Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ವಾರ್ಡ್ ನಂ.7 ರಲ್ಲಿ ಬರುವ ಶಿವಾಜಿ ಪೆಟ್ ಧೋಬಳೆ ಗಲ್ಲಿಯಲ್ಲಿ ಸೋಮವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಚಾಲನೆ ನೀಡಿದರು.ಮನೆ ಮನೆಗೆ ತೆರಳಿ ಸದಸ್ಯತ್ವ ನಡೆಸಿ, ಸದಸ್ಯತ್ವ ಪಡೆದವರಿಗೆ ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್ ಜಾಧವ, ಮಳುಗೌಡ ಪಾಟೀಲ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಪಾಪುಸಿಂಗ್ ರಜಪೂತ, ಸಂಜು ಮೋರೆ, ಕಿರಣ ಮೋರೆ, ಅಕ್ಷಯ ಸೊನಾವನೆ, ಸಾಗರ ಮೋರೆ, ತೇನಜಿ ಜಾಧವ, ವಿಕಾಶ ಚವ್ಹಾಣ, ಸುಹಾಸ್ ವಲ್ಯಾಪುರ, ಅಪ್ಪು ಮಸ್ಕೆ, ದೀಪಕ ಬೊರಡೆ ಸೇರಿದಂತೆ ಮತ್ತಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಢವಳಗಿ: ತಾಳಿಕೋಟಿ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಡ ಶಾಲೆಯಲ್ಲಿ ಸೆ.20 ಶುಕ್ರವಾರದಂದು ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬಸರಕೋಡ ಗ್ರಾಮದ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು.ಸವಿತಾ ಟಕ್ಕಳಕಿ 100 ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಮಹಾಂತೇಶ ನಗರದ ನಿವಾಸಿ ಕವಿತಾ ಲಮಾಣಿ ತನ್ನ ೭ವರ್ಷದ ಮಗನೊಂದಿಗೆ ಕಾಣೆಯಾಗಿರುವದಾಗಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಲತಃ ತಾಲೂಕಿನ ಗೆದ್ದಲಮರಿ ಗ್ರಾಮದ ನಿವಾಸಿಗಳಾಗಿದ್ದ ಇವರು ಕಳೆದ ಕೆಲವು ದಿನಗಳಿಂದ ಪಟ್ಟಣದ ಮಹಾಂತೇಶ ನಗರದಲ್ಲಿ ವಾಸವಾಗಿದ್ದರು. ಸೆ.೧೯ ರಂದು ಬೆಳಿಗ್ಗೆ ೧೧:೩೦ ಗಂಟೆಯ ಸುಮಾರು ಶಾಲೆಯಲ್ಲಿದ್ದ ತನ್ನ ಮಗುವನ್ನು ಕರೆದುಕೊಂಡು ಬರಲು ಹೋದವಳು ಮನೆಗೆ ಬಾರದೇ ಎಲ್ಲಿಗೋ ಹೋಗಿ ಕಾಣೆಯಾಗಿದ್ದಾರೆ ಎಂದು ಕವಿತಾಳ ಪತಿ ವಿಷ್ಣು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ರಾಜ್ಯ ಮಟ್ಟದ ನಾಥ್ ಹಾಗೂ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯು ಸೂಫಿ ಸಂತ ಶರಣರ ನಾಡಾಗಿದೆ. ಎಲ್ಲರನ್ನೂ ಸರಿಸಮಾನರಾಗಿ ಕಾಣುವ ಮಾತೃ ಸ್ವರೂಪಿ ಜಿಲ್ಲೆಯಾಗಿದ್ದರ ಹಿನ್ನಲೆ ಇಂದು ವಿಜಯಪುರ ಜಿಲ್ಲೆ ಐತಿಹಾಸಿಕ ಪಾರಂಪರಿಕವಾಗಿ ಗುರುತಿಸಿಕೊಂಡು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಅವರು ನಗರದ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಮೊಹಮೀದಿಯ ನಾಥ್ ಕಮೀಟಿಯ ವತಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ನಾಥ್ ಹಾಗೂ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶ ಕಟ್ಟುವುದಕ್ಕೆ ಮಕ್ಕಳ ಪಾತ್ರ ಬಹು ಮುಖ್ಯವಾಗಿದ್ದರಿಂದ ಕಳೆದ ೪೦ ವರ್ಷದಿಂದ ಇಂತಹ ಚಟುವಟಿಕೆ ಹಮ್ಮಿಕೊಂಡು ಬರುತ್ತಿರುವುದು ಶ್ಲಾಘನೀಯ. ಮಕ್ಕಳ ಉತ್ತಮ ಬೆಳವಣಿಗೆಗೆ ರಸಪ್ರಶ್ನೆ ಕಾರ್ಯಕ್ರಮ ಅವಶ್ಯಕವಾಗಿದೆ. ಸಂಸ್ಥೆಯು ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸುಗಮ ದಾರಿಯಾಗುವುದು ಎಂದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಮಕ್ಬುಲ್ ಭಾಗವಾನ, ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ್, ಅಬ್ದುಲ್ ರಜಾಕ್ ಹೊರ್ತಿ ಮಾತನಾಡಿದರು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಹಮಾಲರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಲಾರಿ ಹಮಾಲರ ಯುನಿಯನ್ (ಸಿಐಟಿಯು ಸಂಯೋಜಿತ) ವತಿಯಿಂದ ಜಿಲ್ಲಾಧಿಕಾರಿಗಳು, ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಹಜ ಮರಣಕ್ಕೂ ರೂ. ೦೧ ಲಕ್ಷ ರೂಗಳ ಪರಿಹಾರ ನೀಡಬೇಕು, ಹಾಗೂ ಶವ ಸಂಸ್ಕಾರ ಪರಿಹಾರದ ಮೊತ್ತವನ್ನು ರೂ.೨೫ ಸಾವಿರಕ್ಕೆ ಹೆಚ್ಚಿಸಬೇಕು. ಕರ್ನಾಟಕ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆ ಹಾಗೂ ಸೂಕ್ತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಎಲ್ಲಾ ಹಮಾಲಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಎಪಿಎಂಸಿ ಕಾಯಕ ನಿಧಿಯಡಿ ನಿವೃತ್ತಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಕೂಡಲೇ ಕೇಂದ್ರ ಸರಕಾರ ಇ-ಶ್ರಮ ಕಾರ್ಡ್ ಪಡೆದ ಅಸಂಘಟಿತ ಕಾರ್ಮಿಕರಿಗೆ ಸಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಮಾಡಬೇಕು. ಮಿಲ್ ಗೋಡೌನ ವೇರಹೌಸ್‌ಗಳಲ್ಲಿ ಕೆಲಸ ನಿರ್ವಹಿಸುವ ಹಮಾಲಿ ಕಾರ್ಮಿಕರಿಗೆ…
ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷಣ ಎಂಬ ಧಿವ್ಯ ಬೆಳಕನ್ನು ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನಲ್ಲಿ ಬೆಳಗಿಸಿದ ಶ್ರೇಯಸ್ಸು ತ್ಯಾಗವೀರ ಶಿರಸಂಗಿ ಲಿಂಗರಾಜ ಮಹಾರಾಜರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ನಗರದ ಜಿ.ಕೆ.ಪಾಟೀಲ ಸಮುದಾಯ ಭವನದಲ್ಲಿ ದಿ.ಶ್ರೀ ಲಿಂಗರಾಜ ವಿವಿದೋದ್ಧೇಶ ಸಂಸ್ಥೆ, ಶ್ರೀ ಸಿರಸಂಗಿ ಲಿಂಗರಾಜ ಪತ್ತಿನ ಸಹಕಾರಿ ಸಂಘ ನಿಯಮಿತ, ಹಾಗೂ ಜಿಲ್ಲಾ ಲಿಂಗಾಯತ ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿರಸಂಗಿ ಲಿಂಗರಾಜ ಮಹಾರಾಜರು ಶಿಕ್ಷಣವೇ ಶಕ್ತಿ ಎಂದು ತಿಳಿದಿದ್ದರು, ಹೀಗಾಗಿ ತಮ್ಮ ಅಪಾರ ಸಂಪತ್ತನ್ನು ಶಿಕ್ಷಣದ ಪವಿತ್ರ ಕಾರ್ಯಕ್ಕೆ ಬಳಕೆಯಾಗಬೇಕು ಎಂದು ದಾನ ಮಾಡಿದರು. ಅವರ ತ್ಯಾಗ, ಶ್ರಮದ ಫಲವಾಗಿ ಕೆ.ಎಲ್.ಇ., ಬಿಎಲ್ಡಿಇ ಸಂಸ್ಥೆಗಳು ಹೆಮ್ಮರವಾಗಿ ಬೆಳೆಯಲು ಸಾಧ್ಯವಾಯಿತು ಎಂದರು.ಜಿ.ಪಂ.ಮಾಜಿ ಸದಸ್ಯೆ ಪ್ರತಿಭಾಗೌಡತಿ ಪಾಟೀಲ ಮಾತನಾಡಿ, ಪ್ರತಿಭೆಗೆ ಪ್ರೋತ್ಸಾಹ ಅಗತ್ಯ, ಪ್ರತಿಭಾನ್ವಿತರಿಗೆ ಪ್ರೋತ್ಸಾಹ ನೀಡುವುದರಿಂದ ಇತರರಿಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ೧೩ ತಾಲೂಕುಗಳಲ್ಲಿ ರೈತರು ಪ್ರತಿನಿತ್ಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಶೀಘ್ರದಲ್ಲಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು, ೨೦೨೩-೨೪ ನೇ ಫಸಲ್ ಭೀಮಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿರುವ ಕುರಿತು ೩ ತಿಂಗಳಿನಿಂದ ನಿರಂತರ ಹೋರಾಟ ಮಾಡಿದರೂ ಸಹ ಜಿಲ್ಲಾಡಳಿತ ಮಾಹಿತಿ ನೀಡುತ್ತಿಲ್ಲ, ಜಿಲ್ಲಾಧ್ಯಂತ ನಡೆಯುತ್ತಿರುವ ಎಲ್ಲ ನೀರಾವರಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ವಿವಿಧ ಏತನೀರಾವರಿ ಯೋಜನೆಗಳು ಸಂಪೂರ್ಣವಾಗಿ ಮುಗಿಸಿ ಭೂಸ್ವಾಧಿನದ ಹಣವನ್ನು ರೈತರಿಗೆ ಶೀಘ್ರದಲ್ಲಿ ಕೊಡಿಸುವುದು, ವಿದ್ಯುತ್ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆದರು.ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ತಿಕೊಟಾ ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ಮಹಾದೇವ ಕದಂ, ಮಹಾಂತೇಶ ಮಮದಾಪುರ, ಸಂಗಪ್ಪ ಟಕ್ಕೆ, ತಿಪ್ಪರಾಯ…
ಆಲಮೇಲದಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿದರೆ ಸಾವಿರಾರು ರೂಪಾಯಿಗಳು ಖರ್ಚು ಆಗುತ್ತದೆ, ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿಸಿಡಿಸಿ ಕಿಡ್ನಿ ಕೇರ್ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿ ಮಾತನಾಡಿದರು.ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಆಸ್ಪತ್ರೆಯನ್ನು ಶುಚಿಯಾಗಿಡುವ ಜತೆಗೆ ರೋಗಿಗಳಿಗೆ ಡಾಕ್ಟರ್‌ಗಳು ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೋಮಯ್ಯ ಸ್ವಾಮೀಜಿ, ಡಾ.ಸಂದೀಪ ಜೆ. ಪಾಟೀಲ, ಆಲಮೇಲ ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ,ಸಿಂದಗಿ ತಾಲೂಕಾ…
ವೈಜ್ಞಾನಿಕ ಪ್ರತಿಭೆ ಅನಾವರಣಗೊಳಿಸಿದ ವಿಜ್ಞಾನ ವಸ್ತು ಪ್ರದರ್ಶನ ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತುವಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ. ಬರೀ ಅಂಕ ಗಳಿಕೆ ಶಿಕ್ಷಣವಲ್ಲ, ಮಕ್ಕಳಲ್ಲಿ ಕೌಶಲ, ಕುತೂಹಲ ಶಕ್ತಿಯನ್ನೂ ಬಲಪಡಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಸಹನಿರ್ದೇಶಕಿ ಮತ್ತು ಜಮಖಂಡಿಯ ಶಿಕ್ಷಕರ ಸರಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಮಂಗಲಾ ನಾಯಕ ಹೇಳಿದರು.ಬಬಲೇಶ್ವರದ ಪಟ್ಟಣದ ಶಾಂತವೀರ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಶುಕ್ರವಾರ ಆಯೋಜಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ವಿಜ್ಞಾನ ಬೋಧಕರಿಗೆ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಮಾತನಾಡಿ,ಪಠ್ಯಪೂರಕ ಚಟುವಟಿಕೆಗಳೂ ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ. ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವಲ್ಲಿ ಇಲಾಖೆಯು ಪ್ರತಿ ವರ್ಷ ವಿಜ್ಞಾನ ಗೋಷ್ಠಿ, ವಿಜ್ಞಾನ ನಾಟಕ, ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಶಿಕ್ಷಕರು ಸೂಕ್ತ ಮಾರ್ಗದರ್ಶನವನ್ನು ನೀಡಬೇಕು ಎಂದರು.ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂಗಾಂಗ ದಾನ ಶ್ರೇಷ್ಠ ದಾನವಾಗಿದ್ದು, ಇದಕ್ಕೆ ಅಗತ್ಯವಾಗಿರುವ ಕಾನೂನು ನೆರವು ನೀಡಲು ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ ಎಂದು ಎಸ್ಪಿ ರಿಷಿಕೇಶ ಸೋನಾವಣೆ ಹೇಳಿದ್ದಾರೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಮೂತ್ರಶಾಸ್ತ್ರ (ಯುರಾಲಜಿ) ವಿಭಾಗದ ವತಿಯಿಂದ ಆಯೋಜಿಸಲಾದ ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ಮತ್ತು ಮೃತ ವ್ಯಕ್ತಿಯಿಂದ ಅಂಗಾಗ ದಾನ ಪಡೆಯುವ ಕುರಿತು ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಅಂಗಾಗ ಕಸಿಯಲ್ಲಿ ದಾನಿಗಳು ಮತ್ತು ಅಂಗಾಗ ಕಸಿಗೆ ಒಳಗಾಗುವ ರೋಗಿಗಳು ಕಾನೂನು ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಅಲ್ಲದೇ, ಅಂಗಾಂಗಗಳನ್ನು ತ್ವರಿತವಾಗಿ ಕಳುಹಿಸಲು ಸುಗಮ ರಸ್ತೆ ಸಂಚಾರಕ್ಕಾಗಿ ಶೂನ್ಯ ಟ್ರಾಫಿಕ್ ಕಾರಿಡಾರ್ ಕೂಡ ಒದಗಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ನೆರವು ಒದಗಿಸಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಘಟಕ ಪ್ರಾರಂಭಿಸಲು ವಿವಿ…
