Author: editor.udayarashmi@gmail.com

ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಅರ್ಜಿ | ಸಿಎಂ ಪರ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡನೆ ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್​ ಅರ್ಜಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪ ಕಾಯ್ದಿರಿಸಿದೆ.ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಲಾಗಿದೆ ಮತ್ತು ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಹೇಳಿದೆ.ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್​ ಶೆಟ್ಟಿ ವಾದ ಮಂಡಿಸಿದ್ದಾರೆ. ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್​ ಮನು ಸಿಂಘ್ವಿ ಅವರು ವಾದ ಮಂಡಿಸಿದರು.ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ಇದು ರಾಷ್ಟ್ರಪತಿ ಆಳ್ವಿಕೆಗಿಂತ ಹೆಚ್ಚು ರಾಜಕೀಯಪ್ರೇರಿತ. ಸೆಕ್ಷೆನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು.…

Read More

ವಿಜಯಪುರ: ಇತ್ತಿಚೆಗೆ ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾಗೂ ಡೋಣಿ ನದಿಗಳ ಪ್ರವಾಹದಿಂದಾಗಿ ತೊಗರಿ, ಹತ್ತಿ, ಹೆಸರು, ಉದ್ದು, ಸೂರ್ಯಕಾಂತಿ ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ನೀರಿನಲ್ಲಿ ನಿಂತು ಹಾನಿ ಉಂಟಾಗಿ ರೈತರಿಗೆ ಸಾಕಷ್ಟು ಪ್ರಮಾಣದ ನಷ್ಟವನ್ನು ಉಂಟು ಮಾಡಿದೆ, ಈ ಕುರಿತು ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ಮಾಡಿ ಸರಕಾರದಿಂದ ಹಾಗೂ ವಿಮಾ ಕಂಪನಿಯಿಂದ ನಷ್ಟಗೊಂಡ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಟಿ.ಬೂಬಾಲನ್ ಅವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.ಈ ವೇಲೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡಿ, ಕಳೆದ ೨-೩ ವರ್ಷದ ಬರಗಾಲದ ನಷ್ಟದಿಂದ ಆಚೆ ಬರದೇ ಸಾಲದ ಸುಳಿಯಲ್ಲಿ ಒದ್ದಾಡುತ್ತಿರುವ ರೈತ ಕುಲಕ್ಕೆ ಈ ವರ್ಷವಾದರೂ ಅನುಕೂಲವಾದೀತು ಎಂಬ ಆಶಾಭಾವನೆಯೊಂದಿಗೆ ಸಾಲಸೋಲ ಮಾಡಿ ಜಮೀನು ಹದ ಮಾಡಿ ಬಿತ್ತನೆ ಬೀಜ, ಗೊಬ್ಬರ ಹಾಗೂ ಕೀಟ ನಾಶಕ ತಂದು ಬಿತ್ತನೆ ಮಾಡಿರುವ ರೈತರಿಗೆ ಈ ಮಳೆ ಸಾಕಷ್ಟು ನಷ್ಟ…

Read More

ಗ್ರಾಮಸ್ಥರ ಪರದಾಟ | ರಸ್ತೆಗಿಳಿಯದ ವೃದ್ಧರು | ಕ್ಯಾರೆ ಎನ್ನದ ಅಧಿಕಾರಿಗಳು ಉದಯರಶ್ಮಿ ದಿನಪತ್ರಿಕೆ ಮಲ್ಲಿಕಾಜು೯ನ ಎನ್.ಕೆಂಭಾವಿಬ್ರಹ್ಮದೇವನಮಡು: ರಸ್ತೆ ತುಂಬ ಕೆಸರು, ಗ್ರಾಮಸ್ಥರು, ಶಾಲೆಗೆ ತೆರಳುವ ಮಕ್ಕಳ ಪರದಾಟ, ವೃದ್ಧರಿಗೆ ಪ್ರಾಣಸಂಕಟ, ಹಳ್ಳಿ ತುಂಬ ಆವರಿಸಿದ ರೋಗಗಳ ಭೀತಿ..ಇದು ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಸದ್ಯದ ಚಿತ್ರಣ. ವಿಜಯಪುರ ಜಿಲ್ಲೆಯ ಗಡಿಯಲ್ಲಿರುವ, ಸಿಂದಗಿ ತಾಲೂಕು ವ್ಯಾಪ್ತಿಯ ಈ ಗ್ರಾಮದಲ್ಲಿ ೫೦೦ಕ್ಕೂ ಹೆಚ್ಚು ಮನೆಗಳಿವೆ. ೩ ಸಾವಿರಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ. ಎಲ್ಲ ಪ್ರಮುಖ ರಸ್ತೆಗಳು ಕೆಸರು ಗದ್ದೆಗಳಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರುವುದೇ ದುಸ್ತರವಾಗಿದೆ. ವೃದ್ಧರಂತೂ ಮನೆಯಿಂದ ಹೊರಗೆ ಕಾಲಿಡದ ಸ್ಥಿತಿ ನಿರ್ಮಾಣವಾಗಿದೆ.ಪಂಚಾಯಿತಿಯಿಂದ ಯುಕೆಪಿ ಕಚೇರಿವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದೇ ರಸ್ತೆಯಲ್ಲಿ ರಾಜೀವಗಾಂಧಿ ಸ್ಮಾರಕ ಪ್ರೌಢಶಾಲೆ ಹಾಗೂ ಸರಸ್ವತಿ ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ನಿತ್ಯ ೩೦೦ಕ್ಕೂ ಹೆಚ್ಚು ಮಕ್ಕಳು ಕೆಸರುಮಯ ರಸ್ತೆ ದಾಟಿಕೊಂಡು ಹೋಗುವುದು ಕಷ್ಟಸಾಧ್ಯವಾಗಿದೆ. ಈ ರಸ್ತೆಯಲ್ಲಿ ನಿತ್ಯ ಮಕ್ಕಳು ಆಯತಪ್ಪಿ ಬೀಳುವುದು ಸಾಮಾನ್ಯವಾಗಿದೆ. ಪ್ರತಿ ಮನೆಗೂ ನೀರು…

Read More

ಎಸ್‌ಎಸ್‌ಎಲ್‌ಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವರ್ಷದೊಳಗಿನ ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ಉದ್ದೇಶದಿಂದ ಮತ್ತು ಮಕ್ಕಳಲ್ಲಿ ಆತ್ಮ ವಿಶ್ವಾಸವನ್ನು ಉತ್ತೇಜಿಸುವುದು, ಅವರ ವಿಶೇಷ ಪ್ರತಿಭೆಯನ್ನು ಗುರುತಿಸುವುದು, ಜಾತಿ, ವರ್ಣ, ಪಂಥದ ಭೇದವಿಲ್ಲದೆ ಎಲ್ಲ ವರ್ಗದವರಿಗಾಗಿ ಕಾರ್ಯಕ್ರಮಗಳನ್ನು ರಚಿಸುವುದೆ ಬಾಲ ವಿಕಾಸ ಅಕಾಡೆಮಿಯ ಉದ್ದೇಶವಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವಿಜಯಪುರ ನಗರ ಹಾಗೂ ಶಾಂತಿನಿಕೇತನ ಶಾಲೆಯ ಸಂಯುಕ್ತಾಶ್ರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸುಧಾರಣೆಗಾಗಿ ‘ಎಸ್‌ಎಸ್‌ಎಲ್‌ಸಿ ಸಾಹಿತ್ಯ ಪರಿಚಯಾತ್ಮಕ ಕಾರ್ಯಾಗಾರ’ ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ಶಿಕ್ಷಣದಲ್ಲಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಜತೆಗೆ ವಿನೂತನ ಪ್ರಯೋಗಕ್ಕೂ ಮುಂದಾಗಿದ್ದಾರೆ. ಶಿಕ್ಷಣ ಕ್ಷೇತ್ರ ಸದಾ ಜಾಗೃತವಾಗಿರಬೇಕು. ಮಕ್ಕಳಲ್ಲಿ ವೈಜ್ಞಾನಿಕ ಜ್ಞಾನದ ಪ್ರಜ್ಞೆಯನ್ನು ಬೆಳೆಸಲು ವಾತಾವರಣವನ್ನು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: 40 ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಇಲ್ಲದೆ ಅಜಾತ ಶತ್ರು ಆಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಯೋಜನೆಗಳು ಸಂಸದ ರಮೇಶ್ ಜಿಗಜಿಣಿಗಿ ತಂದಿದ್ದಾರೆ. ಇಂತಹ ಒಳ್ಳೆಯ ಸಜ್ಜನ ವ್ಯಕ್ತಿಯ ಬಗ್ಗೆ ಮಾತನಾಡುವುದು ಶಾಸಕ‌ ಯಶವಂತರಾಯಗೌಡ ಪಾಟೀಲರಿಗೆ ತರವಲ್ಲ. ಹಿರಿಯರನ್ನು ಗೌರವಿಸುವ ಗುಣ ನಿಮ್ಮಲ್ಲಿ ಇರದಿದ್ದರೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರು ಪದೆ ಪದೆ ರಾಜಕಾರಣದಲ್ಲಿ ಬೆರೆಸುವುದು ಸರಿಯಲ್ಲ. ಹಿರಿಯ ರಾಜಕಾರಣಿ ಬಗ್ಗೆ ಅಗೌರವವಾಗಿ ಮಾತನಾಡಿರುವುದು ಖಂಡಿಸುತ್ತೇವೆ ಎಂದು ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಆರೋಪಿಸಿದರು.ತಾಲೂಕಿನ ನಾದ 110 ಕೆ.ವ್ಹಿ ವಿದ್ಯತ್ ವಿತರಣಾ ಕೇಂದ್ರ ಉದ್ಘಾಟನಾ ಸಮಾರಂದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಂಸದ ರಮೇಶ ಜಿಗಜಿಣಗಿಯವರ ಬಗ್ಗೆ ಹಗುರುವಾಗಿ ಮಾತನಾಡಿರುವುದು ಶೋಭೆಯಲ್ಲ. ಸಂಸದರ ಅಭಿವೃಧ್ಧಿ ಕಾರ್ಯಗಳ ಬಗ್ಗೆ ಜನತೆಗೆ ಗೊತ್ತಾಗಬಾರದು ಎಂಬ ದುರುದ್ದೇಶ. ಮತಕ್ಷೇತ್ರದಲ್ಲಿ ಕೇವಲ‌ ತಮ್ಮ ಹೆಸರೇ ಇರಬೇಕೆಂಬ‌ ಆಸೆಯಿಂದ ಹಿರಿಯ ರಾಜಕಾರಣಿ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.ನಾ-ಎಂಬ ಧ್ಯೇಯ…

Read More

ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ತಾಲೂಕುಮಟ್ಟದ ಮುಖ್ಯಶಿಕ್ಷಕರ ಸಭೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಕಡಿಮೆ ಬರುತ್ತದೆ ಎಂಬ ಹಣೆಪಟ್ಟಿಯಿಂದ ಹೊರಬರಲು ಶಿಕ್ಷಕ ಬಾಂಧವರು ಬೋಧನೆಗೆ ವಿಶೇಷ ಒತ್ತು ನೀಡಬೇಕೆಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ (ಅಭಿವೃದ್ಧಿ) ಉಮಾದೇವಿ ಸೊನ್ನದ ಹೇಳಿದರು.ಪಟ್ಟಣದ ಬಸವೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿರುವ ಭಾರತ ಸೇವಾದಳದ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾಲಾ ಶಿಕ್ಷಣ ಇಲಾಖೆ, ಡಯಟ್ ಸಹಯೋಗದಲ್ಲಿ ೨೦೨೪-೨೫ ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಬಸವನಬಾಗೇವಾಡಿ ತಾಲೂಕುಮಟ್ಟದ ಮುಖ್ಯಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಆಗಾಗ ಪಾಲಕ-ಪೋಷಕರ ಸಭೆ ಮಾಡುವ ಮೂಲಕ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ವಿಶೇಷ ತರಬೇತಿ, ಗುಂಪು ಚರ್ಚೆ, ವಿದ್ಯಾರ್ಥಿಗಳ ವೈಯಕ್ತಿಕ ಕಡತ ನಿರ್ವಹಣೆ, ಪರಿಹಾರ ಬೋಧನೆ, ವಿದ್ಯಾರ್ಥಿಗಳ ಗುಂಪು ರಚಿಸಿ ಶಿಕ್ಷಕರಿಗೆ ದತ್ತು ನೀಡುವುದು, ಸ್ಪಷ್ಟ ಓದು, ಶುದ್ಧ ಬರಹ, ಸರಳ ಗಣಿತ ಅಂಶಕ್ಕೆ ಒತ್ತು ನೀಡಬೇಕು.…

Read More

ಉದಯರಶ್ಮಿ ದಿನಪತ್ರಿಕೆ ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಗುಬ್ಬೇವಾಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ ೨೦೨೩-೨೪ನೇ ಸಾಲಿನ ವಾಷಿ೯ಕ ಸವ೯ ಸಾಧಾರಣ ಸಭೆ ಆ.೧೩ ರಂದು ಬೆಳಗ್ಗೆ ೧೧ ಗಂಟೆಗೆ ಸಂಘದ ಕಛೇರಿಯಲ್ಲಿ ಆಯೋಜಿಸಲಾಗಿದೆ.ಸಂಘದ ಅಧ್ಶಕ್ಷ ಶಿವಶರಣ ಕೊಂಡಗೂಳಿ ಅಧ್ಶಕ್ಷತೆ ವಹಿಸುವರು ಎಂದು ಮುಖ್ಶಕಾಯ೯ನಿವ೯ಣಾಧಿಕಾರಿ ರಮೇಶ ಇಜೇರಿ ತಿಳಿಸಿದ್ದಾರೆ.

Read More

ಡಿಜೆಗೆ ಕುಣಿದು ಸಂಭ್ರಮಿಸಿದ ಯುವಕರು | ವಿವಿಧ ಸ್ತಬ್ದ ಚಿತ್ರಗಳು | ಜಾನಪದ ಕಲಾದರ್ಶನ | ಕೋಲಾಟ – ಜಾಂಜ್ ಉದಯರಶ್ಮಿ ದಿನಪತ್ರಿಕೆ ಗುರು ಹಿರೇಮಠ, ದೇವನಗಾಂವಆಲಮೇಲ: ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಕಿವಿಗಡಚಿಕ್ಕುವ ಡಿಜೆ ದ್ವನಿಯಲ್ಲಿ ಕೇಕೆ ಹಾಕಿ ಹಾಡಿಗೆ ಕುಣಿದು ಸಂಭ್ರಮಿಸಿದ ಯುವಕರು, ವಿವಿದ ಸ್ತಬ್ದ ಚಿತ್ರಗಳು, ಜಾನಪದ ಕಲಾದರ್ಶನ, ಮಕ್ಕಳ ಕೋಲಾಟ, ಜಾಂಜ್ ಗಮನ ಸೆಳೆದವು.ಮಹಾಭಾರತ ಮತ್ತು ರಾಮಯಣ ಹಾಗೂ ಹೆಸರಾಂತ ದೇವರ ಅವತಾರಗಳು, ದೇಶದ ರಾಜ ಮಹಾರಜರ, ಪಸ್ತುತ ಸನ್ನಿವೇಶಗಳಿಗೆ ತಕ್ಕಂತೆ ಸ್ತಬ್ದಚಿತ್ರ, ರೂಪಕಗಳನ್ನು ನಿರ್ಮಾಣ ಮಾಡಲಾಗಿತ್ತು. ಪಟ್ಟಣದಲ್ಲಿ ಸುಮಾರು ೧೫ ಕ್ಕೂ ಹೆಚ್ಚು ಕಡೆಗಳಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದ ಗಣೇಶ ೫ನೇ ದಿನಕ್ಕೆ ಏಕ ಕಾಲಕ್ಕೆ ಸಾಲಾಗಿ ವಿಸರ್ಜನೆಗೆ ಹೋಗುವದು. ಎಲ್ಲ ಗಜಾನನ ಮಂಡಳಿಯವರು ಲಕ್ಷಾನುಗಟ್ಟಲೆ ಖರ್ಚು ಮಾಡಿ ಸ್ತಬ್ದಚಿತ್ರಗಳು ತಯಾರಿಸಿ ಮೈಸೂರು ದಸರಾ, ಪುಣೆ ಮಾದರಿಯಂತೆ ಗೋಚರಿಸಿ ನೋಡುಗರನ್ನು ಮಗ್ನರನ್ನಾಗಿ ಮಾಡಿತು.ಇಲ್ಲಿನ ಗಣೇಶ ವಿಸರ್ಜನೆ ನೂಡಲು ವಿಜಯಪುರ, ಕಲಬುರ್ಗಿ, ಯಾದಗಿರಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತಾಂತ್ರಿಕ ವಿಭಾಗದಲ್ಲಿ ಒಂದು “ಜ್ಯೂನಿಯರ್ ಇಂಜಿನಿಯರ್ (ವಿದ್ಯುತ್)” ಹಾಗೂ ಆರೋಗ್ಯ ಕೇಂದ್ರದ ಅಂಬ್ಯುಲನ್ಸ್ ವಾಹನಕ್ಕೆ ಒಂದು “ವಾಹನ ಚಾಲಕ” ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. ೧೭ ರಂದು ಮಧಾಹ್ನ ೦೩:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ಏರ್ಪಡಿಸಲಾಗಿರುವ ನೇರ ಸಂದರ್ಶನಕ್ಕೆ ಮೂಲ ದಾಖಲಾತಿಗಳು ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬಹುದು.ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾನೂನು ಸಲಹೆಗಾರ:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಕಾನೂನು ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದೇ ಸೆ.೧೭ ರಂದು ವಿವಿಯ ಆಡಳಿತ ಭವನದ ಸಿಂಡಿಕೇಟ್ ಹಾಲ್‌ನಲ್ಲಿ ಬೆಳಿಗ್ಗೆ ೧೧.೦೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಸಂದರ್ಶನಕ್ಕೆ…

Read More

ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಕುರಿತು ಮಾಧ್ಯಮ ಕಾರ್ಯಗಾರದ ಸಮಾರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತ ಮಾಧ್ಯಮ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರುಅಭಿವೃದ್ಧಿ ಮತ್ತು ಸಕಾರಾತ್ಮಕ ವಿಷಯಗಳ ಬಗ್ಗೆ ಹೆಚ್ಚಿನ ಸುದ್ಧಿಗಳನ್ನು ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರುವ ಅಭಿಯಾನಗಳ ಮೂಲಕ ವರದಿ ಮಾಡಬೇಕು. ವಿಶೇಷವಾಗಿ, ಪತ್ರಕರ್ತರು ಮಕ್ಕಳ ಧ್ವನಿಯಾಗಿ, ಅವರ ಸಮಸ್ಯೆಗಳನ್ನು, ಅಭಿರುಚಿಗಳನ್ನು, ಮತ್ತು ಸಾಧನೆಗಳನ್ನು ಜನರ ಮುಂದೆ ತರುವುದರಲ್ಲಿ ಪ್ರಮುಖ ಪಾತ್ರ…

Read More