Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ತಾಲೂಕು ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಯ ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇಂಡಿ ಮೆಘಾ ಮಾರುಕಟ್ಟೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ರಸ್ತೆ ಅಭಿವೃದ್ಧಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಶೀಲ್ದಾರ ಬಿ.ಎಸ್.ಕಡಕಬಾವಿ, ಪರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಇತರರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನಲ್ಲಿ ಗುಬ್ಬೇವಾಡ, ಶಿರಗೂರ, ಉಮರಾಣಿ, ಕೊಳುರಗಿ, ಚಿಕ್ಕಬೇನೂರ, ಸಾತಲಗಾಂವ ಸೇರಿದಂತೆ ಸುಮಾರು ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಬಸು ಓಡಾಡುತ್ತಾಯಿಲ್ಲ. ವಿಧ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಪೆಟ್ಟಾಗುತ್ತಿದೆ. ಕೂಡಲೇ ಬಸ್ಸಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವ್ಯವಸ್ಥಾಪಕ ಸಂಗಮೇಶ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ್ ಧಾನಗೊಂಡ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ಹಲವಾರು ವಿದ್ಯಾರ್ಥಿಗಳು ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಹಾಗೂ ಸಾಮಾನ್ಯ ಜನರು ತಮ್ಮ ದಿನ ನಿತ್ಯದ ಕೆಲಸಕ್ಕಾಗಿ ಇಂಡಿ ನಗರಕ್ಕೆ ಬರುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಬಸ್ ಓಡಾಡುದೆ ಇರುವುದರಿಂದ ವಿಧ್ಯಾರ್ಥಿಗಳು ಜ್ಞಾನಾರ್ಜನೆ ಪಡೆಯುವುದು ಅತ್ಯಂತ ದುಸ್ಥಿತಿಯಾಗಿದೆ. ಕೂಡಲೇ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬಸ್ಸಿನ ಸಮಸ್ಯೆ ಪರಿಹರಿಸಬೇಕು. ಇಲ್ಲವಾದರೆ ಉಗ್ರವಾದ ಪ್ರತಿಭಟನೆ ಮಾಡುತ್ತೆವೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಅರುಣ ಪೂಜಾರಿ, ಗಣೇಶ ಹಂಜಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.
ರದ್ದುಗೊಳಿಸಿದ ಚಿಟ್ ಫಂಡ್ ಕಂಪನಿಗಳಲ್ಲಿ ಹೂಡಿರುವ ಸಾರ್ವಜನಿಕರ ಹಣ ಮರಳಿಸುವಂತೆ ರೈತ ಸಂಘ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಗ್ರಿಗೊಲ್ಡ್, ಪಿ.ಎ.ಸಿ.ಎಲ್, ಸಮೃದ್ಧ ಜೀವನ ಸೇರಿದಂತೆ ಇನ್ನಿತರ ಕಂಪನಿಗಳಲ್ಲಿ ಕಷ್ಟಪಟ್ಟು ದುಡಿದಿರುವ ಬಡವರು ಹಾಗು ರೈತರ ಹಣ ೬ ವರ್ಷದಲ್ಲಿ ದ್ವೀಗುಣವಾಗುತ್ತದೆ ಎಂಬ ನಂಬಿಕೆಯೊಂದಿಗೆ ಹೂಡಿಕೆ ಮಾಡಿದ್ದರು, ಆದರೆ ಕೇಂದ್ರ ಸರಕಾರ ಏಕಾಏಕಿ ೧೮೫ ಚಿಟ್ ಫಂಡ್ ಕಂಪನಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಎಲ್ಲಾ ಹೂಡಿಕೆದಾರರು ಚಿಂತೆ ಮಾಡುವಂತೆ ಮಾಡಿದೆ. ಈ ಕುರಿತು ಸರಕಾರ ಮಧ್ಯಸ್ತಿಕೆ ವಹಿಸಿ ಹಣ ಹಿಂತಿರಗಿಸಲು ಆದೇಶ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರುಕಳೆದ ೨೦ ದಿನಗಳಿಂದ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬದ ವತಿಯಿಂದ ನಡೆಸಿರುವ ಹೋರಾಟಕ್ಕೆ ರೈತ ಸಂಘ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಬೆಂಬಲ ನೀಡಿ ಮಾತನಾಡುತ್ತಾ, ನಮ್ಮ ಜಿಲ್ಲೆಯಲ್ಲಿ ಅಂದಾಜು ೨ ಲಕ್ಷ ಗ್ರಾಹಕರು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆ ಜಯಶ್ರೀ ದೇವಣಗಾಂವ ಹಾಗೂ ಉಪಾಧ್ಯಕ್ಷ ರಮೇಶ ಮಸಬಿನಾಳರನ್ನು ತಾಲ್ಲೂಕು ಕುರುಬ ಸಮಾಜಸೇವಾ ಸಂಘದಿಂದ ಸನ್ಮಾನಿಸಲಾಯಿತು.ಪ್ರಕಾಶ ದೊಡಮನಿ, ಗುರುನಾಥ ಮುರುಡಿ, ಕೆಂಚು ಪೂಜಾರಿ, ರೇವಣಸಿದ್ಧ ಮಣೂರ, ಶರಣು ಮನಗೂಳಿ, ಜಕ್ಕು ದೊಡ್ಡಿಣಿ, ಬಸಪ್ಪ ದೇವಣಗಾಂವ ಸೇರಿದಂತೆ ಇತರರು ಇದ್ದಾರೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸೆ:೨೨ ರಂದು(ನಾಳೆ) ಓತಿಹಾಳ ಐಪಿ, ಕನ್ನೋಳ್ಳಿ ಐಪಿ, ಬಮ್ಮನಜೋಗಿ ಐಪಿ ಲಿಂಕ್‌ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ೧೧೦/೧೧ ಕೆ.ವ್ಹಿ ದೇವರಹಿಪ್ಪರಗಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇಂಗಳಗಿ, ದೇವರಹಿಪ್ಪರಗಿ, ದೇವೂರ,ಕನ್ನೋಳ್ಳಿ ಎನ್‌ಜೆವಾಯ್ ಮತ್ತು ಮಣ್ಣೂರ, ಜಾಲವಾದ, ಕನ್ನೋಳ್ಳಿ, ಓತಿಹಾಳ, ಬಮ್ಮನಜೋಗಿ, ಪಡಗಾನೂರ, ಹರನಾಳ ಐಪಿ ಪೀಢರ್‌ಗಳ ಮೇಲೆ ಬೆಳಿಗ್ಗೆ ೮.೦೦ ಗಂಟೆಯಿಂದ ಸಾಯಂಕಾಲ ೫.೦೦ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ದೇವರಹಿಪ್ಪರಗಿ ಇವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕದಲ್ಲಿ ರಾಜಕೀಯ ಮೇಲಾಟಗಳು ಏನು ನಡೆಯುತ್ತಿದೆ ಎಂಬುದು ಜನರಿಗೆ ಗೊತ್ತು. ಹಣ, ಹೆಂಡ, ಅಧಿಕಾರಿದ ಉಪಯೋಗದಿಂದ ರಾಜ್ಯಕೀಯ ಏರಿಳಿತವನ್ನು, ದೊಂಬರಾಟವನ್ನು, ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆದರೆ ಜವಾಬ್ದಾರಿ ರಾಷ್ಟ್ರೀಯ, ರಾಜ್ಯದ ಆಡಳಿತ ಪಕ್ಷಗಳು ಜನರ ಹಿತ ಕಾಪಾಡುವಲ್ಲಿ ವೈಫಲ್ಯ ಕಂಡಿವೆ ಎಂದು ನ್ಯಾಷನಲ್ ಅಪನಿ ಪಕ್ಷದ ರಾಜ್ಯದ ಅಧ್ಯಕ್ಷ ಪಿರೋಜ್ ಬಿ ಎಸ್ ಕಿಡಿಕಾರಿದರು.ಶುಕ್ರವಾರ ಪಟ್ಟಣದ ಖಾಸಗಿ ಹೋಟೆಲನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು..? ಯಾರನ್ನು..? ಯಾರಿಗೆ ಮುಗಿಸಬೇಕೋ..! ಉಳಿಸಬೇಕೋ..! ಎಂಬ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜಕಾರಣ ಅರಾಜಕತೆಯಲ್ಲಿದೆ. ಆದರೆ ನ್ಯಾಷನಲ್ ಅಪನಿ ಪಕ್ಷ ರಾಜ್ಯದ ಜನರ ಹಿತದೃಷ್ಟಿಯಿಂದ ಕಾಯಕ ಮಾಡುವ ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಪಕ್ಷವಾಗಿದೆ. ಈಗಾಗಲೇ ರಾಜ್ಯದ ಹಲವು ಭಾಗದಲ್ಲಿ ಪ್ರವಾಸ ಮಾಡಿದ್ದು ಜನರ ನೋವು, ಸಮಸ್ಯೆ ಆಲಿಸುವ ಕಾಯಕ ಮಾಡಿದ್ದು, ಸ್ಪಂದಿಸುವ ಕಾರ್ಯ ಮಾಡಿದ್ದೆವೆ. ಅದಕ್ಕಾಗಿ ರಾಜ್ಯದಲ್ಲಿ ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ನಡೆಯುವ ಉಪ-ಚುನಾವಣೆಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಆಯಾ ತಾಲ್ಲೂಕಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಏರ್ಪಡಿಸಲಾಗಿದೆ.ಆಸಕ್ತವುಳ್ಳ ಕ್ರೀಡಾಪಟುಗಳು ತಮ್ಮ ತಾಲೂಕುಗಳಲ್ಲಿ ನಡೆಸುವ ತಾಲೂಕ ಮಟ್ಟದ ಅಥ್ಲೆಟಿಕ್, ವಾಲಿಬಾಲ್, ಪುಟ್‌ಬಾಲ್,ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗ ಕ್ರೀಡಾಪಟುಗಳು ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಬಹುದಾಗಿದೆ.ತಾಲ್ಲೂಕ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ ಕಾರ್ಡನ್ನು ಕಡ್ಡಾಯವಾಗಿ ತರುವುದು. ಈ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ ಹಾಗೂ ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುವುದಿಲ್ಲ.ಸೆ.೨೦ರಂದು ಸಿಂದಗಿಯ ತಾಲೂಕು ಕ್ರೀಡಾಂಗಣ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ರಂದು ದೇವರ ಹಿಪ್ಪರಗಿ ತಾಲೂಕಿನ ಜಗದಂಬ ಪ್ರೌಢ ಶಾಲೆ ಹಿಟ್ಟಿನಹಳ್ಳಿ, ಎನ್ ಆರ್ ಚವ್ಹಾಣ, ಮೊ:೯೪೮೦೬೭೮೦೯೭, ಸೆ.೨೧ರಂದು ಆಲಮೇಲ ತಾಲೂಕಿನ ಮಲಘಾಣದ ಸರಕಾರಿ ಪ್ರೌಢ ಶಾಲೆ, ಎನ್ ಆರ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ೧೧ ಕೆ.ವ್ಹಿ ಅರಕೇರಿ ಎನ್.ಜೆ.ವೈ ಮಾರ್ಗದಲ್ಲಿ ಸೆ.೨೨ರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೨ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಮ್ ರೇವಣ್ಣ ಅವರು ಸೆ.೨೨ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಬೆಳಿಗ್ಗೆ ೯-೪೫ಕ್ಕೆ ಕಲಬುರ್ಗಿಯಿಂದ ಹೊರಟು ೧೨-೧೫ಕ್ಕೆ ವಿಜಯಪುರಕ್ಕೆ ಆಗಮಿಸುವುರು. ೧೨-೩೦ಕ್ಕೆ ಜಿಲ್ಲಾ ಪಂಚಾಯತಿ ಕಾರ್ಯಾಲಯದಲ್ಲಿ ನಡೆಯುವ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ವಿಜಯಪುರ ಜಿಲ್ಲಾ ಸಮಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ ೩ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.”ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ…
