Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ನೆಟ್ ಬಾಲ್‌ನಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗ ಮತ್ತು ಚೆಸ್‌ನಲ್ಲಿ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಇರ್ವ ವಿದ್ಯಾರ್ಥಿನಿಯರು ಭಾಗವಹಿಸಿ ಒಟ್ಟು ೧೪ ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Read More

ಸಿಎಂ ಮೌಖಿಕ ಸೂಚನೆ ಮೇರೆಗೆ ಕೈಗೆತ್ತಿಕೊಂಡ ಕಾಮಗಾರಿಗಳ ವರದಿ ನೀಡಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌಖಿಕ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಶ್ರೀರಂಗಪಟ್ಟಣ, ವರುಣಾ ಕ್ಷೇತ್ರದಲ್ಲಿ 387 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಕೈಗೊಂಡಿರುವ ಕುರಿತಂತೆ ವಿಸ್ತೃತ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚಿಸಿದ್ದಾರೆ.ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್​ ನಟರಾಜ್​ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದು ಸೆಕ್ಷನ್ 15 ಮತ್ತು 25 ಉಲ್ಲಂಘಿಸಿ ಮುಡಾ 387 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಪ್ರಾಧಿಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು. ಹೀಗಾಗಿ ಸಿಬಿಐ ತನಿಖೆಗೆ ಸೂಚಿಸುವಂತೆ ಪತ್ರದಲ್ಲಿ ಬರೆದಿದ್ದಾರೆ.ಈ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಚಾಲ್ತಿಯಲ್ಲಿರುವ ಯು.ಜಿ.ಡಿ ಕಾರ್ಯದ ಅವಧಿ ಮುಗಿದರು ಸಹ ಇನ್ನೂ ಪೂರ್ಣಗೊಂಡಿಲ್ಲ ತುರ್ತಾಗಿ ಪೂರ್ಣಗೊಳಿಸುವದು. ಹಾಗೂ ಬಾಕಿಯಿರುವ ಯು.ಜಿ.ಡಿಯನ್ನು ಪೂರ್ಣಗೊಳಿಸಲು ಕ್ರಮವಹಿಸುವದು. ಯು.ಜಿ.ಡಿ ನಿರ್ಮಾಣ ಕಾರ್ಯದಲ್ಲಿ ಅಗೆಯಲಾದ ರಸ್ತೆಯನ್ನು ಸುವ್ಯವಸ್ಥಿತವಾಗಿ ಮರುಸ್ಥಾಪಿಸುವಂತೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇ ಆನಂದ ರಾಠೋಡ ಅವರಿಗೆ ಅಧ್ಯಕ್ಷ ಶಾಂತವೀರ ಬಿರಾದಾರ ಸೂಚಿಸಿದರು.ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಶಾಂತವೀರ ಬಿರಾದಾರ ಅಧ್ಯಕ್ಷತೆಯಲ್ಲಿ ವಿವಿಧ ವಿಷಯಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುಜಿಡಿ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಶೇಖರಣೆ ಟಾಕಿಗಳು ಒಡೆದುಹೋಗಿವೆ ಅವುಗಳ ಬಗ್ಗೆ ಗುತ್ತಿಗೆದಾರರಿಂದ ಮಾಹಿತಿ ಪಡೆದು ದುರಸ್ಥಿಗೊಳಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿ ಎಂದು ತಿಳಿಸಿದರು.ಟ್ರಾಫಿಕ್ ಸಮಸ್ಯೆಯ ನಿರ್ವಹಣೆ ಒನ್‌ವೇ ರಸ್ತೆ ನಿಗದಿಪಡಿಸುವದು. ಬೀದಿ ಬದಿ ವ್ಯಾಪಾರಿಗಳಿಗೆ ಟ್ರಾಫಿಕ್ ಸಮಸ್ಯೆಯಾಗದಂತೆ ಸ್ಥಳಾಂತರಿಸಲು ಕ್ರಮವಹಿಸುವದು. ರಸ್ತೆ ಸುರಕ್ಷತಾ ಕ್ರಮ ವಹಿಸುವುದು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಕ್ರಮ ವಹಿಸಿ ಎಂದು ಪೋಲಿಸ್ ಇಲಾಖೆಗೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೋತ್ಥಾನ ಪರಿಷತ್ತು ಬೆಂಗಳೂರು, ದರ್ಬಾರ್ ಪದವಿ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಯೋಗದಲ್ಲಿ ವಿಜಯಪುರ ಜಿಲ್ಲೆಯ ಶಿಕ್ಷಣ ಮಹಾವಿದ್ಯಾಲಯಗಳ ಪ್ರಶಿಕ್ಷಣಾರ್ಥಿಗಳಿಗೆ ನಡೆಸಿದ ಸ್ವಸ್ಥ ಸುಸ್ಥಿರ ಸಮಾಜ ನಿರ್ಮಾಣ ಕುರಿತಾದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ದೌಲತರಾಯ ಗೊಬ್ಬುರ ಇಂಗ್ಲೀಷ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕನ್ನಡ ವಿಭಾಗದಲ್ಲಿ ಅಶ್ವಿನಿ ಕೋರೆ ಜಿಲ್ಲಾ ಮಟ್ಟಕ್ಕೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರಾಚಾರ್ಯ ಜೆ.ಸಿ.ನಂದಿಕೋಲ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸೆ.22ರಂದು ಬೆಳಗಾವಿಯಲ್ಲಿ ನಡೆಯಲಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ 2 ಎ ಹೋರಾಟದ ವಕೀಲರ ಸಮಾವೇಶಕ್ಕೆ ತಾಲೂಕಿನ ಪಂಚಮಸಾಲಿ ಸಮಾಜದ ಸರ್ವ ವಕೀಲರು ಬೆಂಬಲಿಸಿ ಭಾಗವಹಿಸಲಿದ್ದೇವೆ ಎಂದು ವಕೀಲರ ಸಂಘದ ಜಿಲ್ಲಾ ಸಂಘಟನಾ ಸಮಿತಿಯ ಸದಸ್ಯ ಬಿ.ಬಿ. ಬಿರಾದಾರ (ಜೇವೂರ್) ಹೇಳಿದರು.ಅವರು ಗುರುವಾರ ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಮಾಜದ ಪೂಜ್ಯ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ದಶಕಗಳಿಂದ ಹಲವು ಹೋರಾಟ ನಡೆಸಿದರು ಸಹ ಯಾವ ಸರಕಾರವು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡದ ಹಿನ್ನೆಲೆಯಲ್ಲಿ ಶ್ರೀಗಳ ಕಳಕಳಿಯ ಮೇರೆಗೆ ಕಾನೂನು ಹೋರಾಟ ಮಾಡಲು ಎಲ್ಲ ವಕೀಲರು ಸಂಘಟಿತರಾಗಿದ್ದು ಸಪ್ಟೆಂಬರ್ 22ರಂದು ಬೆಳಗಾವಿಯಲ್ಲಿ ಕಾನೂನು ಹೋರಾಟದ ಕುರಿತು ದೀರ್ಘ ಸಮಾವೇಶ ನಡೆಯಲಿದೆ.ಪೂಜ್ಯರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶಕ್ಕೆ ಎಲ್ಲ ಜಿಲ್ಲೆಗಳ ಪಂಚಮಸಾಲಿ ಸಮಾಜದ ವಕೀಲರು, ಬೆಂಬಲ ಸೂಚಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತಿದ್ದು ಇಂಡಿ ತಾಲೂಕಿನ ವಕೀಲರು ಸಹ ಈ ಸಮಾವೇಶದಲ್ಲಿ ಪಾಲ್ಗೊಂಡು ಸಮಾಜದ ಬಡ ಮಕ್ಕಳಿಗೆ ಮೀಸಲಾತಿ ಕೊಡಿಸುವ ಹೋರಾಟ…

Read More

ಉದಯರಶ್ಮಿ ದಿನಪತ್ರಿಕೆತಿಕೋಟಾ: ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿಗಳು ಲೋಹಗಾಂವ ಗ್ರಾಮದಲ್ಲಿ ನಡೆದ ವಲಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಗೆದ್ದು ತಾಲ್ಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಆಯ್ಕೆಯಾದ ವಿಧ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯನಿ ಎಸ್.ಎನ್.ಕಲಾವಂತ, ಎಸ್ಡಿಎಂಸಿ ಅಧ್ಯಕ್ಷ ಎ.ಐ‌.ಸೌದಿ, ಶಿಕ್ಷಕರಾದ ಎ.ಆರ್.ಎಳಂಗಡಿ, ಡಿ.ಎಸ್.ಜತ್ತಿ, ಬಿ.ಎಂ.ತೊಂಡಿಕಟ್ಟಿ, ಎ.ಎಂ.ಹೊಸಮನಿ, ಎಸ್.ಎಸ್.ಜನಗೊಂಡ, ಕಸ್ತೂರಿ ಶಿವಪ್ಪ, ಸುರೇಶ ಮಾಳೇದ, ಸೋವೆಲ್, ಅಕ್ಷಯ, ಪ್ರವೀಣ, ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರು, ಶಾಲಾ ಹಳೆಯ ವಿಧ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೆಲ್ಲರೂ ತಿಕೋಟಾ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತಾಗಿ ತಹಸೀಲ್ದಾರ ಚನಗೊoಡ ಅವರನ್ನು ಸಂಪರ್ಕಿಸಿ ಸಲಹೆ ಸೂಚನೆ ನೀಡಲು ಗುರುವಾರ ವಿನಂತಿಸಿಕೊಳ್ಳಲಾಯಿತು.ಎಲ್ಲರ ವಿಚಾರಗಳನ್ನು ತಾಳ್ಮೆಯಿಂದ ಆಲಿಸಿದ ಅವರು ತಾಲೂಕಿನ ಪ್ರಥಮ ಸಮ್ಮೇಳನ ಆಯೋಜಿಸುತ್ತಿರುವದು ತುಂಬಾ ಹೆಮ್ಮೆಯ ಸಂಗತಿ, ಪ್ರತಿಯೊಬ್ಬ ಕನ್ನಡಿಗ ಹೆಮ್ಮೆಪಡುವ ಸಂಗತಿಯಾಗಿದ್ದು ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಹಾಯ ಸಹಕಾರ ತಾಲೂಕ ಆಡಳಿತ ವತಿಯಿಂದ ನೀಡಲಾಗುವದೆಂದು ಭರವಸೆ ನೀಡಿದರು.ಪ್ರಥಮ ಸಮ್ಮೇಳನ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ಮತ್ತು ವಿವಾದ ರಹಿತ ಸಮ್ಮೇಳನ ಆಗಬೇಕೆಂದು ಆಶಯ ವ್ಯಕ್ತಪಡಿಸಿದರು. ತಾಲೂಕಿನ ಎಲ್ಲಾ ಕನ್ನಡ ಪರ ಸಂಘಟನೆಗಳು, ಸಂಘ ಸೌoಸ್ಥೆಗಳು,ಶಾಲಾ ಕಾಲೇಜುಗಳು, ಎಲ್ಲಾ ರಾಜಕೀಯ ಮುಖಂಡರನ್ನು, ಪತ್ರಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮ್ಮೇಳನ ಆಯೋಜಿಸಲು ಸಲಹೆ ನೀಡಿದರು.ಈ ಅನೌಪಚಾರಿಕ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ, ಹೊನವಾಡದ ಬಾಬುರಾವ ಮಹಾರಾಜರು, ಲಿಂಗರಾಜ್ ಪಾಟೀಲ್, ಮುತ್ತು ಹಿರೇಮಠ, ಧರೆಪ್ಪ ಎಚ್ಚಿ, ಎಸ್ ಎಸ್ ಕುಂಬಾರ ಪಪ್ಪು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಆವರಣದಲ್ಲಿ ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಹಾಗೂ ಬಿಜೆಪಿ ನಗರ ಮಂಡಲ ಯುವ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ವಿಶ್ವ ನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನವನ್ನು ಉಪಕಾರಿ ಕಾರ್ಯದ ಮೂಲಕ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಕೂಡ ರಕ್ತದಾನ ಮಾಡಿ, ರಕ್ತದ ಅವಶ್ಯಕತೆ ಇರುವವರಿಗೆ ಕಲ್ಪಿಸುವ ಪುಣ್ಯದ ಕೆಲಸ ಮಾಡೋಣ ಎಂದರು.ಪದಾಧಿಕಾರಿಗಳಾದ ಪ್ರವೀಣ ವಂದಾಲ, ರಾಚು ಬಿರಾದಾರ, ಲಕ್ಷ್ಮಿ ಕನ್ನೋಳ್ಳಿ, ಸಾಯಿ ಪ್ರಕಾಶ, ವಿಜಯಕುಮಾರ ಗಚ್ಚಿನಕಟ್ಟಿ ಸೇರಿದಂತೆ ಮತ್ತಿತರರು ರಕ್ತದಾನ ಮಾಡಿದರು.ಮಹಾನಗರ ಪಾಲಿಕೆ ಸದಸ್ಯರಾದ ಕುಮಾರ ಗಡಗಿ, ಮಳುಗೌಡ ಪಾಟೀಲ, ಮುಖಂಡರಾದ ಈರಣ್ಣ ರಾವೂರ್, ಪಾಪುಸಿಂಗ್ ರಜಪೂತ, ಪ್ರವೀಣ ಕೂಡಗಿ, ಪ್ರವೀಣ ನಾಟೀಕಾರ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ ಕೆ. ರಾಠೋಡ ರವರ ೬೪ನೇ ಜನ್ಮದಿನವನ್ನು ವಿಜಯಪುರ ನಗರದ ಅನಾಥಾಶ್ರಮದಲ್ಲಿ ಕಾಂಗ್ರೆಸ್ ಎಸ್.ಸಿ. ಘಟಕ ಜಿಲ್ಲಾ ಉಪಾಧ್ಯಕ್ಷರಾದ ರಾಜು ಎಸ್.ಪವಾರ ಇವರ ಮುಖಂಡತ್ವದಲ್ಲಿ ಅನಾಥಾಶ್ರಮದ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು.ಸುರೇಶ ರಂಗು ಚವ್ಹಾಣ (ಭೂತನಾಳ) ಮಾತನಾಡಿ ಪ್ರಕಾಶ ಕೆ. ರಾಠೋಡ ರವರು ಸಕ್ರೀಯವಾಗಿ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಕಟ್ಟಿ ಬೆಳೆಸುವ ಕೆಲಸಗಳನ್ನು ಮಾಡುತ್ತಾ ಬಂದಿದ್ದು, ಇವರು ಪಕ್ಷದ ಕಾರ್ಯಕರ್ತರನ್ನು ಬಹಳ ಆತ್ಮೀಯವಾಗಿ ಕಾಣುತ್ತಾರೆ ಎಂದರು.ಈ ಸಮಯದಲ್ಲಿ ಅಶೋಕ ಜಿ. ಚವ್ಹಾಣ (ಅಲಿಯಾಬಾದದ), ಸಂತೋಷ ಚವ್ಹಾಣ, ಬಾಸು ರಾಠೋಡ, ಕೃಷ್ಣಾ ಲಮಾಣಿ ಇನ್ನಿತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರಥಮ ವರ್ಷಕ್ಕೆ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಸ್ನಾತಕ ಪದವಿಯ ೬ನೆಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ. ಐದು ಸೆಮಿಸ್ಟರ್‌ಗಳ ಅಂಕಪಟ್ಟಿಯೊಂದಿಗೆ ಈಗಲೇ ಅರ್ಜಿ ಸಲ್ಲಿಸಿ. ಪರೀಕ್ಷಾ ಫಲಿತಾಂಶ ಬಂದ ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆಯಾ ವಿಭಾಗಗಳಿಗೆ ೬ನೆಯ ಸೆಮಿಸ್ಟರ್ ಅಂಕಪಟ್ಟಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಅಕ್ಟೋಬರ್ ೨೦ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Indexತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ವಿಶ್ವವಿದ್ಯಾನಿಲಯದ ಕಚೇರಿಗೆ ಅಥವಾ ಆಯಾ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರಿಗೆ ಅ.೨೧ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಮಾಡಲಾಗುವುದು. ಆಪ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಪ್ರವೇಶಾತಿಯನ್ನು ಕೌನ್ಸೆಲಿಂಗ್ ಮೂಲಕ ನೀಡಲಾಗುವುದು…

Read More