ಮುದ್ದೇಬಿಹಾಳ: ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿಯಂತ್ರಣ, ಕೋವಿಡ್ ೧೯.ಎಓ-೧ ರೂಪಾಂತರಿ ಉಪತಳಿ ಹಾಗೂ ಹದಿಹರೆಯದವರ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ‘ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ’ (ಎಎಂಪಿಕೆ) ಯೋಜನೆ ಅಡಿಯಲ್ಲಿ ಗುರುತಿಸಿ ಅನೀಮಿಯಾದಿಂದ ಬಳಲುವವರಿಗೆ ಸೂಕ್ತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡಲಾಗುತ್ತದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯ ತೇರದಾಳ ಹೇಳಿದರು.
ಇಲ್ಲಿನ ಎಂ.ಜಿ.ವ್ಹಿ.ಸಿ ಮಹಾವಿದ್ಯಾಲಯದಲ್ಲಿ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಆರೋಗ್ಯ ಮಹತ್ವದ ಬಗ್ಗೆ ಅರಿವು ಹೊಂದುವದು ಅವಶ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಮತ್ತು ರೋಗ ನಿಯಂತ್ರಣದ ಕುರಿತು ಮುಂಜಾಗ್ರತೆ ಕ್ರಮಗಳನ್ನು ಹಾಗೂ ಚಿಕಿತ್ಸೆಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಅವಶ್ಯ ಇದೆ ಎಂದರು.
ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ ರೋಗ ಬಾರದಂತೆ ಮುಂಜಾಗೃತೆ ವಹಿಸುವುದು ಉತ್ತಮ. ರೋಗವಾಹಕ ಸೊಳ್ಳೆಗಳಿಂದ ರೋಗ ಹರಡದಂತೆ ಕ್ರಮ ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇಂದಿನ ಕಾರ್ಯಕ್ರಮದಲ್ಲಿ ಪಡೆದ ಮಾಹಿತಿಯನ್ನು ಇನ್ನುಳಿದ ವಿದ್ಯಾರ್ಥಿಗಳಿಗೆ ತಿಳಿಸಬೇಕು. ವಿದ್ಯಾರ್ಥಿಗಳು ತಮ್ಮ ಕುಟುಂಬ ಮತ್ತು ಸಮುದಾಯದಲ್ಲಿ ರೋಗ ನಿಯಂತ್ರಣ ಕುರಿತು ತಿಳುವಳಿಕೆ ನೀಡಬೇಕು. ಶಾಲೆ, ಕಾಲೇಜು ಮತ್ತು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡಬೇಕು. ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯ ಮುಂತಾದ ಸಾಂಕ್ರಾಮಿಕ ರೋಗಗಳು ಬರುತ್ತವೆ. ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದರ ಜತೆಯಲ್ಲಿ ದೇಹದಲ್ಲಿ ಸಮಸ್ಯೆಯಾದಾಗ ಹತ್ತಿರದ ವೈದ್ಯರಲ್ಲಿ ರಕ್ತ ಪರೀಕ್ಷೆ ಸೇರಿದಂತೆ ಆರೋಗ್ಯ ಪರೀಕ್ಷೆಯನ್ನು ಮಾಡಿಸಿಕೊಳ್ಳುತ್ತಿರಬೇಕು ಎಂದರು.
ತಾಲೂಕ ಆಸ್ಪತ್ರೆಯ ಆರೋಗ್ಯ ಮಿತ್ರ ಬಸವರಾಜ್ ವಡ್ಡರ ಮಾತನಾಡಿದರು.
ಪ್ರಸ್ತಾವಕವಾಗಿ ಉಪನ್ಯಾಸಕ ಎಸ್.ಎಸ್.ಹೂಗಾರ ಮಾತನಾಡಿದರು.
ದೈಹಿಕ ನಿರ್ದೇಶಕ ಉಮೇಶ್ ಕೊನರಡ್ಡಿ, ಆರೋಗ್ಯ ಇಲಾಖೆಯ ಚನ್ನಮ್ಮ ಛಲವಾದಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

