ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೃಷಿಗೆ ಸಂಬಂಧಿಸಿದ ವಿಷಯಗಳ ಕುರಿತು ಜನವರಿ-೨೦೨೪ರ ಮಾಹೆಯಲ್ಲಿ ತರಬೇತಿಗಳನ್ನು ಆಯೋಜಿಸಲಾಗಿದ್ದು, ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.
ಜನವರಿ ೦೩ ರಂದು ಸಿಂದಗಿ ರೈತ ಸಂಪರ್ಕ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯು ರೈತರ ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸಲೊಂದು ಸುಲಭೋಪಾಯ, ಜ.೦೪ರಂದು ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೇಸಾಯ ತಾಂತ್ರಿಕತೆಗಳು, ಜ.೦೫ರಂದು ಆಲಮೇಲ ರೈತ ಸಂಪರ್ಕ ಕೇಂದ್ರದಲ್ಲಿ ರಾಸಾಯನಿಕ ಮುಕ್ತ ಕೃಷಿ ಪದ್ಧತಿಗಳು, ಜ.೦೯ ರಂದು ಇಂಡಿ ರೈತ ಸಂಪರ್ಕ ಕೇಂದ್ರದಲ್ಲಿ ಕೋಯ್ಲೋತ್ತರ ತಾಂತ್ರಿಕತೆಗಳು, ಜ.೧೦ರಂದು ಚಡಚಣ ರೈತ ಸಂಪರ್ಕ ಕೇಂದ್ರದಲ್ಲಿ ಆದಾಯ ಉತ್ಪನ್ನ ಚಟುವಟಿಕೆಗಳು, ಜ.೧೧ ರಂದು ಚಡಚಣ ತಾಲೂಕಿನ ಬಳ್ಳೊಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಕಿರುಧಾನ್ಯಗಳು ಹಾಗೂ ಮೌಲ್ಯವರ್ಧನೆ ಮತ್ತು ಜ.೧೨ ರಂದು ಮುದ್ದೇಬಿಹಾಳ ರೈತ ಸಂಪರ್ಕ ಕೇಂದ್ರದಲ್ಲಿ ಹಣ್ಣು ಹಾಗೂ ತರಕಾರಿಗಳ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಕುರಿತು ಒಂದು ದಿನದ ತರಬೇತಿ ಹಮ್ಮಿಕೊಂಡಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಗೀತಾ ಭಜಂತ್ರಿ ಮೊ: ೭೯೭೫೮೦೮೭೯೭ ಸಂಖ್ಯೆಗೆ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
