Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿರುವ ಗಜಾನನ ಮಹಾ ಮಂಡಳಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಗಂಗಾ ಆರತಿ ನಡೆಯಿತು.ಆರತಿಯನ್ನು ವಾರಣಾಸಿಯಿಂದ ಆಗಮಿಸಿದ್ದ ಐದು ಜನ ಅರ್ಚಕರಿಂದ ಗಣೇಶನಿಗೆ ಒಂದು ಗಂಟೆ ಕಾಲ ಗಂಗಾ ಆರತಿ ಮಾಡಲಾಯಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಭಿನವ ಶ್ರೀ ಅವಧೂತ ಸಿದ್ಧ ಮಹಾರಾಜರು ಅರಿಕೇರಿಗುಡ್ಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.ಸಾವಿರಾರು ಭಕ್ತರು ಉಪಸ್ಥಿತರಿದ್ದರು. ಗಂಗಾ ಆರತಿ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ. ಮಾಡಲಾಯಿತು. ಸುಮಾರು 1ಗಂಟೆ ಕಾಲ ಗಣೇಶನಿಗೆ ಗಂಗಾ ಆರತಿ ಮೂಲಕ ಪೂಜೆ ಸಲ್ಲಿಸಲಾಯಿತು.
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ವೃದ್ಧಿಸುವ ದೃಷ್ಠಿಯಿಂದ ಗ್ರಾಮ ಪಂಚಾಯತಿಗಳ ಜೊತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿ ಎಲ್ಲ ಇಲಾಖೆಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಈ ರೀತಿ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದ್ದಲ್ಲಿ ನಾವು ಎಲ್ಲ ವಿಷಯದಲ್ಲಿಯೂ ಪ್ರಗತಿ ಸಾಧಿಸಬಹುದು ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಹೇಳಿದರು.ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಸೆ.೧೦ರಂದು ಹಮ್ಮಿಕೊಂಡ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ರೀತಿಯಾಗಿ ಕಾರ್ಯ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಹಾಗೂ ಗ್ರಾಮೀಣರಲ್ಲಿರುವ ರೋಗ ಭಯವನ್ನು ಹೊಗಲಾಡಿಸಬಹುದು ಎಂದರು. ಜೊತೆ ಜೊತೆಗೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಶಾಲೆಯಲ್ಲಿ, ಅಂಗನವಾಡಿ ಕೇಂದ್ರದಲ್ಲಿ ಇತರೆ ಸಮುದಾಯ ಜನ ಸೇರುವ ಸ್ಥಳದಲ್ಲಿ ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆರೋಗ್ಯದ ಕುರಿತು ಪ್ರಚಾರ ಮಾಡಬೇಕು ಎಂದರು.ಆರೋಗ್ಯದ ಜೊತೆಜೊತೆಗೆ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರ್ತಿಸುವುದೇ ಪ್ರತಿಭಾ ಕಾರಂಜಿ ಏರ್ಪಡಿಸುವ ಉದ್ದೇಶವಾಗಿದೆ ಎಂದು ಕಳ್ಳಕವಟಗಿ ಸಮೂಹ ಸಂಪನ್ಮೂಲ ವ್ಯಕ್ತಿ ಜಿ.ಜಿ.ದೊಡ್ಡಿಹಾಳ ಹೇಳಿದರು.ತಾಲ್ಲೂಕಿನ ಘೋಣಸಗಿ ಗ್ರಾಮದ ಅಮೋಘ ನವೋದಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಮಕ್ಕಳ ಸೃಜನಶೀಲತೆ ಹೊರ ಹಾಕುವ ವೇದಿಕೆಯಾಗಿದೆ ಎಂದರು.ಸಂಸ್ಥೆಯ ಅಧ್ಯಕ್ಷ ಟಿ.ಎಂ.ಪಾಟೀಲ್ ಮಾತನಾಡಿ ನಿರ್ಣಾಯಕರು ಯಾವುದೇ ಬೇಧ ಮಾಡದೇ ಸೂಕ್ತ ಪ್ರತಿಭೆ ಹೊಂದಿದ ಮಕ್ಕಳನ್ನು ಪ್ರಾಮಾಣಿಕತೆಯಿಂದ ಆಯ್ಕೆ ಮಾಡಬೇಕು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸೂಕ್ತ ವೇದಿಕೆಯಾಗಬೇಕು. ಸೋಲು ಗೆಲುವು ಯೋಚಿಸದೇ ಸ್ಪರ್ಧೆಯಲ್ಲಿ ಮಕ್ಕಳು ಭಾಗವಹಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಮೈಬುಬ್ ಜತ್ತಿ, ಸಿದ್ದಪ್ಪ ಮುಚ್ಚಂಡಿ, ಎಸ್.ಎನ್.ಬಾಗಲಕೋಟ, ಜೆ.ಎ.ಆಯತವಾಡ, ಎಸ್.ಬಿ.ಖಂಡೆಕರ್, ಶಾಂತವೀರಯ್ಯ ಹಿರೇಮಠ, ಎನ್.ಆರ್.ಬಾನಿಕೋಲ್, ಎಸ್.ಎಸ್.ಗಣಿ, ವಸಂತ ಲೋಣಿ, ಪಿ.ಎಸ್.ಗದ್ಯಾಳ ಇದ್ದರು.ನಿರೂಪಣೆಯನ್ನು ಸಂತೋಷ ಕಾಂಬಳೆ, ಸ್ವಾಗತವನ್ನುಐ.ಎಂ.ಅರಳಿ, ವಂದನಾರ್ಪಣೆಯಯನ್ನು ಅನ್ನಪೂರ್ಣ ಭಜಂತ್ರಿ ನೆರವೇರಿಸಿದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದ ಶ್ರೀಮಲ್ಲಿಕಾರ್ಜುನ ಗಜಾನನ ಉತ್ಸವದ ಅಂಗವಾಗಿ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಬುಧವಾರ ಗಜಾನನ ಉತ್ಸವದ ಅಂಗವಾಗಿ ಮುತೈದೆಯರಿಗೆ ಉಡಿ ತುಂಬುವುದರ ಮೂಲಕ ನಾಡಿನ ಹಿತಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಉಡಿ ತುಂಬಿಕೊಂಡ ಮುತೈದೆಯರು ನಾಡಿಗೆ ಮಳೆ, ಬೆಳೆ ಸಮೃದ್ಧಿಯಾಗಲಿ, ಮಕ್ಕಳೆಲ್ಲಾ ಸಂಸ್ಕಾರವಂತರಾಗಲಿ, ಪ್ರಾಣಿ, ಪಕ್ಷಿಗಳೆಲ್ಲಾ ಸಂತೋಷವಾಗಿ ಬದುಕಲಿ, ನಮ್ಮ ಪ್ರಕೃತಿ, ಪರಿಸರ ವಿಕೋಪಕ್ಕೆ ಒಳಗಾಗದೇ ಶಾಂತಿಮಯವಾಗಿರಲಿ, ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕಲು ಆ ವಿಘ್ನನಿವಾರಕ ವಿನಾಯಕ ನಮ್ಮನ್ನೆಲ್ಲಾ ಆಶೀರ್ವದಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಮುತೈದೆಯರು ಸೇರಿದಂತೆ ಗ್ರಾಮಸ್ಥರಿಗೆ ಮಹಾಪ್ರಸಾದ ವಿತರಿಸಲಾಯಿತು.ಅನೀತಾ ಪಾಟೀಲ, ರತ್ನಾಬಾಯಿ ಬಿರಾದಾರ, ಭಾಗೀರಥಿ ನಾಗರಳ್ಳಿ, ಜಯಶ್ರೀ ಬಿರಾದಾರ, ಮಹಾದೇವಿ ಬಿರಾದಾರ, ಸರುಬಾಯಿ ಹೊನ್ನುಟಗಿ, ಶಂಕ್ರಮ್ಮ ಬಸರಕೋಡ, ಭಾರತಿ ಗಬ್ಬೂರ, ಗಂಗೂಬಾಯಿ ಪೋಲೇಶಿ, ಸುಕನ್ಯಾ ಸರಬಡಗಿ, ಭೋರಮ್ಮ ರೋಡಗಿ, ಲಕ್ಷ್ಮೀ ಹದರಿ, ರಶ್ಮೀ ಬಿರಾದಾರ ಸೇರಿದಂತೆ ಗಜಾನನ ಉತ್ಸವ ಸಮಿತಿಯ ಸರ್ವಸದಸ್ಯರು ಇದ್ದರು.
ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳ ಹಕ್ಕುಗಳು ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಿಗೆ ಜಾತಿ, ಪಂಥ, ಬೇಧವಿಲ್ಲ. ಕೇವಲ ಸರ್ಕಾರಿ ಸೌಲಭ್ಯಗಳ ಮೂಲಕ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯವಿಲ್ಲ. ಪ್ರೀತಿ, ಮಮತೆಯಿಂದ ಮಾತ್ರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲು ಹೈದ್ರಾಬಾದ್‌ನ ಸುಶೇನಾ ಹೆಲ್ಥ್ ಫೌಂಡೇಶನ್ ಹಾಗೂ ಜಿಲ್ಲಾ ಆಸ್ಪತ್ರೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ತಿಳಿಸಿದ್ದಾರೆ.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಸಮ್ಮುಖದಲ್ಲಿ ವಿಜಯಪುರದ ಜಿಲ್ಲಾ ಆಸ್ಪತ್ರೆಯ ಚಿಕ್ಕ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪನೆಗೆ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲಾಯಿತು.ತಾಯಿ ಹಾಲು ಸಂಗ್ರಹಣ ಕೇಂದ್ರವು Comprehensive Lactation Management Unit (Mother Milk Bank )ತಾಯಿಯಎದೆಹಾಲನ್ನು ಪಡೆದು ನಿಯಮಗಳು ಷರತ್ತಿಗಳನ್ವಯ ಹಾಗೂ ಒಂದು ನಿಗದಿತ ಪ್ರಕ್ರಿಯಲ್ಲಿ ನ್ಯಾಷನಲ್ ಹೇಲ್ತ್ ಮಿಷನನ ನಿಯಮಗಳನ್ವಯ ಹಾಲನ್ನು ಸಂಗ್ರಹಿಸಲಾಗುತ್ತದೆ.ನವಜಾತ ಶಿಶುವಿನಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್‌ನ ಹಾಲಿನಿಂದ ಓಇಅಂಯನ್ನು ತಡೆಗಟ್ಟುವುದು, ಹಾಲು ಪಚನ ಪಚನ ಕ್ರೀಯೆಯಲ್ಲಿ ಯಾವುದೇ ತೊಂದರೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಇವರ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:೨೦-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಸಹಾಯವಾಣಿ ೮೨೭೭೭೯೯೯೯೦ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಾಡ್ಲಿ ಫೌಂಡೇಶನ್ ವತಿಯಿಂದ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಸೆಪ್ಟಂಬರ್ ೧೫ ರಂದು ವಿಜಯಪುರ ನಗರದಲ್ಲಿ ಸ್ವಚ್ಛತೆಗಾಗಿ ಕೈಗೊಂಡ ವಾಶೆಥಾನ್ ಓಟ ಯಶಸ್ವಿಗೊಳಿಸಲು ಸಂಬಂಧಿಸಿ ಅಧಿಕಾರಿಗಳು ಅಗತ್ಯ ಸಹಯೋಗ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವಚ್ಛತೆಗಾಗಿ ಕೈ ಜೋಡಿಸಿ ಘೋಷವಾಕ್ಯದೊಂದಿಗೆ ೫ ಕಿ.ಮೀ., ೧೦ ಕಿ.ಮೀ. ಹಾಗೂ ೨೧ ಕಿ.ಮೀ.ಓಟದ ವಾಶೆಥಾನ್ ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಸ್ವಚ್ಛತೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ನಗರದ ಗೋಲಗುಂಬಜ್ ಆವರಣದಲ್ಲಿ ಆರಂಭಗೊಳ್ಳುವ ಈ ಕಾರ್ಯಕ್ರಮದ ಯಶಸ್ವಿಗೆ ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಅಗ್ನಿಶಾಮಕ, ಪೊಲೀಸ್ ಇಲಾಖೆ ಅಧಿಕಾರಿಗಳು ಎಲ್ಲ ಅಗತ್ಯ ಕ್ರಮ ಕೈಗೊಂಡು ಸಹಕಾರ ಒದಗಿಸುವಂತೆ ಅವರು ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಲಾಡಲಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ವಾಶೆಥಾನ್ ಪೋಸ್ಟರ್‌ನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ…
ಉದಯರಶ್ಮಿ ದಿನಪತ್ರಿಕೆ ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಅಂಜುಮಾನ ಏ – ಇಸ್ಲಾಂ ಕಮಿಟಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಮುತು೯ಜ್ ಮೊದೀನ್ ಡಂಬಳ ( ಬಾಗವಾನ) ಅಧ್ಶಕ್ಷ, ಅಲ್ಲಾಭಕ್ಷ ಬೈಚಬಾಳ ಉಪಾಧ್ಶಕ್ಷ, ಮಹಿಬೂಬ ಮಕಾಶಿ ಕಾಯ೯ದಶಿ೯, ಸುಲೇಮಾನ ಮನಿಯಾರ, ಬಾಷಾಸಾಬ ಬಾಗವಾನ, ಮಹಿಬೂಬಸಾಬ ನದಾಫ್, ಅಬ್ದುಲಸಲಾಂ ಬಾಗವಾನ, ರಫೀಕ ಮುಲ್ಲಾ, ಅಲ್ಲಿಸಾಬ ಕೋರಬು, ದಾವಲಮಲೀಕ ಚಪ್ಪರಬಂದ, ಸಿರಾಜ ಕೊಕಟನೂರ ಸದಸ್ಶರಾಗಿ ಆಯ್ಕೆಯಾಗಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೭೪೦೦ ರೂ. ಬೆಂಬಲ ಬೆಲೆಯಡಿ ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಉತ್ಪನ್ನವನ್ನು ಖರೀದಿಸಲು ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲೆ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷರೂ ಆದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಸೆ.೯ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜಿಲ್ಲೆಯಲ್ಲಿ ೩೮೭ ಹೆಕ್ಟೇರ್ ಕ್ಷೇತ್ರದಲ್ಲಿ ಉದ್ದಿನಕಾಳು ಬಿತ್ತನೆಯಾಗಿದ್ದು, ಅಂದಾಜು ೩೮೭೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಉದ್ದಿನಕಾಳು ಪ್ರತಿ ಕ್ವಿಂಟಲ್ ರೂ. ೭೦೦೦ ರಿಂದ ೧೦೯೨೦ ವರೆಗಿನ ದರದಲ್ಲಿ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉದ್ದಿನಕಾಳು ಪ್ರತಿ ಕ್ವಿಂಟಲ್ ೭೪೦೦ ರೂ.ಗೆ ಖರೀದಿಸಲು ತೀರ್ಮಾನಿಸಿ, ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕಫೆಡ್) ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು,…
