ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ವಿಸ್ತೀರ್ಣದಲ್ಲಿಯೂ ದೊಡ್ಡದಾಗಿದೆ. ಸಿಂದಗಿಯು ಭೌಗೋಳಿಕವಾಗಿ ಕೇಂದ್ರಸ್ಥಾನದಲ್ಲಿದ್ದು, ಸುತ್ತ ಮುತ್ತಲಿನ ಕಲಬುರುಗಿ, ಯಾದಗೀರಿ, ರಾಯಚೂರ, ವಿಜಯಪೂರ ಜಿಲ್ಲೆಗಳ ಹೆಚ್ಚಿನ ಸಂಪರ್ಕ ಹೊಂದಿದೆ. ಮತ್ತು ಕಂದಾಯ ಇಲಾಖೆಯಲ್ಲಿ ಅತೀ ಹೆಚ್ಚಿನ ಆದಾಯವನ್ನು ಸಿಂದಗಿ ತಾಲೂಕಿನಿಂದ ಸಂಗ್ರಹವಾಗುತ್ತಿದ್ದು ಜಿಲ್ಲಾ ಕೇಂದ್ರವಾಗಲು ಯೋಗ್ಯವಾಗಿದೆ ಎಂದು ಆದಿಜಾಂಬವ ಜನಸಂಘದ ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಸಾಯಬಣ್ಣ ದೇವರಮನಿ ಹೇಳಿದರು.
ರಾಷ್ಟ್ರೀಯ ಹೆದ್ದಾರಿ-೫೦ ಸಿಂದಗಿ ನಗರದೊಂದಿಗೆ ಸಂಪರ್ಕ ಬೆಸೆದಿದ್ದು, ಸಾರಿಗೆ ಸಂಪರ್ಕಕ್ಕೆ ಉತ್ತಮ ನಿದರ್ಶನವಾಗಿದೆ. ಬರುವ ದಿನಗಳಲ್ಲಿ ನೂತನ ರೇಲ್ವೇ ಮಾರ್ಗ ಸೃಷ್ಟಿಯಾಗುವ ಲಕ್ಷಣಗಳಿದ್ದು, ಪೂರ್ವ ದಿಕ್ಕಿನಲ್ಲಿ ಕಲಬುರಗಿ ಹಾಗೂ ಪಶ್ಚಿಮದಲ್ಲಿ ವಿಜಯಪೂರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಗಳಿದ್ದು, ರಾಜ್ಯದ ರಾಜಧಾನಿ ಸಂಪರ್ಕಿಸಲು ಸಮಯದ ಉಳಿತಾಯವಾಗುವುದು. ಮತ್ತು ಉತ್ತಮ ಕೈಗಾರೀಕರಣ ವಲಯವಾಗಿ ಪರಿವರ್ತಿಸಲು ಕೇಂದ್ರ ಸ್ಥಾನದಲ್ಲಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಹೆಬ್ಬಾಗಿಲು ಆಗಿ ಬೌಗೋಳಿಕವಾಗಿ ಎರಡು ವಲಯಗಳನ್ನು ಸಂಪರ್ಕಿಸಿ ಸಾಂಸ್ಕೃತಿಕ ಪ್ರತಿಬಿಂಬವಾಗಿದೆ. ಸುತ್ತ-ಮುತ್ತಲಿನ ಎಲ್ಲಾ ತಾಲೂಕಗಳಿಗೆ ಕೇವಲ ೨೦ ರಿಂದ ೪೦ ಕಿ.ಮೀ. ಅಂತರ ಹೊಂದಿದ್ದು, ಇದರಿಂದ ಇಂಡಿ ಜಿಲ್ಲೆಯನ್ನು ಸೃಷ್ಟಿಸದೇ, ಸಿಂದಗಿ ಜಿಲ್ಲಾ ಕೇಂದ್ರವೆಂದು ಪರಿಗಣಿಸಿ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ತಾಳಿಕೋಟಿ, ಈ ತಾಲೂಕುಗಳನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಾದರೆ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸಿಂದಗಿ ಜಿಲ್ಲಾ ಕೇಂದ್ರಕ್ಕೆ ಸೇರಿಸಿ ಹೊಸ ಜಿಲ್ಲೆ ಸೃಷ್ಟಿ ಮಾಡಬೇಕು. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

