ರಗಳಿಂದ ಸರಬರಾಜಾಗುವ ೧೧ಕೆವಿ ಮಾರ್ಗಗಳಲ್ಲಿನ ನಗರ, ಗ್ರಾಮೀಣ ಪ್ರದೇಶಗಳಲ್ಲಿ, ಹಾಗೂ ಕೃಷಿ ನೀರಾವರಿ ಮಾರ್ಗಗಳಿಗೆ ಸೆಪ್ಟೆಂಬರ್ ೨೫ರಂದು ಬೆಳಿಗ್ಗೆ ೯ರಿಂದ ಸಾಯಂಕಾಲ ೫ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಬಸವನ ಬಾಗೇವಾಡಿಯ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಂಭ್ರಮ-೫೦ರ ಕಾರ್ಯಕ್ರಮವನ್ನು ಅದ್ದೂರಿ ಆಚರಣೆಯೊಂದಿಗೆ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುತ್ತಿರುವ ಕರ್ನಾಟಕ ಸಂಭ್ರಮ-೫೦ರ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಸೆಪ್ಟೆಂಬರ್ ೩೦ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸ್ವಚ್ಚತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ಅವರು ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಹಾಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಒತ್ತು ನೀಡಿ ಉನ್ನತ ಶಿಕ್ಷಣ ಒದಗಿಸುವುದರ ಮೂಲಕ ಅವರ ಬದುಕು ಮತ್ತು ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸಬೇಕು ಎಂದು ಹೇಳಿದರು.ಮಹಾನಗರ ಪಾಲಿಕೆ ಆಯುಕ್ತ ಪ್ರಾಸ್ತಾವಿಕವಾಗಿ ಮಾತನಾಡಿದರು.ಮನೋವೈದ್ಯರಾದ ಡಾ.ಮಂಜುನಾಥ ಮಸಳಿ ಉಪನ್ಯಾಸ ನೀಡಿದರು. ಪೌರಕಾರ್ಮಿಕರಿಗಾಗಿ ಆಯೋಜಿಸಲಾದ ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಮಹೇಜಬಿನ್ ಹೊರ್ತಿ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ ಸೇರಿದಂತೆ ಮಹಾನಗರಪಾಲಿಕೆ ಸದಸ್ಯರು, ಪೌರಕಾರ್ಮಿಕರು, ಅಧಿಕಾರಿ, ಸಿಬ್ಬಂದಿಗಳು…
ಶ್ರೀ ಭೀಮಾಶಂಕರ ಸಕ್ಕರೆ ಕಾರ್ಖಾನೆ ವಾರ್ಷಿಕ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಭರವಸೆ ಉದಯರಶ್ಮಿ ದಿನಪತ್ರಿಕೆ ಇಂಡಿ: ಶ್ರೀ ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ವರ್ಷದಲ್ಲಿಯೇ ೧೮೮ ಕೋಟಿ ವೆಚ್ಚದಲ್ಲಿ ಇಥಿನಾಲ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು. ಬರುವ ಡಿಸೆಂಬರ್ ತಿಂಗಳಲ್ಲಿಯೇ ಅದು ಕಾರ್ಯಾರಂಭ ಮಾಡಲಿದೆ. ಇದರ ಉದ್ಘಾಟನೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ಹಾಗೂ ಸಹಕಾರಿ ರಂಗಕ್ಕೆ ಸೇರಿದ ಎಲ್ಲಾ ಸಚಿವರನ್ನು ಕರೆಸಲಾಗುವದು ಎಂದು ಶಾಸಕ ಮತ್ತು ಕಾರ್ಖಾನೆಯ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.ಅವರು ಸೋಮವಾರ ಇಂಡಿ ತಾಲ್ಲೂಕಿನ ಮರಗೂರ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಿದ್ದ ೬ನೇ ವರ್ಷದ ವಾರ್ಷಿಕ ಸರ್ವ ಸಾಧಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಳೆದ ೨೦೧೭-೨೦೧೮ ರಲ್ಲಿ ಪ್ರಾರಂಭವಾದ ಈ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರಿಗೆ ಕೇಂದ್ರ ಸರ್ಕಾರದ ಎಪ್ ಆರ್ ಪಿ ದರಕ್ಕಿಂತ ಹೆಚ್ಚಿನ ದರ ನೀಡಲಾಗಿದೆ. ಕಳೆದ ೬ ವರ್ಷಗಳಲ್ಲಿ ರೂ.೫೨.೫೮ ಕೋಟಿಗೂ ಅಧಿಕ ಹಣವನ್ನು ಹೆಚ್ಚುವರಿಯಾಗಿ ನೀಡಲಾಗಿದೆ.…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ಸೌಂದರ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು ರಾಜ್ಯ ಸರಕಾರ ರೂಪಿಸಿರುವ ಕಲ್ಯಾಣ ಕಾರ್ಯಕ್ರಮ ಬಳಸಿಕೊಂಡು ಪೌರ ಕಾರ್ಮಿಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಸಿದ್ದಾರೂಢ ಮಠದ ಓಂಕಾರ ಆಶ್ರಮದ ಡಾ. ಸ್ವರೂಪಾನಂದ ಶ್ರೀಗಳು ಹೇಳಿದರು.ಪಟ್ಟಣದ ಡಾ.ಬಾಬು ಜಗಜೀವನರಾಮ ಸಬಾಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡುತ್ತಿದ್ದರು.ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಮಾತನಾಡಿ, ಒಂದು ರಸ್ತೆ, ಮೊಹಲ್ಲಾ, ವಾರ್ಡ, ಹಾಗೂ ನಗರ ಸುಂದರವಾಗಿರಬೇಕಾದರೆ ಪೌರ ಕಾರ್ಮಿಕರೇ ಕಾರಣ. ಸರಕಾರದಿಂದ ಸಿಗುವ ಸವಲತ್ತುಗಳಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದರು.ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಮಾತನಾಡಿ, ಸ್ವಚ್ಛತೆ ಕಾಪಾಡುವುದು ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ. ನಮ್ಮೆಲ್ಲರ ಜವಾಬ್ದಾರಿ. ನೈರ್ಮಲ್ಯ ಮತ್ತು ಶುಚಿತ್ವದ ಕುರಿತು ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದರು.ದೇವೆಂದ್ರ ಕುಂಬಾರ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜಹಾಂಗೀರ ಸೌದಾಗರ, ಪೌರ ಕಾರ್ಮಿಕರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಶಿವಶರಣ, ಸದಸ್ಯರಾದ ಉಮೇಶ ದೇಗಿನಾಳ, ಸುಧೀರ ಕರಕಟ್ಟಿ, ಸೈಪನ ಪವಾರ, ಭೀಮಾಶಂಕರ ಮೂರಮನ್,…
