Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ: ವಿವಿಧೆಡೆ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ
(ರಾಜ್ಯ ) ಜಿಲ್ಲೆ

ಸಿಂದಗಿ: ವಿವಿಧೆಡೆ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


ಸಿಂದಗಿ: ಪೂಜ್ಯ ಸಿದ್ದೇಶ್ವರ ಶ್ರೀಗಳು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು ಅವರದೊಂದು ಸ್ವಚ್ಚ, ಅರ್ಥಪೂರ್ಣ ಬದುಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿದ್ದಲಿಂಗ ಚೌಧರಿ ಹೇಳಿದರು.
ಅವರು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅವ್ವಾ ಫೌಂಡೇಶನ್ ವತಿಯಿಂದ ಮಂಗಳವಾರ ಹಮ್ಮಿಕೊಂಡ ಶ್ರೀ ಸಿದ್ದೇಶ್ವರ ಶ್ರೀಗಳ ನುಡಿ ನಮನ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು.
ಸಮಾಜ ತಿದ್ದುವ ಸ್ವಾಮಿಗಳು ಹೇಗಿರಬೇಕು ಎನ್ನುವದಕ್ಕೆ ಉತ್ತಮ ಉದಾರಣೆ ಶ್ರೀಗಳು. ತಮ್ಮ ಪ್ರವಚನಗಳ ಮೂಲಕವೇ ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿ ಲಕ್ಷಾಂತರ ಜನರಿಗೆ ಆದರ್ಶರಾದವರು. ಅವರು ಹುಟ್ಟಿ ಬೆಳೆದ ವಿಜಯಪುರ ಜಿಲ್ಲೆಯಲ್ಲಿ ನಾವೆಲ್ಲ ಇದ್ದೇವೆ ಎನ್ನುವುದೆ ನಮ್ಮೆಲ್ಲರ ಸೌಭಾಗ್ಯ ಎಂದರು.
   ಈ ವೇಳೆ ಶ್ರೀ ಪದ್ಮರಾಜ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಶರಣಬಸವ ಜೋಗೂರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಜೆ.ಸಿ.ನಂದಿಕೋಲ ಅವರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಸುಧಾಕರ ಚವ್ಹಾಣ, ಪಿ.ಸಿ.ಕುಲಕರ್ಣಿ, ಆರ್.ಎ.ಹಾಲಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಈ ವೇಳೆ ಅವ್ವಾ ಫೌಂಡೇಶನ್ ಸಂಚಾಲಕ ಸಿದ್ದಲಿಂಗ ಕಿಣಗಿ ಸ್ವಾಗತಿಸಿದರು. ಮಮತಾಶ್ರೀ ರೋಡಗಿ ನಿರೂಪಿಸಿದರು, ಆಫ್ರೀನ ಬಿರಾದಾರ ಪ್ರಾರ್ಥಿಸಿದರು, ಪ್ರಮೋದ ಹಳ್ಯಾಳ ವಂದಿಸಿದರು.
*ಗೋಲಗೇರಿ:*
ತಾಲ್ಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಾಡುವ ದೇವರು, ಶತಮಾನದ ಸಂತ ಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳ ಪ್ರಥಮ ಪುಣ್ಯಸ್ಮರಣೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಬಸವರಾಜ ಕೇಶಟ್ಟಿ, ಶಾಂತಪ್ಪ ಕೇಶಟ್ಟಿ, ಮಲ್ಲಾರಿ ಜೋಶಿ, ಮಡಿವಾಳ ನಾಯ್ಕೋಡಿ, ರಾಜು ಕುಲಕರ್ಣಿ, ಗುರುರಾಜ ಹುರಕಡ್ಲಿ, ವೆಂಕಟೇಶ ಜೋಶಿ, ನಾನಾಗೌಡ ಪಾಟೀಲ, ಗುರುರಾಜ ಕೇಶಟ್ಟಿ, ಮಹಾಂತೇಶ ನಾಯ್ಕೋಡಿ, ಪ್ರಶಾಂತ ಪಟ್ಟಣಶೆಟ್ಟಿ, ಬಸವರಾಜ ನಾವಿ, ಸದಾಶಿವ ಚವ್ಹಾಣ, ಅರುಣ ಏಳಗಿ ಸೇರಿದಂತೆ ಗೋಲಗೇರಿ ಗ್ರಾಮದ ಕಿವುಡ ಮತ್ತು ಮೂಕ ಮಕ್ಕಳ ಶಾಲಾ ವಿದ್ಯಾರ್ಥಿಗಳು, ಸಿದ್ದಸಿರಿ ಬ್ಯಾಂಕಿನ ಸಿಬ್ಬಂದಿ ವರ್ಗ ಸೇರಿದಂತೆ ಗೋಲಗೇರಿ ಗ್ರಾಮದ ಸಮಸ್ತ ಶ್ರೀಗಳ ಭಕ್ತರು ಇದ್ದರು.
*ಎಚ್.ಜಿ. ಕಾಲೇಜು:*
ಪಟ್ಟಣದ ಎಚ್.ಜಿ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡ ಸಿದ್ದೇಶ್ವರ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆಯ ನಿಮಿತ್ಯ ಆಯೋಜಿಸಿರುವ ಗುರು ನಮನ ಕಾರ್ಯಕ್ರಮದಲ್ಲಿ ಕಾಲೇಜ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ಬಂದು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎ.ಆರ್ ಹೆಗ್ಗನದೊಡ್ಡಿ, ಉಪನ್ಯಾಸಕರಾದ ಎಸ್.ಎ.ಪಾಟೀಲ, ಬಿ.ಎಸ್.ಬಿರಾದಾರ, ಆರ್.ಬಿ.ಹೊಸಮನಿ, ಎಮ್.ಎನ್.ಅಜ್ಜಪ್ಪ, ಎಸ್.ಪಿ.ಬಿರಾದಾರ, ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ, ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.