Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಢವಳಗಿ: ತಾಳಿಕೋಟಿ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಡ ಶಾಲೆಯಲ್ಲಿ ಸೆ.20 ನಡೆದ ಕ್ರೀಡಾಕೂಟದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 400 ಮೀಟರ್ ಓಟ, ಉದ್ದ ಜಿಗಿತ, ಮತ್ತು ಎತ್ತರ ಜಿಗಿತದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.ಎತ್ತರ ಜಿಗಿತದಲ್ಲಿ ಭಾಗವಹಿಸಿದ ಮಾರುತಿ ನಾಗರಬೆಟ್ಟ ಅವರು ದ್ವೀತಿಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗುವುದರ ಮುಖಾಂತರ ಗ್ರಾಮದ ಮತ್ತು ಶಾಲೆಯ ಕೀರ್ತಿ ತಂದಿರುತ್ತಾನೆ. ಮತ್ತು 400 ಮೀಟರ್ ಓಟದಲ್ಲಿ ಸಂಗಮೇಶ ಯಾಳವಾರ ತೃತೀಯ ಸ್ಥಾನ ಪಡೆದಿರುತ್ತಾನೆ. ಹಾಗೂ ಉದ್ದ ಜಿಗಿತದಲ್ಲಿ ಭಾಗವಹಿಸಿದ ನಿಂಗನಗೌಡ ಕರಡ್ಡಿ ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಶನಿವಾರದಂದು ಮುಂಜಾನೆ ಶಾಲಾ ಸಮಯದಲ್ಲಿ ಶಾಲೆಯ ಮುಖ್ಯ ಗುರು ರಮೇಶ ಮೂಲಿಮನಿ ಮತ್ತು ತಾರನಾಳ ಶಾಲೆಯ ಮುಖ್ಯ ಗುರುಗಳಾದ ಡಿ ಬಿ ಬಿರಾದಾರ ಹಾಗೂ ಸಹ ಶಿಕ್ಷಕರು ಸೇರಿ ಸನ್ಮಾನಿಸಿ ಗೌರವಿಸಿದರು.ಇದೇ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ರಾಜ್ಯದ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) ನಿರ್ದೆಶಕರಾಗಿ ಗ್ರಾಮದ ಸಿ.ಎ. ರವೀಂದ್ರ ಎಸ್. ಕೋರೆ ಸತತವಾಗಿ ನಾಲ್ಕನೇಯ ಬಾರಿಗೆ ಆಯ್ಕೆಯಾಗಿದ್ದು ಗ್ರಾಮಸ್ಥರು ಹರ್ಷ ವಕ್ತಪಡಿಸಿದ್ದಾರೆ.ರವಿಂದ್ರ ಕೋರೆಯವರು ವಾಣಿಜ್ಯ ಮತ್ತು ಕಾನೂನು ಪದವಿಧರರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚಿಮ್ಮಡ ಗ್ರಾಮದಲ್ಲಿಯೇ ಪೋರೈಸಿದ್ದು, ಪ್ರೌಢ ಹಾಗೂ ಪದವಿ ಶಿಕ್ಷಣವನ್ನು ಮಹಾಲಿಂಗಪುರದ ಎಸ್.ಸಿ.ಪಿ.(ಕೆಎಲ್‌ಇ) ಮಹಾವಿದ್ಯಾಲಯದಲ್ಲಿ ಪೋರೈಸಿದ್ದಾರೆ. ಇತ್ತೀಚೆಗೆ ನಡೆದ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಚುನಾವಣೆಯಲ್ಲಿ ವೃತ್ತಿಪರ ಕ್ಷೇತ್ರದಿಂದ ನೂತನ ನಿರ್ದೆಶಕರಾಗಿ ಆಯ್ಕೆಯಾಗಿದ್ದಾರೆ.ಉತ್ತರ ಕರ್ನಾಟಕ ಭಾಗದಿಂದ ಪ್ರಪ್ರಥಮ ಬಾರಿಗೆ ವೃತ್ತಿಪರ ಕ್ಷೇತ್ರದಿಂದ ಆಯ್ಕೆಯಾಗಿರುವ ರವೀಂದ್ರ ಕೋರೆ ಪತ್ರಿಕೆಯೊಂದಿಗೆ ಮಾತನಾಡಿ ಕಳೆದ ಬಾರಿ ಹುಬ್ಬಳ್ಳಿಯಲ್ಲಿ ರಾಜ್ಯದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಹಮ್ಮಿಕೊಂಡಿದ್ದು ಅದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿದ್ದು ಶೀಘ್ರದಲ್ಲಿಯೇ ಇದರ ರೂಪುರೇಷೆ ತಯಾರಿಸಲಾಗುವುದೆಂದರು.ಗ್ರಾ. ಪಂ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಸೆಪ್ಟೆಂಬರ್ ೩೦ರ ಒಳಗಾಗಿ sತಿ.ಞಚಿಡಿ.ಟಿiಞ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ನಮೂನೆ ಹಾಗೂ ಅಗತ್ಯ ದೃಡೀಕೃತ ದಾಖಲೆಗಳ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೆಪ್ಟೆಂಬರ್ ೨೨ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ಎಂ. ರೇವಣ್ಣ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ, ಕರ್ನಾಟಕ ರಾಜ್ಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸೇವಾನಿರತ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಕ್ಟೋಬರ್ ೧೫ರಂದು ಕೊನೆಯ ದಿನವಾಗಿದ್ದು, ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ಆವರಣ, ವಿಜಯಪುರ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಅಥವಾ ವೆಬ್ ಸೈಟ್ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಸವಿತಾ ಕಾಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೋಂದಾ ಸ್ವರ್ಣವಲ್ಲೀ ಶ್ರೀಗಳಾದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಶ್ರೀ ಭಗವದ್ಗೀತಾ ಅಭಿಯಾನದ ನಿಮಿತ್ಯ ವಿಜಯಪುರ ನಗರಕ್ಕೆ ಆಗಮಿಸಿದ್ದು ವಿವಿಧ ಸೋಂದಾ ಸ್ವರ್ಣವಲ್ಲೀ ಶ್ರೀಗಳಾದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಶ್ರೀ ಭಗವದ್ಗೀತಾ ಅಭಿಯಾನದ ನಿಮಿತ್ಯ ವಿಜಯಪುರ ನಗರಕ್ಕೆ ಆಗಮಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೆ.22, ರವಿವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿಯಲ್ಲಿ ನಡೆಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಹಾಗೂ ಶಿಕ್ಷಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ,ಇದೇ ಸ್ಥಳದಲ್ಲಿ ನಡೆಯುವ ವಿಜಯಪುರ ಜಿಲ್ಲೆಯ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿಗಳ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ.ಸೆ.23, ಸೋಮವಾರ ಸಂಜೆ 4 ಗಂಟೆಗೆ ಜಿಲ್ಲೆ ಸಮಿತಿ, ಕೋರ್ ಕಮಿಟಿ, ಹಾಗೂ ಮಹಿಳಾ ಸಮಿತಿ ಸಭೆಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗನಗೌಡ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಲೆಮರೆಯ ಕಾಯಿಯಂತೆ ಹಗಲಿರಳೆನ್ನದೇ ಕಾಯಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದೇ ಆದರೆ ಜನರು ಮೆಚ್ಚುವುರಲ್ಲದೇ ಗೌರವ ಸನ್ಮಾನಗಳು ಲಭಿಸುವುದುಂಟು. ತೋರಿಕೆಗಾಗಿ ಅಥವಾ ಪ್ರಶಸ್ತಿಗಾಗಿ ಕಾಯಕ ಮಾಡದೇ ಮನಸ್ಸಿನ ತೃಪ್ತಿಗಾಗಿ ಕಾಯಕ ಮಾಡುವುದು ಲೇಸು ಎಂದು ಇತ್ತೀಚಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜಯಪುರ ಜಿಲ್ಲಾ ಘಟಕದ ಕಚೇರಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪುರಸ್ಕೃತರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರು, ರಾಜ್ಯ ಪ್ರಶಸ್ತಿ ಪುರಸ್ಕೃತರೂ ಆದ ಶ್ರೀ ಎಸ್. ವಿ. ಬುರ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಬೆಂಗಳೂರು ಇವರು ನೀಡುವ “ರಾಜ್ಯ ಮಟ್ಟದ ಕಾಯಕ ರತ್ನ” ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಸರೋಜಾ ಕೌಲಾಪುರ ಹಾಗೂ ಶಾಲಾ ಶಿಕ್ಷಣ ಇಲಾಖೆ, ವಿಜಯಪುರ ಇವರು ಶಿಕ್ಷಕ ದಿನಾಚರಣೆಯಂದು ನೀಡುವ “ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ” ಪ್ರಶಸ್ತಿ ಪುರಸ್ಕೃತರಾದ ಶ್ರೀ ರಾಜಕುಮಾರ ವಿ.ಚವ್ಹಾಣ ಇವರನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸುಮಾರು 15 ವರ್ಷಗಳದಿಂದ ಕಾರ್ಯಕ್ರಮ ಆಯೋಜಿಸುತ್ತಾ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಲಾಗುತ್ತದೆ. ಇದರಲ್ಲಿ ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾಧ್ಯೆವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣ ಇಲಾಖೆ ಇಸಿಒ ಆನಂದ ಹುಣಸಿಗಿ ಹೇಳಿದರು.ತಾಲ್ಲೂಕಿನ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಮುಗ್ಧ ಮನಸುಗಳ ಪ್ರತಿಭೆ ಅನಾವರಣವೇ ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆ 1ರಿಂದ 12 ತರಗತಿ ವಿದ್ಯಾರ್ಥಿಗಳಿಗೆ ಜನಪದ ನೃತ್ಯ, ಧಾರ್ಮಿಕ ಪಠಣ, ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಭಾಷಾ ಕಂಠಪಾಠ, ಭರತನಾಟ್ಯ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಆಶುಭಾಷಣ, ಮಿಮಿಕ್ರಿ, ಕ್ವೀಜ್ ಹಾಗೂ ಕವಾಲಿ ಮೂಲಕ ಮುಗ್ಧ ಮನಸುಗಳ ಪ್ರತಿಭೆಯನ್ನು ಕ್ಲಸ್ಟರ್ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸುವಂತ ಕಾರ್ಯ ಮಹತ್ವದ ಕಾರ್ಯನಡೆಯುತ್ತಿದೆ. ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.”ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ ದ್ವೀತಿಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೨ನೇ ತ್ರೈಮಾಸಿಕ ನಿರ್ವಹಣ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೨೨ರಂದುದು ೧೧೦/೧೧ಕೆವಿ ವಿದ್ಯುತ್ ವಿತರಣ ಕೇಂದ್ರ ಭೂತನಾಳ ಹಾಗೂ ಸೆಪ್ಟೆಂಬರ್ ೨೪ರಂದು ೧೧೦/೧೧ ಕೆವಿ ವಿದ್ಯುತ್ ವಿತರಣ ಕೇಂದ್ರ ಕೆಐಎಡಿಬಿ, ಜುಮನಾಳ, ವಿಜಯಪುರ ಸಿಟಿ, ಮತ್ತು ೨೨೦/೧೧೦ ಕೆವಿ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ಕೆವಿ ವಿದ್ಯುತ್ ಮಾರ್ಗಗಳಿಗೆ ಸದರಿ ದಿನದಂದು ಬೆಳಿಗ್ಗೆ ೯ರಿಂದ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
