ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕ ಬೆಂಗಳೂರು ಅವರು ಭಾರತದ ಮೊದಲ ಶಿಕ್ಷಕಿ ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನದ ಪ್ರಯುಕ್ತ ಶಿಕ್ಷಣದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಕೊಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯಪ್ರಶಸ್ತಿಗೆ ವಿಜಯಪುರ ಜಿಲ್ಲೆಯಿಂದ ಶ್ರೀಮತಿ ಶರಣಮ್ಮ ಪಾಗಿ ಅವರು ಆಯ್ಕೆಯಾಗಿದ್ದಾರೆ,
ಬುಧವಾರ ೩ನೇ ತಾರಿಖಿನಂದು ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯುವ ೧೯೩ನೇ ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನದ ಪ್ರಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಕೊಟ್ಟು ಗೌರವಿಸಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಹಾಗೂ ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ ಅವರು ಪತ್ರಿಕೆಗೆ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

