ವಿಜಯಪುರ: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಕಸ್ತ ೨೦೨೩-೨೪ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ (ಹನಿ ನೀರಾವರಿ) ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಎರಡು ಹೆಕ್ಟೇರ್‌ವರೆಗೆ ಶೇ.೯೦ ಮತ್ತು ಸಾಮಾನ್ಯ ವರ್ಗದ ರೈತರಿಗೆ ಶೆ.೭೫ ರಷ್ಟು ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ್ಮ ನೀರಾವತಿ ಪದ್ಧತಿ ಹಾಳಾಗಿದ್ದಲ್ಲಿ- ಘಟಕ ಕಾರ್ಯನಿರ್ವಹಿಸದೇ ಇದ್ದಲ್ಲಿ ೭ ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವತಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯ ಪಡೆದುಕೊಳ್ಳಬಹುದಾಗಿದೆ.
ಜಿಲ್ಲೆಯ ತೋಟಗಾರಿಕೆ ಬೆಳೆಗಳನ್ನು ಬೆಳೆದ ಹಾಗೂ ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
