Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮೃತ-೨ ಯೋಜನೆಯಿಂದ ಪ್ರತಿ ಮನೆಗೆ ನೀರು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಅಮೃತ-೨ ಯೋಜನೆಯಿಂದ ಪ್ರತಿ ಮನೆಗೆ ನೀರು :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪಟ್ಟಣದಲ್ಲಿನ ಕುಡಿಯುವ ನೀರಿನ ಬವಣೆ ನೀಗಿಸಲು ಅಮೃತ-೨ ಯೋಜನೆಯ ಮೂಲಕ ಪ್ರತಿ ಮನೆ ಮನೆಗಳಿಗೆ ನೀರಿನ ಸರಬರಾಜು ಮಾಡಲು ಸುಮಾರು ೯೬ ಕೋಟಿ ಅನುದಾನದಲ್ಲಿ ಕಾಮಗಾರಿ ಕೂಡಲೆ ಪ್ರಾರಂಭ ಮಾಡಲಾಗುವುದು. ಪ್ರಸ್ತುತ ಕಾಮಗಾರಿಗೆ ಮೊದಲ ಹಂತದಲ್ಲಿರೂ ೪೦ ಕೊಟಿ ಬಿಡುಗಡೆಗೊಂಡಿದ್ದು ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅವರು ಪುರಸಭೆ ಕಾರ್ಯಾಲಯ ಸಿಂದಗಿ ಆಯೋಜಿಸಿರುವ ೨೦೨೩-೨೪ ನೇ ಸಾಲಿನ ಪುರಸಭೆಯ ನಿಧಿಯಲ್ಲಿ ಮನಗೂಳಿ ಅವರ ಮನೆಯಿಂದ ಶ್ರೀ ಸೋಮಲಿಂಗೇಶ್ವರ ಚೌಕದವರೆಗೆ ೩೦ ಲಕ್ಷರೂ ಗಳಲ್ಲಿನ ಸಿಸಿ ರಸ್ತೆ, ವಿಜಯಪುರದ ಮುಖ್ಯರಸ್ತೆಯಿಂದ ಶ್ರೀ ಸೋಮಲಿಂಗೇಶ್ವರ ಚೌಕದವರೆಗೆ ೧೫ ಲಕ್ಷರೂಗಳಲ್ಲಿ ಬೀದಿ ದ್ವೀಪ ಅಳವಡಿಕೆ, ಆಲಮೇಲ ಸರ್ ಮನೆಯಿಂದ ಆಶೀರ್ವಾದ ಕಲ್ಯಾಣ ಮಂಟಪದಿಂದ ಬಿರಾದಾರ ಸರ್ ಮನೆಯವರೆಗೆ ೧೫ ಲಕ್ಷ ರೂಗಳಲ್ಲಿ ಬೀದಿ ದೀಪ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪಟ್ಟಣದ ಜನತೆಗೆ ಪ್ರಸ್ತುತ ಸುಮಾರು ೬-೭ ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜ ಆಗುತ್ತಿದೆ. ಇದನ್ನು ತಪ್ಪಿಸಲು ಸುಮಾರು ೧೨ ವರ್ಷಗಳಿಂದ ಸ್ಥಗಿತಗೊಂಡಿರುವ ಹಳೆಯ ನೀರು ಶುದ್ದೀಕರಣ ಘಟಕವನ್ನು ಪುನಚ್ಚೇತನಗೊಳಿಸಿ ಪಟ್ಟಣದ ಜನತೆಗೆ ೩ ದಿನಕ್ಕೋಮ್ಮೆ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಅಂದಾಜು ೧೦೦ ಕೋಟಿ ಅನುದಾನದಲ್ಲಿ ಪ್ರತಿ ವಾರ್ಡಿನಲ್ಲಿ ಉತ್ತಮ ಸಿಸಿ ರಸ್ತೆ, ಚರಂಡಿ ವ್ಯವಸ್ಥೆ ಮತ್ತು ಮೂಲಭೂತ ಸೌಕರ್ಯಗಳನ್ನು ಮಾಡುವ ಕಾರ್ಯಯೋಜನೆ ನಡೆಸಲಾಗುವುದು. ಪ್ರತಿ ವಾರ್ಡಿನಲ್ಲಿ ಕಾಮಗಾರಿಗಳು ಪ್ರಾರಂಭಗೊಂಡಾಗ ಜನತೆಯು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಇಂಡಿ ಉಪ ವಿಭಾಗಾಧಿಕಾರಿ ಹಮೀದ ಗದ್ಯಾಳ ಮಾತನಾಡಿದರು.
ಈ ವೇಳೆ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಪುರಸಭೆಯ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಪುರಸಭೆಯ ಸದಸ್ಯ ಶಾಂತವೀರ ಬಿರಾದಾರ, ಹಾಸೀಂ ಆಳಂದ ಹಾಗೂ ಶಿವು ಬಡಿಗೇರ, ವೀರೇಶ ದುರ್ಗಿ, ಮಂಜು ಬಿರಾದಾರ, ಬಾಬು ತಾಂಬೋಳಿ, ಶಾಂತಪ್ಪ ರಾಣಾಗೋಳ, ಷಣ್ಮುಖಯ್ಯ ಹಿರೇಮಠ ಯಂಕಂಚಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.