Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲಿಂಗರಾಜ ವಿವಿದೊದ್ಧೇಶ ಸಂಸ್ಥೆ & ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಸಹಯೋಗ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ತೊರವಿ ರಸ್ತೆಯಲ್ಲಿರುವ ಜಿ.ಕೆ.ಪಾಟೀಲ ಸಮುದಾಯ ಭವನದಲ್ಲಿ ಸೆ.೨೨ ರಂದು ಬೆಳಿಗ್ಗೆ ೧೦ ಗಂಟೆಗೆ ದಿ.ಶ್ರೀ ಲಿಂಗರಾಜ ವಿವಿದೋದ್ಧೇಶ ಸಂಸ್ಥೆ, ಶ್ರೀ ಸಿರಸಂಗಿ ಲಿಂಗರಾಜ ಪತ್ತಿನ ಸಹಕಾರಿ ಸಂಘ ನಿಯಮಿತ, ಹಾಗೂ ಜಿಲ್ಲಾ ಲಿಂಗಾಯತ ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಾಜದ ಮುಖಂಡ ಬಿ ಆರ್ ಪಾಟೀಲ ಸಾವಳಗಿ ಕೋರಿದರು.ವಿಜಯಪುರದ ಎಸ್.ಎಸ್. ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿರಸಂಗಿ ಲಿಂಗರಾಜ ಮಹಾರಾಜರು ತ್ಯಾಗ, ದಾನಕ್ಕೆ ಇನ್ನೊಂದು ಹೆಸರು, ಅವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಮುನ್ನಡೆಯಬೇಕು, ಅವರ ದೂರದೃಷ್ಟಿ ಫಲವಾಗಿ ಇಂದು ಅನೇಕರು ಶಿಕ್ಷಣ ಪಡೆದು ಉನ್ನತ ಸ್ಥಾನ ಅಲಂಕರಿಸಿದ್ದಾರೆ ಎಂದರು.ಹಿರಿಯರಾದ ಆರ್.ಎಸ್. ಜನಗೊಂಡ ಮಾತನಾಡಿ, ಪ್ರತಿಭೆಗೆ ಪ್ರೋತ್ಸಾಹ ಅಗತ್ಯ, ಪ್ರತಿಭಾನ್ವಿತರಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಸಿದ್ಧಲಿಂಗಯ್ಯ ಕಾವ್ಯ, ವಿಮಶ೯ಕ, ನಾಟಕ, ಪ್ರಬಂಧ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಕವಿ ಸಿದ್ದಲಿಂಗಯ್ಯ ರಾಷ್ಟ್ರಕವಿಗಳ ಸಾಲಿನಲ್ಲಿ ಸೇರಬೇಕಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರುಜೈ ಭೀಮ ಸೇನಾ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದಿ ಡಾ.ಸಿದ್ಧಲಿಂಗಯ್ಯ ಅವರ ನಾಲ್ಕನೆಯ ಪುಣ್ಯ ಸ್ಮರಣೋತ್ಸವದ ನಿಮಿತ್ತ ನುಡಿನಮನ ಕಾಯ೯ಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವರ ಚಿಂತನೆಗಳು ಇಪ್ಪತ್ತೊಂದನೆಯ ಶತಮಾನದ ಯುವಕರಿಗೆ ಸ್ಪೂರ್ತಿದಾಯಕವಾಗಿವೆ ಎಂದರು.ಜಿಲ್ಲಾ ಕಸಾಪ ಸಂಘಟನಾ ಕಾಯ೯ದಶಿ೯ ಅಭಿಷೇಕ ಚಕ್ರವರ್ತಿ ಮಾತನಾಡಿ, ಕವಿ ಸಿದ್ದಲಿಂಗಯ್ಯ ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯ ರಚಿಸಿ ಜನಪ್ರಿಯರಾಗಿದ್ದರು. ಡಾ ಅಂಬೇಡಕರ, ಪೆರಿಯಾರ, ವಸುದೇವಭೂಪಾಲ,ಲೋಹಿಯಾ ಮುಂತಾದವರ ವಿಚಾರಗಳಿಂದ ಆಕರ್ಷಿತರಾಗಿದ್ದರು ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕರಾದ ಡಾ ಸಂಗಮೇಶ ಮೇತ್ರಿ ಮಾತನಾಡಿ, ಕವಿ ಸಿದ್ದಲಿಂಗಯ್ಯ ಅವರ ಏಕಲವ್ಯ ನಾಟಕ ಪ್ರಸಿದ್ಧಿ ಪಡೆದುಕೊಂಡಿತು. ರಾಜ್ಯೋತ್ಸವ ಪ್ರಶಸ್ತಿ, ಡಾ.ಅಂಬೇಡ್ಕರ ಶತಮಾನೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು ಗುತ್ತಿಗೆದಾರ ಚೆಲುವರಾಜು ಎಂಬುವರ ಜೊತೆ ದೂರವಾಣಿ ಸಂಭಾಷಣೆಯಲ್ಲಿ ದಲಿತರಿಗೆ ಅತ್ಯಂತ ಕನಿಷ್ಠ ಪದಗಳನ್ನು ಬಳಕೆ ಮಾಡಿ ಜಾತಿ ನಿಂದನೆ, ಹೆಣ್ಣು ಮಕ್ಕಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾರೆ. ದಲಿತ ವಿರೋಧಿ ಶಾಸಕರ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾ ಸಂಘಟನಾ ಸಂಚಾಲಕ ಶರಣು ಶಿಂಧೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರು ದಲಿತರ ವಿರೋಧಿಯಾಗಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಬ್ಬ ಜನಪ್ರತಿನಿಧಿಯಾಗಿ ಸಂವಿಧಾನದ ನಿಲುವಿನಲ್ಲಿ ಪ್ರಮಾಣವಚನವನ್ನ ಸ್ವೀಕರಿಸಿ ದಲಿತರ ಕುರಿತಾಗಿ ಅವಹೇಳನವಾಗಿ ಮಾತನಾಡಿದ್ದು ತೀವ್ರವಾಗಿ ಖಂಡಿಸುತ್ತೇವೆ. ಅವರು ಇನ್ನೂ ಅಸ್ಪೃಶ್ಯತೆಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ ಎನ್ನುವುದು ಅವರ ದೂರವಾಣಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದೇಶದಲ್ಲಿ ಅನೇಕ ಜನರಿಗೆ ರಕ್ತದ ಅವಶ್ಯಕತೆ ಇದೆ. ಅಪಘಾತ ಅವಘಡ ಸಂಭವಸಿದ ಸಂದರ್ಭ, ವಿವಿಧ ರೋಗಗಳಿಂದ ಬಳಲುತ್ತಿರುವಾಗ ಒಂದು ಯುನಿಟ್ ರಕ್ತಕ್ಕಾಗಿ ಹೋರಾಟ ನಡೆದಿರುತ್ತದೆ. ಹಾಗಾಗಿ ನಾವೆಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದಲ್ಲಿ ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಜರೀನಾ ತಾಂಬೆ, ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ವಿಜಯಪುರ ಜಿಲ್ಲಾ ರಕ್ತ ಕೇಂದ್ರ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಎಂಬುದು ಜೀವದಾನ. ಒಬ್ಬ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸುವ ಸಲುವಾಗಿ ತನ್ನ ರಕ್ತವನ್ನು ಸ್ವಯಂ ಪ್ರೇರಣೆಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದಾನ ಮಾಡುವುದಕ್ಕೆ ಮುಂದಾಗಬೇಕು ಎಂದರು.ಈ ವೇಳೆ ೨೫ಕ್ಕೂ ಅಧಿಕ ಜನ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಡಾ.ಮಹ್ಮದ ಇಸಾಕ್, ರಾಜಶೇಖರ ನರಗೊದಿ, ಜರೀನಾ ತಾಂಬೆ, ಡಾ.ರವಿ ಗೋಲಾ, ಭೀಮು ವಾಲೀಕಾರ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಸೈಪನ ನಾಟೀಕಾರ ಸೇರಿದಂತೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಶ್ರೀ ಶಿವದಾಸಿಮಯ್ಯ ಶಿವಸಿಂಪಿ ಸಮಾಜ ವಿಕಾಸ ಸಂಘದ ಶಿವಸಿಂಪಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಶೇ.೭೫ರಷ್ಟು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಮಾಜದ ವತಿಯಿಂದ ಸನ್ಮಾನ ಸಮಾರಂಭ ಏರ್ಪಡಿಸಲಾಗಿದ್ದು, ಕಾರಣ ವಿದ್ಯಾರ್ಥಿಗಳು ಸೆ.೨೧ರ ಒಳಗಾಗಿ ತಮ್ಮ ಅಂಕ ಪಟ್ಟಿಯ ಝರಾಕ್ಸ ಪ್ರತಿಯನ್ನು ಡಾ.ವಿಶ್ವರಾಧ್ಯ ಶಿವಸಿಂಪಗೇರ, ಮಲ್ಲಿಕಾರ್ಜುನ ಲೋಣಿ, ಮತ್ತು ಮಲ್ಲು ಶಿವಸಿಂಪಿಗೇರ, ವಿಶ್ವನಾಥ ಶಿವಸಿಂಪೆಗೇರ ಇವರ ಹತ್ತಿರ ತಂದುಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ೯೮೮೬೨೪೬೩೪೧/ ೯೯೦೦೯೪೦೮೪೬/ ೯೯೪೫೧೭೩೬೭೬/೯೫೯೧೬೭೩೫೯೩ ಸಂಪರ್ಕಿಸಬೇಕು ಎಂದು ಶಿವಸಿಂಪಿ ಸಮಾಜದ ಅಧ್ಯಕ್ಷ ಡಾ.ವಿಶ್ವರಾಧ್ಯ ಶಿವಸಿಂಪಿಗೇರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಸಿದ್ದಾರೆ.
ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಗ್ಗೋಡದ ಶ್ರೀ ರಾಮನಗೌಡ ಬಾ.ಪಾಟೀಲ (ಯತ್ನಾಳ) ಗೋರಕ್ಷಾ ಕೇಂದ್ರದಲ್ಲಿ 10 ಎಕರೆ ಪ್ರದೇಶದಲ್ಲಿ ರೂ.25 ಕೋಟಿ ವೆಚ್ಚದಲ್ಲಿ ಶ್ರೀ ಸಿದ್ದೇಶ್ವರ ಜಾತ್ರೆಗೆ ಆಧಾರಿತ ಮತ್ತು ಕಲ್ಯಾಣ ಕ್ರಾಂತಿಗೆ ಕಾರಣರಾದ 770 ಶರಣರನ್ನೊಳಗೊಂಡ, ಶರಣ ಗ್ರಾಮ ಶಿಲ್ಪ ಉದ್ಯಾನವನ ನಿರ್ಮಾಣ ಮಾಡುವ ಯೋಜನೆಯಿದೆ ಎಂದು ಶ್ರೀ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದರು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಡಾ.ಫ.ಗು.ಹಳಕಟ್ಟಿ ಸಭಾಭವನದಲ್ಲಿ ನಡೆದ 2023-24ನೇ ಸಾಲಿನ ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗೋರಕ್ಷಾ ಕೇಂದ್ರದಲ್ಲಿ ಮಾತೋಶ್ರೀ ಬಂಗಾರಮ್ಮ ಬಸಪ್ಪ ಸಜ್ಜನ ಕಲ್ಯಾಣ ಮಂಟಪ ಹಾಗೂ ಗೋ ಆಧಾರಿತ ಕೃಷಿ ತರಬೇತಿ ಕೇಂದ್ರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟಿಸಲಾಗುವುದು. ಸಿದ್ಧಸಿರಿ ಸೌಹಾರ್ದ…
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಕೊಡುವಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಮಾಜ ಮುಂದಾಗಿದೆ. ಈ ಹಿನ್ನೆಲೆ ಸೆಪ್ಟೆಂಬರ್ ೨೨ರಂದು ಬೆಳಗ್ಗೆ ೧೦ಗಂಟೆಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ಮಹಾಪರಿಷತ್ ಸಭೆ ನಡೆಸಲಾಗುತ್ತಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗಾಗಿ ಆಗ್ರಹಿಸಿ ಕಳೆದ ಮೂರೂವರೆ ವರ್ಷಗಳಿಂದ ನಡೆಸುತ್ತಿರುವ ಹೋರಾಟ ಇದೀಗ ಮತ್ತೊಂದು ಆಯಾಮದ ಮೂಲಕ ಸಾಗಲಿದೆ. ರಾಜ್ಯದಲ್ಲಿರುವ ಸಮಾಜದ ಎಲ್ಲ ವಕೀಲರನ್ನು ಸೇರಿಸಿ ಹೋರಾಟ ಮಾಡಲಾಗುತ್ತಿದೆ. ಎಲ್ಲಾ ವಕೀಲರು ನಮ್ಮ ಹಕ್ಕು ಕೇಳುವುದರಲ್ಲಿ ತಪ್ಪೇನಿದೆ ಎಂದು ೨೨ರಂದು ಬೆಳಗ್ಗೆ ೧೦ಗಂಟೆಗೆ ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸಭೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತದಿಂದ ವಿಶ್ವಕರ್ಮ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಸರಳವಾಗಿ ಆಚರಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಬೆಳಿಗ್ಗೆ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮರ ಭಾವಚಿತ್ರಕ್ಕೆ ಸಮುದಾಯದ ಯೋಗೇಂದ್ರ ಮೂರುಜಾವದಮಠ ಶಾಸ್ತ್ರೋಕ್ತ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಕರ್ಪೂರ, ಮಂಗಳಾರತಿ ನೆರವೇರಿಸಿ ಪ್ರಸಾದ, ಪನಿವಾರ ವಿತರಿಸಿದರು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ.ಬಿರಾದಾರ ಬ್ರಹ್ಮಾಂಡದ ಮೊದಲ ವಾಸ್ತುಶಿಲ್ಪಿ ವಿಶ್ವಕರ್ಮರ ಹಿನ್ನೆಲೆ , ಕಾರ್ಯವೈಖರಿ, ಈಶ್ವರನಿಗೆ ತ್ರಿಶೂಲ, ಶ್ರೀಕೃಷ್ಣನಿಗೆ ದ್ವಾರಕಾನಗರ, ರಾವಣನಿಗೆ ಅರಮನೆ, ಕಾರ್ತಿಕೇಯನಿಗೆ ಭರ್ಜಿಯನ್ನು ನಿರ್ಮಿಸಿದ ಬಗೆಯ ಮಾಹಿತಿ ಸಹಿತ ದೇವಾನುದೇವತೆಗಳನ್ನು ಮೂರ್ತರೂಪಕ್ಕೆ ತಂದದನ್ನು ವಿವರಿಸಿ ಮಾತನಾಡಿದರು.ಶಿರಸ್ತೇದಾರ ಸುರೇಶ ಮ್ಯಾಗೇರಿ, ಕಂದಾಯ ನಿರೀಕ್ಷಕ ಸಂಗಮೇಶ ಗ್ವಾಳೇದ, ಅಮೋಘಸಿದ್ದ ದಳವಾಯಿ, ಕುಮಾರ ಅವರಾದಿ, ಚನ್ನಬಸು ಹೊಸಮನಿ, ಕಿಶೋರ ರಾಠೋಡ, ಆಕಾಶ ಮೇತ್ರಿ, ಪಟ್ಟಣದ ವಿಶ್ವಕರ್ಮ ಸಮುದಾಯದ ವಿಶ್ವನಾಥ ಮೂರುಝಾವದಮಠ, ನಾಗಯ್ಯ ಮೂರುಝಾವದಮಠ, ತೇಜಪ್ಪ ಕಕ್ಕಳಮೇಲಿ, ದೇವೀಂದ್ರಪ್ಪ ಕಕ್ಕಳಮೇಲಿ, ಮಹಾರುದ್ರ ಕಕ್ಕಳಮೇಲಿ, ಪ್ರಶಾಂತ ದೊಡಮನಿ, ಸುರೇಶ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ ಅವರು ಹೇಳಿದರು.ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯ ಶ್ರಮ ಅಗಾಧವಾಗಿದೆ. ಇಂತಹ ದಾರ್ಶನಿಕರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆಗಳನ್ನು ಯುವಪೀಳಿಗೆ ಅನುಸರಿಸಬೇಕು ಎಂದು ಹೇಳಿದರು.ಪೂಜ್ಯ ಮಹೀಂದ್ರ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಹಾರೊಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ರಾವಸಾಬ ಬಡಿಗೇರ ಅವರು ಉಪನ್ಯಾಸ ನೀಡಿದರು. ಶ್ರೀಮತಿ ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಎಚ್.ಮಮದಾಪೂರ ಅವರು ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ,…
ಚಿಕ್ಕಪಡಸಲಗಿಯಲ್ಲಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಯಶಸ್ಸು ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಆರೋಗ್ಯ ಸಂಪನ್ನತೆಗೆ ಕ್ರೀಡೆಗಳು ಸಹಕಾರಿಯಾಗಿದ್ದು ಆ ದಿಸೆಯಲ್ಲಿ ಮಕ್ಕಳಲ್ಲಿ ಕ್ರೀಡಾ ಕಾರ್ಯಕ್ಷಮತೆ ಬೆಳೆಸಲು ದೈಹಿಕ ಶಿಕ್ಷಣ ಶಿಕ್ಷಕರು ಮುಂದಾಗಬೇಕು ಎಂದು ಜಮಖಂಡಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ಪಂಚಾಕ್ಷರಿ ನಂದೀಶ ಹೇಳಿದರು.ಗ್ರಾಮದಲ್ಲಿ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸಂಸ್ಥೆ ವತಿಯಿಂದ ನಡೆಯುತ್ತಿರುವ ಶಿವಶರಣ ಹರಳಯ್ಯ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ 2024-25 ನೇ ಸಾಲಿನ ಹಿರೇಪಡಸಲಗಿ ವಲಯ ಮಟ್ಟದ 14 ವಯೋ ಮಿತಿಯೊಳಗಿನ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಆಟೋಟಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ, ದೈಹಿಕ ಸಾಮರ್ಥ್ಯ ಗಟ್ಟಿಗೊಳ್ಳುತ್ತದೆ. ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪಧಾ೯ತ್ಮಕ ಮನೋಭಾವದಿಂದ ಆಟವನ್ನಾಡಿ ಕ್ರೀಡಾ ಪ್ರೇಮಭಾವ ಅರಳಿಸುವುದೇ ಬಹುಮುಖ್ಯ. ಸತತ ಪ್ರಯತ್ನ ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತನೆ ಹೊಂದುತ್ತವೆ. ಕ್ರೀಡಾರಂಗದಲ್ಲಿಂದು ಗ್ರಾಮೀಣ ಪ್ರದೇಶದ…
