Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವ್ಯಕ್ತಿ – ವ್ಯಕ್ತಿತ್ವ – ಸಾಧನೆ ಲೇಖಕರು- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ಅದು 2014ನೇ ಇಸವಿ. ಆಗತಾನೆ ಎಲ್ಲೆಡೆ ವಾಟ್ಸಪ್ ಕಾಲಿಟ್ಟಿದ್ದು ಜಿಲ್ಲಾ ಕೇಂದ್ರದಲ್ಲಿ ವಾಸವಾಗಿದ್ದ ಟ್ರ್ಯಾಕ್ಟರ್ ಶೋರೂಮ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪದವೀಧರನಾದ ಉತ್ಸಾಹಿ ಯುವಕನೋರ್ವ ತನ್ನ ಪರಿಚಿತ ವಲಯದ ಸ್ನೇಹಿತರ ಗುಂಪೊಂದನ್ನು ವಾಟ್ಸಪ್ ನಲ್ಲಿ ಕ್ರಿಯೇಟ್ ಮಾಡಿದ. ಸಾಮಾನ್ಯವಾಗಿ ಮೆಸೇಜ್ಗಳು, ವಿಡಿಯೋಗಳಿಂದ ಕೂಡಿದ ಗುಂಪುಗಳ ನಡುವೆ ರಕ್ತದಾನವನ್ನು ಮುಖ್ಯ ಉದ್ದೇಶವನ್ನಾಗಿಸಿಕೊಂಡು ಪ್ರಾರಂಭವಾದ ಈ ವಾಟ್ಸಪ್ ಗ್ರೂಪ್ ಮೂಲಕ ಹಲವಾರು ಜನ ಗರ್ಭಿಣಿಯರಿಗೆ, ಅಪಘಾತದಿಂದ ತೀವ್ರ ರಕ್ತಸ್ರಾವ ದಿಂದ ಬಳಲುತ್ತಿರುವವರಿಗೆ ಸೂಕ್ತ ಗುಂಪಿನ ರಕ್ತವನ್ನು ಅವಶ್ಯಕ ಸಮಯದಲ್ಲಿ ಪೂರೈಕೆ ಮಾಡುತ್ತಿದ್ದರು.ಅದೊಂದು ದಿನ ಮುಂಜಾನೆ ತನ್ನ ಕೆಲಸದಲ್ಲಿ ನಿರತನಾಗಿದ್ದ ಈ ಉತ್ಸಾಹಿ ಯುವಕನನ್ನು ತುರ್ತಾಗಿ ಸರ್ಕಾರಿ ಆಸ್ಪತ್ರೆಗೆ ಬರಲು ಹೇಳಿದ ಆಸ್ಪತ್ರೆಯವರು ಆತ ಬಂದ ಕೂಡಲೇ ನೆನ್ನೆ ದಾಖಲಾದ ಗರ್ಭಿಣಿ ಸ್ತ್ರೀ ಹೆರಿಗೆಯಾಗಿದ್ದು ಆತನಿಂದಲೇ ಆಕೆಗೆ ಎಬಿ ನೆಗೆಟಿವ್ ರಕ್ತ ಪೂರೈಕೆ ಆಗಲು ಅನುಕೂಲವಾಗಿದ್ದನ್ನು ಹೇಳಿದರು. ಜವಾಬ್ದಾರಿ…
ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಹಿರಿಯ ಸಾಹಿತಿ ಡಾ. ಅರ್ಜುನ ಗೊಳಸಂಗಿ ಅವರಿಗೆ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ (ರಿ) ವತಿಯಿಂದ ಸಂಸ್ಥೆಯ ನೂತನ ಕಚೇರಿಯಲ್ಲಿ ಸಾಹಿತಿ , ಪತ್ರಕರ್ತ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ನೀಡಿ ಹಾಗೂ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ, ತೆರಿಗೆ ಇಲಾಖೆಯ ಅಧಿಕಾರಿಗಳಾದ ಸುರೇಶ ಗೊಳಸಂಗಿ, ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ, ಲಕ್ಷ್ಮಣ ಲೋಗಾಂವಿ, ಸಂಶೋಧಕ ಲಾಯಪ್ಪ ಇಂಗಳೆ, ಪತ್ರಕರ್ತ ಉಮೇಶ ಶಿವಶರಣ, ಸಾಗರ ಲಾಯದಗುಂದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಸಾತಲಗಾಂವ ಕ್ರಾಸ್ ನಲ್ಲಿ ೧೧೦/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ ಇಂಡಿ: ತಾಲೂಕಿನಲ್ಲಿ ಈಗಾಗಲೇ ೧೩ ವಿದ್ಯುತ್ ವಿತರಣಾ ಕೇಂದ್ರಗಳಿದ್ದು ಇನ್ನೂ ಎರಡು ಸಧ್ಯದಲ್ಲಿಯೇ ಪ್ರಾರಂಭವಾಗಲಿದ್ದು ಇನ್ನು ನಾಲ್ಕು ಮಂಜುರಾತಿ ಹಂತದಲ್ಲಿವೆ. ತಾಲೂಕಿಗೆ ವಿದ್ಯುತ್ ಇಲಾಖೆಯ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಅವರು ತಾಲೂಕಿನ ಸಾತಲಗಾಂವ ಕ್ರಾಸ್ ನಲ್ಲಿ ೧೧೦/ ೧೧ ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ರಾಜ್ಯವು ವಿದ್ಯುತ್ ವಿತರಣೆಯಲ್ಲಿ ಸ್ವಾವಲಂಬಿಯಾಗಿದ್ದು ಹೈಡ್ರೊ, ವಿಂಡ್, ಸೋಲಾರ, ಎನ್.ಟಿ.ಪಿಸಿ ಮತ್ತು ಕಾರ್ಖಾನೆಯ ಕೊಜೆನ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು ದಿನದ ಏಳು ಗಂಟೆ ವಿದ್ಯುತ್ ಇಂಡಿ ತಾಲೂಕಿನಲ್ಲಿ ರೈತರಿಗೆ ನೀಡಲಾಗುತ್ತಿದೆ ಎಂದರು.ಕೇಂದ್ರದ ಆಗಿನ ಇಂಧನ ಸಚಿವ ಸುಶೀಲಕುಮಾರ ಇವರ ಸಹಕಾರದಿಂದ ಎನ್‌ಟಿಪಿಸಿ ಕೂಡಗಿಯಲ್ಲಿ ಆಗಿದ್ದು ಆಲಮಟ್ಟಿ ಆಣೆಕಟ್ಟಿನ ಎತ್ತರ ೫೨೪ ಮೀ ಆದರೂ ನಾವು ರೈತರ ಹೊಲಗಳಿಗೆ ವಿದ್ಯುತ್ ಸಾಕಾಗುತ್ತದೆ ಎಂದರು.ಈ ಹಿಂದೆ ದಕ್ಷಿಣ ಕರ್ನಾಟಕದಲ್ಲಿ ವಿದ್ಯುತ ತೊಂದರೆ ಇರಲಿಲ್ಲ. ನಾವು ನ್ಯಾಯಯುತವಾದ ಬೇಡಿಕೆ ಮಾಡಿದ್ದರಿಂದ…
ವಿಜಯಪುರ: ಜಾನಪದ ಸಾಹಿತ್ಯ ಬದುಕಲು ಸನ್ಮಾಗ೯ ತೋರಿಸಿಕೊಟ್ಟಿದೆ.ಮಾನವೀಯ ಮೌಲ್ಯಗಳನ್ನು ಕಾಪಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ ಎಂದು ವಿಜಯಪುರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ರಮೇಶ ದೇಸಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.ಮಂಗಳವಾರ ಜಾನಪದ ಚಿಂತನ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಜಾನಪದ ಗೀತೆಗಳು ಬದುಕು ಪರಿವತ೯ನೆ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿವೆ, ಜಾನಪದ ಸಾಹಿತ್ಯ ನಮ್ಮೆಲ್ಲರ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು.ಮುಖ್ಯ ಅತಿಥಿಗಳಾದ ಡಾ.ಸಂಗಮೇಶ ಮೇತ್ರಿ ಮಾತನಾಡಿ, ಮಕ್ಕಳಲ್ಲಿ ಜಾನಪದ ಸಾಹಿತ್ಯ ಅಭಿರುಚಿ ಬೆಳೆಸುವ ಅವಶ್ಯವಿದೆ. ಜಾನಪದ ಸಾಹಿತ್ಯಕ್ಕೆ ಪೂರ್ವಜರ ಕೊಡುಗೆ ಅಪಾರವಾಗಿದೆ. ರೈತರು ಹಾಗು ಮಹಿಳೆಯರು ದಿನನಿತ್ಯ ಕಾಯಕದಲ್ಲಿ ತೊಡಗಿರುವಾಗ ಹಾಡುಗಳನ್ನು ರಚಿಸಿ ಹಾಡಿದ್ದಾರೆ. ಎಂದರು.ಜಾನಪದ ವಿದ್ವಾಂಸ, ಬಸವನ ಬಾಗೇವಾಡಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಂದು ಅನೇಕ ಗೋಷ್ಠಿಯನ್ನು ಹಾಗು ದತ್ತಿ ನಿಧಿ ಕಾರ್ಯಕ್ರಮ ಮಾಡುವದರ ಮೂಲಕ ಜಾನಪದ ಸಾಹಿತ್ಯ ಉಳಿಸುವ ಹಾಗು ಬೆಳೆಸುವ ಕಾರ್ಯ ಶ್ಲಾಘನೀಯ ಎಂದರು.ತಾಳಿಕೋಟೆಯ ಜಾನಪದ ವಿದ್ವಾಂಸೆ…
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ ೧೭ರಂದು ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ವಿಶ್ವಕರ್ಮ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಸೆ.೧೭ರಂದು ಬೆಳಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರವರೆಗೆ ನಡೆಯಲಿದೆ. ಬೆಳಗ್ಗೆ ೧೦.೩೦ಕ್ಕೆ ರಂಗಮಂದಿರದಲ್ಲಿ ವಿಶ್ವಕರ್ಮ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸುಗಮಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.ಅಂದು ನಗರದ ವಿವಿಧ ವೃತ್ತಗಳಿಗೆ ಸ್ವಚ್ಚತೆ ಹಾಗೂ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸುವುದು, ವೇದಿಕೆ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಸಭೆಯಲ್ಲಿ ವಿಜಯಪುರ ಗ್ರೇಡ್-೨ ತಹಶೀಲ್ದಾರ ಐ.ಎಚ್. ತುಂಬಗಿ, ಮಹಾನಗರಪಾಲಿಕೆ ಉಪ ಆಯುಕ್ತ…
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ೨೦೨೩-೨೪ರ ಶೈಕ್ಷಣಿಕ ವರ್ಷದ ಜುಲೈ ೨೦೨೪ ರಲ್ಲಿ ಜರುಗಿದ ಬಿ.ಎಡ್ ಕೋರ್ಸಿನ ತೃತೀಯ ಸೆಮಿಸ್ಟರ್ (ರೆಗ್ಯುಲರ್ ಮತ್ತು ಪುನರಾವರ್ತಿತ) ಫಲಿತಾಂಶವನ್ನು ದಿನಾಂಕ : ೧೦-೦೯-೨೦೨೪ ರಂದು ಪ್ರಕಟಿಸಲಾಗಿದೆ.ಸದರಿ ಫಲಿತಾಂಶವನ್ನು uucms.karnataka.gov.in ವೆಬ್ ಸೈಟ್ ನಲ್ಲಿ ನೋಡಬಹುದು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಹೆಚ್. ಎಂ. ಚಂದ್ರಶೇಖರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ ಹೇಳಿಕೆ | ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆಂಗಳೂರು: ಕೈ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ಪಕ್ಷದ ಹಿರಿಯರು ಹಾಗೂ ಅನುಭವಸ್ಥರ ನಡುವೆ ಪೈಪೋಟಿ ಶುರುವಾಗಿದೆ. ಎಂಬಿ.ಪಾಟೀಲ್, ಪರಮೇಶ್ವರ್ ಬಳಿಕ ಇದೀಗ ಸಿಎಂ ರೇಸ್ ನಲ್ಲಿ ಸತೀಶ್ ಜಾರಕಿಹೊಳಿಯವರ ಹೆಸರು ಕೂಡ ಕೇಳಿ ಬರುತ್ತಿದೆ.ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದರೆ ಮುಂದಿನ ಸಿಎಂ ಯಾರು ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ. ಇದರ ಬೆನ್ನಲ್ಲೆ ಸತೀಶ್ ಜಾರಕಿಹೊಳಿ ಹೆಸರನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವೈರಲ್ ಮಾಡುತ್ತಿದ್ದಾರೆ.ಇದೇ ವೇಳೆ ಸತೀಶ್ ಜಾರಕಿಹೊಳಿಯವರು ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದು, ಸಿಎಂ ಕುರ್ಚಿ ಲಾಬಿ ಕುರಿತ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸತೀಶ್ ಜಾರಕಿಹೊಳಿಯವರು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದಕ್ಕಾಗಿ ಗುದ್ದಾಟ, ಕುಸ್ತಿ ಮಾಡೋ ಅವಶ್ಯಕತೆ ಇಲ್ಲ. ಅನೇಕರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಸಿಎಂ…
ತಿಕೋಟಾ: ತಾಲೂಕಿನ ಹೊನವಾಡದ ಜವಳಿ ವ್ಯಾಪಾರಸ್ಥ ಗೌರಿಶಂಕರ( ಮುತ್ತು) ಹಿರೇಮಠ ಇವರನ್ನು ತಿಕೋಟಾ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾದ್ಯಕ್ಷರನ್ನಾಗಿ ತಿಕೋಟಾ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿ ಮಠ ನೇಮಕ ಮಾಡಿದ್ದಾರೆ.ಮುಂಬರುವ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಕನ್ನಡದ ಸೇವೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಗೋಲಗೇರಿ: ಸಿಂದಗಿ ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಗೋಲಗೇರಿ KBMPS ಶಾಲೆಯ ಮಕ್ಕಳು ಗುಂಪು ಆಟಗಳಾದ ಕಬಡ್ಡಿ ಆಟದಲ್ಲಿ ಪ್ರಥಮ ಹಾಗೂ ರಿಲೇ ಓಟದಲ್ಲಿ ಪ್ರಥಮ ಹಾಗೂ ವೈಯಕ್ತಿಕ ಆಟಗಳಾದ ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೋಲಗೇರಿ ಸಮೂಹ ಸಂಪನ್ಮೂಲ ವ್ಯಕ್ತಿ ಶರಣು ಚಟ್ಟಿ, ಮುಖ್ಯ ಗುರು ಪಿ.ಎಮ್.ಶೇಖ್, ಗುರುಬಸಯ್ಯ ಮಠ, ಯಮನಪ್ಪ ಗುಡಿಮನಿ, ಗ್ರಾಮಸ್ಥರು ಹಾಗೂ ಶಿಕ್ಷಣ ಪ್ರೇಮಿಗಳಾದ ಮಲ್ಕಣ್ಣ ಗಡೆಗೆನ್ನವರ, ರುಕುಮ್ಮುದ್ದಿನ ಪಟೇಲ ಹಳಿಮನಿ, ಮಡಿವಾಳ ನಾಯ್ಕೋಡಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ವಿಜಯಪುರ: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಯುನಿಸೆಫ್ ಪ್ರಾಯೋಜಕತ್ವ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಇವರ ಸಹಯೋಗದೊಂದಿಗೆ ‘ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ’ ಎಂಬ ವಿಷಯದ ಕುರಿತು ಮಾಧ್ಯಮ ಕಾರ್ಯಗಾರವನ್ನು ದಿ. ೧೧ ಮತ್ತು ೧೨ ರಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಬುಧವಾರ ಬೆಳಗ್ಗೆ ೧೦.೩೦ ಗಂಟೆಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ಯುನಿಸೆಫ್‌ನ ಪ್ರಸೂನ್ ಸೇನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ವಹಿಸಲಿದ್ದು, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಉಪಸ್ಥಿತರಿರಲಿದ್ದಾರೆ.ತಾಂತ್ರಿಕ ಗೋಷ್ಠಿಗಳು:ಕಾರ್ಯಾಗಾರದ ಮೊದಲ ತಾಂತ್ರಿಕ ಗೋಷ್ಠಿಯಲ್ಲಿ ‘ಮಕ್ಕಳ ಹಕ್ಕುಗಳು: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಚೌಕಟ್ಟು ಮತ್ತು ಕಾನೂನುಗಳ’ ಎಂಬ ವಿಷಯದ ಕುರಿತು ಕರ್ನಾಟಕ ಮಕ್ಕಳ ಹಕ್ಕುಗಳ ಸಂಯೋಜಕ ಡಾ. ವಾಸುದೇವ ಶರ್ಮಾ…
