ವಿಜಯಪುರ: ವಿಜಯಪುರ ಮೀಸಲು ಕ್ಷೇತ್ರದಲ್ಲಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಬಂಜಾರಾ ಸಮಾಜಕ್ಕೆ ಟಿಕೆಟ್ ನೀಡಬೇಕೆಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ವಿಜಯಪುರ ಮೀಸಲು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಸೋಮವಾರ ನಗರದ ಬಿ.ಎಲ್.ಡಿ.ಇ ಅತಿಥಿಗೃಹದಲ್ಲಿ ಮುಖ್ಯಮಂತ್ರಿಗಳಿಗೆ ಬಂಜಾರಾ ಸಮುದಾಯದ ಶಾಲನ್ನು ಹೋದಿಸಿ, ಸನ್ಮಾನಿಸಿ, ಮನವಿ ಸಲ್ಲಿಸಿದ ಅವರು, ನಾನು 25 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ. ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಾಮಾಣಿಕವಾಗಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಅಲ್ಲದೇ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಳಮೀಸಲಾತಿಯ ವಿರುದ್ಧ ಮೊದಲ ಬಾರಿ ನಾನು ಧ್ವನಿ ಎತ್ತಿ, ಇಡೀ ರಾಜ್ಯಾದ್ಯಾಂತ ಬಂಜಾರಾ ಸಮಾಜಕ್ಕೆ ಜಾಗೃತಿ ಮೂಡಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮ ವಹಿಸಿದ್ದೇನೆ. ಈ ಕಾರ್ಯಕ್ಕಾಗಿ ರಾಜ್ಯಾಧ್ಯಕ್ಷರು, ಶಾಸಕರು, ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಶಾಸಕರಾದ ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

