Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೂಡಗಿ ಗ್ರಾಮದಲ್ಲಿ ಕುಡಿಯುವ ಹಾಗೂ ಕೃಷಿ ಬಳಕೆಯ ಪ್ರಮುಖ ಆಧಾರವಾಗಿರುವ ಸ್ಥಳೀಯ ಕೆರೆ | ಗ್ರಾಮಸ್ಥರ ತೀವ್ರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಕೂಡಗಿ ಗ್ರಾಮದಲ್ಲಿ ಕುಡಿಯುವ ಹಾಗೂ ಕೃಷಿ ಬಳಕೆಯ ಪ್ರಮುಖ ಆಧಾರವಾಗಿರುವ ಸ್ಥಳೀಯ ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ, ಅಲ್ಲಿಂದ ಬೇರೆಡೆಗೆ ನೀರು ಸರಬರಾಜು ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.ಇದರಿಂದಾಗಿ ಗ್ರಾಮದ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ನೀರಾವರಿ ಜಮೀನುಗಳಿಗೆ ಹಾಗೂ ಗ್ರಾಮಸ್ಥರ ದೈನಂದಿನ ಬಳಕೆಗೆ ತೀವ್ರ ಹೊಡೆತ ಬಿದ್ದಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗ್ರಾಮಸ್ಥರ ಪ್ರಮುಖ ಆರೋಪವೆಂದರೆ, ಸ್ಥಳೀಯರ ಕುಡಿಯುವ ಹಾಗೂ ದೈನಂದಿನ ಬಳಕೆಯ ಹಕ್ಕನ್ನು ಕಸಿದುಕೊಂಡು, ಕೆರೆಯ ಬಾವಿಗಳನ್ನು ನಿರ್ಮಿಸಿ ಅಲ್ಲಿಂದ ಪೈಪ್‌ಲೈನ್ ಅಳವಡಿಸಿ ನೀರನ್ನು ಬೇರೆಡೆಗೆ ಒಯ್ಯಲಾಗುತ್ತಿದೆ. ಈ ಅವೈಜ್ಞಾನಿಕ ನೀರು ಎತ್ತುವಿಕೆಯಿಂದಾಗಿ ಇಡೀ ಕೆರೆಯ ನೀರು ಸಂಪೂರ್ಣವಾಗಿ ಖಾಲಿಯಾಗಿದೆ. ಕೃಷಿಯನ್ನೇ ನಂಬಿಕೊಂಡಿರುವ ರೈತರ ನೀರಾವರಿ ಜಮೀನುಗಳು ಈಗ ನೀರಿನ ಅಭಾವದಿಂದ ಒಣಗುವ ಹಂತಕ್ಕೆ ತಲುಪಿವೆ.”ನಮ್ಮ ಗ್ರಾಮದ ಕೆರೆ ಮತ್ತು ಹಳ್ಳಗಳು ನಮ್ಮ…
ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಮತ್ತು ಅನರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಕ್ರಮ ವಹಿಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕರಿಸಬೇಕು ಎಂದು ಮತದಾರರ ನೋಂದಣಾಧಿಕಾರಿಗಳು ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಹೇಳಿದರು.ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಒ ಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರ ಗಣತಿ…
ವಿಶೇಷ ತಂಡದ ಕಾರ್ಯಾಚರಣೆ ಚುರುಕುಗೊಳಿಸಿ ನಕಲಿ ವೈದ್ಯರ ವಿರುದ್ಧವೂ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯು ಗಡಿ ಜಿಲ್ಲೆಯಾಗಿರುವುದರಿಂದ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯದಂತೆ ಕಣ್ಗಾವಲು ಇರಿಸಲು ಈ ಕಾಯ್ದೆಯಡಿ ರಚಿತವಾದ ತಂಡ ನಿಯಮಿತವಾಗಿ ತಪಾಸಣೆ ಮತ್ತು ದಿಢೀರ ಕಾರ್ಯಾಚರಣೆಯನ್ನು ಕೈಗೊಂಡು ಇಂತಹ ಪ್ರಕರಣ ಜಿಲ್ಲೆಯಲ್ಲಿ ನಡೆಯದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಕೇಂದ್ರಗಳ ಪರಿಶೀಲನೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಗರ್ಭಿಣಿಯರು ಕಂಡು ಬಂದರೆ ಅಂಥವರ ಮಾಹಿತಿಯನ್ನು ಸಹಾಯವಾಣಿ ೧೦೯೮ ಗೆ ಕರೆ ಮಾಡಲು ತಿಳಿಸಿ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಪ್ರಕರಣಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಪ್ರವೃತವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.ವಿಜಯಪುರ ತಾಲೂಕಿನಲ್ಲಿ ೭೪೨ ಖಾಸಗಿ ಆರೋಗ್ಯ…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯದ ಅಂಗವಾಗಿ ತಹಶಿಲ್ದಾರ ಸುರೇಶ ಚವಲರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರಂ (ಇಎಫ್) ವಿತರಣೆ ಹಾಗೂ ಭರ್ತಿ ಮಾಡಿದ ಪಾರ್ಮಗಳ ಆನಲೈನ್ ಅಪಲೋಡ ಕಾರ್ಯವನ್ನು ಬುಧವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.ತಾಲ್ಲೂಕಿನ ಹುಬನೂರ ಗ್ರಾಮದ ಮತಗಟ್ಟೆ ಸಂಖ್ಯೆ 34, 35 ಹಾಗೂ ಕಳ್ಳಕವಟಗಿಯ ಮತಗಟ್ಟೆ ಸಂಖ್ಯೆ 49, 50 ರಲ್ಲಿ ಕಾರ್ಯನಿರ್ವಹಿಸುವ ಬಿಎಲ್ಓಗಳ ಕಾರ್ಯವೈಖರಿಯನ್ನು ಅವಲೋಕಿಸಿದ ತಹಶಿಲ್ದಾರ ಚವಲರ ಮತದಾರರಿಗೆ ನಮೂನೆಗಳನ್ನು ಸಮರ್ಪಕವಾಗಿ ತಲುಪಿಸಿ, ಅಗತ್ಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು.ಯಾವುದೇ ಅರ್ಹ ಮತದಾರರು ವಂಚಿತರಾಗದಂತೆ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಕಂದಾಯ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳ ವ್ಯವ್ಯಸ್ಥಿತ ತಂಡ ಮಾಡಿದ್ದು, ಎಸ್ಐಆರ್ ಪ್ರಗತಿಗೆ ಎಲ್ಲ ಸಿಬ್ಬಂದಿ ಹಗಲಿರುಳು ಶ್ರಮವಹಿಸುತ್ತಿದ್ದಾರೆ. ಮತದಾರರಿಗೆ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕುಟುಂಬದ ಸದಸ್ಯರ ಸವಿವರಗಳನ್ನು ತುಂಬಲು ಜಾಗೃತಿ ಮೂಡಿಸಲಾಗಿದೆ.ಬಿಎಲ್ಓಗಳಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಗಾರು ಮಳೆ ಅಭಾವದಿಂದ ರಾಜ್ಯದ ಬಹುತೇಕ ಜಲಾಶಯಗಳಿಗೆ ಇನ್ನೂ ಸಮರ್ಪಕ ಒಳಹರಿವು ಆರಂಭವಾಗದ ಹಿನ್ನೆಲೆಯಲ್ಲಿ, ಆಲಮಟ್ಟಿ ಜಲಾಶಯದಲ್ಲಿರುವ ಲಭ್ಯವಿರುವ ನೀರನ್ನು ಜನ-ಜಾನುವಾರುಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಬೇಕು ಎಂದು ಸರಕಾರಸೂಚನೆ ನೀಡಿದೆ ಎಂದು ಆಲಮಟ್ಟಿ ಆಣೆಕಟ್ಟು ವೃತ್ತದ ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.ರೈತ ಬಾಂಧವರು ಸರಕಾರದ ನಿರ್ದೇಶನದನುಸಾರ ಜನ-ಜಾನುವಾರುಗಳ ಕುಡಿಯುವ ನೀರಿನ ಹಿತದೃಷ್ಟಿಯಿಂದ ಸಹಕಾರ ನೀಡಬೇಕೆಂದವರು ಮನವಿ ಮಾಡಿದ್ದಾರೆ.ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವುದರಿಂದ ಜಲಾಶಯದಲ್ಲಿರುವ ನೀರನ್ನು ಈ ಉದ್ದೇಶಕ್ಕಾಗಿಯೇ ಕಾಯ್ದಿರಿಸಲು ಸೂಚಿಸಲಾಗಿದೆ ಎಂದು ಆಲಮಟ್ಟಿ ಆಣೆಕಟ್ಟು ವೃತ್ತದ ಅಧೀಕ್ಷಕ ಅಭಿಯಂತರರ ಪ್ರಕಟಣೆ ತಿಳಿಸಿದೆ.
ವಿಜಯಪುರ ನಗರ ಮತಕ್ಷೇತ್ರ: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಅತ್ಯಂತ ಚುರುಕಿನಿಂದ ಸಾಗಿದ್ದು, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ವಿಜಯಪುರ ನಗರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದ ಜೂನ್ ೨೯ ರಿಂದಲೇ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣಾ ಕಾರ್ಯವು ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನಗರದ ಚುನಾವಣೆ ಭಾಗ ಸಂಖ್ಯೆ ೨ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪರಿಷ್ಕರಣಾ ಕಾರ್ಯದ ಪ್ರಗತಿಯನ್ನು ಖುದ್ದಾಗಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದರು. ಇದೇ ವೇಳೆ ಸ್ಥಳದಲ್ಲಿದ್ದ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಚರ್ಚಿಸಿದ ಅವರು, ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಅತ್ಯಂತ ನಿಖರವಾಗಿ ಕಾರ್ಯನಿರ್ವಹಿಸಲು ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದರು.ಈ ಪರಿಶೀಲನಾ ಕಾರ್ಯದ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನೋಡಲ್ ಅಧಿಕಾರಿಯಾದ ವಿಜಯ ಮೆಕ್ಕಳಕಿ ಸೇರಿದಂತೆ ಚುನಾವಣಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜುಲೈ ೯ರ ಗುರುವಾರ ಸಂಜೆ ೬ ಗಂಟೆಗೆ ‘ಸ್ವಾತಂತ್ರ‍್ಯದ ಓಟ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.ಶಿವಮೊಗ್ಗ ರಂಗಾಯಣದ ಪ್ರಸ್ತುತಿಯಾದ ಈ ನಾಟಕವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೋಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿಯನ್ನು ಆಧರಿಸಿದೆ.ಈ ಕಾರ್ಯಕ್ರಮವನ್ನು ವಿಜಯಪುರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರದ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿವಮೊಗ್ಗ ರಂಗಾಯಣ ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ.ನಾಟಕಕ್ಕೆ ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶನ ಮಾಡಿದ್ದು, ರಾಘವ ಕಮ್ಮಾರ ಅವರ ಸಂಗೀತ ನಿರ್ದೇಶನ ನೀಡಿದ್ದಾರೆ. ರಂಗ ಪ್ರಯೋಗದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹಾಸಿಂಪೀರ ವಾಲಿಕಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ, ಇಳಕಲ್ ರಂಗ ಸಮಾಜದ ಸದಸ್ಯರಾದ ಮಹಾಂತೇಶ್ ಗಜೇಂದ್ರಗಡ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ್ ಪೋತದಾರ ಅವರು ಉಪಸ್ಥಿತರಿರಲಿದ್ದಾರೆ ಎಂದು ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ.…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ೨೦೨೬–೨೭ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.ವಿಶ್ವವಿದ್ಯಾನಿಲಯದ ಮುಖ್ಯ ಆವರಣ ವಿಜಯಪುರ, ಮಂಡ್ಯ ಹಾಗೂ ಸ್ನಾತಕ–ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಿಂಧನೂರಿನಲ್ಲಿ ವಿವಿಧ ಸ್ನಾತಕ ಕೋರ್ಸುಗಳ ವಿಷಯಗಳಿಗೆ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಆಸಕ್ತರು ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಜುಲೈ ೧೫ರೊಳಗೆ ಖುದ್ದಾಗಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿ ಅನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.
ಉತ್ತರ ವಲಯದಲ್ಲಿ ಜೂನ್ 21ರಿಂದ 28 ರವರೆಗೆ ಡ್ರಗ್ ಜಾಗೃತಿ ವಾರ | 16 ಪ್ರಕರಣ ದಾಖಲು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ನಿಗ್ರಹ ದಿನದ ಅಂಗವಾಗಿ ಜೂನ್ 21ರಿಂದ 28ರವರೆಗೆ ಉತ್ತರ ವಲಯದಲ್ಲಿ “ಡ್ರಗ್ ಅವೇರ್‌ನೆಸ್ ವೀಕ್” ಆಚರಿಸಲಾಗಿದ್ದು, ವಿಶೇಷ ಕಾರ್ಯಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಜೊತೆಗೆ, ಎನ್‌ಡಿಪಿಎಸ್ ಕಾಯ್ದೆಯಡಿ ವಿಶೇಷ ದಾಳಿ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.ಕಾರ್ಯಾಚರಣೆಯ ಭಾಗವಾಗಿ, ಎನ್‌ಡಿಪಿಎಸ್ ಕಾಯ್ದೆಯಡಿ ವಶಪಡಿಸಿಕೊಂಡಿದ್ದ 427 ಕೆಜಿ 29 ಗ್ರಾಂ ತೂಕದ, ₹1,12,49,510 ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ.ಜೂನ್ 21ರಿಂದ 28ರವರೆಗೆ ಒಟ್ಟು 16 ಎನ್‌ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ, 26 ಕೆಜಿ 987 ಗ್ರಾಂ ತೂಕದ, ₹12,38,788 ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಇದೇ ವೇಳೆ, ಮೊದಲ ಬಾರಿಗೆ PITNDPS ಕಾಯ್ದೆ ಅಡಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವು ಆರೋಗ್ಯಕರ ಜೀವನವನ್ನು ನಡೆಸಲು ನಮ್ಮನ್ನು ಸದೃಢವಾಗಿ ಮತ್ತು ಸಕ್ರೀಯವಾಗಿಡಲು ನಾವು ಆರೋಗ್ಯಕರ ಆಹಾರ ಪದ್ದತಿಗಳನ್ನು ಅನುಸರಿಸಬೇಕು. ನಿಯಮಿತವಾಗಿ ದೈಹಿಕ ಕ್ರೀಡೆಗಳು ಅಥವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಆರ್ಟ ಆಫ್ ಗೀವಿಂಗ್ ಫೌಂಡೇಶನದ ಯುವ ಸಂಚಾಲಕಿ ಶಿಫಾ ಜಮಾದಾರ ಅಭಿಪ್ರಾಯಪಟ್ಟರು.ನಗರದ ಡಾ. ಬಿ.ಅರ್. ಅಂಬೇಡ್ಕರ ಜಿಲ್ಲಾ ವಾಲಿಬಾಲ ಕ್ರೀಡಾಂಗಣದಲ್ಲಿ ಆರ್ಟ ಆಫ್ ಗೀವಿಂಗ್ ಫೌಂಡೇಶನದ ವತಿಯಿಂದ ‘ವಿಶ್ವ ವಾಲಿಬಾಲ ದಿನಾಚರಣೆ’ ಉದ್ಘಾಟಿಸಿ ಮಾತನಾಡುತ್ತಾ, ವಾಲಿಬಾಲ ಕೇವಲ ದೈಹಿಕ ಶಕ್ತಿಯ ಕ್ರೀಡೆಯಲ್ಲ ಬದಲಾಗಿ ಆರ್ಟ ಆಫ್ ಗೀವಿಂಗ್‌ದ ನಿಜವಾದ ಸಾರವನ್ನು ಸಾಕಾರಗೊಳಿಸುವ ಆಟ, ಪ್ರತಿಯೊಬ್ಬ ಆಟಗಾರನು ನಿಸ್ವಾರ್ಥನಾಗಿರಬೇಕು. ತನ್ನ ಪ್ರಯತ್ನಗಳು ಕೌಶಲ್ಯ ಮತ್ತು ಧೃಢಸಂಕಲ್ಪವನ್ನು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ಬದಲಾಗಿ ಇಡೀ ತಂಡದ ಗೆಲವಿಗಾಗಿ ಆರ್ಪಿಸಬೇಕು. ಪ್ರತಿಪಾಸ, ಪ್ರತಿ ಸೇವ್ ಮತ್ತು ಪ್ರತಿಯೊಂದು ಪಾಯಿಂಟ್ ನಂಬಿಕೆ, ಸಂಹನ, ಸಹಯೋಗ ಶಿಸ್ತು ಮತ್ತು ತನ್ನಿಗಿಂತ ಮೊದಲು ಇತರರ ಬಗ್ಗೆ ಯೋಚಿಸಬೇಕು. ಎಲ್ಲರೂ ಬೆಳೆದು ಒಟ್ಟಿಗೆ ಗೆದ್ದಾಗ ನಿಜವಾದ ಯಶಸ್ಸನ್ನು ಸಾದಿಸಲಾಗುತ್ತದೆ ಎಂದು…
