Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕೂಡಲಸಂಗಮದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೪-೨೫ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಬಾಕಿ ಉಳಿದ ಸೀಟುಗಳಿಗೆ ಪ್ರವೇಶ ಪಡೆಯಲು ಮೊದಲು ಬಂದವರಿಗೆ ಮೊದಲಾದ್ಯತೆ ಮೇರೆಗೆ ಡಿಪ್ಲೋಮಾ ಮೆಕೆಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ಇಂಜಿನಿಯರಿಂಗ್ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜುಲೈ ೧೯ ಕೊನೆಯ ದಿನವಾಗಿದ್ದು, ಈ ದಿನಾಂಕದೊಳಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೂಡಲ ಸಂಗಮ ಇವರಿಗೆ ಸಲ್ಲಿಸುವಂತೆಯೂ, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಚೇರಿ ಸಂಪರ್ಕ ಸಂಖ್ಯೆ ೭೪೧೧೮೧೧೯೧೬ ಹಾಗೂ ೯೭೪೧೪೧೯೧೯೧ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸುರೇಶ ರಾಥೋಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಬೆಳಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿವೃತ್ತದ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯವರೆಗೆ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಸಿಂದಗಿಯ ತಾಲೂಕು ಆಡಳಿತ ಭವನದಲ್ಲಿ ಜುಲೈ ೧೦ ರಂದು ನಡೆಸಲು ನಿಗದಿಯಾಗಿದ್ದ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮೂಂದೂಡಲಾಗಿದ್ದು, ಈ ಸಭೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿಜಯಪುರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೨೦೨೪-೨೫ನೇ ಸಾಲಿನ ಜಿಲ್ಲೆಯ ನಾಲತವಾಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ವಿವಿಧ ವೃತ್ತಿಪರ-ಐಟಿಐ ಕೋರ್ಸಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗಸ್ಟ್ ಮಾಹೆಯ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಇತ್ತೀಚಿನ ಮೂರು ಭಾವಚಿತ್ರ, ಆಧಾರ್ ಕಾರ್ಡ, ಬ್ಯಾಂಕ್ ಪಾಸಬುಕ್, ದೃಢೀಕೃತ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣ ಪತ್ರ, ಗ್ರಾಮೀಣ, ಕನ್ನಡ ಮಾಧ್ಯಮ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೮೦೫೦೩೨೨೯೮೦, ೯೦೦೮೬೯೨೨೭೦ ಹಾಗೂ ೯೯೮೬೧೨೩೮೯೩ ಸಂಪರ್ಕಿಸುವಂತೆ ನಾಲತವಾಡ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಪಿ.ಎಂ. ಪೂಜಾರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ಸಿಇಟಿ, ನೀಟ್ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ, ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ಚಿಕಿತ್ಸೆ ಕೋರ್ಸ್ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಸಾಲ ಸೌಲಭ್ಯವನ್ನು ವಿಸ್ತರಿಸಲು ಅರಿವು ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ ೨೦ ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿಗಮದ ವೆಬ್‌ಸೈಟ್ hಣಣಠಿ://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ನ ಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಕೆಯಾದ ಅರ್ಜಿಯ ಪ್ರತಿಯನ್ನು ಅವಶ್ಯಕ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದೂ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯ ದೂ:೦೮೩೫೨-೨೭೮೩೪೪ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
ವಿಜಯಪುರ: ಸೊಳ್ಳೆಯಿಂದ ಹರಡುವ ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ಮಹಾನಗರಪಾಲಿಕೆಯ ವತಿಯಿಂದ ವಿಜಯಪುರ ನಗರ ಪ್ರದೇಶದಲ್ಲಿ ಧೂಮೀಕರಣ (ಈoggiಟಿg) ಮತ್ತು ಬೈ ಲಾರ್ವಾ ಸಿಂಪಡಣೆಯನ್ನು ಮಾಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.ಡೆಂಗ್ಯೂ ಜ್ವರದ ಪೀಕ್ ಸೀಸನ್‌ಗೆ ಪ್ರವೇಶಿಸುತ್ತಿದ್ದಂತೆ, ಸದರಿ, ಡೆಂಗ್ಯೂ ಜ್ವರವು ಈಡಿಸ್ ಸೊಳ್ಳೆಗಳಿಂದ ಹರಡುತ್ತದೆ, ಇದು ನಿಂತ ನೀರಿನಲ್ಲಿ, ಸಂತಾನೋತ್ಪತ್ತಿ ಮಾಡುತ್ತದೆ ಮತ್ತು ಬೆಚ್ಚಗಿನ, ಆರ್ದ್ರ ವಾತಾವರಣದಲ್ಲಿ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಮಹಾನಗರಪಾಲಿಕಯ ವ್ಯಾಪ್ತಿಯಲ್ಲಿನ ಸಾರ್ವಜನಿಕರುಗಳು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ, ಹೂವಿನ ಕುಂಡಳ, ನೀರು ಶೇಖರಿಸಿಟ್ಟ ಬಕೇಟ್‌ಗಳಲ್ಲಿ, ಹಳೆಯದಾದ ಟೈರ್‌ಗಳಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗದಂತೆ ಕಟ್ಟುನಿಟ್ಟಾದ ಮುನ್ನೆಚ್ಚರಿಕೆಯನ್ನು ಕ್ರಮಗಳನ್ನು ವಹಿಸಿಕೊಂಡು ನಗರದಲ್ಲಿ ಡೆಂಗ್ಯೂಗ ಜ್ವರ ಹರಡುವುದನ್ನು ತಡೆಗಟ್ಟಲು ಪಾಲಿಕೆಯೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮಹಾನರ ಪಾಲಿಕೆ ಮಹಾಪೌರರು ಹಾಗೂ ಆಯುಕ್ತರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ವಿಜಯಪುರ: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ಹಾಗೂ ಇತರೆ ಅನೇಕ ಕಾರಣಗಳಿಮದ ಗಿಡಮರಗಳು ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಗಳ ಮೇಲೆ ಬೀಳುವುದು, ತಂತಿಗಳು ತುಂಡಾಗಿ ನೆಲದ ಮೇಲೆ ಬಿಳುವ ಸಾಧ್ಯತೆಗಳಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಅವುಗಳನ್ನು ಮುಟ್ಟದೇ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸುವಂತೆ ವಿಜಯಪುರ ಹೆಸ್ಕಾಂ ಅಧೀಕ್ಷಕ ಅಭಿಯಂತರರು ಮನವಿ ಮಾಡಿಕೊಂಡಿದ್ದಾರೆ.ಸಂಪರ್ಕ ವಿಳಾಸ: ವಿಜಯಪುರ ನಗರದ ಗಾಂಧಿ ವೃತ್ತದಿಂದ ಉತ್ತರ ಈಶಾನ್ಯ ಮತ್ತು ವಾಯುವ್ಯ ದಿಕ್ಕಿನ ಪ್ರದೇಶಕ್ಕೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಿಲಿಂದ ಜೀರ ಮೊ: ೯೪೪೮೩೭೦೨೫೦, ವಿಜಯಪುರ ನಗರದ ಗಾಂಧಿ ವೃತ್ತದಿಂದ ದಕ್ಷಿಣ, ನೈರುತ್ಯ ಮತ್ತು ಅಗ್ನೇಯ ದಿಕ್ಕಿನ ಪ್ರದೇಶ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಮತಿ ಭಾರತಿ ಪೂಜಾರ ಮೊ: ೯೪೪೮೩೭೫೭೧೧, ವಿಜಯಪುರ ತಾಲೂಕಿನ ಗ್ರಾಮೀಣ ಪ್ರದೇಶ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಾಲಾಜಿಸಿಂಗ್ ರಾಠೋಡ ಮೊ: ೯೪೪೮೩೭೦೨೫೧, ತಿಕೋಟಾ ತಾಲೂಕಿಗೆ ಸಂಬಂಧಿಸಿದಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ಎಸ್.ದೇಶಮುಖ ಮೊ: ೯೪೪೮೯೭೧೦೦೧, ಬಬಲೇಶ್ವರ ತಾಲೂಕ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ…
ಇಂಡಿ: ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ೧೦.೫೨ ಗಂಟೆಗೆ ಒಮ್ಮಿಂದೊಮ್ಮೆಲೆ ಸ್ಪೋಟಕ ಶಬ್ದ ಕೇಳಿಸಿದೆ. ಮತ್ತು ಭೂಮಿ ನಡುಗಿದ ಅನುಭವವಾಗಿದೆ.ಇಂಡಿ ಪಟ್ಟಣದ ಸೇರಿದಂತೆ ತಡವಲಗಾ, ಹೊರ್ತಿ, ಇಂಗಳಗಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಈ ಅನುಭವವಾಗಿದೆ.ಪಟ್ಟಣದ ಜನತೆ ಭಯಭೀತರಾಗಿದ್ದರು. ಇದು ಭೂಕಂಪ ಇರಬಹುದೆಂದು ತಿಳಿದಿದ್ದರು.ಈ ಕುರಿತು ಪತ್ರಿಕೆದೊಂದಿಗೆ ಮಾತನಾಡಿದ ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ ಗಣಿ ಮತ್ತು ಭೂಗರ್ಭ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕಿಸಿದ್ದು ಗುಲಬರ್ಗಾ ಜಿಲ್ಲೆಯಲ್ಲಿ ಭೂಮಿಯ ಕೆಳ ಪದರಿನಲ್ಲಿ ಸುಣ್ಣದ ಪ್ರಮಾಣ ಹೆಚ್ಚಾಗಿದ್ದು ಅದರಲ್ಲಿ ಒಂದು ಪದರು ಜೇವರಗಿಯಿಂದ ಇಂಡಿಯ ವರೆಗೆ ಬಂದಿದೆ. ಆ ಪದರು ಮಳೆಯಾದಾಗ ಈ ರೀತಿ ಸಪ್ಪಳು ಕೇಳಿಸುತ್ತದೆ ಎಂದು ತಿಳಿಸಿದ್ದಾರೆ ಎಂದರು.
ಕೆಂಭಾವಿ: ಸುರಪುರ ತಾಲೂಕಿನ ಶಹಾಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅತೀ ದೊಡ್ಡ ಹೋಬಳಿ ಕೇಂದ್ರ ಕೆಂಭಾವಿ ಪಟ್ಟಣವು ತಾಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆ ಹೊಂದಿದ್ದರೂ ಕೂಡ ಈ ಹಿಂದಿನ ಸರ್ಕಾರಗಳು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ತಾಲೂಕು ರಚನೆ ಮಾಡಲಿಲ್ಲ. ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರ ಮೀನಾಮೇಷ ಎಣಿಸದೆ ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡುವಂತೆ ಭೋವಿ ಸಮಾಜದ ಅಧ್ಯಕ್ಷ ರಂಗಪ್ಪ ವಡ್ಡರ್ (ಕಂದೀಲು) ಆಗ್ರಹಿಸಿದರು.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಮನವಿ ಪತ್ರವನ್ನು ಉಪತಹಸೀಲ್ದಾರ್ ಮಲ್ಲಿಕಾರ್ಜುನ ಪಾಟೀಲ ಮೂಲಕ ಸಲ್ಲಿಸಿದವರು. 25 ರಿಂದ 30 ವರ್ಷಗಳ ಕಾಲ ವಿವಿಧ ರೀತಿಯ ಹೋರಾಟ ಮಾಡುತ್ತಾ ಬಂದಿದ್ದೇವೆ, ಯಾವುದೇ ಸರ್ಕಾರಗಳು ಗಮನಹರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದವರು, ಚುನಾವಣೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ನಾಯಕರು ಕೆಂಭಾವಿಯನ್ನು ತಾಲ್ಲೂಕು ಮಾಡುವುದಾಗಿ ಭರವಸೆ ಆಶ್ವಾಸನೆ ನೀಡಿದ್ದರು ಪ್ರಾಮಾಣಿಕ ಪ್ರಯತ್ನ ನಡೆಯದೆ ಕೆಂಭಾವಿ ತಾಲೂಕು ರಚನೆಯ ಕನಸು ಗಗನಕುಸುಮವಾಗಿದೆ, ಆಡಳಿತದಲ್ಲಿರುವ ಸರ್ಕಾರ ಜನರ ತಾಳ್ಮೆಯನ್ನು ಪರೀಕ್ಷಿಸದೆ ಬಹು…
ತಿಕೋಟಾ: ಶೈಕ್ಷಣಿಕ ಕ್ಷೇತ್ರದಲ್ಲಿ ಮಹಾನ್ ಕೊಡುಗೆ, ಆಧ್ಯಾತ್ಮ ಜೀವಿಗಳು, ಮಾತೃ ವಾತ್ಸಲ್ಯ ಉಳ್ಳವರು ಹೀಗೆ ಬಹುಮುಖ ವ್ಯಕ್ತಿತ್ವ ಹೊಂದಿದ ಸಂಗಮೇಶ ಬಬಲೇಶ್ವರ ಅವರಿಗೆ ಸರ್ಕಾರದಿಂದ ದೊರೆತ ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಹುದ್ದೆಯು ಅವರಿಗೆ ಸಂದ ಗೌರವ ಹಾಗೂ ನಮ್ಮ ವಿಜಯಪುರ ಜಿಲ್ಲೆಗೆ ಹೆಮ್ಮೆ ಎಂದು ಖ್ಯಾತ ಪ್ರವಚನಕಾರ ಬಾಬುರಾವ ಮಹಾರಾಜ ಹೇಳಿದರು.ನಗರದ ಅವರ ಸ್ವಗೃಹದಲ್ಲಿ ಸಂಗಮೇಶ ಬಬಲೇಶ್ವರ ಅವರಿಗೆ ಗಡಿನಾಡ ಕನ್ನಡ ಶಿಕ್ಷಕರ ವತಿಯಿಂದ ಸನ್ಮಾನಿಸಿ ಅವರು ಮಾತನಾಡಿದರು.ಮಕ್ಕಳ ಬಗ್ಗೆ ಹೆಚ್ಚು ಕಾಳಜಿ ಹೊಂದಿದ ಅವರು ಅನಾಥ ಮಕ್ಕಳ ಶಿಕ್ಷಣಕ್ಕೆ “ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ” ವತಿಯಿಂದ ಶಿಕ್ಷಣ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಬಾಲ ವಿಕಾಸ ಅಕಾಡೆಮಿಯಿಂದ ರಾಜ್ಯದಲ್ಲಿರುವ ಮಕ್ಕಳ ಶ್ರೇಯೋಭಿವೃದ್ದಿಗೆ ಶ್ರಮಿಸಿ ಸಮಾಜದಲ್ಲಿ ಉತ್ತಮ ನಾಗರಿಕರಾಗುವ ಮಕ್ಕಳನ್ನು ಹೊಂದುವ ಶಕ್ತಿ ಅವರಿಗೆ ಕೊಡಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಎಂ.ಜಿ.ಹೊನಮೋರೆ, ಎ.ವಿ.ಪಾಂಡ್ರೆ, ಆರ್.ಜಿ.ಬಿರಾದಾರ, ಯು.ಟಿ.ಕೊಟ್ಯಾಳ, ಎಚ್.ಎಚ್.ಹೊನಮೊರೆ, ಜಿ.ಎಂ.ಚೌಗಲೆ, ಆರ್.ಎಸ್.ಝಳಕಿ, ಬಾಪು ದೇವಾನಾಯಕ, ಐ.ಎನ್.ಕಂಬಾರ, ಸೂರ್ಯಕಾಂತ ಕಾರ್ಕಲ್ ಇದ್ದರು.
