Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳದಲ್ಲಿ ಭಗವದ್ಗೀತಾ ಅಭಿಯಾನದ ಪ್ರಶಿಕ್ಷಣ ವರ್ಗ ಭಗವದ್ಗೀತೆ ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ :ಮಣಿ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಧರ್ಮದ ವಿರುದ್ಧವೇ ಧರ್ಮವಾಗಿದೆ ಎಂದು ಮಾಜಿ ವಿಧಾನ ಪರಿಷತ್ತಿನ ಸದಸ್ಯ ಭಗವದ್ಗೀತಾ ಅಭಿಯಾನ ಪ್ರಶಿಕ್ಷಣ ಪ್ರಮುಖ ಅರುಣ ಶಹಾಪೂರ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಶಿರಸಿ, ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ನಡೆಸುತ್ತಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೪ನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಆಯೋಜಿಸಿರುವ ಪ್ರಶಿಕ್ಷಣ ವರ್ಗದಲ್ಲಿ ವರು ಮಾತನಾಡಿದರು.ಭಾಷೆಯ ಸ್ಪಷ್ಟ ಉಚ್ಛಾರಣೆ ಮತ್ತು ಜ್ಞಾನದ ಅಭಿವೃದ್ಧಿಗೆ ಸಂಸ್ಕೃತ ಭಾಷೆಯ ಅಧ್ಯಯನದ ಅವಶ್ಯಕತೆ ಇದೆ. ಆತ್ಮತೃಪ್ತಿಗಾಗಿ ಧರ್ಮದ ಕಾರ್ಯವನ್ನು ಮಾಡಬೇಕಾಗಿದೆ. ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿಯ ಪಾಲನೆ, ಪೋಷಣೆ ಆಗಬಾರದಾಗಿದೆ. ಧರ್ಮವನ್ನು ಸರಿಯಾಗಿ ಅರ್ಥೈಸಿ ನಾವೆಲ್ಲ ನಡೆಯಬೇಕಾಗಿದೆ. ಧರ್ಮದ ಒಳ್ಳೆಯ ಅಂಶಗಳು ಮೈಮನಗಳಲ್ಲಿ ತುಂಬಿಕೊಳ್ಳಬೇಕಾಗಿದೆ. ಭಗವದ್ಗೀತೆಯ ಸಂದೇಶ ಪ್ರತಿಯೊಬ್ಬರ ಮನೆಮನೆಗಳಿಗೆ ತಲುಪಬೇಕಾಗಿದೆ ಎಂದರು.ಪ್ರಶಿಕ್ಷಣ ವರ್ಗ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹೊಟ್ಟೆ ನೋವು ತಾಳದೇ ವಿದ್ಯಾರ್ಥಿನಿಯೊಬ್ಬಳು ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ತಂಗಡಗಿಯ ನೀಲಮ್ಮ ದೇವಸ್ಥಾನದ ಬಳಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಬಾಲಮ್ಮ ಕಮರಿ(೧೮) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮ ದವಳಾಗಿದ್ದ ಬಾಲಮ್ಮ ಇಳಕಲ್‌ದಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಕಳೆದ ಹಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಈಕೆ ಸ೧೪ ರಂದು ಕಾಲೇಜಿಗೆ ಹೋಗಿ ಬರುವದಾಗಿ ಹೇಳಿ ಅಂದು ಮದ್ಯಾಹ್ನ ೧:೩೦ ರ ಸುಮಾರು ತಂಗಡಗಿಯ ನೀಲಮ್ಮ ದೇವಿ ದೇವಸ್ಥಾನದ ಬಳಿ ಬ್ಯಾಗ್ ಮತ್ತು ಚಪ್ಪಲಿ ಬಿಟ್ಟು ನದಿಗೆ ಹಾರಿದ್ದಾಳೆ ಎನ್ನಲಾಗಿದೆ. ಅಂದು ನದಿಗೆ ಹಾರಿದ ಬಾಲಮ್ಮಳ ಶವ ಸ೧೬ ರಂದು ತಾಲೂಕಿನ ಇಂಗಳಗಿಯಲ್ಲಿ ಪತ್ತೆಯಾಗಿದೆ.ಪತ್ತೆಯಾದ ಶವವನ್ನು ಅಗ್ನಿಶಾಮಕ ಸಿಬ್ಬಂದಿಗಳಾದ ಪ್ರಮೋದ ಸುಂಕದ್, ಚಂದ್ರಶೇಖರ ಮಾದರ, ಬಿ.ಬಿ.ನಾಟೆಕಾರ, ನಾಗೇಶ ರಾಠೋಡ, ರಾಜು ರಾಠೋಡ, ವೈ.ಎಸ್.ಗೌಡರ, ಜಾವೇದ, ಕಾರ್ತಿಕ ನಾಟೆಕಾರ, ವಿರುಪಾಕ್ಷಿ, ರಂಗನಗೌಡ, ನಿಂಗನಗೌಡ ಹೊರತೆಗೆದು ಪೊಲೀಸರಿಗೆ ಹಸ್ತಾಂತರಿಸಿದರು.ಘಟನೆಗೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಬಡಾವಣೆಯ ಪಂಜುರ್ಲಿ ಹೋಟಲ್ ನಲ್ಲಿ ಸೆ.೧೮ ರಂದು ಬೆಳಿಗ್ಗೆ ೧೦ಗಂಟೆಗೆ ವಿಶ್ವ ಪೌಷ್ಟಿಕ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಕಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮತಿಯ ಸದಸ್ಯ ಕಾರ್ಯದರ್ಶಿಗಳಾದ ಸಂಪತ್ತಕುಮಾರ ಬಳೂಳಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಹಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಅಪರ ಸರ್ಕಾರ ವಕೀಲ ಎಚ್.ಎಲ್.ಸರೂರ, ಕಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ತಹಶೀಲ್ದಾರ ಬಲರಾಮ ಕಟ್ಟಿಮನಿ, ತಾಲೂಕು ಪಂಚಾಯತ ಇಓ ನಿಂಗಪ್ಪ ಮಸಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ…
ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ‘ಸ್ವಚ್ಛತೆಯೇ ಸೇವೆ’ ಅಭಿಯಾನದಡಿ ಪಟ್ಟಣ ಪಂಚಾಯತ ಹಾಗೂ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಸ್ವಭಾವ ಸ್ವಚ್ಛತೆ ಸಂಸ್ಕಾರ ಸ್ವಚ್ಛತೆ ಎಂಬ ಕಾರ್ಯಕ್ರಮ ನಡೆಯಿತು.ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಬೂದಹಾಳ ಮಾತನಾಡಿ, ಸ್ವಚ್ಛತೆ ಹಾಗೂ ಶುಚಿತ್ವಕ್ಕೆ ಎಲ್ಲರೂ ಶ್ರಮಿಸಬೇಕು. ಮತ್ತು ಸಾರ್ವಜನಿಕರಿಗೆ ವಿವಿಧ ಬಗೆಯ ಅಭಿಯಾನಗಳ ಮೂಲಕ ಅರಿವು ಮೂಡಿಸಬೇಕು. ಎಲ್ಲರೂ ತಮ್ಮ ತಮ್ಮ ಮನೆಯ ಸುತ್ತಲೂ ಇರುವ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಾನವ ಸರಪಳಿ ಮಾಡಿ ಘೋಷವಾಕ್ಯಗಳನ್ನು ಹೇಳಲಾಯಿತು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರುದ್ರಗೌಡ ಸೋಲಾಪುರ್, ಅರೋಗ್ಯ ನೀರಿಕ್ಷಕ ಬಸವರಾಜ್ ಕಾಜಿಬಿಳಗಿ, ಶಿಕ್ಷಕರಾದ ಎಸ್. ಎ. ಗಂಗನಗೌಡರ, ಮಹಮ್ಮದ್ ಪಟೇಗಾರ್, ಹರೀಶ್ ಬಬಲೇಶ್ವರ್, ಉಮಾ ಜಾಧವ, ಗಂಗಾ ಕೋಲಕಾರ್, ಗೀತಾ ಕೋಲಾಕಾರ ಸ್ವೇತಾ ಇನಾಮದಾರ್, ಸೌಭಾಗ್ಯ ಮಿರ್ಜಿ ಹಾಗೂ ಪೌರಾಕಾರ್ಮಿಕರು ಭಾಗವಹಿಸಿದ್ದರು.
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 77 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಪ್ರಿನ್ಸಿಪಾಲ್ ಪ್ರೊ ನಾಗಪ್ಪ ಚಾವಲ್ಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಒಕ್ಕೂಟಕ್ಕೆ ಹೈದ್ರಾಬಾದ್ ಕರ್ನಾಟಕ ಅಥವಾ ಕಲ್ಯಾಣ ಕರ್ನಾಟಕದ ಬೀದರ್, ಕಲಬುರ್ಗಿ, ರಾಯಚೂರು, ಬಳ್ಳಾರಿ ಕೊಪ್ಪಳ, ಯಾದಗಿರಿ, ವಿಜಯನಗರ ಏಳು ಜಿಲ್ಲೆಗಳನ್ನು ವಿಲೀನಗೊಳಿಸಲು ಶ್ರಮಿಸಿದ ಸಮಸ್ತ ಹೋರಾಟಗಾರ ತ್ಯಾಗ ಬಲಿದಾನವನ್ನು ಸ್ಮರಿಸಿ, ಗೌರವಪೂರ್ವಕ ನಮನಗಳನ್ನು ಸಲ್ಲಿಸಿದರು.ಇದೇ ವೇಳೆ ಉಪನ್ಯಾಸಕರಾದ ಡಾ ಸಿದ್ದಲಿಂಗ ರಾಠೋಡ್, ಗುಲಾಂ ಮೈಹಿಬೂಬಸಾಬ್, ಡಾ ಬಸಮ್ಮ ಎಸ್, ನಸ್ರೀನ್ ತಾಜ್, ಡಾ ಪೂಜ್ಯಾ ಹೊನ್ನುಟಗಿ, ಡಾ ಯಂಕನಗೌಡ ಎಸ್, ಶರಣಪ್ಪ ನಡಕೂರ, ಸಂಗಪ್ಪ ಪಟ್ಟಣಕರ್, ಮಾಸುಮ ಅಲಿ ನಾಶಿ, ಮಾಳಪ್ಪ, ಹರ್ಷದ್, ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಇದೇ ಸಂದರ್ಭದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯ ಅಂಗವಾಗಿ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.
ರಾಜ್ಯಮಟ್ಟದ ಮಕ್ಕಳ ಕಥಾ ಕಮ್ಮಟ ಉದ್ಘಾಟಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ಉದಯರಶ್ಮಿ ದಿನಪತ್ರಿಕೆ ಧಾರವಾಡ: ಬಾಲಮಂದಿರದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರೀಕ ಸಮಾಜದಲ್ಲಿರುವ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ, ಆ ಒಂದು ಪ್ರಯತ್ನದ ಭಾಗವಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಮಕ್ಕಳ ವ್ಯಕ್ತಿತ್ವ ಅರಳಲಿ ಎನ್ನುವ ಸದಾಶಯದಿಂದ ರಾಜ್ಯಮಟ್ಟದ ಮಕ್ಕಳ ಕಥಾ ಕಮ್ಮಟವನ್ನು ನಾಡಿನ ಬಾಲ ಮಂದಿರದ ಮಕ್ಕಳಿಗಾಗಿ ಐದು ದಿನಗಳ ಕಾಲ ನಿಸರ್ಗದ ಮಡಿಲಲ್ಲಿ ರೂಪಿಸಲಾಗಿದೆ. ಇಂಥ ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ದೊರೆತಿದ್ದು ನನ್ನ ಜೀವನದ ಅಮೃತ ಘಳಿಗೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಮಂಗಳವಾರ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಹಾಗೂ ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಆಶ್ರಯದಲ್ಲಿ ಧಾರವಾಡದ ಸಮೀಪವಿರುವ ಹಳ್ಳಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಚರ್ ಫಸ್ಟ್ ಇಕೋ ವಿಲೇಜ್ ನಲ್ಲಿ ಬಾಲಮಂದಿರ ಮಕ್ಕಳಿಗಾಗಿ ನಡೆಯುತ್ತಿರುವ ರಾಜ್ಯಮಟ್ಟದ ಮಕ್ಕಳ ಕಥಾ…
Udayarashmi kannada daily newspaper
ಉದಯರಶ್ಮಿ ದಿನಪತ್ರಿಕೆ ಚಡಚಣ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದ್ದು, ಮಕ್ಕಳಲ್ಲಿನ ಸೃಜನಶೀಲತೆಯೂ ವೃದ್ಧಿಸುವ ಜತೆಗೆ ವೇದಿಕೆ ಮೇಲಿನ ಭಯ ದೂರ ಮಾಡಲು ಸಹಕಾರಿಯಾಗಿದೆ ಎಂದು ಶಿಕ್ಷಕರ ಸೋಸಾಯಿಟಿ ಅಧ್ಯಕ್ಷ ಎಸ್.ಎಸ್ ಪಾಟೀಲ್ ಅವರು ಹೇಳಿದರು.ಪಟ್ಟಣದ ಶ್ರೀ ಕಲ್ಮೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷ ಣ ಹಾಗೂ ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರಸಮನ್ವಯ ಅಧಿಕಾರಿಗಳ ಕಾರ್ಯಾಲಯ ಚಡಚಣ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಇವರ ಸಹಯೋಗದಲ್ಲಿ ಆಯೋಜಿಸಿದ್ದ, ಚಡಚಣ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಪ್ರತಿಭಾ ಕಾರಂಜಿ, ಮಕ್ಕಳ ಸಂತೆ ಮೇಳ, ಕ್ರೀಡಾಕೂಟ ಸೇರಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರದ ಪ್ರತಿಭೆಯನ್ನು ವ್ಯಕ್ತಪಡಿಸಬೇಕು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ ಖಂಡಿಸಿ ತಾಲೂಕಿನ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಸೆ.೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನೆ ನಡೆಸುವ ಮೂಲಕ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತಿದ್ದು ತಾಲೂಕಿನ ಎಲ್ಲ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಡಿಎಸ್‌ಎಸ್ ಮುಖಂಡರು ಮನವಿ ಮಾಡಿದರು.ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಹರೀಶ ನಾಟೆಕಾರ, ಚನ್ನಪ್ಪ ವಿಜಯಕರ, ತಿಪ್ಪಣ್ಣ ದೊಡಮನಿ ಮತ್ತೀತರರು ಮಾತನಾಡಿ, ಕೂಡಲೇ ಶಾಸಕ ಮುನಿರ‍್ನ ಕುಟುಂಬವನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ಅಲ್ಲಿಯವರೆಗೆ ವಿವಿಧ ದಲಿತಪರ ಸಂಘಟನೆಗಳು ವಿವಿಧ ಹಂತದ ಹೋರಾಟವನ್ನು ಮಾಡಲು ಸಿದ್ಧರಿದ್ದೇವೆ ಎಂದರು.ದಲಿತರ ಮೇಲೆ ಮೇಲಿಂದ ಮೇಲೆ ಶೋಷಣೆಗಳು ನಡೆಯುತ್ತಲೇ ಇವೆ. ಇನ್ನೂ ಸಮಾಜ ಬಹಳ ಪರಿವರ್ತನೆಯಾಗಬೇಕಾಗಿದೆ. ೫ಜಿ ಯುಗದಲ್ಲಿ ಒಬ್ಬ ಶಾಸಕರ ಬಾಯಲ್ಲಿ ಇಂತಹ ಪದಗಳು ಬಳಕೆಯಾಗಿದ್ದು ದುರಾದೃಷ್ಟಕರ. ಈ ವಿಷಯವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾಟ ನಡೆಸುತ್ತಿದ್ದು ತಾಲೂಕಿನ ಎಲ್ಲ ಬಾಂಧವರು ಭಾಗಿಯಾಗುವಂತೆ ಕರೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದಿದ್ದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ.ಸೋಮವಾರ ವಿಜಯಪುರದಲ್ಲಿರುವ ಗೃಹ ಕಚೇರಿಗೆ ಆಗಮಿಸಿದ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ವಿದ್ಯಾರ್ಥಿ ಶ್ರೀಧರ ಬಸವರಾಜ ಕಲ್ಯಾಣಿ ಮತ್ತು ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ವಿದ್ಯಾರ್ಥಿ ಯಮನಪ್ಪ ಕಾಡಪ್ಪ ಮಾದರ ಅವರಿಗೆ ಸಚಿವರು ಎಂ. ಬಿ. ಬಿ. ಎಸ್. ಕೋರ್ಸಿನ ಮೊದಲ ವರ್ಷದ ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ ಮತ್ತು ಊಟದ ಶುಲ್ಕಕ್ಕೆ ಅಗತ್ಯವಾಗಿರುವ ರೂ. 1,29,400 (ಒಂದು ಲಕ್ಷದ 29 ಸಾವಿರದ 400 ರೂಪಾಯಿ) ಹಣದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ.…
