Author: editor.udayarashmi@gmail.com

ಕಲಕೇರಿ: ೨೦೨೪-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯ ಪೂರ್ವಭಾವಿ ಸಭೆಯನ್ನು ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ಎ ಕೆ ಸಿರಸಗಿ ಪದವಿಪೂರ್ವ ಕಾಲೇಜಿನಲ್ಲಿ ಸೆ.೧೪ ರಂದು ಶನಿವಾರ ಬೆಳಿಗ್ಗೆ ೧೧.೩೦ ಗಂಟೆಗೆ ಕರೆಯಲಾಗಿದ್ದು, ಸದರಿ ಸಭೆಗೆ ವಿಜಯಪುರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ತಮ್ಮ ಕಾಲೇಜಿನ ಕುಸ್ತಿಪಟುಗಳ ಯಾದಿ ಸಮೇತ ತಮ್ಮ ಕಾಲೇಜಿನ ಧೈಹಿಕ ಉಪನ್ಯಾಸಕರ ಜೊತೆಗೂಡಿ ಪೂರ್ವಭಾವಿ ಸಭೆಗೆ ಹಾಜರಾಗಬೆಕೆಂದು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗಳ ಸಂಚಾಲಕ ಶಾಂತು ದುರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ರೀಡೆ ಬದುಕಿನ ಅವಿಭಾಜ್ಯ ಅಂಗ. ಕ್ರೀಡೆಯಿಂದ ಸದೃಡ ಆರೋಗ್ಯ, ಸದೃಡ ಬದುಕು, ಸದೃಡ ದೇಶ ಹಾಗೂ ದೇಶದ ಕೀರ್ತಿ ಪ್ರಪಂಚದಲ್ಲಿ ಹೆಚ್ಚಿಸಬಹುದು ಎಂದು ಗ್ರಾಮೀಣ ಠಾಣಾ ಸಿಪಿಐ ಎಮ್ ಎಮ್ ಡಪ್ಪಿನ ಹೇಳಿದರು.ಬುಧವಾರ ಪಟ್ಟಣದ ಎಕ್ಸಲೆಂಟ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಇಂಡಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಕ್ಷಕರು ಹಾಗೂ ಪಾಲಕರು ‘ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಿಂಚಲಿ’ ಎಂದು ಶುಭ ಹಾರೈಸಿದರು.ಇಂದಿನ ಯುವಜನಾಂಗ ಕ್ರೀಡೆಗೆ ಹೆಚ್ಚಿನ ಒತ್ತು ನೀಡದೆ ಕೈಯಲ್ಲಿ ಮೋಬಾಯಿಲ್ ಹಿಡಿದುಕೊಂಡು ಅದನ್ನು ನೋಡುತ್ತ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಹಿಂದಿನಂತೆ ಎಲ್ಲರೂ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಅಂದಾಗ ಮಾತ್ರ ನಿಮ್ಮ ಶಾರೀರಿಕ ಮಾನಸಿಕ ಜೀವನ ಉತ್ತಮವಾಗಿರಲು ಸಾಧ್ಯ ಎಂದರು.ಸಂಸ್ಥೆಯ ಅಧ್ಯಕ್ಷ ಎಸ್.ಬಿ.…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನಲ್ಲಿ ಸರಕಾರಿ ಶಾಲೆಗಳಿಗೆ ಸಂಬಂಧಿಸಿದ ಆಸ್ತಿಗಳಿಗೆ ಕಾನೂನು ಭದ್ರತೆ ಕಲ್ಪಿಸುವ ಕಾರ್ಯಕ್ಕೆ ತಾಲೂಕಾ ಆಡಳಿತ ಮುಂದಾಗಿದ್ದು ಈ ವರ್ಷದಿಂದ ಶಾಲೆಗಳ ಆಸ್ತಿಗಳಿಗೆ ಇ ಸ್ವತ್ತು ಮಾಡುವ ಕುರಿತು ಕಂದಾಯ ಉಪ ವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಎಸಿ ಸಬಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ಗ್ರಾಮದ ಹೊರಗೆ ಇರುವ ಶಾಲಾ ಆಸ್ತಿಗೆ ಆರ್.ಟಿ.ಸಿ ಮಾಡಬೇಕು ಮತ್ತು ಗ್ರಾಮದ ಒಳಗೆ ಇರುವ ಸರಕಾರಿ ಶಾಲೆಯ ಆಸ್ತಿಗೆ ಇ ಸ್ವತ್ತು ಮಾಡಬೇಕು ಎಂದರು.ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಅಲಗೂರ ಮಾತನಾಡಿ, ಸರಕಾರಿ ಶಾಲೆಗಳ ನಿರ್ಮಾಣಕ್ಕಾಗಿ ಹಿಂದೆ ಸಾಕಷ್ಟು ದಾನಿಗಳು ಜಮೀನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಖಾತೆ ಮಾಡಿಸಿಕೊಳ್ಳಲು ಮುಂದಾಗಿರಲಿಲ್ಲ. ಇದರಿಂದ ದಾನಿಗಳ ವಂಶಸ್ಥರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಶಾಲೆಯ ಜಾಗವನ್ನು ಮರಳಿ ಪಡೆಯುವಂತಾಗಿತ್ತು.ಕೊನೆಗೂ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ತಾಲೂಕಿನಲ್ಲಿರುವ ಶಾಲೆ ಆಸ್ತಿಗಳ ಇ ಸ್ವತ್ತು ಅಂದೋಲನ ಆರಂಭಿಸಿದೆ. ಅದರಂತೆ ಕೇವಲ ಒಂದು ವರ್ಷದ ಅವಧಿಯಲ್ಲಿ ಶಾಲೆಗಳ ಆಸ್ತಿಗಳನ್ನು ಖಾತೆ ಮಾಡುವ ಮೂಲಕ ಕಾನೂನು ಭದ್ರತೆ…

Read More

ಅಧ್ಯಕ್ಷರಾಗಿ ಮೆಹಬೂಬ ಗೊಳಸಂಗಿ, ಉಪಾಧ್ಯಕ್ಷರಾಗಿ ಪ್ರೀತಿ ದೇಗಿನಾಳ ಆಯ್ಕೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಭಾರೀ ಕುತೂಹಲ ಕೆರಳಿಸಿದ್ದ ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷರಾಗಿ ಪ್ರೀತಿ ದೇಗಿನಾಳ ಆಯ್ಕೆಯಾಗಿದ್ದಾರೆ.ಒಟ್ಟು ೨೩ ಸದಸ್ಯರ ಪೈಕಿ ಬಿಜೆಪಿಯ ೮, ಕಾಂಗ್ರೆಸ್ ನ ೮, ಜೆಡಿಎಸ್ ನ ೨, ಪಕ್ಷೇತರ ೫ ಸದಸ್ಯರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹೆಬೂಬ ಗೊಳಸಂಗಿ, ಬಸವರಾಜ ಮುರಾಳ, ರಿಯಾಜ ಢವಳಗಿ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರೀತಿ ದೇಗಿನಾಳ, ಭಾರತಿ ಪಾಟೀಲ, ಸಹನಾ ಬಡಿಗೇರ ಕ್ರಮವಾಗಿ ನಾಮಪತ್ರ ಸಲ್ಲಿಸಿದ್ದರು.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಸವರಾಜ ಮುರಾಳ, ತಮ್ಮ ನಾಮಪತ್ರವನ್ನು ಹಿಂಪಡೆದರು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಉಪಾಧ್ಯಕ್ಷ ಸ್ಥಾನಕ್ಕೆ ಮೂವರು ಚುನಾವಣಾ ಕಣದಲ್ಲಿ ಉಳಿದಿದ್ದರು.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿದ್ದ ಮಹೆಬೂಬ ಗೊಳಸಂಗಿ ಹಾಗೂ ರಿಯಾಜ ಢವಳಗಿ ಇವರಿಬ್ಬರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪಕ್ಷೇತರ ಸದಸ್ಯ ರಿಯಾಜ ಢವಳಗಿ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರು ನಾಮ ಪತ್ರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರತಿವರ್ಷದಂತೆ ಈ ವರ್ಷವು ಸಹ ನೆಚ್ಚಿನ ಶಿಕ್ಷಕರನ್ನು ನೆನೆದು, ಅವರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ ಎಲ್ಲವನ್ನೂ ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನವೇ ಶಿಕ್ಷಕರ ದಿನ ಎಂದು ಸಂಸ್ಥೆಯ ನಿರ್ದೇಶಕ ಸಂತೋಷ ಫಾದರ್ ಹೇಳಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಸಂತ ಮದರ್ ತೆರೆಸಾ ದಿನ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನ, ಕೌಶಲ್ಯ ಮಟ್ಟ, ಆತ್ಮ ವಿಶ್ವಾಸವನ್ನು ಸುಧಾರಿಸಲು ಸಹಾಯ ಮಾಡುವ ಶಿಕ್ಷಕರನ್ನು ನಾವು ಎಷ್ಟೂ ಸ್ಮರಿಸಿದರು ಸಾಲದು. ವರ್ಷಕ್ಕೊಮ್ಮೆ ಸೆ.೦೫ರಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಶಿಕ್ಷಣದಲ್ಲಿ ಗುರುಗಳ ಪಾತ್ರ ಬಹಳ ಮುಖ್ಯವಾಗಿದೆ. ಶಿಕ್ಷಕರನ್ನು ಗೌರವದಿಂದ ಸಮಾಜ ಅವರನ್ನು ಕಾಣಬೇಕಾಗಿದೆ. ಜೊತೆಗೆ ಸಂತ ಮದರ್ ತೆರೇಸಾ ಅವರು ಸುಮಾರು ೪೫ ವರ್ಷಗಳಿಗೂ ಹೆಚ್ಚು ಕಾಲ ಬಡ ರೋಗಿಗಳ ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡಿದ್ದರು.…

Read More

ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಹಕ್ಕುಗಳು ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಿಗೆ ಜಾತಿ, ಪಂಥ, ಬೇಧವಿಲ್ಲ. ಕೇವಲ ಸರ್ಕಾರಿ ಸೌಲಭ್ಯಗಳ ಮೂಲಕ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯವಿಲ್ಲ. ಪ್ರೀತಿ, ಮಮತೆಯಿಂದ ಮಾತ್ರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವಿಜಯಪುರ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಹಾಗೂ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವರುಣಾ ಮೆಟಗಾರ, ಅಪೂರ್ವಾ ಅಡಕಿ, ದಿವ್ಯಾಶ್ರೀ ಬೋರಾವತ, ಮೇಘಾ ಹಳ್ಳೆಪ್ಪಗೋಳ, ಸುಶೀಲಾ ಅಂಗಡಿ, ವಿದ್ಯಾಶ್ರೀ ನಾಯಕ, ಗೀತಾಂಜಲಿ ಬೂದಿಹಾಳ, ವೇದಾ ಬಾಗಲಕೋಟ, ಸುಚಿತ್ರಾ ಗುಗ್ಗರಿ, ಸೃಷ್ಟಿ ಕಲಕೇರಿ, ರಿದ್ಧಿ ಬೋರಾಣಾ ಭಾಗವಹಿಸಿ ಥ್ರೋಬಾಲ್ ಗುಂಪು ಆಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಕಬಡ್ಡಿ ಹಾಗೂ ವಾಲಿಬಾಲ್‌ನಲ್ಲಿ ದ್ವಿತಿಯ ಸ್ಥಾನ ಪಡೆದಿದ್ದಾರೆ.ಸಿಂದಗಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯ ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಭಾಷಣ ಸ್ಪರ್ಧೆಯಲ್ಲಿ ಅಪೇಕ್ಷಾ ಹುಗ್ಗಿ ಪ್ರಥಮ, ಅರೇಬಿಕ್ ಧಾರ್ಮಿಕ ಪಠಣದಲ್ಲಿ ರಪತ್‌ಕೌಸರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದಲ್ಲಿ ಅಲ್ಲಲ್ಲಿ ಕೊಳಚೆ ಪ್ರದೇಶಗಳಿವೆ, ಅವುಗಳನ್ನು ಸ್ವಚ್ಚಗೊಳಿಸುವದು ಮತ್ತು ಕಾಯಿಪಲ್ಲೆ, ಹಣ್ಣು ಮಾರುಕಟ್ಟೆಯನ್ನು ಮೆಗಾ ಮಾರುಕಟ್ಟೆಯ ಕೆಳಗಡೆ ಆಯೋಜಿಸಲು ಯೋಜನೆಯೊಂದನ್ನು ರೂಪಿಸಲಾಗುವದು ಎಂದು ಎಸಿ ಅಬೀದ್ ಗದ್ಯಾಳ ಮತ್ತು ಪುರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಜಂಟಿಯಾಗಿ ಹೇಳಿದರು.ಬುಧವಾರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿದ ಮೆಗಾ ಮಾರುಕಟ್ಟೆಗೆ ಮತ್ತು ಅದರ ಪಕ್ಕದಲ್ಲಿಯ ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.ಮೆಗಾ ಮಾರುಕಟ್ಟೆಯ ಎದುರಿಗೆ (ಇಂಡಿ ಬಸ್ ನಿಲ್ದಾಣದಿಂದ ಸ್ಟೇಶನ್ ರಸ್ತೆಗೆ) ಇರುವ ಮುಖ್ಯ ರಸ್ತೆಗೆ ಮಾರ್ಗ ಕಲ್ಪಿಸಿಕೊಟ್ಟು ಮಾರುಕಟ್ಟೆಯ ಕೆಳಗಡೆ ನಿರ್ಮಿಸಲು ಉದ್ದೇಶಿಸಿರುವ ಕಾಯಿಪಲ್ಲೆ, ಹಣ್ಣು ಮಾರುಕಟ್ಟೆಗೆ ಹೋಗಿಬರಲು ಮೆಗಾ ಮಾರುಕಟ್ಟೆಗೆ ಇನ್ನೂ ಮೂರು ಕಡೆ ಹೆಬ್ಬಾಗಿಲು ನಿರ್ಮಿಸುವದು, ವಾಹನಗಳ ನಿಲುಗಡೆಗೆ ವ್ಯವಸ್ಥೆ, ಕೊಳಚೆ ಪ್ರದೇಶ ಸ್ವಚ್ಚಗೊಳಿಸುವದು, ಹಳೆಯ ಸರಕಾರಿ ಆಸ್ಪತ್ರೆಯಲ್ಲಿರುವ ಹಳೆಯ ಕಟ್ಟಡಗಳನ್ನು ನೆಲಸಮಗೊಳಿಸಿ ಮೆಗಾ ಮಾರುಕಟ್ಟೆಗೆ ಕಂಪೌಂಡ್ ಗೋಡೆ ನಿರ್ಮಿಸುವದು, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಕೆಲಸಗಳನ್ನು ಶೀಘ್ರದಲ್ಲಿಯೇ ಮಾಡಲಾಗುವದು ಎಂದರು.ಈ ವ್ಯವಸ್ಥೆಯಿಂದ ಇಂಡಿ-ಸಿಂದಗಿ, ಇಂಡಿ-…

Read More

ವಿಶ್ವ ರೇಬೀಸ್ ದಿನಾಚರಣೆ | ಪ್ರಾಣಿಜನ್ಯ ರೋಗಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಹುಚ್ಚು ನಾಯಿ ಕಡಿತದ ರೇಬೀಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಆ ದಿಸೆಯಲ್ಲಿ ಜನಜಾಗೃತಿ ವಹಿಸುವುದು ಅತ್ಯಗತ್ಯ ಎಂದು ಜಮಖಂಡಿ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ,ಆರ್.ಬಿ.ನಾಗರಳ್ಳಿ ಹೇಳಿದರು.ಇಲ್ಲಿನ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾ ಪ್ರಾಣಿದಯಾ ಸಂಘ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರಾಣಿಜನ್ಯ ರೋಗಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಾಕು ನಾಯಿಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಬೀದಿ ನಾಯಿಗಳ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ ಜಾಗರೂಕತೆಯಿಂದ ಇರಬೇಕು. ಹುಚ್ಚುನಾಯಿ ರೋಗದ ಹೆಸರು ಕೇಳಿದ ಕೂಡಲೇ ಭಯಬೀತಿ ಆವರಿಸುತ್ತದೆ. ಇದು ಮೈಮನ ನಡುಕು ಹುಟ್ಟಿಸುವ ಪ್ರಾಣಿಜನ್ಯ ರೋಗವಾಗಿದ್ದು ಲಿಸ್ಸಾ ಎಂಬ ವೈರಾಣುವಿನಿಂದ ಹರಡುವ ಮಾರಣಾಂತಿಕ ರೋಗವಾಗಿದೆ. ಒಮ್ಮೆ ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಗಜಾನನೋತ್ಸವ ಮಹಾಮಂಡಲ ವತಿಯಿಂದ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಚಾಲನೆ ನೀಡಿದರು.ಶಿಬಿರದಲ್ಲಿ ಜುಗತಿ ಹೆಲ್ತ್ ಕೇರ್ ಸೆಂಟರ್ ಆಸ್ಪತ್ರೆಯ ವೈದ್ಯ ಡಾ.ಅವಿನಾಶ್ ಜುಗುತಿ ಅವರಿಂದ ಆರೋಗ್ಯ ತಪಾಸಣೆ ಮಾಡಲಾಯಿತು.ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅನೇಕರು ಭಾಗವಹಿಸಿದರು.ಆರೋಗ್ಯ ಶಿಬಿರದಲ್ಲಿ ಸುಮಾರು ಜನ ಭಾಗವಹಿಸಿ ಇದರ ಉಪಯೋಗವನ್ನು ಪಡೆದುಕೊಂಡರು.ಪ್ರತಿ ವರ್ಷ ಗಜಾನನ ಮಹಾಮಂಡಲ ಈ ಕಾರ್ಯ ಮಾಡುತ್ತಾ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.

Read More