Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆಮ್ ಆದ್ಮಿ ಪಾರ್ಟಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ದೆಹಲಿಯ ನೂತನ ಮುಖ್ಯಮಂತ್ರಿಗಳಾಗಿ ಶ್ರೀಮತಿ ಆತಿಶಿ ಅವರ ಆಯ್ಕೆಯನ್ನು ಪಕ್ವದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಸ್ವಾಗತಿಸಿದ್ದಾರೆ.ದೇಶದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾಗಿ ನಂತರ ಪರ್ಯಾಯ ರಾಜಕಾರಣದ ಪಯಣದಲ್ಲಿ ಹಲವು ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ಆತಿಶಿ ಅವರು ನಿರ್ವಹಿಸಿದ್ದಾರೆ. ವಿಶ್ವವೇ ದೆಹಲಿಯ ಶೈಕ್ಷಣಿಕ ಕ್ರಾಂತಿಯನ್ನು ಬೆರಗುಗಣ್ಣುಗಳಿಂದ ನೋಡುವಂತೆ ಮಾಡಿರುವುದರಲ್ಲಿ ಪ್ರಮುಖ ಪಾತ್ರವಹಿಸಿದ್ದ ಆತಿಶಿ, ಭಾರತ ದೇಶದ ಬಡತನವನ್ನು ದೇಶದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ನೀಡುವ ಮೂಲಕ ಮಾತ್ರ ಪರಿಹಾರ ಮಾಡಬಹುದೆಂಬ ಅವರ ಯೋಚನಾ ಲಹರಿ ದೆಹಲಿಯಲ್ಲಿ ಸಂಪೂರ್ಣವಾಗಿ ಸಾರ್ಥಕತೆಯನ್ನು ಸಾಧಿಸಿದ್ದಾರೆ.ಲಕ್ಷಾಂತರ ಮಕ್ಕಳು ಇಂದು ಶಿಕ್ಷಣದಲ್ಲಿ ಉನ್ನತಿ ಸಾಧಿಸಿ ತಮ್ಮ ಬಡತನವನ್ನು ತೊಲಗಿಸಿಕೊಂಡಿರುವ ಹಿರಿಮೆ ಗರಿಮೆ ಆತಿಶಿ ಅವರಿಗೆ ಸಲ್ಲುತ್ತದೆ.ದೆಹಲಿ ಸರ್ಕಾರದ 14 ಇಲಾಖೆಗಳನ್ನು ನಿಭಾಯಿಸಿರುವ ಅನುಭವವನ್ನು ಹೊಂದಿರುವ ಆತಿಶಿ ಅವರು ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಮೂಲಾಗ್ರ ಬದಲಾವಣೆಗಳನ್ನು…

Read More

ಜಾಲಗೇರಿ ಎಲ್. ಟಿ.-1 ದುರ್ಗಾದೇವಿ ಜಾತ್ರೆ ಸಮಾರಂಭದಲ್ಲಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರಾ ಸಮಾಜ ಬಸವಾದಿ ಶರಣರ ಕಾಯಕ ತತ್ವ ಪಾಲಿಸುವುದರ ಜೊತೆಗೆ ಅದರದೇ ಆದ ಸಂಸ್ಕೃತಿಯನ್ನೂ ಮುಂದುವರೆಸಿಕೊಂಡು ಬರುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಜಾಲಗೇರಿ ಎಲ್. ಟಿ.-1 ರಲ್ಲಿ ದುರ್ಗಾದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಂಜಾರಾ ಸಮಾಜ ಅದರದೇ ಆದ ವಿಭಿನ್ನ ಸಂಸ್ಕೃತಿ ಹೊಂದಿದ್ದು, ದುಡಿಮೆಯ ಕುರಿತು ಬಸವಾದಿ ಶರಣರು ಮತ್ತು ಅಣ್ಣ ಬಸವಣ್ಣನವರು ಹೇಳಿದಂತೆ ಕಾಯಕ ತತ್ವಕ್ಕೆ ಮಹತ್ವ ಕೊಡುತ್ತದೆ. ಶ್ರಮ ಜೀವಿಗಳಾಗಿರುವ ಈ ಸಮಾಜದ ಜನರು ಶ್ರಮವಹಿಸಿ ದುಡಿದು ತಂತಮ್ಮ ತಾಂಡಾಗಳಲ್ಲಿ ಅಷ್ಟೇ ಶ್ರದ್ಧಾ ಭಕ್ತಿಯಿಂದ ದೇವರ ಸೇವೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕಾಯಕಕ್ಕೆ ನೀಡುವಷ್ಟೇ ಮಹತ್ವವನ್ನು ಸಂಸ್ಕೃತಿಗೂ ನೀಡುತ್ತಿದೆ. ಬಹಳಷ್ಟು ಸಮುದಾಯಗಳು ತಮ್ಮ ಸಂಸ್ಕೃತಿಯನ್ನು ಮರೆಯುತ್ತಿರುವ ಇಂದಿನ ದಿನಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ತಮ್ಮದೇಯಾದ ಮಹತ್ವ ಹೊಂದಿರುವ ಗ್ರಾಮೀಣ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಬೇಕು. ಅವುಗಳಲ್ಲಿ ನೀತಿಯಿದೆ. ಸತ್ವವಿದೆ. ಬದುಕಿಗೆ ದಾರಿದೀಪವಾಗಬಲ್ಲ ಅಂಶಗಳು ಜಾನಪದ ಹಾಡುಗಳು, ಕಥೆಗಳು ಹೊಂದಿರುವುದರಿಂದ ಅವುಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸುವುದು ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.ಚಿಮ್ಮಡ ಓಂ ಪ್ರಭುಲಿಂಗೇಶ್ವರ ಕಿಚಡಿ ಜಾತ್ರೆಯಂಗವಾಗಿ ಕರ್ನಾಟಕ ಜಾನಪದ ಪರಿಷತ್ತು ತಾಲ್ಲೂಕಾ ಘಟಕ ಹಾಗೂ ಓಂ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅನ್ನದಾಸೋಹ ಹಾಗೂ ಜ್ಞಾನ ದಾಸೋಹ ಒಟ್ಟಿಗೆ ಸಿಗುವ ಜಾತ್ರೆಯಂದರೆ ಅದು ಚಿಮ್ಮಡ ಕಿಚಡಿ ಜಾತ್ರೆ ಎಂದರು.ಯುವಕರ ಶಾಸಕ ಸಿದ್ದು ಸವದಿ ಮಾತನಾಡಿ, ಗ್ರಾಮದ ಹಿರಿಯರ ಒಗ್ಗಟ್ಟಿನ ಶಕ್ತಿ ಹಾಗೂ ಇಲ್ಲಿನ ಯುವಕರ ಅವಿರತ ಪರೀಶ್ರಮದಿಂದ ಜಾತ್ರೆಯು ಪ್ರತೀವರ್ಷ ಯಶಸ್ವಿಯಾಗಿ ಜರುಗುತ್ತಿದೆ ಎಂದರು.ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಮಾತನಾಡಿ, ಉತ್ತರ ಕರ್ನಾಟಕದಲ್ಲಿಯೇ ವಿಶಿಷ್ಟ ಜಾತ್ರೆಯೆಂಬ ಹೆಗ್ಗಳಿಕೆ ಹೊಂದಿರುವ ಚಿಮ್ಮಡ ಕಿಚಡಿ ಜಾತ್ರೆ ಲಕ್ಷಾಂತರ ಜನರಿಗೆ ಏಕಕಾಲಕ್ಕೆ ದಾಸೋಹ…

Read More

ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಿಕ್ಷಣ ಇಲಾಖೆ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ನಮಗೆ ಅನ್ಯಾಯ ಮಾಡಲಾಗಿದೆ. ಕೂಡಲೇ ಈ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಸರಕೋಡದ ಸಂಗಮೇಶ ಕಟಾರೆ ಮತ್ತು ಬಸವರಾಜ ಬಿರಾದಾರ ಆರೋಪಿಸಿದ್ದಾರೆ.ಈ ಕುರಿತು ಮಾಧ್ಯಮಕ್ಕೆ ಚಿತ್ರೀಕರಿಸಿದ ವಿಡಿಯೋ ಮೂಲಕ ಮಾಹಿತಿ ನೀಡಿದ ಅವರು, ಬುಧವಾರ ತಾಲೂಕಿನ ಯರಝರಿ ಗ್ರಾಮದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದ ಖೋಖೋ ಆಟದಲ್ಲಿ ಯರಝರಿ ಶಾಲೆಯವರು ಇಬ್ಬರು ಪ್ರೌಢ ಶಾಲೆಯ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಆಟವಾಡಿ ಗೆದ್ದಿರುತ್ತಾರೆ. ಇದರಿಂದ ನಮ್ಮೂರ ಶಾಲೆಯ ಕ್ರೀಡಾಪಟುಗಳಿಗೆ ಅನ್ಯಾಯವಾಗಿದೆ. ಶಿಕ್ಷಣ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮತ್ತೊಮ್ಮೆ ಆಟವಾಡಿಸಬೇಕು. ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಡ ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಟಿಕ ಅಹಾರ ದೊರಬೇಕು ಎನ್ನುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿವೆ. ಸಾರ್ವಜನಿಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ಖಾಸಗಿ ಹೋಟಲ್ ಒಂದರಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪೌಷ್ಟಿಕ ದಿನಾಚರಣೆ ಮತ್ತು ಬೇಟಿ ಪಡಾವೋ ಬೇಟಿ ಬಚಾವೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಯೋಜನೆಗಳ ಸದುಪಯೋಗ ಪಡೆದುಕೊಳ್ಳದ ಕಾರಣ ಹಲವು ಮಕ್ಕಳಲ್ಲಿ, ಬಾಣಂತಿಯರಲ್ಲಿ ಪೌಷ್ಟಿಕಾಂಶದ ಕೊರತೆ ಕಾಣುತ್ತಿದ್ದೇವೆ. ಸರ್ಕಾರಗಳು ಜಾರಿಗೆ ತಂದಂಥ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತರ ಮೇಲಿದೆ. ಫಲಾನುಭವಿಗಳಿಗೆ ತಲುಪಬೇಕಾದ ಪೌಷ್ಟಿಕಾಂಶಗಳನ್ನು ತಲುಪಿಸುವ ಕಾರ್ಯವನ್ನು ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದರು.ತಾಲೂಕು ಆರೋಗ್ಯ ಅಧಿಕಾರಿ ಸತೀಶ ತಿವಾರಿ ಮಾತನಾಡಿ, ಹಲವು ಗರ್ಭಿಣಿಯರಲ್ಲಿ ಪೌಷ್ಟಿಕಾಂಶದ ಕೊರತೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸಲು ಸದಸ್ಯತ್ವ ಅಭಿಯಾನ ನೋಂದಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡ ಸದಸ್ಯತ್ವ ಅಭಿಯಾನದಲ್ಲಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿ ಮಾತನಾಡಿದ ಅವರು, ದೇಶದಾದ್ಯಂತ ಸ್ವ-ವ್ಯಾಪಾರ ಮಾಡುವವರಿಗೆ ಪ್ರದಾನಮಂತ್ರಿ ಸ್ವನಿಧಿ ಯೋಜನೆ ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಿಕೊಟ್ಟ ಪಿಎಂ ಮೋದಿ ಅವರಿಗೆ ಬೆಂಬಲ ನೀಡಲು ತಮ್ಮ ಕುಟುಂಬದ ಸದಸ್ಯರೆಲ್ಲರೂ ಬಿಜೆಪಿ ಸದಸ್ಯತ್ವ ಪಡೆಯುವಂತೆ ಮನವಿ ಮಾಡಿಕೊಂಡರು.ಈ ವೇಳೆ ಶ್ರೀಶೈಲಗೌಡ ಬಿರಾದಾರ ಯಂಕಂಚಿ, ಎಸ್.ಆರ್.ಪಾಟೀಲ, ಮಹಾಂತೇಶ ಸಾತಿಹಾಳ, ಎಸ್.ಎನ್ ಹಿರೇಮಠ, ಶಿವಾನಂದಗೌಡ ಪಾಟೀಲ, ರಾಜಶೇಖರ ನಗನೂರ, ಗೊಲ್ಲಾಳ್ಳಪ್ಪಗೌಟ ಪಾಟೀಲ, ಮಾಳು ಗುಡಿಹಾಳ, ಪ್ರಶಾಂತ ಕೊಪ್ಪಳ ಸೇರಿದಂತೆ ಗ್ರಾಮಸ್ಥರು, ಪಕ್ಷದ ಕಾರ್ಯಕರ್ತರು ಇದ್ದರು.

Read More

ರೂ೨೦ಲಕ್ಷ ಅನುದಾನದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿ ಪೂಜೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಶರಣು ಶ್ರೀಗಿರಿ ಅವರ ಮನೆಯಿಂದ ಡಾ.ಕಾಗಿ ಅವರ ಮನೆಯವರೆಗೆ ಜಿಲ್ಲಾ ಪಂಚಾಯತ್ ವಿಜಯಪುರ ಹಾಗೂ ಪಂಚಾಯತ್ ರಾಜ್ಯ ಇಲಾಖೆ ಉಪವಿಭಾಗ ಸಿಂದಗಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಪಟ್ಟಣದ ಶರಣು ಶ್ರೀಗಿರಿ ಅವರ ಮನೆಯಿಂದ ಡಾ. ಕಾಗಿ ಅವರ ಮನೆಯವರೆಗೆ ಅಂದಾಜು ೨೦.೦೦ ಲಕ್ಷಗಳ ಅನುದಾನದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರ ಅಭಿವೃದ್ದಿಯಾಗಲು ಮೊದಲು ರಸ್ತೆಗಳು ಉತ್ತಮವಾಗಿರಬೇಕು. ಮುಂಬರುವ ದಿನಗಳಲ್ಲಿ ಸಿಂದಗಿಗೆ ಪಟ್ಟಣದ ಎಲ್ಲ ವಾರ್ಡುಗಳ ರಸ್ತೆಗಳನ್ನು ಹಾಗೂ ಮುಖ್ಯ ರಸ್ತೆಗಳನ್ನು ಅಭಿವೃದ್ದಿ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು.ಈ ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶರಣರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ವಿಜಯಪುರದ ಶರಣ ತತ್ವ ಚಿಂತಕ ಡಾ.ಜೆ.ಎಸ್.ಪಾಟೀಲ ಹೇಳಿದರು.ತಾಲೂಕಿನ ಹಿಕ್ಕಣಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹುಣ್ಣಿಮೆಯ ಪ್ರಯುಕ್ತ ಹಮ್ಮಿಕೊಂಡ ೭ನೆಯ ಶಿವಾನುಭವ ಕಾರ್ಯಕ್ರಮ, ಶಿವಶರಣ ಹೂಗಾರ ಮಾದಯ್ಯ ಜಯಂತಿ, ಪ್ರವಚನ ಪಿತಾಮಹ ಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳು ಜಯಂತಿ, ರಾಷ್ಟ್ರೀಯ ಬಸವದಳ ಸಂಸ್ಥಾಪನಾ ದಿನ, ಶರಣ ದಿ.ಡಾ.ಎಂ.ಎಂ.ಕಲಬುರಗಿ ಅವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಲಿಂಗಾಯತ ಮಹಾಮಠದಿಂದ ಗ್ರಾಮೀಣ ಭಾಗದಲ್ಲಿ ಶರಣರ ತತ್ವ ಆದರ್ಶಗಳನ್ನು ಪ್ರಚಾರ ಮಾಡಲಾಗುತ್ತಿರುವುದು ಹೆಮ್ಮೆಯ ಸಂಗತಿ ಭಾಗವಹಿಸಿದ ಜನರು ಶರಣರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಇದರಿಂದ ಸಮಾಜದಲ್ಲಿ ಉತ್ತಮ ವಾತಾವರಣ ಮೂಡಿಸುವುದರಲ್ಲಿ ಸಂದೇಹವಿಲ್ಲ ಎಂದರು.ಈ ವೇಳೆ ’ಉದಯರಶ್ಮಿ’ ವರದಿಗಾರ ಮಹಾಂತೇಶ ನೂಲಾನವರ, ಪತ್ರಕರ್ತ ಮಲ್ಲಿಕಾರ್ಜುನ ಕೆಂಭಾವಿ, ಚಂದ್ರಶೇಖರ ಕೆಂಭಾವಿ, ಗ್ಯಾರಂಟಿ ಯೋಜನೆಯ ಸದಸ್ಯೆ ಸುನಂದಾ ಯಂಪುರೆ, ಶರಣಬಸಪ್ಪ ಗಂಗಶೆಟ್ಟಿ, ಕಾಶೀನಾಥ ಸುಳ್ಳೋಳ್ಳಿ ಸೇರಿದಂತೆ ಅನೇಕರಿಗೆ ಬಸವ ಶ್ರೀರಕ್ಷೆ ನೀಡಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಹಿಕ್ಕಣಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹುಣ್ಣಿಮೆಯ ಪ್ರಯುಕ್ತ ಹಮ್ಮಿಕೊಂಡ ೭ನೆಯ ಶಿವಾನುಭವ ಕಾರ್ಯಕ್ರಮ, ಶಿವಶರಣ ಹೂಗಾರ ಮಾದಯ್ಯ ಜಯಂತಿ, ಪ್ರವಚನ ಪಿತಾಮಹ ಜಗದ್ಗುರು ಲಿಂಗಾನಂದ ಮಹಾಸ್ವಾಮಿಗಳು ಜಯಂತಿ, ರಾಷ್ಟ್ರೀಯ ಬಸವದಳ ಸಂಸ್ಥಾಪನಾ ದಿನ, ಶರಣ ದಿ.ಡಾ.ಎಂ.ಎಂ.ಕಲಬುರಗಿ ಅವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪತ್ರಕರ್ತ ಮಹಾಂತೇಶ ನೂಲಾನವರ ಅವರಿಗೆ ಬಸವ ಶ್ರೀರಕ್ಷೆ ನೀಡಿ ಗೌರವಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಸುಜಾತಾ ಪೂಜಾರಿ ಹೇಳಿದರು.ಅವರು ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಹಿರೇರೂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿಭಾ ಕಾರಂಜಿಯ ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ಮಾತನಾಡಿ, ಮಕ್ಕಳಿಗೆ ಉನ್ನತ ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.ಸಿ ಆರ್ ಪಿ ಸಂತೋಷ ಚವ್ಹಾಣ ಪ್ರಾಸ್ತಾವಿಕವಾಗಿಮಾತನಾಡಿ, ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದಾಗಬೇಕು. ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.ಶಿಕ್ಷಣ ಸಂಯೋಜಕ ಸಿ ಬಿ ಬಿರಾದಾರ, ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ,…

Read More